Horoscope Today 10 January : ಇಂದು ಈ ರಾಶಿಯವರಿಗೆ ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿ ಬರಬಹುದು – Kannada News | Horoscope Today: January 10, 2026 Daily Zodiac Predictions and Lucky Signs
ಮೇಷ ರಾಶಿ: ನೀವು ದೈಹಿಕಪೀಡೆಯಿಂದ ಬಳಲುತ್ತಿದ್ದರೆ ದುಃಖವು ಹೆಚ್ಚಾಗಬಹುದು. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಇರುವುದು. ಮಕ್ಕಳ ಕಡೆಯಿಂದ ಸಂತೋಷದ ಸುದ್ದಿ ಇರುತ್ತದೆ. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಳ್ಳುವ ಸಂಭವವಿದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೇ ಸರಿಯಾಗಿ ಗೊತ್ತಿಲ್ಲದೇ ಹೋಗಬಹುದು. ಮಕ್ಕಳ ಶುಭವಾರ್ತೆಯು ಸಂತಸಕೊಡಬಹುದು. ಬಂಗಾರದ ಮೇಲೆ ಹೂಡಿಕೆ ಮಾಡುವಿರಿ. ನಿಮ್ಮ ಮೇಲೆ ಯಾವುದಾದರೊಂದು ವಿಷಯ, ವ್ಯಕ್ತಿಗಳು ಪ್ರಭಾವ ಬೀರಬಹುದು. ಸಮಾಜವು ನಿಮ್ಮನ್ನು ಸ್ವಾರ್ಥಿಯಂತೆ ನೋಡಬಹುದು. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾದೀತು. ಸಿಟ್ಟಾಗಿ ಮನೆಯಿಂದ ಹೊರ ನಡೆಯುವ ಪ್ರಸಂಗವು ಬರಬಹುದು….