Category Archives: Blog

Your blog category

ಕಬ್ಬು ಕಟಾವು ಕಾರ್ಮಿಕರು ತೆರಳ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ತಾಯಿ, ಇಬ್ಬರು ಮಕ್ಕಳು ಸಾವು – Kannada News | Bagalkote Tractor Accident: Mother and 2 Kids Die

ಬಾಗಲಕೋಟೆ, ಜನವರಿ 10: ಟ್ರ್ಯಾಕ್ಟರ್ ಪಲ್ಟಿ (Tractor Accident) ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ತಾಯಿ ಕೂಡ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿ ನಡೆದಿದೆ. ತಾಯಿ ರುಕ್ಮಿಣಿ ಬಾಯಿ ನಾಯಕ್(36), ಶಿವಾನಿ ನಾಯಕ್(6) ಮತ್ತು 4 ವರ್ಷದ ರೋಷನ್ ನಾಯಕ್ ಮೃತ ದುರ್ದೈವಿಗಳು. ಸದ್ಯ ಸ್ಥಳಕ್ಕೆ ಅಮೀನ್​ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದದ್ದೇನು?

ಕಬ್ಬು ಕಟಾವು ಮಾಡುವ ಐವರು ಕಾರ್ಮಿಕರು ಟ್ರ್ಯಾಕ್ಟರ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಮತಗಿ ಬಳಿ ಹುಕ್ ಕಟ್ ಆಗಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ದುರಂತ ಸಂಭವಿಸಿದೆ. ಮೃತಪಟ್ಟ ದುರ್ದೈವಿಗಳು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಂಡಾ ನಿವಾಸಿಗಳು.

ಲಾರಿ ಡಿಕ್ಕಿ: ಕಾರು ಚಾಲಕ ಸ್ಥಳದಲ್ಲೇ ದುರ್ಮರಣ; ನಾಲ್ವರಿಗೆ ಗಂಭೀರ ಗಾಯ

ಲಾರಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ನಡೆದಿದೆ. ಕಾರು ಚಾಲಕ ಸೈಮನ್ ಸಾವನ್ನಪ್ಪಿದ್ದು, ಶಕೀಲಾ, ಹ್ಯಾಲಿಸನ್, ಲಿಯೋ, ಇಲಿಯಾಸ್ ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: ಸಾವಿನ ದವಡೆಯಿಂದ 8 ಜನ ಜಸ್ಟ್​ ಮಿಸ್!​​

ಬೆಂಗಳೂರಿನಿಂದ ದಾಬಸ್​​ಪೇಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೈಕ್​ ಅಪಘಾತ: ಸವಾರ ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕಟ್ಟೆಯಲ್ಲಿ ಬೈಕ್​ ಅಪಘಾತದಲ್ಲಿ ಸವಾರ ಚೇತನ್​ ಮೊಗವೀರ(24) ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ತಮ್ಮ ನಿವಾಸಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ

ರಸ್ತೆ ಕಾಮಗಾರಿ ವೇಳೆ ಸೂಚನಾಫಲಕ ಅಳವಡಿಕೆ ಮಾಡದಿದ್ದಕ್ಕೆ ಅಪಘಾತ ಸಂಭವಿಸಿರುವ ಆರೋಪ ಕೇಳಿಬಂದಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Vastu Dosh: ಮನೆಯಲ್ಲಿ ವಾಸ್ತು ದೋಷವಿದ್ದರೆ ಈ ಲಕ್ಷಣಗಳು ಕಂಡುಬರುತ್ತದೆ! – Kannada News | Vastu Dosh: Identify Signs and Simple Remedies for a Harmonious Home

ವಾಸ್ತು ಶಾಸ್ತ್ರವು ಒಂದು ಪ್ರಾಚೀನ ವಿಜ್ಞಾನ. ನಿಮ್ಮ ಮನೆಯಲ್ಲಿ ಯಾವುದೇ ವಾಸ್ತು ದೋಷಗಳಿವೆಯೇ ಎಂದು ನಿರ್ಧರಿಸಲು ಬಳಸಬಹುದಾದ ಕೆಲವು ಚಿಹ್ನೆಗಳನ್ನು ವಾಸ್ತು ಶಾಸ್ತ್ರವು ವಿವರಿಸುತ್ತದೆ. ನಿಮ್ಮ ಮನೆಯಲ್ಲಿ ಈ ಲಕ್ಷಣಗಳು ಕಂಡುಬಂದರೆ, ಅವುಗಳನ್ನು ನಿರ್ಲಕ್ಷಿಸಬೇಡಿ ಮತ್ತು ಅವುಗಳನ್ನು ಸರಿಪಡಿಸಲು ಕ್ರಮಗಳನ್ನು ತೆಗೆದುಕೊಳ್ಳಿ.

ಮನೆಯಲ್ಲಿ ವಾಸ್ತು ದೋಷ:

ಕಠಿಣ ಪರಿಶ್ರಮದ ಹೊರತಾಗಿಯೂ ಯಶಸ್ಸಿನ ಕೊರತೆ, ಯಾವಾಗಲೂ ಸಮಸ್ಯೆ ವಾಸ್ತು ದೋಷದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ನಿರಂತರ ಆರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳು ಸಹ ವಾಸ್ತು ದೋಷದ ಸಂಕೇತಗಳಾಗಿವೆ. ಇದಲ್ಲದೇ ಮನೆಯ ಈಶಾನ್ಯ ಮೂಲೆಯಲ್ಲಿರುವ ಶೌಚಾಲಯವು ವಾಸ್ತು ದೋಷಕ್ಕೆ ಕಾರಣವಾಗಬಹುದು. ನೈಸರ್ಗಿಕ ಬೆಳಕಿನ ಕೊರತೆಯಿರುವ ಮನೆಯ ಮೂಲೆಗಳಲ್ಲಿ ನಕಾರಾತ್ಮಕ ಶಕ್ತಿಯು ವಾಸಿಸಬಹುದು, ಇದು ವಾಸ್ತು ದೋಷಗಳಿಗೆ ಕಾರಣವಾಗಬಹುದು. ಇದಲ್ಲದೆ, ಮನೆಯ ಸುತ್ತಲೂ ಮತ್ತು ಮುಖ್ಯ ದ್ವಾರದಲ್ಲಿ ಅಸ್ತವ್ಯಸ್ತವಾಗಿರುವುದು ಸಹ ವಾಸ್ತು ದೋಷಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು?

ವಾಸ್ತು ದೋಷಗಳನ್ನು ತೆಗೆದುಹಾಕಲು ಪರಿಹಾರಗಳು:

  • ವಾಸ್ತು ದೋಷಗಳನ್ನು ತೊಡೆದುಹಾಕಲು, ಮನೆಯಲ್ಲಿ ವಾಸ್ತು ಶಾಂತಿಯನ್ನು ಪಠಿಸಬೇಕು.
  • ಸಂಜೆ, ಕರ್ಪೂರವನ್ನು ಸುಟ್ಟು ಮನೆಯ ಸುತ್ತಲೂ ಪ್ರದಕ್ಷಿಣೆ ಹಾಕಬೇಕು.
  • ಸಂಜೆ ಮನೆಯ ಮುಖ್ಯ ದ್ವಾರದ ಬಳಿ ಮತ್ತು ತುಳಸಿಯ ಬಳಿ ತುಪ್ಪದ ದೀಪವನ್ನು ಬೆಳಗಿಸಿ.
  • ಮನೆಯನ್ನು ಸ್ವಚ್ಛವಾಗಿ ಮತ್ತು ಗಾಳಿಯಾಡುವಂತೆ ಇಡಬೇಕು.
  • ಈ ಕ್ರಮಗಳನ್ನು ಅನುಸರಿಸುವುದರಿಂದ ಮನೆಯಲ್ಲಿರುವ ವಾಸ್ತು ದೋಷಗಳನ್ನು ನಿವಾರಿಸಬಹುದು ಮತ್ತು ಸಕಾರಾತ್ಮಕ ಶಕ್ತಿಯನ್ನು ಪುನಃಸ್ಥಾಪಿಸಬಹುದು ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: ಸಾವಿನ ದವಡೆಯಿಂದ 8 ಜನ ಜಸ್ಟ್​ ಮಿಸ್!​​

ಬೆಂಗಳೂರು, ಜನವರಿ 10: ಇಂದಿರಾನಗರದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ 8 ಜನರು ಪಾರಾಗಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದ್ಯಪಾನ ಮಾಡಿ ಚಾಲಕ ಕಾರು ಚಲಾಯಿಸಿದ್ದಾನೆ. ಎಡಕ್ಕೆ ತಿರುಗಿಸದೇ ನೇರವಾಗಿ ಡಿವೈಡರ್​​​​ರನ್ನು ಹಾರಿಸುವ ಮೂಲಕ ಹೋಟೆಲ್​ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್​ ಹಾರಿ ತಮ್ಮೆಡೆಗೆ ಬರುತ್ತಿರುವುದನ್ನ ಕಂಡ ಯುವಕ-ಯುವತಿಯರ ತಂಡ ಸೇರಿದಂತೆ ಇಬ್ಬರು ಬೈಕ್​ ಚಾಲಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಜೀವನ್ ಭೀಮಾ‌ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಭಯಾನಕ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಗದಗ: ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ, ಎಷ್ಟು ಕೆಜಿ ಗೊತ್ತಾ? – Kannada News | Lakkundi Treasure: 1kg Gold Discovered During Gadag House Foundation Work

ಗದಗ, ಜ.10: ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ. ಇದೀಗ ನಿಧಿ ನೋಡಲು ನೂರಾರು ಜನ ಸೇರಿದ್ದಾರೆ. ಸ್ಥಳಕ್ಕೆ ಎಡಿಸಿ ದುರ್ಗೇಶ್, ಎಸ್​ಪಿ ರೋಹನ್ ಜಗದೀಶ್, ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ ನೀಡಿದ್ದಾರೆ. ಲಕ್ಕುಂಡಿ ಪ್ರಾಧಿಕಾರದ ಸದಸ್ಯರು, ಪುರತತ್ವ ಸಿಬ್ಬಂದಿಯಿಂದ ಪರಿಶೀಲನೆ ಮಾಡಲಾಗುತ್ತದೆ. ಪತ್ತೆಯಾದ ಚಿನ್ನಾಭರಣ ಯಾರ ಕಾಲದ್ದು ಎಂಬ ತನಿಖೆ ಕೂಡ ನಡೆಯುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

Source link

ತನಿಖೆಗೆ ಅಡ್ಡಿಪಡಿಸಿದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆಹೋದ ಇಡಿ – Kannada News | ED moves Supreme Court against Bengal Government after Calcutta High Court defers hearing in I PAC case

ಕೊಲ್ಕತ್ತಾ, ಜನವರಿ 10: ಐ-ಪ್ಯಾಕ್ (I-PAC) ಕಲ್ಲಿದ್ದಲು ಹಗರಣ ಪ್ರಕರಣದ ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (CM Mamata Banerjee) ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. “ನ್ಯಾಯಯುತ ಮತ್ತು ಸ್ವತಂತ್ರ ತನಿಖೆ ನಡೆಸುವ ಹಕ್ಕನ್ನು ರಾಜ್ಯ ಸರ್ಕಾರ ಅಡ್ಡಿಪಡಿಸಿದೆ” ಎಂದು ಇಡಿ ತನ್ನ ಅರ್ಜಿಯಲ್ಲಿ ಹೇಳಿದೆ.

ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಮೇಲಿನ ದಾಳಿಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಡಿ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಒತ್ತಾಯಿಸಿದೆ. ಕೊಲ್ಕತ್ತಾ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ಕೊಲ್ಕತ್ತಾದಲ್ಲಿರುವ ಐ-ಪ್ಯಾಕ್ ನಿರ್ದೇಶಕ ಪ್ರತೀಕ್ ಜೈನ್ ಅವರ ಮನೆ ಮೇಲೆ ದಾಳಿ ನಡೆದಾಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಸ್ಥೆಯ ತನಿಖೆಗೆ ಅಡ್ಡಿಪಡಿಸಿದರು ಮತ್ತು ಅಲ್ಲಿದ್ದ ಮಹತ್ವದ ದಾಖಲೆಗಳನ್ನು ತೆಗೆದುಕೊಂಡರು ಎಂದು ಇಡಿ ಆರೋಪಿಸಿದೆ.

ಇದನ್ನೂ ಓದಿ: ಕೊಲ್ಕತ್ತಾದಲ್ಲಿ ಇಡಿ ದಾಳಿ ವೇಳೆ ಹೈಡ್ರಾಮಾ; I-PAC ಕಚೇರಿಗೆ ನುಗ್ಗಿ ಹಸಿರು ಫೈಲ್‌ ಹೊತ್ತೊಯ್ದ ಮಮತಾ ಬ್ಯಾನರ್ಜಿ

“ರಾಜ್ಯ ಪೊಲೀಸರ ಸಹಾಯದಿಂದ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಡಿ ಅಧಿಕಾರಿಗಳ ಕಾನೂನುಬದ್ಧ ಕಸ್ಟಡಿಯಿಂದ ಡಿಜಿಟಲ್ ಸಾಧನಗಳು, ಎಲೆಕ್ಟ್ರಾನಿಕ್ ಸಂಗ್ರಹಣಾ ಮಾಧ್ಯಮಗಳು ಮತ್ತು ಪ್ರಮುಖ ಅಪರಾಧ ದಾಖಲೆಗಳನ್ನು ಬಲವಂತವಾಗಿ ವಶಪಡಿಸಿಕೊಂಡು, ಮುಚ್ಚಿಟ್ಟಿದ್ದಾರೆ” ಎಂದು ಇಡಿ ಆರೋಪಿಸಿದೆ. ಆದರೆ. ಕೊಲ್ಕತ್ತಾ ಹೈಕೋರ್ಟ್ ಇಡಿಗೆ ತುರ್ತು ಪರಿಹಾರ ನೀಡಲು ನಿರಾಕರಿಸಿತ್ತು. ಈ ಪ್ರಕರಣದ ವಿಚಾರಣೆಯನ್ನು ಮುಂದೂಡಿತ್ತು. ಹೀಗಾಗಿ, ಇಡಿ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಮತ್ತೆ ಗಾಯಗೊಂಡ ರಿಷಬ್ ಪಂತ್; ಅಭ್ಯಾಸದಿಂದ ಅರ್ಧಕ್ಕೆ ವಾಪಸ್

Source link

ಈ ವಾರ ಒಟಿಟಿಗೆ ಬಂದಿವೆ 5 ಕನ್ನಡ ಸಿನಿಮಾ, ಜೊತೆಗೆ ಇನ್ನೊಂದಿಷ್ಟು – Kannada News | OTT Release this week from January 9 to 12

ರಾಜ್ ಬಿ ಶೆಟ್ಟಿ, ಪ್ರಕಾಶ್ ರೈ, ಶೈನ್ ಶೆಟ್ಟಿ, ಪ್ರಕಾಶ್ ತಮಿನಾಡು, ಶನಿಲ್ ಗುರು ಇನ್ನೂ ಕೆಲವು ಪ್ರತಿಭಾವಂತರು ನಟಿಸಿರುವ ‘ಏಕಂ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ಬಿಡುಗಡೆ ಆಗಿದ್ದು, ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿರುವ ಈ ಸಿನಿಮಾನಲ್ಲಿ ಏಳು ಕತೆಗಳಿವೆ.

Source link

ಯಾರಿಂದಲೂ ಸಾಧ್ಯವಿಲ್ಲ; ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ಬಗ್ಗೆ ಮೌನ ಮುರಿದ ಗಿಲ್ – Kannada News | Shubman Gill Breaks Silence on T20 World Cup 2026 Exclusion

ವಾಸ್ತವವಾಗಿ ಗಿಲ್​ಗೆ ಟಿ20 ಮಾದರಿಯಲ್ಲಿ ಸಾಕಷ್ಟು ಅವಕಾಶಗಳನ್ನು ನೀಡಲಾಯಿತು. ಆದರೆ ಈ ಮಾದರಿಯಲ್ಲಿ ಗಿಲ್​ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ವಿಶೇಷವಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟಿ20 ಸರಣಿಯಲ್ಲಿ ಗಿಲ್ ಅವರ ಪ್ರದರ್ಶನ ನಿರಾಶಾದಾಯಕವಾಗಿತ್ತು, ಈ ಸರಣಿಯಲ್ಲಿ ಗಿಲ್ ಕ್ರಮವಾಗಿ 4, 4, 0 ಮತ್ತು 28 ರನ್ ಕಲೆಹಾಕಿದರು.

Source link

ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ: ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ – Kannada News | Kerala CM Clarifies Malayalam Bill: No Compulsion for Kannada School Students

ಬೆಂಗಳೂರು, ಜ.10: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ (Kerala Malayalam Bill) ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್​​ಗೆ ಪತ್ರ ಬರೆದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ ಎಂದು ಹೇಳಿದ್ದಾರೆ. 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ ಕಡ್ಡಾಯಗೊಳಿಸಿಲ್ಲ ಎಂದು ತಮ್ಮ ಎಕ್ಸ್​​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮಸೂದೆಯಲ್ಲಿ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗಿದೆ. ಕನ್ನಡ, ತಮಿಳು ಮಾತನಾಡುವ ಭಾಷಾ ಅಲ್ಪಸಂಖ್ಯಾತರ ಹಕ್ಕು ರಕ್ಷಣೆಗಾಗಿ ಈ ಮಸೂದೆಯನ್ನು ತರಲಾಗಿದೆ. ಹಕ್ಕು ರಕ್ಷಣೆಗೆ ಮಸೂದೆಯ ಸೆಕ್ಷನ್ 7ರಲ್ಲಿ ರಕ್ಷಣಾತ್ಮಕ ನಿಯಮ ಅಳವಡಿಕೆ ಮಾಡಲಾಗಿದೆ. ಸಚಿವಾಲಯ, ಇಲಾಖೆ ಮುಖ್ಯಸ್ಥರ ಜತೆ ಪತ್ರ ವ್ಯವಹಾರವನ್ನು ಕೂಡ ತಮ್ಮ ಭಾಷೆಯಲ್ಲೇ ನಡೆಸಬಹುದು ಎಂದು ಹೇಳಿದ್ದಾರೆ. ಕಚೇರಿಗಳಲ್ಲೂ ತಮ್ಮ ಮಾತೃಭಾಷೆಯಲ್ಲೇ ಪತ್ರ ವ್ಯವಹಾರಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಕೇರಳ ಸಚಿವಾಲಯ ಹಾಗೂ ಕಚೇರಿಗಳ ನಿಮ್ಮ ಭಾಷೆಯಲ್​ಲೇ ಉತ್ತರಿಸುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ಪಠ್ಯಕ್ರಮದ ಅನ್ವಯ ಲಭ್ಯವಿರುವ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಭಾರತೀಯ ಸಂವಿಧಾನದ 346 ಮತ್ತು 347ನೇ ವಿಧಿಗಳು ಹಾಗೂ 1963ರ ಅಧಿಕೃತ ಭಾಷಾ ಕಾಯ್ದೆಗೆ ಈ ಭಾಷಾ ನೀತಿ ಅನುಗುಣವಾಗಿದೆ. ಕೇರಳ ಸರ್ಕಾರ ಒಕ್ಕೂಟ ವ್ಯವಸ್ಥೆಯ ಹಕ್ಕುಗಳನ್ನು ಎತ್ತಿಹಿಡಿಯುತ್ತಿದೆ. ಪ್ರತಿಯೊಬ್ಬ ನಾಗರಿಕನ ಭಾಷಾ ಗುರುತನ್ನು ರಕ್ಷಿಸಲು ಸರ್ಕಾರ ಬದ್ಧ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದ ಮಲಯಾಳ ಭಾಷಾ ಮಸೂದೆಯಲ್ಲೇನಿದೆ? ಕನ್ನಡಿಗರಿಗೆ, ಕನ್ನಡ ಶಾಲೆಗಳಿಗೇಕೆ ಆತಂಕ?

ಮಲಯಾಳ ಭಾಷಾ ಮಸೂದೆಯಲ್ಲೇನಿದೆ?

ಈ ಮಸೂದೆ ಕೇರಳದಾದ್ಯಂತ ಮಲಯಾಳವನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಮಸೂದೆ. 016 ರಲ್ಲಿ ಮಂಡಿಸಲಾದ ಈ ಮಸೂದೆಯನ್ನು ಭಾಷಾ ಅಲ್ಪಸಂಖ್ಯಾತರಿಗೆ ವಿರುದ್ದವಾಗಿದೆ ಎಂದು ಅಂದಿನ ರಾಜ್ಯಪಾಲರು ತಿರಸ್ಕರಿಸಿದ್ದರು. 1 ರಿಂದ 10 ನೇ ತರಗತಿಯವರೆಗೆ ಕನ್ನಡ ಮಾಧ್ಯಮ ಶಾಲೆಯೂ ಸೇರಿದಂತೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯಗೊಳಿಸುವುವ ಬಗ್ಗೆ ಈ ಮಸೂದೆಯಲ್ಲಿ ಉಲ್ಲೇಖವಾಗಿದೆ. ರಾಜ್ಯಪಾಲರು ತಿರಸ್ಕರಿಸಿದ್ದ ನಂತರ ಇದರಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದು, ಮತ್ತೆ ಈ ಮಸೂದೆಯನ್ನು ಮಂಡಿಸಲು ಮುಂದಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆರೋಗ್ಯಯುತವಾಗಿ ಹೆಚ್ಚು ಕಾಲ ಬದುಕಲು ಬಯಸಿದರೆ ಈ ಅಭ್ಯಾಸಗಳನ್ನು ತಪ್ಪದೇ ಪಾಲಿಸಿ – Kannada News | Follow these habits if you want to live a healthy and long life

ದೀರ್ಘಾಯುಷ್ಯವನ್ನು (longevity) ಹೊಂದಲು, ಯಂಗ್‌ ಮತ್ತು ಆರೋಗ್ಯವಂತರಾಗಿರಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರೂ ಸಹ ಯಾವುದೇ ಆರೋಗ್ಯ ಸಮಸ್ಯೆಯಿಲ್ಲದೆ ನೂರ್ಕಾಲ ಬದುಕಬೇಕು ಎಂದು ಬಯಸುತ್ತಾರೆ. ಆದರೆ ಇಂದಿನ ಈ ಕಾಲದಲ್ಲಿ ಅನಾರೋಗ್ಯಕರ ಆಹಾರ ಪದ್ಧತಿ, ಕಳಪೆ ಜೀವನಶೈಲಿ ಇವೆಲ್ಲದರ ಕಾರಣದಿಂದಾಗಿ 30-40 ವರ್ಷಕ್ಕೆ ಆರೋಗ್ಯ ಕೈಕೊಡುತ್ತಿದೆ ಜೊತೆಗೆ ಆದರ್ಶ ಜೀವಿತಾವಧಿಯೂ ಕಡಿಮೆಯಾಗುತ್ತಿದೆ.  ಹಾಗಾದರೆ, ದೀರ್ಘಾಯುಷ್ಯವನ್ನು ಪಡೆಯಲು, ಆರೋಗ್ಯವಂತರಾಗಿ ನೂರ್ಕಾಲ ಬಾಳಲು  ಏನು ಮಾಡಬೇಕು? ಈ ಕೆಲವೊಂದು ಅಭ್ಯಾಸಗಳನ್ನು ಪ್ರತಿನಿತ್ಯ ಪಾಲಿಸುವ ಮೂಲಕ ಆರೋಗ್ಯ ಸಮಸ್ಯೆಗಳು ನಿಮ್ಮ ಬಳಿ ಸುಳಿಯದಂತೆ ನೋಡಿಕೊಳ್ಳಬಹುದು, ಆರೋಗ್ಯವಂತರಾಗಿ ದೀರ್ಘಕಾಲ ಜೀವನ ನಡೆಸಬಹುದು. ದೀರ್ಘಾಯುಷ್ಯಕ್ಕೆ ಸಹಕಾರಿಯಾದ ಆ ಅಭ್ಯಾಸಗಳು ಯಾವುದೆಂದು ನೋಡೋಣ ಬನ್ನಿ.

ದೀರ್ಘಕಾಲ ಬದುಕಲು ಏನು ಮಾಡಬೇಕು?

ಆರೋಗ್ಯಕರ ಆಹಾರ ಕ್ರಮ ಅನುಸರಿಸಿ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಸೇವನೆ ಅತ್ಯಗತ್ಯ. ನಿಮ್ಮ ಆಹಾರದಲ್ಲಿ ಹಸಿರು ತರಕಾರಿಗಳು, ಹಣ್ಣುಗಳು, ಧಾನ್ಯಗಳು, ಪ್ರೋಟೀನ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳು ಸಮೃದ್ಧವಾಗಿರುವ ಆಹಾರಗಳು ಇರಬೇಕು. ಜಂಕ್ ಫುಡ್ ಮತ್ತು ಎಣ್ಣೆ ಮತ್ತು ಸಕ್ಕರೆ ಅಧಿಕವಾಗಿರುವ ಆಹಾರಗಳನ್ನು ತಪ್ಪಿಸಿ.

ನಿಯಮಿತವಾಗಿ ವ್ಯಾಯಾಮ ಮಾಡಿ: ದೈಹಿಕ ಚಟುವಟಿಕೆಯು ನಿಮ್ಮ ಆರೋಗ್ಯಕ್ಕೆ ಅತ್ಯಗತ್ಯ. ನಿಯಮಿತ ವ್ಯಾಯಾಮವು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮಾತ್ರವಲ್ಲದೆ ನಿಮ್ಮ ಹೃದಯ ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ. ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ನಡೆಯುವುದು, ಯೋಗ ಮಾಡುವುದು ಅಥವಾ ಇತರ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಿಮ್ಮ ಜೀವಿತಾವಧಿಯನ್ನು ಹೆಚ್ಚಿಸಬಹುದು.

ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ:  ದೈಹಿಕ ಆರೋಗ್ಯದಷ್ಟೇ ನಿಮ್ಮ ಮಾನಸಿಕ ಆರೋಗ್ಯವನ್ನು ನೋಡಿಕೊಳ್ಳುವುದು ಮುಖ್ಯ. ಒತ್ತಡ, ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡಲು ಧ್ಯಾನ ಮತ್ತು ಪ್ರಾಣಾಯಾಮವನ್ನು ಅಭ್ಯಾಸ ಮಾಡಿ. ಅಲ್ಲದೆ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುವುದರಿಂದ ನೀವು ಸಂತೋಷ ಮತ್ತು ಆರೋಗ್ಯವಾಗಿರಬಹುದು.

ಸಾಕಷ್ಟು ನಿದ್ರೆ ಪಡೆಯಿರಿ: ಉತ್ತಮ ಮತ್ತು ಸಾಕಷ್ಟು ನಿದ್ರೆ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ ಮತ್ತು ಮನಸ್ಸನ್ನು ಉಲ್ಲಾಸಗೊಳಿಸುತ್ತದೆ. ವಯಸ್ಕರು ಪ್ರತಿದಿನ 7-8 ಗಂಟೆಗಳ ಕಾಲ ನಿದ್ರೆ ಮಾಡಬೇಕು. ನಿದ್ರೆಯ ಕೊರತೆಯು ಹೃದಯ ಕಾಯಿಲೆ, ಬೊಜ್ಜು ಮತ್ತು ಖಿನ್ನತೆಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು, ಇದು ನಿಮ್ಮ ಜೀವಿತಾವಧಿಯ ಮೇಲೆ ಪರಿಣಾಮ ಬೀರುತ್ತದೆ.

ಧೂಮಪಾನ ಮತ್ತು ಮದ್ಯಪಾನ ತ್ಯಜಿಸಿ: ಧೂಮಪಾನ ಮತ್ತು ಅತಿಯಾದ ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಈ ಅಭ್ಯಾಸಗಳು ಹೃದಯ ಕಾಯಿಲೆ, ಕ್ಯಾನ್ಸರ್ ಮತ್ತು ಯಕೃತ್ತಿನ ಸಮಸ್ಯೆಗಳನ್ನು ಉಂಟುಮಾಡಬಹುದು. ನೀವು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಬಯಸಿದರೆ, ಅವುಗಳಿಂದ ಸಾಧ್ಯವಾದಷ್ಟು ದೂರವಿರಿ.

ನಿಯಮಿತ ವೈದ್ಯಕೀಯ ತಪಾಸಣೆ: ನಿಮ್ಮ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲು ಮತ್ತು ಯಾವುದೇ ಕಾಯಿಲೆಗಳಿಗೆ ಸಕಾಲಿಕ ಚಿಕಿತ್ಸೆ ಪಡೆಯಲು ವೈದ್ಯರೊಂದಿಗೆ ನಿಯಮಿತ ಸಮಾಲೋಚನೆಗಳು ಮತ್ತು ತಪಾಸಣೆಗಳು ಅತ್ಯಗತ್ಯ. ಇದು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ.

ಸಮಾಜದೊಂದಿಗೆ ಸಂಪರ್ಕದಲ್ಲಿರಿ: ಸಾಮಾಜಿಕ ಸಂಬಂಧಗಳು, ಸಂಪರ್ಕಗಳು  ನಿಮ್ಮ ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತವೆ. ಸಾಮಾಜಿಕ ಜೀವನದಲ್ಲಿ ಸಕ್ರಿಯರಾಗಿರುವುದು ನಿಮ್ಮನ್ನು ಸಂತೋಷ ಮತ್ತು ಮಾನಸಿಕವಾಗಿ ಸಮತೋಲನದಲ್ಲಿರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುವುದು ನಿಮ್ಮ ಜೀವನದಲ್ಲಿ ಸಕಾರಾತ್ಮಕತೆಯನ್ನು ತರುತ್ತದೆ, ಇದು ನಿಮ್ಮ ಜೀವಿತಾವಧಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಸೂರ್ಯನ ಬೆಳಕಿನಿಂದ ವಿಟಮಿನ್‌ ಡಿ ಪಡೆಯುವ ಸರಿಯಾದ ಮಾರ್ಗ ಯಾವುದು? 90% ಜನರಿಗೆ ಇದು ಗೊತ್ತೇ ಇಲ್ಲ

ಸಕಾರಾತ್ಮಕವಾಗಿ ಯೋಚಿಸಿ: ಸಕಾರಾತ್ಮಕವಾಗಿ ಯೋಚಿಸುವುದರಿಂದ ನೀವು ಹೆಚ್ಚು ಕಾಲ ಬದುಕಲು ಸಹಾಯವಾಗುತ್ತದೆ. ಹಲವಾರು ಅಧ್ಯಯನಗಳು ಸಕಾರಾತ್ಮಕವಾಗಿರುವುದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತೋರಿಸಿವೆ. ನೀವು ಜೀವನದ ಬಗ್ಗೆ ಹೆಚ್ಚು ಸಕಾರಾತ್ಮಕ ಮತ್ತು ಆಶಾವಾದಿಗಳಾಗಿದ್ದಷ್ಟೂ, ನೀವು ಕಡಿಮೆ ಅನಾರೋಗ್ಯವನ್ನು ಅನುಭವಿಸುತ್ತೀರಿ ಮತ್ತು  ಹೆಚ್ಚು ಕಾಲ ಆರೋಗ್ಯವಂತರಾಗಿ ಬದುಕುತ್ತೀರಿ.

ದೀರ್ಘಾಯುಷ್ಯ ಸಾಧಿಸಲು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು, ಸರಿಯಾಗಿ ಸಮತೋಲಿತ ಆಹಾರವನ್ನು ಸೇವನೆ ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ, ಆರೋಗ್ಯಕರ ಆಹಾರ ಮತ್ತು ಸಕಾರಾತ್ಮಕ ಮನಸ್ಥಿತಿಯು ದೀರ್ಘಾಯುಷ್ಯವನ್ನು ಪಡೆಯಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link