Category Archives: Blog

Your blog category

Bengaluru Air Quality: ಬಳ್ಳಾರಿಯ ಗಾಳಿ ಉಸಿರಾಡಲು ಅಯೋಗ್ಯ! ರಾಜ್ಯದಲ್ಲೇ ದಾಖಲಾದ ಅತ್ಯಂತ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballary’s Air Quality got worst, unbreathable air

ರಾಜ್ಯದಲ್ಲೇ ದಾಖಲಾದ ಅತ್ಯಂತ ಕಳಪೆ ಏರ್ ಕ್ವಾಲಿಟಿ

ಬೆಂಗಳೂರು, ಜನವರಿ 18: ಕೆಲ ತಿಂಗಳ ಹಿಂದೆ 200ರ ಗಡಿ ದಾಟಿದ್ದ ಬೆಂಗಳೂರಿನ ಏರ್ ಕ್ವಾಲಿಟಿ (Bengaluru Air Quality) , ಹಂತ ಹಂತವಾಗಿ 130ರ ಆಸು ಪಾಸು ಬಂದಿತ್ತು. ಆದರೆ ಇಂದಿನ ಬಳ್ಳಾರಿಯ AQI ನೋಡಿದರೆ ವಾಯು ಗುಣಮಟ್ಟದಲ್ಲಿ ದೆಹಲಿಯನ್ನೂ ಮೀರಿಸಿದಂತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಬೆಂಗಳೂರಿಗಿಂತ ಕಳಪೆ ಗುಣಮಟ್ಟ

ಬೆಂಗಳೂರಿನ ಗಾಳಿಯ ಗುಣಮಟ್ಟ 184 ಇದ್ದು, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಅದರೊಂದಿಗೆ ಬಳ್ಳಾರಿಯ ಗಾಳಿಯಗುಣಮಟ್ಟ 247ಕ್ಕೆ ತಲುಪಿದ್ದು, ತೀರಾ ಕಳಪೆ ಮಟ್ಟಕ್ಕೆ ಕುಸಿದಿದೆ. ನಗರದಲ್ಲಿ PM2.5 ಮಟ್ಟ 111 ಹಾಗೂ PM10 ಮಟ್ಟ 141ಕ್ಕೆ ಏರಿಕೆಯಾಗಿದೆ. ಈ ಎರಡೂ ಪ್ರಮಾಣಗಳು ಸುರಕ್ಷಿತ ಮಿತಿಯನ್ನು ಮೀರಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮಟ್ಟದಲ್ಲಿವೆ. ವಿಶೇಷವಾಗಿ PM2.5 ಸೂಕ್ಷ್ಮ ಕಣಗಳು ಶ್ವಾಸಕೋಶದ ಆಳಕ್ಕೆ ಪ್ರವೇಶಿಸಿ ಉಸಿರಾಟದ ತೊಂದರೆ, ಆಸ್ತಮಾ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ. ವಾಹನಗಳ ಅತಿಯಾದ ಬಳಕೆ, ನಿರ್ಮಾಣ ಕಾರ್ಯಗಳಿಂದ ಉಂಟಾಗುವ ಧೂಳು, ಕೈಗಾರಿಕಾ ಉತ್ಸರ್ಜನೆ ಮತ್ತು ಹವಾಮಾನದಲ್ಲಿ ಗಾಳಿಯ ಚಲನೆಯ ಕೊರತೆ ಈ ಪರಿಸ್ಥಿತಿಗೆ ಪ್ರಮುಖ ಕಾರಣಗಳಾಗಿವೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಮಾಲಿನ್ಯ ಪ್ರಮಾಣ ಇನ್ನಷ್ಟು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ.

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆರೋಗ್ಯ ತಜ್ಞರು ಮಕ್ಕಳು, ವೃದ್ಧರು ಹಾಗೂ ಶ್ವಾಸಕೋಶ ಸಮಸ್ಯೆ ಇರುವವರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ. ಮಾಸ್ಕ್ ಬಳಕೆ, ವಾಹನ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಹಸಿರು ಪ್ರದೇಶಗಳನ್ನು ಹೆಚ್ಚಿಸುವುದು ಈಗ ನಗರಕ್ಕೆ ಅನಿವಾರ್ಯವಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –184
  • ಮಂಗಳೂರು-172
  • ಮೈಸೂರು – 111
  • ಬೆಳಗಾವಿ – 150
  • ಕಲಬುರ್ಗಿ- 90
  • ಶಿವಮೊಗ್ಗ – 72
  • ಬಳ್ಳಾರಿ – 247
  • ಹುಬ್ಬಳ್ಳಿ- 89
  • ಉಡುಪಿ –161
  • ವಿಜಯಪುರ –66

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka including Bengaluru

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶುಷ್ಕ ವಾತಾವರಣ

ಬೆಂಗಳೂರು, ಜನವರಿ 18: ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 29°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಿರಾಟ್ ಕೊಹ್ಲಿಗೆ ಸಾಧ್ಯವಾಗದಿರುವುದನ್ನ ಸಾಧಿಸಿ ತೋರಿಸಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Surpasses Virat Kohli’s Record

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ದಾಖಲೆಯೊಂದಿಗೆ ಯುವ ಎಡಗೈ ದಾಂಡಿಗ, ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

Source link

ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ – Kannada News | Gujarat: Dispute Over Mobile Phone Ends in Tragedy as Woman Dies by Suicide

ಗುಜರಾತ್, ಜನವರಿ 18: ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆ(Suicide)ಯಂತಹ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಮನಸ್ಥಿತಿ ಸೂಕ್ಷ್ಮವಾಗುತ್ತಿದೆ ಎಂಬುದು ಕಳವಳಕಾರಿ ಸಂಗತಿ. ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್​ನ ಮೋಡಸಾದಲ್ಲಿ ನಡೆದಿದೆ.

ಶನಿವಾರ ಈ ಘಟನೆ ನಡೆದಿದೆ. ಊರ್ಮಿಳಾ ಎಂಬ ಮಹಿಳೆ ಪತಿಯೊಂದಿಗೆ ಚೀನೀ ಆಹಾರ ವ್ಯವಹಾರ ನಡೆಸುತ್ತಿದ್ದರು. ಮೂಲಗಳ ಪ್ರಕಾರ, ಮಹಿಳೆ ಕೆಲವು ದಿನಗಳ ಹಿಂದೆ ತನ್ನ ಪತಿಗೆ ಹೊಸ ಮೊಬೈಲ್ ಫೋನ್ ಕೇಳಿದ್ದರು. ಆದರೆ, ಆರ್ಥಿಕ ತೊಂದರೆಗಳನ್ನು ಉಲ್ಲೇಖಿಸಿ ಆ ವ್ಯಕ್ತಿ ನಿರಾಕರಿಸಿದ್ದರು.
ಅದಕ್ಕೆ ಬೇಸರಗೊಂಡಿದ್ದ ಊರ್ಮಿಳಾ ಮತ್ತು ಪತಿ ನಡುವೆ ಆಗಾಗ ಜಗಳ ನಡೆಯುತ್ತಲೇ ಇತ್ತು. ಮಹಿಳೆ ತನ್ನ ಮನೆಯಲ್ಲಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಳು.

ಸ್ಥಳೀಯ ಪೊಲೀಸರಿಗೆ ಶೀಘ್ರದಲ್ಲೇ ಮಾಹಿತಿ ನೀಡಲಾಯಿತು ಮತ್ತು ಮಾಹಿತಿ ಪಡೆದ ತಕ್ಷಣ ಅವರು ಸ್ಥಳಕ್ಕೆ ಧಾವಿಸಿದರು. ಪೊಲೀಸರು ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅವರು ಆಕಸ್ಮಿಕ ಸಾವು ಎಂದು ಪ್ರಕರಣವನ್ನೂ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಓದಿ: ಆತ್ಮಹತ್ಯೆ ಮಾಡಿಕೊಳ್ಳಲು ಕಾಡಿಗೆ ಹೋದವನಿಗೆ ವಿಷ್ಣುವಿನ ದರ್ಶನ; ದೇವಾಲಯ ಕಟ್ಟಿ ಪೂಜಿಸಿದ ಬೀದರ್​​​ನ ಜನ

ತನಿಖೆ ಮುಂದುವರೆದಂತೆ, ದಂಪತಿ ಇಬ್ಬರೂ ನೇಪಾಳದವರಾಗಿದ್ದು, ಜೀವನೋಪಾಯಕ್ಕಾಗಿ ಗುಜರಾತ್‌ನಲ್ಲಿ ವಾಸಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಸ್ತುತ ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ ಮತ್ತು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.

ಮತ್ತೊಂದು ಘಟನೆ
ಸಾಮಾಜಿಕ ಮಾಧ್ಯಮ ಆ್ಯಪ್ ಮೂಲಕ ಸ್ನೇಹ ಬೆಳೆಸಿಕೊಂಡ ತನ್ನ ಗೆಳೆಯನೊಂದಿಗಿನ ವಿವಾಹದ ವಿಚಾರದಲ್ಲಿ ವಿವಾದ ಉಂಟಾದ ನಂತರ, ಮಹಾರಾಷ್ಟ್ರದ ವಿರಾರ್​ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾರ್ಗೋನ್ ಜಿಲ್ಲೆಯ ಮಂಡಲೇಶ್ವರ ಪಟ್ಟಣದ ಜಲುದ್ ಗ್ರಾಮದಲ್ಲಿ ಬಾವಿಗೆ ಹಾರಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
9ನೇ ತರಗತಿಯ 14 ವರ್ಷದ ಬಾಲಕಿ ಖಾಸಗಿ ಉದ್ಯೋಗದಲ್ಲಿ ಕೆಲಸ ಮಾಡುತ್ತಿರುವ ಜಲೂದ್ ನಿವಾಸಿ ಚಿರಾಗ್ ರಾಥೋಡ್ ಜೊತೆ ಇನ್‌ಸ್ಟಾಗ್ರಾಮ್ ಮೂಲಕ ಸ್ನೇಹ ಬೆಳೆಸಿಕೊಂಡಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೇವಲ ೧೬ ಇನಿಂಗ್ಸ್​​ಗಳಲ್ಲೇ ವಿಶ್ವ ದಾಖಲೆ ಬರೆದ ಅಮನ್ ಮೊಖಾಡೆ – Kannada News | Aman Mokhade equals world record in List A Cricket

ದೇಶೀಯ ಕ್ರಿಕೆಟ್​​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಮತ್ಯಾರೂ ಅಲ್ಲ, ವಿದರ್ಭ ತಂಡದ ಯುವ ದಾಂಡಿಗ ಅಮನ್ ಮೊಖಾಡೆ (Aman Mokhade). ಅದು ಕೂಡ ಕೇವಲ 16 ಇನಿಂಗ್ಸ್​​​ಗಳ ಮೂಲಕ ಎಂಬುದು ವಿಶೇಷ.

Source link

Bigg Boss Kannada Winner: ಗಿಲ್ಲಿ ನಟ ಗೆದ್ದಾಯಿತು; ತೀರ್ಪು ನೀಡಿದ ‘ಬಿಗ್ ಬಾಸ್ ಕನ್ನಡ 12’ ವೀಕ್ಷಕರು – Kannada News | Fans predict Gilli Nata is the Winner of Bigg Boss Kannada Season 12 Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (BBK 12 Finale) ಇಂದು (ಜನವರಿ 18) ಅದ್ದೂರಿಯಾಗಿ ನಡೆಯಲಿದೆ. ಈ ಸೀಸನ್​​ನಲ್ಲಿ 24 ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಹೋಗಿದ್ದರು. ಅಂತಿಮವಾಗಿ 6 ಸ್ಪರ್ಧಿಗಳು ಫಿನಾಲೆಗೆ ಬಂದರು. ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಮ್ಯೂಟೆಂಟ್ ರಘು, ಕಾವ್ಯಾ ಶೈವ, ಧನುಷ್ ಹಾಗೂ ಗಿಲ್ಲಿ ನಟ (Gilli Nata) ಅವರು ಫಿನಾಲೆ ತಲುಪಿದ್ದಾರೆ. ಯಾರು ವಿನ್ ಎಂಬುದನ್ನು ಕಿಚ್ಚ ಸುದೀಪ್ ಅವರು ಇಂದು ರಾತ್ರಿ ಘೋಷಿಸಲಿದ್ದಾರೆ. ಆದರೆ ಸುದೀಪ್ ಹೇಳುವುದಕ್ಕೂ ಮುನ್ನವೇ ವೀಕ್ಷಕರು ಭವಿಷ್ಯ ನುಡಿದಿದ್ದಾರೆ. ಫಿನಾಲೆ ಝಲಕ್ ತೋರಿಸುವ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಅದಕ್ಕೆ ಕಮೆಂಟ್ ಮಾಡಿರುವ ಅಭಿಮಾನಿಗಳು, ‘ಗಿಲ್ಲಿ ನಟ ಈಗಾಗಲೇ ಗೆದ್ದಾಯಿತು’ ಎಂದು ಕಮೆಂಟ್ ಮಾಡಿದ್ದಾರೆ. ಗಿಲ್ಲಿ ನಟ ಅವರಿಗೆ ಹೊರಗಡೆ ಇರುವ ಕ್ರೇಜ್ ಅಸಾಧಾರಣ ಆಗಿದೆ. ಅದನ್ನು ನೋಡಿದ ಎಲ್ಲರೂ ಕೂಡ ಇದೇ ಮಾತನ್ನು ಹೇಳುತ್ತಿದ್ದಾರೆ. ಗಿಲ್ಲಿ ಬಿಗ್ ಬಾಸ್ ವಿನ್ನರ್ (Bigg Boss Kannada Season 12 Winner) ಎಂಬುದಕ್ಕೆ ಈ ಕ್ರೇಜ್ ಸಾಕ್ಷಿ ಎಂದು ಫ್ಯಾನ್ಸ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Horoscope Today 18 January: ಇಂದು ಈ ರಾಶಿಯವರು ಸ್ವಲ್ಪ ಕಡಿಮೆ ಮಾತನಾಡಿ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 18 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಇದು ಭಾನುವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರ, ಮಾಘ ಮಾಸದ ಆರಂಭ, ಶಿಶಿರ ಋತು ಮತ್ತು ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿಯನ್ನು ಒಳಗೊಂಡಿದೆ. ಪೂರ್ವಾಷಾಢ ನಕ್ಷತ್ರ, ಹರ್ಷಣ ಯೋಗ ಮತ್ತು ಚತುಷ್ಪಾತ್ ಕರಣದ ಈ ದಿನವು ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು, ಪೂರ್ವಜರ ಆಶೀರ್ವಾದ ಪಡೆಯಲು ಹಾಗೂ ದುಷ್ಟ ಶಕ್ತಿಗಳನ್ನು ಹೋಗಲಾಡಿಸಲು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ.

ಅಮಾವಾಸ್ಯೆಯ ದಿನದಂದು ಮಂತ್ರ ಜಪ ಮತ್ತು ದೇವತಾರಾಧನೆ ರೋಗರುಜಿನಗಳಿಂದ ಬಳಲುತ್ತಿರುವವರಿಗೆ ಶುಭ ಫಲ ನೀಡುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ಸೂರ್ಯನು ಮಕರ ರಾಶಿಯಲ್ಲಿ ಮತ್ತು ಚಂದ್ರನು ಧನುಸ್ಸು ರಾಶಿಯ ಪೂರ್ವಾಷಾಢ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಈ ದಿನದಂದು ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಗುರೂಜಿ ಶುಭ ಹಾರೈಸಿದ್ದಾರೆ. ಮೇಷದಿಂದ ಮೀನದವರೆಗೆ, ಹನ್ನೆರಡು ರಾಶಿಗಳಿಗೂ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿ, ಸಂಬಂಧಗಳು ಮತ್ತು ಪ್ರಯಾಣದ ಕುರಿತು ವಿವರವಾದ ಜ್ಯೋತಿಷ್ಯ ಫಲಗಳನ್ನು ಡಾ. ಬಸವರಾಜ್ ಗುರೂಜಿ ನೀಡಿದ್ದಾರೆ.

 

 

 

 

Source link

Daily Devotional: ಮಾಘ ಮಾಸದಲ್ಲಿ ಆಚರಿಸುವ ನದಿ ಸ್ನಾನದ ಮಹತ್ವವೇನು ಗೊತ್ತಾ? – Kannada News | Daily Devotional: The Spiritual Significance of River Bathing in Magha Masa: Rituals and Benefits

ಬೆಂಗಳೂರು, ಜನವರಿ 18: ಮಾಘ ಮಾಸವು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವಾದ ತಿಂಗಳು. ಇದು ವ್ರತಗಳು, ದಾನ ಮತ್ತು ಸ್ನಾನಗಳಿಗೆ ಮಹತ್ವದ ಕಾಲವೆಂದು ಪರಿಗಣಿಸಲ್ಪಟ್ಟಿದೆ. ಈ ಮಾಸದಲ್ಲಿ ನದಿ ಸ್ನಾನವು ಕೇವಲ ದೈಹಿಕ ಶುದ್ಧಿಯಲ್ಲದೆ, ಮಾನಸಿಕ ಶುದ್ಧಿ ಹಾಗೂ ಪಾಪಗಳ ನಿವಾರಣೆಗೆ ಕಾರಣವಾಗುತ್ತದೆ ಎಂದು ನಂಬಲಾಗಿದೆ. ಮಾಟ, ಮಂತ್ರ, ದುಷ್ಟ ಶಕ್ತಿಗಳ ಕಾಟವನ್ನು ಕಡಿಮೆ ಮಾಡುವ ಶಕ್ತಿ ಮಾಘ ಸ್ನಾನಕ್ಕಿದೆ.

ಗಂಗಾ, ಕಾವೇರಿ, ಪ್ರಯಾಗ, ಹರಿದ್ವಾರ, ವಾರಣಾಸಿ ಮುಂತಾದ ಪವಿತ್ರ ನದಿ ಹಾಗೂ ಕ್ಷೇತ್ರಗಳಲ್ಲಿ ಸ್ನಾನ ಮಾಡುವುದು ಹೆಚ್ಚು ಶ್ರೇಷ್ಠ. ಸೂರ್ಯಾರಾಧನೆಗೆ ಮಾಘ ಮಾಸ ಉತ್ತಮವಾಗಿದ್ದು, “ನಮಸ್ಕಾರ ಪ್ರಿಯೋ ಭಾನು” ಎಂಬ ನುಡಿಯಂತೆ ಸೂರ್ಯನಮಸ್ಕಾರವು ಆರೋಗ್ಯ ಮತ್ತು ಶುಭವನ್ನು ತರುತ್ತದೆ. ಈ ಮಾಸದಲ್ಲಿ ವಿಷ್ಣು, ಶಿವ ಹಾಗೂ ದುರ್ಗಾ, ಸರಸ್ವತಿ, ಮಹಾಲಕ್ಷ್ಮಿಯಂತಹ ತ್ರಿಶಕ್ತಿಗಳ ಪೂಜೆಗೆ ವಿಶೇಷ ಪ್ರಾಶಸ್ತ್ಯವಿದೆ. ದೀಪಾರಾಧನೆ, ಅನ್ನದಾನ, ಉಪ್ಪಿನ ದಾನ, ಬೆಲ್ಲದ ದಾನ ಹಾಗೂ ಸಿಹಿ ಪದಾರ್ಥಗಳ ದಾನ ಮಾಡುವುದು ಪುಣ್ಯಕರ. ಮಾಘ ಮಾಸದ ಪೂರ್ತಿ ದಿನವೂ ವಿಶೇಷವಾಗಿದ್ದು, ಎಲ್ಲವೂ ನಂಬಿಕೆಯ ಆಧಾರದಲ್ಲಿ ಮಾನವನ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

WPL 2026: 2 ದಿನಗಳಲ್ಲಿ ಒಂದೇ ತಂಡದ ವಿರುದ್ಧ 2ನೇ ಬಾರಿಗೆ ಸೋತ ಮುಂಬೈ – Kannada News | UP Warriorz Defeat Mumbai Indians by 22 Runs: MI Suffers Second Consecutive Loss

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಹಾಗೂ ಯುಪಿ ವಾರಿಯರ್ಸ್ (MI vs UPW)​ ತಂಡಗಳು ಮುಖಾಮುಖಿಯಾಗಿದ್ದವು. ಕಳೆದ 48 ಗಂಟೆಗಳಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಜನವರಿ 15 ರ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ಗೆಲುವು ಸಾಧಿಸಿದ್ದರಿಂದ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ನೋಡಲು ಎಲ್ಲರೂ ಕಾತುರರಾಗಿದ್ದರು. ಅದರಂತೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿತು. ಇತ್ತ ಮೊದಲು ಬ್ಯಾಟಿಂಗ್‌ ಮಾಡಿದ ಯುಪಿ ತಂಡ 187 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡು 20 ಓವರ್​ಗಳಲ್ಲಿ 165 ರನ್ ಕಲೆಹಾಕಲಷ್ಟೇ ಶಕ್ತವಾಗಿ 22 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಆವೃತ್ತಿಯಲ್ಲಿ ಮುಂಬೈ ತಂಡದ ಮೂರನೇ ಸೋಲು ಇದಾಗಿದ್ದು, ಯುಪಿ ವಾರಿಯರ್ಸ್​ ವಿರುದ್ಧ ಸತತ ಎರಡನೇ ಸೋಲು ಕಂಡಿದೆ. ಆದಾಗ್ಯೂ ಪಾಯಿಂಟ್ ಪಟ್ಟಿಯಲ್ಲಿ ಮುಂಬೈ ಎರಡನೇ ಸ್ಥಾನದಲ್ಲಿ ಮುಂದುವರೆದಿದೆ.

ಲ್ಯಾನಿಂಗ್ ಮತ್ತು ಲಿಚ್‌ಫೀಲ್ಡ್ ಅರ್ಧಶತಕ

ಮೊದಲು ಬ್ಯಾಟಿಂಗ್‌ ಮಾಡಿದ ಯುಪಿ ವಾರಿಯರ್ಸ್‌ಗೆ ಮೊದಲ ಓವರ್‌ನಲ್ಲೇ ಆಘಾತ ಎದುರಾಯಿತು. ನಿಕೋಲಾ ಕ್ಯಾರಿ ಕಿರಣ್ ನವ್‌ಗಿರೆ ಅವರನ್ನು ಬೌಲ್ಡ್ ಮಾಡಿದರು. ಆರಂಭಿಕ ಹಿನ್ನಡೆಯ ನಂತರ, ನಾಯಕಿ ಮೆಗ್ ಲ್ಯಾನಿಂಗ್, ಫೋಬೆ ಲಿಚ್‌ಫೀಲ್ಡ್ ಅವರೊಂದಿಗೆ ಯುಪಿ ವಾರಿಯರ್ಸ್‌ನ ಇನ್ನಿಂಗ್ಸ್ ಸ್ಥಿರಗೊಳಿಸಿದರು. ಇಬ್ಬರೂ ಶತಕದ ಪಾಲುದಾರಿಕೆಯನ್ನು ಹಂಚಿಕೊಂಡರು. ಲ್ಯಾನಿಂಗ್ ಮತ್ತು ಲಿಚ್‌ಫೀಲ್ಡ್ ಎರಡನೇ ವಿಕೆಟ್‌ಗೆ 119 ರನ್‌ಗಳನ್ನು ಸೇರಿಸಿದರು. ಲ್ಯಾನಿಂಗ್ ಮತ್ತು ಲಿಚ್‌ಫೀಲ್ಡ್ ತಮ್ಮ ತಮ್ಮ ಅರ್ಧಶತಕವನ್ನು ಪೂರೈಸಿದರು. ಲಿಚ್‌ಫೀಲ್ಡ್ ಅವರನ್ನು ಔಟ್ ಮಾಡುವ ಮೂಲಕ ಅಮನ್‌ಜೋತ್ ಕೌರ್ ಈ ಪಾಲುದಾರಿಕೆಯನ್ನು ಮುರಿದರು. ಲಿಚ್‌ಫೀಲ್ಡ್ 37 ಎಸೆತಗಳಲ್ಲಿ 61 ರನ್‌ಗಳಿಗೆ ಏಳು ಬೌಂಡರಿ ಮತ್ತು ಮೂರು ಸಿಕ್ಸರ್‌ ಬಾರಿಸಿ ಔಟಾದರು. ಲಿಚ್‌ಫೀಲ್ಡ್ ಔಟಾದ ಸ್ವಲ್ಪ ಸಮಯದ ನಂತರ ಲ್ಯಾನಿಂಗ್ ಕೂಡ ಪೆವಿಲಿಯನ್‌ಗೆ ಮರಳಿದರು. ಅವರು 45 ಎಸೆತಗಳಲ್ಲಿ 11 ಬೌಂಡರಿ ಮತ್ತು ಎರಡು ಸಿಕ್ಸರ್‌ಗಳೊಂದಿಗೆ 70 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು

ಕೆರ್ ಮೂರು ವಿಕೆಟ್

ಇದಾದ ನಂತರ, ಹರ್ಲೀನ್ ಡಿಯೋಲ್ ಮತ್ತು ಕ್ಲೋಯ್ ಟ್ರಯಾನ್ ತಂಡವನ್ನು ಮುನ್ನಡೆಸಿದರು. ಇಬ್ಬರ ನಡುವೆ ಉತ್ತಮ ಜೊತೆಯಾಟ ಬೆಳೆಯುತ್ತಿತ್ತು. ಆದರೆ ನಟಾಲಿ ಟ್ರಯಾನ್ 13 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 21 ರನ್ ಗಳಿಸಿ ಔಟಾದರು. ಮುಂದಿನ ಎಸೆತದಲ್ಲಿ ಬ್ರಂಟ್, ಶ್ವೇತಾ ಸೆಹ್ರಾವತ್ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಯುಪಿ ವಾರಿಯರ್ಸ್ ಪರ, ಹರ್ಲೀನ್ ಡಿಯೋಲ್ 25 ಮತ್ತು ಸೋಫಿ ಎಕ್ಲೆಸ್ಟೋನ್ ಒಂದು ರನ್ ಗಳಿಸಿದರು. ಮುಂಬೈ ಪರ ಅಮೆಲಿಯಾ ಕೆರ್ ಮೂರು ವಿಕೆಟ್ ಪಡೆದರೆ, ನ್ಯಾಟ್ ಶೀವರ್ ಬ್ರಂಟ್ ಎರಡು ವಿಕೆಟ್ ಪಡೆದರು. ಇದಲ್ಲದೆ, ನಿಕೋಲಾ ಕ್ಯಾರಿ, ಹೇಲಿ ಮ್ಯಾಥ್ಯೂಸ್ ಮತ್ತು ಅಮನ್‌ಜೋತ್ ಕೌರ್ ತಲಾ ಒಂದು ವಿಕೆಟ್ ಪಡೆದರು.

ಮುಂಬೈಗೆ ಆರಂಭಿಕ ಆಘಾತ

ಗುರಿ ಬೆನ್ನಟ್ಟಿದ ಮುಂಬೈಗೂ ಸಾಧಾರಣ ಆರಂಭ ಸಿಕ್ಕಿತು. ಸ್ಫೋಟಕ ಬ್ಯಾಟರ್ ಹೇಲಿ ಮ್ಯಾಥ್ಯೂಸ್ 13 ಎಸೆತಗಳಲ್ಲಿ ಮೂರು ಬೌಂಡರಿಗಳ ಸಹಾಯದಿಂದ 13 ರನ್ ಗಳಿಸಿದ ನಂತರ ಔಟಾದರು. ನಂತರ ಬ್ರಂಟ್ ಕೂಡ 15 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಆ ಬಳಿಕ ಬಂದ ನಿಕೋಲಾ ಕ್ಯಾರಿ, ಹರ್ಮನ್‌ಪ್ರೀತ್ ಕೌರ್ ಬೇಗನೇ ಪೆವಿಲಿಯನ್ ಸೇರಿಕೊಂಡರು. ಇದು ಮುಂಬೈ ತಂಡದ ಒತ್ತಡ ಹೆಚ್ಚಿಸಿತು.

ಕೆರ್, ಕೌರ್ ಜೊತೆಯಾಟ ವ್ಯರ್ಥ

ಐದು ವಿಕೆಟ್‌ಗಳ ಪತನದ ನಂತರ ಜೊತೆಯಾದ ಅಮೆಲಿಯಾ ಕೆರ್ ಮತ್ತು ಅಮನ್‌ಜೋತ್ ಕೌರ್ ಅದ್ಭುತ ಬ್ಯಾಟಿಂಗ್ ಮಾಡಿ 45 ಎಸೆತಗಳಲ್ಲಿ 83 ರನ್‌ಗಳ ಪಾಲುದಾರಿಕೆಯನ್ನು ಮಾಡುವ ಮೂಲಕ ಗೆಲುವಿಗೆ ಹೋರಾಟ ನೀಡಿದರು. ಆದಾಗ್ಯೂ ಶಿಖಾ ಪಾಂಡೆ, ಅಮನ್‌ಜೋತ್ ಅವರನ್ನು ಔಟ್ ಮಾಡುವ ಮೂಲಕ ಈ ಪಾಲುದಾರಿಕೆಯನ್ನು ಮುರಿದರು. 24 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 41 ರನ್ ಗಳಿಸಿದ ನಂತರ ಅಮನ್‌ಜೋತ್ ಔಟಾದರೆ, 28 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಒಂದು ಸಿಕ್ಸರ್‌ಗಳ ಸಹಾಯದಿಂದ 49 ರನ್ ಗಳಿಸಿದ ಅಮೇಲಿಯಾ ಅಜೇಯರಾಗಿ ಉಳಿದರು. ಯುಪಿ ಪರ ಶಿಖಾ ಎರಡು ವಿಕೆಟ್ ಪಡೆದರೆ, ಕ್ರಾಂತಿ ಗೌರ್, ಸೋಫಿ ಎಕ್ಲೆಸ್ಟೋನ್, ದೀಪ್ತಿ ಶರ್ಮಾ ಮತ್ತು ಟ್ರಿಯಾನ್ ತಲಾ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:42 pm, Sat, 17 January 26

Source link

ಮುಂಬೈನಲ್ಲಿ ರೆಸಾರ್ಟ್ ರಾಜಕೀಯ ಶುರು; ಶಿಂಧೆ ಬಣದ ಶಿವಸೇನೆ ಕಾರ್ಪೋರೇಟರ್​​ಗಳು ಫೈವ್ ಸ್ಟಾರ್​​ ಹೋಟೆಲ್‌ಗೆ ಶಿಫ್ಟ್ – Kannada News | Resort politics returns to Mumbai as Eknath Shinde Shiv Sena moves corporators to 5 star hotel

ಮುಂಬೈ, ಜನವರಿ 17: ಮಹಾರಾಷ್ಟ್ರದ ಮುಂಬೈ ಮಹಾನಗರ ಪಾಲಿಕೆ ಚುನಾವಣೆ (BMC Election) ನಡೆದು ನಿನ್ನೆ ಮತ ಎಣಿಕೆ ನಡೆದಿದೆ. ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಿಜೆಪಿಗೆ ಬಹುಮತ ಸಿಕ್ಕಿಲ್ಲ. ಹೀಗಾಗಿ, ಬಿಜೆಪಿಯ ಮಿತ್ರಪಕ್ಷವಾದ ಶಿವಸೇನೆಯ (ಶಿಂಧೆ ಬಣ) ಕಾರ್ಪೋರೇಟರ್​​ಗಳ ಬೆಂಬಲ ಬಿಜೆಪಿಗೆ ಅತ್ಯಗತ್ಯ. ಹೀಗಾಗಿ, ಶಿವಸೇನೆಯ ಕಾರ್ಪೋರೇಟರ್​​ಗಳನ್ನು ಬೇರೆ ಪಕ್ಷದವರು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬಹುದು ಎಂಬ ಭಯದಿಂದ ಏಕನಾಥ್ ಶಿಂಧೆ ತಮ್ಮ ಪಕ್ಷದ ಕಾರ್ಪೋರೇಟರ್​​ಗಳನ್ನು ಬಾಂದ್ರಾದ ಫೈವ್ ಸ್ಟಾರ್ ಹೋಟೆಲ್​ಗೆ ಶಿಫ್ಟ್ ಮಾಡುವ ಮೂಲಕ ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ.

ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ)ನಲ್ಲಿ ಅಧಿಕಾರ ರಚನೆಯ ಬಗ್ಗೆ ತೀವ್ರ ಚೌಕಾಶಿ ಆರಂಭವಾಗುತ್ತಿದ್ದಂತೆ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ತಮ್ಮ ಶಿವಸೇನಾ ಬಣದಿಂದ ಹೊಸದಾಗಿ ಆಯ್ಕೆಯಾದ ಎಲ್ಲಾ ಕಾರ್ಪೊರೇಟರ್‌ಗಳನ್ನು ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಇರುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ಜನರೊಂದಿಗಿನ ಎನ್​ಡಿಎ ಬಾಂಧವ್ಯವನ್ನು ಸೂಚಿಸುತ್ತದೆ; ಬಿಎಂಸಿ ಚುನಾವಣೆಯ ಗೆಲುವಿಗೆ ಪ್ರಧಾನಿ ಮೋದಿ ಧನ್ಯವಾದ

ಪಕ್ಷದ ಮೂಲಗಳ ಪ್ರಕಾರ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಪಕ್ಷದ ಟಿಕೆಟ್‌ನಲ್ಲಿ ಆಯ್ಕೆಯಾದ 29 ಕಾರ್ಪೊರೇಟರ್‌ಗಳು ಬಾಂದ್ರಾದ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್​ನಲ್ಲಿಯೇ ಇರಲು ಸೂಚಿಸಲಾಗಿದೆ. ಬಿಎಂಸಿ ಮೇಯರ್ ಕುರಿತು ಮಾತುಕತೆ ನಡೆಯುತ್ತಿರುವ ಈ ಸಮಯದಲ್ಲಿ “ಕುದುರೆ ವ್ಯಾಪಾರ”ದ ಪ್ರಯತ್ನಗಳನ್ನು ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ.

29 ಸ್ಥಾನಗಳೊಂದಿಗೆ ಶಿಂಧೆ ಬಣವು ಬಿಜೆಪಿಗೆ ನಿರ್ಣಾಯಕ ಮಿತ್ರಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿಗೆ ಬಹುಮತವಿಲ್ಲದ ಕಾರಣದಿಂದ ಶಿವಸೇನೆ ಕಿಂಗ್ ಮೇಕರ್ ಆಗಿದೆ. ಹೀಗಾಗಿ, ಏಕನಾಥ್ ಶಿಂಧೆ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧರಿಲ್ಲ. ದೇಶದ ಅತ್ಯಂತ ಶ್ರೀಮಂತ ನಾಗರಿಕ ಸಂಸ್ಥೆಯಾದ ಬಿಎಂಸಿಯಲ್ಲಿ ಅಧಿಕಾರಕ್ಕೆ ಔಪಚಾರಿಕ ಹಕ್ಕು ಸಾಧಿಸುವವರೆಗೆ ಎಲ್ಲಾ ಕಾರ್ಪೊರೇಟರ್‌ಗಳು ಒಟ್ಟಿಗೆ ಇರಬೇಕೆಂದು ಅವರು ರೆಸಾರ್ಟ್ ರಾಜಕೀಯದ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮುಂಬೈ ಕಿರೀಟವನ್ನು ಮುಡಿಗೇರಿಸಿಕೊಂಡ ಬಿಜೆಪಿ ನೇತೃತ್ವದ ಮಹಾಯುತಿ; 25 ವರ್ಷಗಳ ಬಳಿಕ ಠಾಕ್ರೆ ಭದ್ರಕೋಟೆ ಪತನ

2019ರ ಚುನಾವಣಾ ನಂತರದ ಬಿಕ್ಕಟ್ಟಿನ ಸಮಯದಲ್ಲಿ ಕೂಡ ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿಯ ಪ್ರತಿಸ್ಪರ್ಧಿಗಳು ತಮ್ಮ ಶಾಸಕರನ್ನು ಮುಂಬೈನಾದ್ಯಂತ ಐಷಾರಾಮಿ ಹೋಟೆಲ್‌ಗಳಲ್ಲಿ ಇಟ್ಟಿದ್ದವು. 2022ರ ಶಿವಸೇನೆ ವಿಭಜನೆಯ ಸಮಯದಲ್ಲಿ ಕೂಡ ಇದೇ ರೀತಿಯ ತಂತ್ರವನ್ನು ಅನುಸರಿಸಲಾಗಿತ್ತು. ಇದೀಗ ಮತ್ತೆ ಶಿವಸೇನೆಯಲ್ಲಿ ರೆಸಾರ್ಟ್ ರಾಜಕೀಯ ಶುರುವಾಗಿದೆ.

ಬಿಎಂಸಿ ಚುನಾವಣೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ಬಿಜೆಪಿ 227 ವಾರ್ಡ್‌ಗಳಲ್ಲಿ 89 ಅನ್ನು ಗೆದ್ದು 2017ರಲ್ಲಿ ತನ್ನ ಹಿಂದಿನ ಗರಿಷ್ಠ 82 ಸ್ಥಾನಗಳನ್ನು ಮೀರಿಸುವ ಮೂಲಕ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಶಿಂಧೆ ನೇತೃತ್ವದ ಶಿವಸೇನೆ 29 ಸ್ಥಾನಗಳನ್ನು ಪಡೆಯಿತು. ಇದರಿಂದ ಮಹಾಯುತಿ ಮೈತ್ರಿಕೂಟದ ಸಂಖ್ಯೆಯನ್ನು 118ಕ್ಕೆ ಏರಿತು. ಈ ಮೂಲಕ ಮಹಾಯುತಿ ಬಹುಮತದ ಸಂಖ್ಯೆಯಾದ 114 ಸ್ಥಾನಗಳನ್ನು ಪಡೆದುಕೊಂಡಿದೆ. ಆದರೂ ಬೇರೆ ಪಕ್ಷದವರು ತಮ್ಮ ಕಾರ್ಪೋರೇಟರ್​​ಗಳಿಗೆ ಆಮಿಷವೊಡ್ಡಿ ತನ್ನತ್ತ ಸೆಳೆಯುವ ಭಯ ಇರುವುದರಿಂದ ಮೇಯರ್ ಆಯ್ಕೆಯ ಬಗ್ಗೆ ಅಂತಿಮವಾಗುವವರೆಗೂ ಶಿವಸೇನಾ ಕಾರ್ಪೋರೇಟರ್​​ಗಳನ್ನು ರೆಸಾರ್ಟ್​ನಲ್ಲಿರಿಸಲು ನಿರ್ಧರಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link