‘ಜೈಲರ್ 2’ ಚಿತ್ರತಂಡಕ್ಕೆ ಸೇರ್ಪಡೆಯಾದ ಹೃತಿಕ್ ರೋಷನ್; ರಜನಿ ಜೊತೆ 2 ದಿನ ಶೂಟಿಂಗ್ – Kannada News
ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದ ಸೀಕ್ವೆಲ್ ‘ಜೈಲರ್ 2’ (Jailer 2) ಬಗ್ಗೆ ದಿನದಿಂದ ದಿನಕ್ಕೆ ಭಾರಿ ಕುತೂಹಲ ಮೂಡುತ್ತಿದೆ. ಈ ಬಹುನಿರೀಕ್ಷಿತ ಸಿನಿಮಾದಲ್ಲಿ ತಲೈವಾ ಜೊತೆ ಬಾಲಿವುಡ್‌ನ ಯಾವ ಸ್ಟಾರ್ ನಟ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ತಾಜಾ ವರದಿಗಳ ಪ್ರಕಾರ, ಬಾಲಿವುಡ್‌ನ ಗ್ರೀಕ್ ಗಾಡ್ ಹೃತಿಕ್ ರೋಷನ್ (Hrithik Roshan) ಈ ಚಿತ್ರದ ಪ್ರಮುಖ ಅತಿಥಿ ಪಾತ್ರಕ್ಕೆ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಈ ಪಾತ್ರಕ್ಕಾಗಿ…