Headlines

ಎರಡು ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​ – Kannada News | Meghashree Challenges Husband Manjunaths Allegations in Wilson Garden Case

ಬೆಂಗಳೂರು, ಜನವರಿ 11: ಮಂಜುನಾಥ್​​ ಮತ್ತು ಮೇಘಶ್ರೀ ದಂಪತಿ ನಡುವಿನ ಕಲಹ ತಾರಕಕ್ಕೇರಿದೆ. ಪತಿ ಸೈಕೋ ರೀತಿ ವರ್ತಿಸ್ತಾನೆ ಎಂದು ಮೇಘಶ್ರೀ ಮಾಡಿದ್ದ ಆರೋಪಗಳಿಗೆ ಮಂಜುನಾಥ್​​ ಕೌಂಟರ್​​ ಕೊಟ್ಟಿದ್ದರು. ಆಕೆಗೆ ಅನೇಕ ಮದುವೆಗಳಾಗಿವೆ. ತಾನು ಕೂಡ ಆಕೆಗೆ 30 ಲಕ್ಷ ಹಣ, 50 ಗ್ರಾಂ ಚಿನ್ನಾಭರಣ, ಐಪೋನ್, ಐಪ್ಯಾಡ್ ಮತ್ತು ಟ್ಯಾಬ್​​ಗಳನ್ನು ನೀಡಿರೋದಾಗಿ ತಿಳಿಸಿದ್ದರು. ಆದ್ರೀಗ ಮಂಜುನಾಥ್​​ ಆರೋಪವನ್ನು ಮೇಘಶ್ರೀ ಅಲ್ಲಗಳೆದಿದ್ದಾರೆ. ಮಂಜುನಾಥ್​​ಗೆ ತನ್ನ ಹಿಂದಿನ ಎರಡು ವಿವಾಹ ವಿಚ್ಛೇದನಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿತ್ತು ಎಂದಿದ್ದಾರೆ. ಅಲ್ಲದೆ,…

Read More

ಬೆಂಗಳೂರಿನಲ್ಲಿ ಪ್ರೀತಿಸಿದವರ ವಶೀಕರಣಕ್ಕೆ ಆನ್‌ಲೈನ್‌ನಲ್ಲಿ ಉಡದ ಜನನಾಂಗ ಮಾರಾಟ ಮಾಡುತ್ತಿದ್ದ ಮಾಂತ್ರಿಕ – Kannada News | Bengaluru godman arrested for selling monitor lizard parts online

ಬೆಂಗಳೂರು, ಜ.11: ಬೆಂಗಳೂರಿನಲ್ಲಿ ಮಾಂತ್ರಿಕನೊಬ್ಬ ಉಡದ (Monitor lizard )ಜನನಾಂಗಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಪ್ರೀತಿಗಾಗಿ ವಶೀಕರಣ, ಪ್ರೇಮ ವಿವಾಹದ ಕಲಹಗಳಿಗೆ ಈ ಹಲ್ಲಿಯ ಜನನಾಂಗವನ್ನು ನೀಡುತ್ತಿದ್ದ ಎಂದು ಹೇಳಲಾಗಿದೆ. ಮಾಂತ್ರಿಕ ಶಕ್ತಿ ಇದೆ ಎಂದು ಹೇಳಿಕೊಂಡು ಜನರನ್ನು ನಂಬಿಸುತ್ತಿದ್ದ, ಪ್ರೇಮಿಗಳ ನಡುವಿನ ಘರ್ಷಣೆಯನ್ನು ಪರಿಹರಿಸಬಹುದು ಎಂದು ಹೇಳಿ ಪ್ರತಿ ತುಂಡನ್ನು 10,000 ರೂ.ಗೆ ಮಾರಾಟ ಮಾಡಿದನೆಂದು ವರದಿಯಾಗಿದೆ. ಈ ಬಗ್ಗೆ ಸುಳಿವು ಸಿಕ್ಕ ತಕ್ಷಣ, ಎನ್‌ಜಿಒವೊಂದು ತನಿಖೆ ಮಾಡಲು ವೈಯಕ್ತಿಕ ಸಮಸ್ಯೆ…

Read More

Solar Eclipse 2026: ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ? ಯಾವ ರಾಶಿಗೆ ಶುಭ, ಯಾರಿಗೆ ಅಶುಭ? – Kannada News | First Solar Eclipse 2026: Date, Zodiac Impacts and Hindu Significance

ಹಿಂದೂ ಧರ್ಮದಲ್ಲಿ ಗ್ರಹಣಗಳಿಗೆ ಸಾಕಷ್ಟು ಆಧ್ಯಾತ್ಮಿಕ ಮಹತ್ವವಿದೆ. ಹೊಸ ವರ್ಷ ಪ್ರಾರಂಭವಾಗುತ್ತಿದ್ದಂತೆ ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ ಎಂಬ ಪ್ರಶ್ನೆ ಸಾಕಷ್ಟು ಜನರಲ್ಲಿದೆ. ಜೊತೆಗೆ ಗ್ರಹಣವು 12 ರಾಶಿಗಳ ಪೈಕಿ ಕೆಲವು ರಾಶಿಗೆ ಶುಭವಾದರೆ, ಇನ್ನೂ ಕೆಲವು ರಾಶಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆದ್ದರಿಂದ ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ ಮತ್ತು ಯಾವ ರಾಶಿಗೆ ಶುಭ, ಯಾರಿಗೆ ಅಶುಭ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ? 2026ರ ಮೊದಲ ಸೂರ್ಯ ಗ್ರಹಣವು ಫೆಬ್ರವರಿ…

Read More

ತಾಯಿ ಮೇಲಿನ ದ್ವೇಷಕ್ಕೆ ಮಗು ಬಲಿ; ಕೊಲೆಗೂ ಮುನ್ನ 6 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ! – Kannada News | Whitefield Girl was Physically assaulted before Murder, Accused Has Prior POCSO Cases

ಕೊಲೆಗೂ ಮುನ್ನ 6 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ಯುಸೂಫ್ ಮೀರ್ ಬೆಂಗಳೂರು, ಜನವರಿ 11: ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿ ಆರು ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಲ್ಲಲಾಗಿತ್ತು. ತಾಯಿಯ ಮೇಲಿನ ದ್ವೇಷಕ್ಕೆ ಮಗುವನ್ನು ಕೊಂದ ಪಾಪಿ ಚರಂಡಿಗೆ ಬಿಸಾಕಿದ್ದ. ಈ ಕೊಲೆ ಪ್ರಕರಣದ ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಕೊಲೆಗೂ ಮುನ್ನ ಪುಟ್ಟ ಬಾಲಕಿಯ ಮೇಲೆ ಆರೋಪಿ ಅತ್ಯಾಚಾರವೆಸಗಿರುವುದು ಗೊತ್ತಾಗಿದೆ. ಆರೋಪಿಯು ಈ ಹಿಂದೆಯೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನೆಂಬುದು ವಿಚಾರಣೆ ವೇಳೆ…

Read More

ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳಿಗೆ ಥಳಿಸಿದವರ ಮೇಲೂ ಕೇಸ್​ – Kannada News | Hubballi Physical Assault on Woman: Two Arrested

ಹುಬ್ಬಳ್ಳಿ, ಜನವರಿ 11: ಮಹಿಳೆಗೆ ಮದ್ಯ ಕುಡಿಸಿ ಆಕೆಯ ಮೇಲೆ ಗ್ಯಾಂಗ್​​ ರೇಪ್​ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆಗೆ ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದೆ. ಕಾಮುಕರು ಕೃತ್ಯದ ವಿಡಿಯೋ ಕೂಡ ಮಾಡಿಕೊಂಡು ಅದನ್ನು ಹರಿಬಿಟ್ಟಿದ್ದರು ಎನ್ನಲಾಗಿದೆ. ಇನ್ನು ಸಂತ್ರಸ್ತೆಗೆ ಅಗತ್ಯ  ಚಿಕಿತ್ಸೆಯನ್ನು ನೀಡಲಾಗ್ತಿದೆ. ಜ.9ರಂದು ನಡೆದಿರುವ ಘಟನೆ ಘಟನೆ ಬಗ್ಗೆ ಪೊಲೀಸ್​ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ಜ.9ರಂದು ಅಂಬೇಡ್ಕರ್ ಮೈದಾನದಿಂದ ಇಬ್ಬರು ಯುವಕರು ಆಟೋದಲ್ಲಿ ಮಹಿಳೆಯನ್ನು…

Read More

ಎರಡೇ ದಿನಕ್ಕೆ ತೀವ್ರವಾಗಿ ಕುಸಿದ ‘ದಿ ರಾಜಾ ಸಾಬ್’ ಸಿನಿಮಾ ಕಲೆಕ್ಷನ್ – Kannada News | Prabhas starrer The Raja Saab movie collections drops on day 2

ಪ್ರಭಾಸ್ ಅಭಿಮಾನಿಗಳು ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮೂಡಿಬಂದಿಲ್ಲ. ಬಾಕ್ಸ್ ಆಫೀಸ್​​ನಲ್ಲಿ ಕೇವಲ 2ನೇ ದಿನಕ್ಕೆ ಕಲೆಕ್ಷನ್ ಕುಸಿತ ಕಂಡಿರುವುದು ಈ ಮಾತಿಗೆ ಸಾಕ್ಷಿ. ಇದು ಹಾರರ್ ಸಿನಿಮಾ. ಇದೇ ಮೊದಲ ಬಾರಿಗೆ ಪ್ರಭಾಸ್ (Prabhas) ಅವರು ಹಾರರ್ ಸಿನಿಮಾ ಮಾಡಿದ್ದಾರೆ. ಆ ಕಾರಣದಿಂದಲೂ ಹೈಪ್ ಇತ್ತು. ಆದರೆ ಪ್ರೇಕ್ಷಕರಿಗೆ ಈ ಸಿನಿಮಾ ಅಷ್ಟೇನೂ ಇಷ್ಟ ಆಗಿಲ್ಲ. ಆದ್ದರಿಂದ 2ನೇ…

Read More

ಗಂಡನ ಕೊಲೆಗೆ ಸಾಕ್ಷಿಯಾಗಿದ್ದ ಮಹಿಳೆಯ ಉಸಿರನ್ನೇ ನಿಲ್ಲಿಸಿದ ಪಾಪಿಗಳು – Kannada News | A Witness Silenced, Delhi Woman Shot Dead Two Years After Husband’s Killing

ನವದೆಹಲಿ, ಜನವರಿ 11: ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲೇ ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಹತ್ಯೆ(Murder)) ಮಾಡಲಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ದೆಹಲಿಯ ಶಾಲಿಮಾರ್​ ಬಾಗ್​ನಲ್ಲಿ 44ವರ್ಷದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 2023ರಲ್ಲಿ ಆ ಮಹಿಳೆಯ ಪತಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಅದಕ್ಕೆ ಆ ಮಹಿಳೆಯೇ ಸಾಕ್ಷಿಯಾಗಿದ್ದರು, ಇದೀಗ ಸಾಕ್ಷ್ಯ ನಾಶ ಮಾಡಲು ಆರೋಪಿಗಳು ಆಕೆಯನ್ನೂ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಮೃತರನ್ನು ಶಾಲಿಮಾರ್ ಬಾಗ್ ನಿವಾಸಿ ರಚನಾ ಯಾದವ್, ಪೊಲೀಸರ ಪ್ರಕಾರ, ಅವರ ತಲೆಗೆ ಗುಂಡು ಹಾರಿಸಿದ ಪರಿಣಾಮ ಸ್ಥಳದಲ್ಲೇ…

Read More

Video: ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ – Kannada News | Why 108 Horses, The Symbolism Behind Modi’s Somnath Shaurya Yatra

ಅಹಮದಾಬಾದ್, ಜನವರಿ 11: ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಶೌರ್ಯ ಯಾತ್ರೆಯನ್ನು ನಡೆಸಿದ್ದಾರೆ. ಶೌರ್ಯ ಯಾತ್ರೆಯು ಶೌರ್ಯ ಮತ್ತು ತ್ಯಾಗವನ್ನು ಪ್ರತಿಬಿಂಬಿಸುವ 108 ಕುದುರೆಗಳ ಸಾಂಕೇತಿಕ ಮೆರವಣಿಗೆಯನ್ನು ಒಳಗೊಂಡಿತ್ತು. ಪ್ರಧಾನಿ ಮೋದಿ ಮತ್ತೆ ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಂದು ನಡೆಯಲಿರುವ ಸೋಮನಾಥ ಸ್ವಾಭಿಮಾನ ಪರ್ವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಇಶಾನಿಯ ಆಸೆಯಿಂದ ಬೆತ್ತಲೆಯಾದ ಬೆಂಗಳೂರಿನ ಯುವಕ: ಖಾತೆಯಿಂದ ಹೋಯಿತು ಲಕ್ಷ ಲಕ್ಷ ಹಣ! – Kannada News | AI Dating Fraud: Bengaluru Man Loses 1.5 Lakhs to Online Blackmail

ಬೆಂಗಳೂರು, ಜ.11: ಬೆಂಗಳೂರಿನ (Bengaluru) ಯುವಕರೇ ಎಚ್ಚರ… ಹುಡುಗಿ ಚೆನ್ನಾಗಿದ್ದಾಳೆ ಎಂದು ಫೋನ್​​​​ ಎತ್ತಿದ್ರೆ, ಎಕೌಂಟ್​​​ನಲ್ಲಿದ್ದ ಹಣ ಖಾಲಿಯಾಗುವುದು ಖಂಡಿತ. ಇಂತಹ ಮೋಸದ ಜಾಲದಿಂದ ಅದೆಷ್ಟೋ ಯುವಕರು ಬೆತ್ತಲೆ ಆಗಿರುವ ಪ್ರಕರಣಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇದೀಗ ಬೆಂಗಳೂರಿನಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಕರ್ನಾಟಕದಲ್ಲಿ ಡೇಟಿಂಗ್ ಅಪ್ಲಿಕೇಶನ್‌ಗಳಿಂದ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಯುವಕನೊಬ್ಬ ಡೇಟಿಂಗ್ ಅಪ್ಲಿಕೇಶನ್‌ ಡೌನ್​​ಲೋಡ್​​ ಮಾಡಿಕೊಂಡು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಬಳಸಿ ರಚಿಸಲಾದ “ಇಶಾನಿ” ಹೆಸರಿನ ಪ್ರೊಫೈಲ್​​ನಿಂದ ಬಂದ​​​​ ರಿಕ್ವೆಸ್ಟ್​​ಗೆ ಕ್ಲಿಕ್ ಮಾಡಿದ್ದಾನೆ. ಈ…

Read More

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ – Kannada News | Usman Khawaja shines on BBL return

ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ಆಟಗಾರ ಉಸ್ಮಾನ್ ಖ್ವಾಜಾ ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ ಕಣಕ್ಕಿಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಬಳಿಕ ನೇರವಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಖ್ವಾಜಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 180…

Read More