ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ: ದಿಢೀರ್ ಖರ್ಗೆ ಭೇಟಿಯಾಗಿದ್ದೇಕೆ ಡಿ.ಕೆ. ಶಿವಕುಮಾರ್? – Kannada News | DCM DK Shivakumar Meets AICC President Mallikarjun Kharge Amidst Karnataka Political Speculation
ಬೆಂಗಳೂರು, ಜನವರಿ 12: ಡಿಸಿಎಂ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ದಿಢೀರ್ ಭೇಟಿಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮುಖ್ಯವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ನ ನಾಯಕತ್ವ ಬದಲಾವಣೆ ಕುರಿತು ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ನವೆಂಬರ್, ಡಿಸೆಂಬರ್ ಮತ್ತು ಈಗ ಜನವರಿ ತಿಂಗಳಲ್ಲೂ…