ನಾಲ್ಕು ವರ್ಷಗಳ ಹೋರಾಟಕ್ಕೆ ಜಯ: ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ – Kannada News | Chamarajanagar Oxygen Tragedy: Victims’ Families Get Government Jobs
ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಚಾಮರಾಜನಗರ, ಜನವರಿ 10: ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಕೊನೆಗೂ ಸಿಹಿ ಸುದ್ದಿ ಲಭಿಸಿದೆ. ಸಂತ್ರಸ್ತ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ಮುಂದಾಗಿದ್ದು, ಗಣರಾಜ್ಯೋವದ ದಿನವೇ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದು ಹೇಳಲಾಗಿದೆ. ಗಣರಾಜ್ಯೋತ್ಸವದಂದೇ ನೇಮಕಾತಿ 2021ರ ಮೇ 3ರಂದು ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತ 36 ರೋಗಿಗಳು ಮೃತಪಟ್ಟಿದ್ದ ಈ ದುರಂತ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ…