ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಪರೋಕ್ಷವಾಗಿ ಸಿಎಂಗೆ ಟಾಂಗ್ ಕೊಟ್ರಾ ಡಿಕೆ ಸುರೇಶ್! – Kannada News | DK Suresh’s Subtle Dig at CM Siddaramaiah Over Power Sharing Sparks Political Buzz in Karnataka
ಬೆಂಗಳೂರು, ಜನವರಿ 20: ಡಿಸಿಎಂ ಡಿಕೆ ಶಿವಕುಮಾರ್ ಅವರ ಪಕ್ಷ ನಿಷ್ಠೆ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶಿವಕುಮಾರ್ ಅವರು ಯಾವಾಗಲೂ ಪಕ್ಷಕ್ಕೆ ನಿಷ್ಠರಾಗಿದ್ದಾರೆ ಹೊರತು ವ್ಯಕ್ತಿಗಳಿಗಲ್ಲ. ಪಕ್ಷ ಅಧಿಕಾರದಲ್ಲಿದ್ದಾಗ ಅಥವಾ ಇಲ್ಲದಿದ್ದಾಗಲೂ ಅವರು ಪಕ್ಷದ ಜೊತೆ ನಿಂತಿದ್ದಾರೆ ಮತ್ತು ಎಲ್ಲವನ್ನೂ ತಾಳ್ಮೆಯಿಂದ ಗಮನಿಸುತ್ತಿದ್ದಾರೆ ಎಂದು ಹೇಳಿದರು. ಪಂಚಾಯಿತಿ ಚೇರ್ಮನ್‌ಗಳ ಉದಾಹರಣೆಯನ್ನು…