Category Archives: Blog

Your blog category

ತಮ್ಮದೇ ಹಳೆ ಕಲ್ಟ್ ಸಿನಿಮಾದ ಸೀಕ್ವೆಲ್​​ನಲ್ಲಿ ನಟಿಸಲಿದ್ದಾರೆ ಶಾರುಖ್ ಖಾನ್ – Kannada News | Shah Rukh Khan’s next movie project is Main Hu Na with Farah Khan

ಶಾರುಖ್ ಖಾನ್ (Shah Rukh Khan) ಪ್ರಸ್ತುತ ‘ಕಿಂಗ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಪಠಾಣ್’, ‘ಜವಾನ್’ ಮತ್ತು ‘ಡಂಕಿ’ ಸಿನಿಮಾಗಳ ಮೂಲಕ ಸತತ ಮೂರು ಬ್ಲಾಕ್ ಬಸ್ಟರ್ ನೀಡಿದ ಶಾರುಖ್ ಖಾನ್ ಇದೀಗ ‘ಕಿಂಗ್’ ಸಿನಿಮಾ ಮೂಲಕ ಅದೇ ಮ್ಯಾಜಿಕ್ ಅನ್ನು ಪುನರಾವರ್ತನೆ ಮಾಡುವ ಭರವಸೆಯಲ್ಲಿದ್ದಾರೆ. ಸಿನಿಮಾದ ಸಣ್ಣ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ. ಇದೀಗ ‘ಕಿಂಗ್’ ಬಳಿಕ ಶಾರುಖ್ ಖಾನ್ ನಟಿಸಲಿರುವ ಸಿನಿಮಾದ ಬಗ್ಗೆ ಚರ್ಚೆ ಶುರುವಾಗಿದ್ದು, ತಮ್ಮದೇ ಕಲ್ಟ್ ಕ್ಲಾಸಿಕ್ ಸಿನಿಮಾದ ಸೀಕ್ವೆಲ್​ನಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

2004ರ ಬ್ಲಾಕ್‌ಬಸ್ಟರ್ ಸಿನಿಮಾ ‘ಮೈ ಹೂ ನಾ’ ಶಾರುಖ್ ವೃತ್ತಿ ಜೀವನದ ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಒಂದು. ಆ ಸಿನಿಮಾ ಕಲ್ಟ್ ಎನಿಸಿಕೊಂಡಿದೆ. ಆ ಸಿನಿಮಾದ ಹಾಸ್ಯ, ಪಾತ್ರಗಳ ಸ್ಟೈಲ್, ಹಾಡುಗಳಂತೂ ಇಂದಿಗೂ ಜನಪ್ರಿಯ. ಶಾರುಖ್ ಖಾನ್ ಅವರ ಆಪ್ತ ಗೆಳತಿ ಫರಾಹ್ ಖಾನ್ ನಿರ್ದೇಶಿಸಿದ್ದ ‘ಮೈ ಹೂ ನಾ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮ್ಯಾಜಿಕ್ಕನ್ನೇ ಮಾಡಿತ್ತು. ಇದೀಗ ಶಾರುಖ್ ಖಾನ್ ‘ಮೈ ಹೂ ನ 2’ ಸಿನಿಮಾನಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಬಾಲಿವುಡ್ ಅಂಗಳದಲ್ಲಿ ಜೋರಾಗಿಯೇ ಕೇಳಿ ಬರುತ್ತಿವೆ.

ಈಗ ಹರಿದಾಡುತ್ತಿರುವ ವರದಿಗಳ ಪ್ರಕಾರ, ಫರಾಹ್ ಖಾನ್ ‘ಮೈ ಹೂ ನಾ 2’ ಸಿನಿಮಾಕ್ಕಾಗಿ ಕಥೆಯನ್ನು ಸಿದ್ಧಪಡಿಸಿದ್ದಾರೆ. ವಿಶೇಷವೆಂದರೆ ಈ ಬಾರಿ ಶಾರುಖ್ ಖಾನ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. 2004ರ ‘ಮೈ ಹೂ ನಾ’ ಅಣ್ಣ-ತಮ್ಮನ ಕತೆ ಆಗಿತ್ತು. ಆದರೆ ಈ ಬಾರಿಯ ಸಿನಿಮಾನಲ್ಲಿ ಶಾರುಖ್ ಖಾನ್ ಅವರೇ ಎರಡು ಪಾತ್ರಗಳಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಎರಡು ವಿಭಿನ್ನ ಶೇಡ್‌ಗಳಿರುವ ಪಾತ್ರಗಳನ್ನು ಫರಾಹ್ ಖಾನ್ ಸೃಷ್ಟಿಸಿದ್ದು, ಈಗಾಗಲೇ ಕಿಂಗ್ ಖಾನ್‌ಗೆ ಈ ಐಡಿಯಾವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಶಾರುಖ್ ಕೂಡ ಈ ಹೊಸ ಪ್ರಯೋಗಕ್ಕೆ ಅತೀವ ಆಸಕ್ತಿ ತೋರಿಸಿದ್ದಾರೆ ಎನ್ನಲಾಗುತ್ತದೆ. ಆಕಾಶ್ ಕೌಶಿಕ್ ಅವರು ಸಿನಿಮಾದ ಚಿತ್ರಕತೆ ರಚಿಸುತ್ತಿದ್ದಾರೆ.

ಇದನ್ನೂ ಓದಿ:ಶಾರುಖ್ ಖಾನ್ ಮಗಳ ವರ್ಕೌಟ್ ವಿಡಿಯೋ ವೈರಲ್

2004ರ ‘ಮೈ ಹೂ ನಾ’ ಸಿನಿಮಾದ ರೀತಿಯೇ ಸೀಕ್ವೆಲ್ ಸಹ ದೇಶಭಕ್ತಿಯ ಹಿನ್ನೆಲೆಯನ್ನೇ ಹೊಂದಿರುತ್ತದೆ. ಭಾರತಕ್ಕೆ ಎದುರಾಗುವ ಹೊಸ ಸವಾಲು ಮತ್ತು ಅದನ್ನು ಎದುರಿಸುವ ಮೇಜರ್ ರಾಮ್ ಪ್ರಸಾದ್ ಶರ್ಮಾ ಅವರ ಸಾಹಸಗಾಥೆ ಸಿನಿಮಾದಲ್ಲಿ ಇರಲಿದೆ. ಆದರೆ ಈ ಬಾರಿ ಸಾಹಸದ ಜೊತೆಗೆ ಹಾಸ್ಯ ಮತ್ತು ಭಾವನಾತ್ಮಕ ಸನ್ನಿವೇಶಗಳು ಇಮ್ಮಡಿಯಾಗಿರಲಿವೆ. ಜೊತೆಗೆ ಹಾಡುಗಳು ಸಹ ಸಖತ್ ಆಗಿಯೇ ಇರಲಿವೆ ಎಂಬ ನಿರೀಕ್ಷೆ ಅಭಿಮಾನಿಗಳದ್ದು. ಶಾರುಖ್ ಖಾನ್ ಸದ್ಯ ತಮ್ಮ ’ಕಿಂಗ್’ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಕೆಲಸಗಳು 2026ರ ಮೇ ತಿಂಗಳಲ್ಲಿ ಮುಕ್ತಾಯಗೊಳ್ಳಲಿದ್ದು, ಆನಂತರವೇ ಅವರು ‘ಮೈ ಹೂ ನಾ 2’ ಚಿತ್ರದ ಸಂಪೂರ್ಣ ಸ್ಕ್ರಿಪ್ಟ್ ಕೇಳಲಿದ್ದಾರೆ. ಸ್ಕ್ರಿಪ್ಟ್ ಅಂತಿಮಗೊಂಡ ಬಳಿಕವೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಂಗಳೂರು: ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ ಎಂದಾದರೂ ಕಂಡೀರಾ? ಇಲ್ಲಿವೆ ಫೋಟೋಸ್​ – Kannada News | Mangaluru: Navaguliga Daivaradhane; Unique 9 Guliga Deity Worship in Coastal Karnataka

ಕರಾವಳಿ ಭಾಗದಲ್ಲಿ ಆರಾಧಿಸಲ್ಪಡುವ, ಶಿವಗಣಕ್ಕೆ ಸೇರಿದವನೆಂದು ನಂಬುವ ಗುಳಿಗ ಅತ್ಯಂತ ಕೋಪಿಷ್ಟ. ಕ್ಷೇತ್ರ ರಕ್ಷಕನಾಗಿ ಪಂಜುರ್ಲಿ ದೈವದ ಜೊತೆಗೂಡಿ ಆರಾಧನೆ ಪಡೆಯುವ ಈ ದೈವಕ್ಕೆ ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ದೈವಗಳು ಹೀಗೇ ನರ್ತನ ಸೇವೆ ಮಾಡುವುದಿದೆ. ಆದರೆ ಕರಾವಳಿಯ ಒಂದು ಕಡೆ ಮಾತ್ರ ಏಕೈಕ ನವ ಗುಳಿಗ ಸೇವೆ ನಡೆಯುತ್ತದೆ.

Source link

ಶಿಕಾರಿಪುರದಲ್ಲಿ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ರಾಜ್ಯವನ್ನೇ ಬಿಚ್ಚಿಬೀಳಿಸಿದ ಕಾರ್ಪೆಂಟರ್ – Kannada News | A Man Arrested in shikaripura for illegal country made gun manufacturing

ಶಿವಮೊಗ್ಗ, (ಫೆಬ್ರವರಿ 06): ಸದ್ಯ ಬೆಂಗಳೂರು. ಮೈಸೂರು (Bengaluru And Mysuru) ಡ್ರಗ್ಸ್​ ಫ್ಯಾಕ್ಟರಿ ಪತ್ತೆ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಶಿವಮೊಗ್ಗದಲ್ಲಿ (Shivamogga) ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಶಿಕಾರಿಪುರ ತಾಲೂಕಿನ ಭದ್ರಾಪುರ ಗ್ರಾಮದ ಲಕ್ಷ್ಮಣಪ್ಪ ವೃತ್ತಿಯಲ್ಲಿ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದು, ಇದರ ಜೊತೆಗೆ ನಾಡ ಬಂದೂಕು ತಯಾರಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕಾರ್ಪೆಂಟರ್ ವೃತ್ತಿಯ ಲಕ್ಷ್ಮಣಪ್ಪ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಕಾರ್ಪೆಂಟರ್ ಆಗಿದ್ದ ಲಕ್ಷ್ಮಣಪ್ಪ, ತನ್ನ ಮನೆಯ ಪಕ್ಕದ ಹಳೆ ಮನೆಯಲ್ಲಿ ಬಂದೂಕು ತಯಾರಿಸುತ್ತಿದ್ದ . ಇದುವರೆಗೆ 7 ಸಿಂಗಲ್ ಬ್ಯಾರಲ್​​ ಬಂದೂಕುಗಳನ್ನು ತಯಾರಿಸಿಟ್ಟಿದ್ದಾನೆ. ಯಾವುದೇ ಪರವಾನಗಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ನಿರ್ಮಿಸಿ ಗ್ರಾಮೀಣ ಪ್ರದೇಶದ ರೈತರಿಗೆ ಮಾರಾಟ ಮಾಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಪ್ರಾಣಿಗಳ ಬೇಟೆಗಾಗಿ ಬಳಸುವ ಉದ್ದೇಶದಿಂದ ಈ ನಾಡ ಬಂದೂಕುಗಳನ್ನು ಸಿದ್ಧಪಡಿಸಿ ನೀಡುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಮೈಸೂರು ಫಿನಾಯಿಲ್ ಫ್ಯಾಕ್ಟರಿ ಕೇಸ್​ಗೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಎನ್​ಸಿಬಿ, ಸರ್ಕಾರಕ್ಕೆ ಮುಖಭಂಗ

ಖಚಿತ ಮಾಹಿತಿ ಮೇರೆಗೆ ಶಿಕಾರಿಪುರ ಪೊಲೀಸರು ದಾಳಿ ಮಾಡಿದಾಗ 7 ನಾಡ ಬಂದೂಕುಗಳು ಪತ್ತೆಯಾಗಿವೆ. ಇನ್ನು ತನಿಖೆಯ ವೇಳೆ ಅಕ್ರಮ ಶಸ್ತ್ರಾಸ್ತ್ರ ತಯಾರಿಕೆಯ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಬಂದೂಕುಗಳಿಗೆ ಅಗತ್ಯವಿರುವ ಟ್ರಿಗರ್, ಟ್ರಿಗರ್ ಗಾರ್ಡ್, ಬಿಡಿ ಭಾಗಗಳು ಹಾಗೂ ಹಳೆಯ ಸ್ಟೀರಿಂಗ್‌ಗಳನ್ನು ಶಿವಮೊಗ್ಗದ ವಿವಿಧ ಗುಜರಿ ಅಂಗಡಿಗಳಿಂದ ಖರೀದಿಸಲಾಗುತ್ತಿತ್ತು. ಬಂದೂಕಿಗೆ ಬೇಕಾದ ಮರದ ಹಿಡಿಕೆಗಳನ್ನು ಲಕ್ಷ್ಮಣಪ್ಪ ತಾನೇ ತಯಾರಿಸುತ್ತಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ.

ಸದ್ಯ ಶಸ್ತ್ರಾಸ್ತ್ರ ತಿದ್ದುಪಡಿ ಕಾಯ್ದೆಯಡಿ ಲಕ್ಷ್ಮಣಪ್ಪ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮೋರಿ ಮುಚ್ಚಳವನ್ನೂ ಬಿಡದ ಪಾಕಿಸ್ತಾನೀಯರು; ಬಡತನ ಏನೆಲ್ಲಾ ಕೆಲಸ ಮಾಡಿಸುತ್ತೆ ನೋಡಿ… – Kannada News | Crime rates increase in Pakistan as its economy in shambles, people stealing manhole covers, says reports

ನವದೆಹಲಿ, ಫೆಬ್ರುವರಿ 6: ಅಧಿಕ ಹಣದುಬ್ಬರ, ಮಂದ ಬೆಳವಣಿಗೆ, ಸಾಲದ ಹೊರೆ, ಪರಾವಲಂಬನೆ ಇತ್ಯಾದಿ ಸಮಸ್ಯೆಗಳಿಂದ ಬಳಲುತ್ತಿರುವ ಪಾಕಿಸ್ತಾನದಲ್ಲಿ ಆಂತರಿಕ ಕ್ಷೋಭೆ ಹೆಚ್ಚುತ್ತಿದೆ. ಅಲ್ಲಿಯ ಜನರಿಗೆ ಸರಿಯಾದ ಕೆಲಸ ಇಲ್ಲದೇ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ. ಪಾಕಿಸ್ತಾನದ ಮಾಧ್ಯಮಗಳಲ್ಲೇ ಬಂದ ವರದಿಗಳ ಪ್ರಕಾರ, ಪಾಕಿಸ್ತಾನದಲ್ಲಿ ಜನರು ರಸ್ತೆಯ ಮೋರಿಯ ಮ್ಯಾನ್​ಹೋಲ್ ಮುಚ್ಚಳವನ್ನೂ ಬಿಡದೆ ಕಳ್ಳತನ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿವೆಯಂತೆ.

ಕಬ್ಬಿಣದ ಈ ಮುಚ್ಚಳಗಳು ಬಹಳ ತೂಕವಿದ್ದು, ಅವನ್ನು ಮಾರಿ ಜನರು ಹಣ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ಕಳ್ಳತನ ಪ್ರಕರಣಗಳು ಆಗೊಮ್ಮೆ ಈಗೊಮ್ಮೆ ಬೆಳಕಿಗೆ ಬರುತ್ತಿಲ್ಲ, ಸರ್ವೇಸಾಮಾನ್ಯ ಘಟನೆಗಳೇ ಆಗಿಹೋಗಿವೆ. ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮಾರ್ಯಂ ಷರೀಫ್ ಅವರೇ ಖುದ್ದಾಗಿ ವಿಡಿಯೋ ಮೆಸೇಜ್ ನೀಡಿ ಕಳ್ಳರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಕೃಷಿ ಕ್ಷೇತ್ರಕ್ಕೆ ತೊಂದರೆ ಇಲ್ಲ, ರೈತರು ಸೇಫ್; ಭಾರತ-ಅಮೆರಿಕ ಟ್ರೇಡ್ ಡೀಲ್​ನಲ್ಲಿ ಏನೇನಿದೆ?

‘ಮ್ಯಾನ್​ಹೋಲ್​ಗಳ ಮುಚ್ಚಳವನ್ನು ಬೆಳಗ್ಗೆ ಹಾಕಿರುತ್ತೇವೆ. ರಾತ್ರಿ ಮುಗಿಯುವುದರೊಳಗೆ ಅದು ಕಳ್ಳತನ ಆಗಿರುತ್ತದೆ. ಈ ಮುಚ್ಚಳವನ್ನು ಕಳ್ಳತನ ಮಾಡಬೇಡಿ. ಕಳ್ಳತನ ಮಾಡಿದರೆ, ಅಥವಾ ಅದನ್ನು ಮಾರಿದರೆ ಅಥವಾ ಖರೀದಿಸಿದರೆ ಅಂಥವರಿಗೆ 1-10 ವರ್ಷ ಜೈಲು ಶಿಕ್ಷೆ ನೀಡುವಂತಹ ಕಾನೂನನ್ನು ಜಾರಿಗೆ ತರಲಾಗುತ್ತಿದೆ. ಈ ಕಳ್ಳತನದಿಂದಾಗಿ ಯಾರಿಗಾದರೂ ಸಾವಾದರೆ, ಅಪರಾಧಿಗೆ 10 ವರ್ಷ ಜೈಲುಶಿಕ್ಷೆ ಹಾಗೂ 30-50 ಲಕ್ಷ ರೂ ದಂಡ ಹಾಕಲಾಗುವುದು ಎಂದು ಮಾರ್ಯಮ್ ಷರೀಫ್ ತಮ್ಮ ವಿಡಿಯೋ ಮೆಸೇಜ್​ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಮಾರ್ಯಮ್ ಶರೀಫ್ ಮಾತನಾಡಿರುವ ವಿಡಿಯೋ

ಭಿಕ್ಷೆ ಬೇಡಿ, ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎನ್ನುತ್ತಿರುವ ಪ್ರಧಾನಿ

ಹಣಕ್ಕಾಗಿ ಜಗತ್ತಿನ ಮುಂದೆ ಭಿಕ್ಷೆ ಎತ್ತುವಾಗ ನಾಚಿಕೆಯಿಂದ ತಲೆ ತಗ್ಗಿಸುವಂತಾಗುತ್ತದೆ. ಸಾಲ ಪಡೆಯುವುದೆಂದರೆ ಸ್ವಾಭಿಮಾನ ಬಿಟ್ಟುಕೊಟ್ಟಂತೆ ಅನಿಸುತ್ತೆ. ಅವರು ಹೇಳುವ ಯಾವುದೇ ಕೆಲಸವನ್ನೂ ಇಲ್ಲ ಎನ್ನಲು ಆಗುವುದೇ ಇಲ್ಲ ಎಂದು ವಾರದ ಹಿಂದೆ ಪಾಕಿಸ್ತಾನ ಪ್ರಧಾನಿ ಶಾಹಬಾಜ್ ಷರೀಫ್ ಅಳಲು ತೋಡಿಕೊಂಡಿದ್ದರು.

ಇದನ್ನೂ ಓದಿ: ಅಮೆರಿಕದಲ್ಲಿ ಜನವರಿಯಲ್ಲಿ ಅತಿಹೆಚ್ಚು ಉದ್ಯೋಗನಷ್ಟ; ಗಂಭೀರ ಸಮಸ್ಯೆಯ ಮುನ್ಸೂಚನೆಯಾ?

ಸಾಲದ ಹೊರೆಯಲ್ಲಿರುವ ಪಾಕಿಸ್ತಾನ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಸಿಲುಕಿದೆ. ಸಾಲದ ಬಡ್ಡಿ ಪಾವತಿಸಲು ದುಡ್ಡಿಲ್ಲದೆ ಸಾಲ ಮಾಡಬೇಕಾದ ಪರಿಸ್ಥಿತಿ ಇದೆ. ಪದೇ ಪದೇ ಐಎಂಎಫ್ ಮುಂದೆ ಸಾಲಕ್ಕಾಗಿ ಪಾಕಿಸ್ತಾನ ಕೈ ಚಾಚುವಂತಾಗಿದೆ. ಚೀನಾ ಜೊತೆಗೆ ಸೇರಿ ಜಂಟಿಯಾಗಿ ತಯಾರಿಸಲಾಗುತ್ತಿರುವ ಯುದ್ಧವಿಮಾನ ಇತ್ಯಾದಿ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಮಾರಾಟಕ್ಕಿಟ್ಟು ಸಾಲ ತೀರಿಸಲು ಪಾಕಿಸ್ತಾನ ಹೆಣಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್​​ಬಾಸ್ ವಿನ್ನರ್​ ಗಿಲ್ಲಿಗೆ ಎದುರಾಯ್ತು ಸಂಕಷ್ಟ, ದೂರು ದಾಖಲು – Kannada News | Movie Producer gave complaint against Bigg Boss winner Gilli Nata

ಗಿಲ್ಲಿ ನಟ (Gilli Nata), ಪ್ರಸ್ತುತ ಕರ್ನಾಟಕದ ಜನಪ್ರಿಯ ಸೆಲೆಬ್ರಿಟಿ. ಬಿಗ್​​ಬಾಸ್ ಕನ್ನಡ ಸೀಸನ್ 12 ಗೆದ್ದಿರುವ ಗಿಲ್ಲಿಗೆ ಎಲ್ಲಿಲ್ಲದ ಜನಪ್ರಿಯತೆ ದೊರೆತಿದೆ. ಗಿಲ್ಲಿ ಹೋದಲ್ಲೆಲ್ಲ ಅಭಿಮಾನಿಗಳು ಸೇರುತ್ತಿದ್ದಾರೆ, ಜಯಕಾರಗಳನ್ನು ಹಾಕುತ್ತಿದ್ದಾರೆ. ಬಿಗ್​​ಬಾಸ್​​ನಲ್ಲಿ ಗಿಲ್ಲಿ ತೋರಿದ ಪ್ರತಿಭೆಯ ಪ್ರದರ್ಶನ ಅವರಿಗೆ ದೊಡ್ಡ ಮಟ್ಟದ ಅಭಿಮಾನಿಗಳನ್ನು ಸಂಪಾದಿಸಿಕೊಟ್ಟಿದೆ. ಬಿಗ್​​ಬಾಸ್ ಗೆಲುವು ಗಿಲ್ಲಿಗೆ ಹಲವು ಹೊಸ ಅವಕಾಶಗಳನ್ನು ಸಹ ತಂದುಕೊಡುತ್ತಿದೆ. ಇವುಗಳ ಜೊತೆಗೆ ಗಿಲ್ಲಿಗೆ ಇದೀಗ ಹೊಸ ಸಂಕಷ್ಟವೊಂದು ಶುರುವಾಗಿದೆ. ಗಿಲ್ಲಿ ವಿರುದ್ಧ ದೂರೊಂದು ದಾಖಲಾಗಿದ್ದು, ಗಿಲ್ಲಿ ನಟಿಸಿರುವ ಸಿನಿಮಾ ಒಂದರ ನಿರ್ಮಾಪಕರು ಗಿಲ್ಲಿ ನಟ ವಿರುದ್ಧ ದೂರು ನೀಡಿದ್ದಾರೆ.

ಗಿಲ್ಲಿ, ಬಿಗ್​​ಬಾಸ್​​ಗೆ ಹೋಗುವ ಮುಂಚೆ ‘ಸರ್ಕಾರಿ ಶಾಲೆ ಎಚ್​​8’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದರು. ಇದೀಗ ಸಿನಿಮಾ ಬಿಡುಗಡೆ ಇಂದು (ಫೆಬ್ರವರಿ 6) ಆಗಿದೆ. ಈ ಹಂತದಲ್ಲಿ ಗಿಲ್ಲಿಯ ವಿರುದ್ಧ ಸಿನಿಮಾದ ನಿರ್ಮಾಪಕ ತೇಜಸ್ವಿ ಎಸ್ ಅವರು ಫಿಲಂ ಚೇಂಬರ್​​ಗೆ ದೂರು ನೀಡಿದ್ದಾರೆ. ಗಿಲ್ಲಿ, ಸಂಭಾವನೆ ಪಡೆದು ಸಿನಿಮಾನಲ್ಲಿ ನಟಿಸಿದ್ದಾರೆ ಆದರೆ ಸಿನಿಮಾದ ಪ್ರಚಾರಕ್ಕೆ ಬರುತ್ತಿಲ್ಲ ಎಂದು ನಿರ್ಮಾಪಕರು ಆರೋಪಿಸಿದ್ದಾರೆ.

ಸಿನಿಮಾನಲ್ಲಿ ನಾವು ಗಿಲ್ಲಿಗೆ ಪ್ರಮುಖ ಪಾತ್ರ ನೀಡಿದ್ದೀವಿ, ಬಿಗ್​​ಬಾಸ್​​ಗೆ ಹೋಗುವ ಮುಂಚೆಯೇ ಅವರು ಕೇಳಿದಷ್ಟು ಸಂಭಾವನೆಯನ್ನು ಸಹ ಕೊಟ್ಟಿದ್ದೀವಿ. ಆದರೆ ಅವರು ಸಿನಿಮಾದ ಪ್ರಚಾರಕ್ಕೆ ಬರುತ್ತಿಲ್ಲ. ಎಷ್ಟು ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿಲ್ಲ, ಕನಿಷ್ಟ ನಮ್ಮ ಸಿನಿಮಾದ ಬಗ್ಗೆ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ಸಹ ಹಂಚಿಕೊಂಡಿಲ್ಲ ಎಂದು ನಿರ್ಮಾಪಕ ಆರೋಪ ಮಾಡಿದ್ದಾರೆ. ದೂರು ಸ್ವೀಕಾರ ಮಾಡಿರುವ ಚೇಂಬರ್, ಗಿಲ್ಲಿಯನ್ನು ಕರೆಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ:ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ

‘ಸರ್ಕಾರಿ ಶಾಲೆ ಎಚ್​​8’ ಸಿನಿಮಾವು ಸಸ್ಪೆನ್ಸ್ ಥ್ರಿಲ್ಲರ್ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಗಿಲ್ಲಿ ಮುಖ್ಯವಾದ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಕತೆ, ಚಿತ್ರಕತೆ ಮತ್ತು ನಿರ್ದೇಶನ ಮಾಡಿರುವುದು ಗುಣ ಹರಿಯಬ್ಬೆ. ಗುಣ ಹರಿಯಬ್ಬೆ, ಮೇಘಶ್ರೀ ಮತ್ತು ಜನಪದ ಕಲಾವಿದ ಮೋಹನ್ ಮುಖ್ಯ ಪಾತ್ರಗಳಲ್ಲಿದ್ದಾರೆ. ಜೊತೆಗೆ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್, ಸುಚೇಂದ್ರ ಪ್ರಸಾದ್, ಜಗಪ್ಪ, ನವಾಜ್, ಸುಶ್ಮಿತ ಜಗಪ್ಪ, ಕಡ್ಡಿ ವಿಶ್ವ, ಜೋತಿರಾಜ್ ಮತ್ತು ನಮ್ರತಾ ಈ ಸಿನಿಮಾನಲ್ಲಿ ನಟಿಸಿದ್ದಾರೆ. ‘ಸರ್ಕಾರಿ ಶಾಲೆ ಎಚ್​​8’ ಸಿನಿಮಾ ಇಂದು (ಫೆಬ್ರವರಿ 6) ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಬೃಹತ್ ಟಾರ್ಗೆಟ್; ವಿಶ್ವ ದಾಖಲೆ ಸೃಷ್ಟಿಸಿದ ಯಂಗ್ ಇಂಡಿಯಾ – Kannada News | U19 World Cup Final: India Shatters Record with 411 vs England; Suryavanshi 175

ಹರಾರೆಯಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಫೈನಲ್​ನಲ್ಲಿ (U19 World Cup Final) ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಬರೋಬ್ಬರಿ 411 ರನ್ ಕಲೆಹಾಕಿದೆ. ಈ ಮೂಲಕ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್​ನಲ್ಲಿ ಅತಿದೊಡ್ಡ ಮೊತ್ತ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದೆ. ಈ ವಿಶ್ವಕಪ್ ಫೈನಲ್‌ ಇತಿಹಾಸದಲ್ಲಿ ಇದುವರೆಗೂ ಯಾವ ತಂಡಕ್ಕೂ 300 ರನ್​ಗಳ ಗಡಿ ದಾಟಲೂ ಸಾಧ್ಯವಾಗಿರಲಿಲ್ಲ. ಆದರೆ ಟೀಂ ಇಂಡಿಯಾ 400 ರನ್​ಗಳ ಗಡಿ ದಾಟಿ ನೂತನ ದಾಖಲೆ ನಿರ್ಮಿಸಿದೆ. ಟೀಂ ಇಂಡಿಯಾ ಇಷ್ಟು ಬೃಹತ್ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ವೈಭವ್ ಸೂರ್ಯವಂಶಿ (Vaibhav Suryavanshi) ಈ ಪಂದ್ಯದಲ್ಲಿ ಕೇವಲ 80 ಎಸೆತಗಳಲ್ಲಿ ಬರೋಬ್ಬರಿ 175 ರನ್ ಕಲೆಹಾಕಿದರು.

ಇಂಗ್ಲೆಂಡ್ ದಾಖಲೆ ಉಡೀಸ್

ಫೈನಲ್‌ನಲ್ಲಿ 411 ರನ್ ಕಲೆಹಾಕುವ ಮೂಲಕ ಟೀಂ ಇಂಡಿಯಾ ಈ ಆವೃತ್ತಿಯಲ್ಲಿ ಅತಿದೊಡ್ಡ ಮೊತ್ತ ಕಲೆಹಾಕಿದ್ದ ಇಂಗ್ಲೆಂಡ್ ದಾಖಲೆಯನ್ನು ಮುರಿದಿದೆ. ಇದೇ ಆವೃತ್ತಿಯಲ್ಲಿ ಇಂಗ್ಲೆಂಡ್, ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆರು ವಿಕೆಟ್‌ಗಳಿಗೆ 404 ರನ್ ಕಲೆಹಾಕಿತ್ತು. ಇನ್ನು ಅಂಡರ್ 19 ವಿಶ್ವಕಪ್ ಇತಿಹಾಸದಲ್ಲಿ ಅತಿ ದೊಡ್ಡ ಸ್ಕೋರ್ ದಾಖಲಿಸಿದ ತಂಡಗಳ ಪಟ್ಟಿಯಲ್ಲಿ ಟೀಂ ಇಂಡಿಯಾ 5ನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲ ಸ್ಥಾನದಲ್ಲಿರುವ ಆಸ್ಟ್ರೇಲಿಯಾ 2002 ರಲ್ಲಿ ಕೀನ್ಯಾ ತಂಡದ ವಿರುದ್ಧ 480 ರನ್ ಕಲೆಹಾಕಿತ್ತು. ಅದು ಈವರೆಗಿನ ದಾಖಲೆಯಾಗಿದೆ.

ಭಾರತಕ್ಕೆ ವೈಭವ್ ಆಸರೆ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡ ಭಾರತ ಕಳಪೆ ಆರಂಭ ಪಡೆಯಿತು. ಆರನ್ ಜಾರ್ಜ್ 9 ರನ್‌ಗಳಿಗೆ ಔಟಾದರು. ಆ ಬಳಿಕ ಜೊತೆಯಾದ ವೈಭವ್ ಸೂರ್ಯವಂಶಿ ಮತ್ತು ನಾಯಕ ಆಯುಷ್ ಮ್ಹಾತ್ರೆ 90 ಎಸೆತಗಳಲ್ಲಿ ಎರಡನೇ ವಿಕೆಟ್‌ಗೆ 142 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಮ್ಹಾತ್ರೆ 51 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಒಳಗೊಂಡಂತೆ 53 ರನ್ ಬಾರಿಸಿದರೆ, ವೈಭವ್ 32 ಎಸೆತಗಳಲ್ಲಿ ಅರ್ಧಶತಕ ಮತ್ತು 55 ಎಸೆತಗಳಲ್ಲಿ ಶತಕ ಪೂರೈಸಿದರು. ನಂತರ 71 ಎಸೆತಗಳಲ್ಲಿ 150 ರನ್ ಪೂರ್ಣಗೊಳಿಸಿದ ವೈಭವ್ ಅಂತಿಮವಾಗಿ 80 ಎಸೆತಗಳಲ್ಲಿ 15 ಬೌಂಡರಿ ಮತ್ತು 15 ಸಿಕ್ಸರ್‌ಗಳ ಸಹಾಯದಿಂದ 175 ರನ್ ಬಾರಿಸಿ ಔಟಾದರು.

15 ಸಿಕ್ಸರ್, 175 ರನ್; ಹರಾರೆಯಲ್ಲಿ ವೈಭವ್ ಆರ್ಭಟಕ್ಕೆ ಇಂಗ್ಲೆಂಡ್ ಹೈರಾಣ

ಇದೇ ವೇಳೆ ವೈಭವ್ 39 ಎಸೆತಗಳಲ್ಲಿ ವೇದಾಂತ್ ತ್ರಿವೇದಿ ಅವರೊಂದಿಗೆ ಮೂರನೇ ವಿಕೆಟ್‌ಗೆ 89 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ವೈಭವ್ ವಿಕೆಟ್ ಪತನವಾದಾಗ ತಂಡದ ಮೊತ್ತ 251 ರನ್‌ ಆಗಿತ್ತು. ಇದರ ನಂತರ ಉಳಿದ 7 ಆಟಗಾರರು ಸ್ಕೋರ್​ ಬೋರ್ಡ್​ಗೆ 160 ರನ್ ಸೇರಿಸಿದರು. ವೇದಾಂತ್ 36 ಎಸೆತಗಳಲ್ಲಿ 32 ರನ್ ಗಳಿಸಿದರೆ, ವಿಹಾನ್ ಮಲ್ಹೋತ್ರಾ 36 ಎಸೆತಗಳಲ್ಲಿ 30 ರನ್ ಬಾರಿಸಿದರು. ಅಭಿಗ್ಯಾನ್ ಕುಂಡು 31 ಎಸೆತಗಳಲ್ಲಿ 40 ರನ್, ಅಂಬ್ರಿಸ್ ಕೇವಲ 18 ರನ್, ಕನಿಷ್ಕ್ ಚೌಹಾಣ್ 20 ಎಸೆತಗಳಲ್ಲಿ ಅಜೇಯ 37 ರನ್ ಗಳಿಸಿದರು. ಇಂಗ್ಲೆಂಡ್ ಪರ ಜೇಮ್ಸ್ ಮಿಂಟೊ ಮೂರು ವಿಕೆಟ್ ಪಡೆದರೆ, ಸೆಬಾಸ್ಟಿಯನ್ ಮಾರ್ಗನ್ ಮತ್ತು ಅಲೆಕ್ಸ್ ಗ್ರೀನ್ ತಲಾ ಎರಡು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:25 pm, Fri, 6 February 26

Source link

PNB Recruitment 2026: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 5,138 ಉದ್ಯೋಗವಕಾಶ; ಕರ್ನಾಟಕದಲ್ಲಿ 64ಹುದ್ದೆಗೆ ನೇಮಕಾತಿ – Kannada News | PNB Graduate Apprentice Recruitment 2026: 5138 Vacancies for Graduates! Apply Online Now

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳಲ್ಲಿ ಒಂದಾಗಿದ್ದು, ಯುವಕರಿಗೆ ಉತ್ತಮ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 5,138 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 8 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ರಾಜ್ಯವಾರು ಹುದ್ದೆಗಳ ಹಂಚಿಕೆ ಮಾಡಲಾಗಿದ್ದು, ಕರ್ನಾಟಕದಲ್ಲಿ 64, ತೆಲಂಗಾಣದಲ್ಲಿ 69, ಆಂಧ್ರಪ್ರದೇಶದಲ್ಲಿ 56, ತಮಿಳುನಾಡಿನಲ್ಲಿ 121, ಕೇರಳದಲ್ಲಿ 83, ಒಡಿಶಾದಲ್ಲಿ 142 ಮತ್ತು ಪಾಂಡಿಚೇರಿಯಲ್ಲಿ 2 ಹುದ್ದೆಗಳು ಲಭ್ಯವಿವೆ. ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ವಯೋಮಿತಿ 20 ರಿಂದ 28 ವರ್ಷಗಳ ನಡುವೆ ಇರಬೇಕು. ಸರ್ಕಾರಿ ನಿಯಮಗಳ ಪ್ರಕಾರ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಇದನ್ನೂ ಓದಿ: IIT ಮದ್ರಾಸ್ ಸಮ್ಮರ್ ಇಂಟರ್ನ್‌ಶಿಪ್; ತರಬೇತಿಯ ಜೊತೆಗೆ 30,000 ರೂ. ಸ್ಟೈಫಂಡ್

ಅರ್ಜಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನಡೆಯಲಿದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳು ರೂ. 800 ಪಾವತಿಸಬೇಕಾಗಿದ್ದು, SC, ST, PWBD ಮತ್ತು ಟ್ರಾನ್ಸ್‌ಜೆಂಡರ್ ಅಭ್ಯರ್ಥಿಗಳಿಗೆ ರೂ. 200 ಮಾತ್ರ ವಿಧಿಸಲಾಗಿದೆ. ಅಂತಿಮ ಆಯ್ಕೆ ಆನ್‌ಲೈನ್ ಲಿಖಿತ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಆಧಾರದಲ್ಲಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ ರೂ. 12,300 ರಿಂದ ರೂ. 15,000 ವರೆಗೆ ಸ್ಟೈಫಂಡ್ ನೀಡಲಾಗುತ್ತದೆ.

ಒಟ್ಟಿನಲ್ಲಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಪಡೆಯಲು ಹಾಗೂ ಭವಿಷ್ಯದ ಉದ್ಯೋಗಾವಕಾಶಗಳಿಗೆ ಬಲವಾದ ನೆಲೆ ನಿರ್ಮಿಸಿಕೊಳ್ಳಲು ಇದು ಒಂದು ಸುವರ್ಣಾವಕಾಶವಾಗಿದೆ. ಆಸಕ್ತರು ಅಧಿಕೃತ ಅಧಿಸೂಚನೆಯನ್ನು ಗಮನವಾಗಿ ಓದಿ, ಅಂತಿಮ ದಿನಾಂಕಕ್ಕೂ ಮುನ್ನ ಅರ್ಜಿ ಸಲ್ಲಿಸುವುದು ಉತ್ತಮ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್ ಪಕ್ಷದಿಂದ ನವಜೋತ್ ಕೌರ್ ಸಿಧು ಉಚ್ಚಾಟನೆ; ಬಿಜೆಪಿಯತ್ತ ಮುಖ ಮಾಡಿದ ಸಿಧು ದಂಪತಿ – Kannada News | Congress expelled Navjot Kaur Sidhu from party

ನವದೆಹಲಿ, ಫೆಬ್ರವರಿ 6: ಪಂಜಾಬ್ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ನವಜೋತ್ ಕೌರ್ ಸಿಧು (Navjot Kaur Sidhu) ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಘೋಷಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಶಿಸ್ತು ಎಲ್ಲಕ್ಕಿಂತ ಮುಖ್ಯ. ಕಾಂಗ್ರೆಸ್​​ ಹಾಕಿದ ಗೆರೆ ದಾಟುವವರು, ಪಕ್ಷದ ವಿರುದ್ಧ ಕೆಲಸ ಮಾಡುವ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕರಾಗಿದ್ದ ನವಜೋತ್ ಸಿಂಗ್ ಸಿಧು ಅವರ ಪತ್ನಿಯಾಗಿರುವ ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷ ತೊರೆದ ಕೆಲವು ದಿನಗಳ ನಂತರ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ನವಜೋತ್ ಕೌರ್ ಸಿಧು ರಾಹುಲ್ ಗಾಂಧಿಯನ್ನು ಪಪ್ಪು ಎಂದು ಕರೆದಿದ್ದರು ಎಂದು ಆರೋಪಿಸಲಾಗಿದೆ. ಪಕ್ಷದ ವಿರುದ್ಧವೇ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ವಿವಾದಕ್ಕೀಡಾದ ನವಜೋತ್ ಸಿಂಗ್ ಸಿಧು ಪತ್ನಿಯ ಸಿಎಂ ಸ್ಥಾನಕ್ಕೆ 500 ಕೋಟಿ ರೂ. ಹೇಳಿಕೆ; ಬಿಜೆಪಿ ಆಕ್ರೋಶ

ಕೆಲವು ದಿನಗಳ ಹಿಂದೆ, ನವಜೋತ್ ಕೌರ್ ಸಿಧು ಅವರು ಕಾಂಗ್ರೆಸ್ ಪಕ್ಷವನ್ನು ತೊರೆದಿರುವುದಾಗಿ ಸಾರ್ವಜನಿಕವಾಗಿ ಹೇಳಿಕೊಂಡಿದ್ದರು. ನಂತರ ಅವರ ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಉದ್ವಿಗ್ನತೆ ಹೆಚ್ಚಾಯಿತು. ಈ ಹಿಂದೆ “ಪಂಜಾಬ್ ಮುಖ್ಯಮಂತ್ರಿಯಾಗಲು 500 ಕೋಟಿ ರೂ. ಸೂಟ್‌ಕೇಸ್ ನೀಡಬೇಕು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನ ಉಚ್ಚಾಟಿಸಲಾಗಿದೆ.

ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆ ನೀಡಿದ ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ಇದರ ನಡುವೆ ನವಜೋತ್ ಸಿಂಗ್ ಸಿಧು ಹಾಗೂ ನವಜೋತ್ ಕೌರ್ ಸಿಧು ಬಿಜೆಪಿಗೆ ಸೇರಲಿದ್ದಾರೆ ಎಂಬ ಊಹಾಪೋಹಗಳಿವೆ. ಆದರೆ, ಈ ಬಗ್ಗೆ ನವಜೋತ್ ಸಿಂಗ್ ಸಿಧು ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮತ್ತೊಂದೆಡೆ, ಸಿಧು ದಂಪತಿ ಬಿಜೆಪಿಗೆ ಸೇರುವ ಬಗ್ಗೆ ಮಾತುಕತೆಗಳು ಭರದಿಂದ ಸಾಗುತ್ತಿವೆ ಎನ್ನಲಾಗಿದೆ. ನವಜೋತ್ ಕೌರ್ ಸಿಧು ಇತ್ತೀಚೆಗೆ ಸರಣಿ ಟ್ವೀಟ್‌ಗಳಲ್ಲಿ ಬಿಜೆಪಿ ಮತ್ತು ಪ್ರಧಾನಿ ಮೋದಿಯವರನ್ನು ಹೊಗಳುತ್ತಿದ್ದಾರೆ. ಆದರೆ, ಇತ್ತೀಚೆಗೆ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮನೋರಂಜನ್ ಕಾಲಿಯಾ ಸಿಧು ದಂಪತಿಗೆ ಬಿಜೆಪಿಯ ಬಾಗಿಲು ಮುಚ್ಚಲಾಗಿದೆ ಎಂದು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Vasthu Tips: ಅಡುಗೆ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ಆರ್ಥಿಕ ನಷ್ಟಕ್ಕೆ ಇದೇ ಮುಖ್ಯ ಕಾರಣ! – Kannada News | Vastu Kitchen: 5 Things to AVOID for Prosperity and Health

ವಾಸ್ತು ಶಾಸ್ತ್ರವು ಕೇವಲ ಮನೆ ನಿರ್ಮಾಣದ ದಿಕ್ಕು, ಬಾಗಿಲು–ಕಿಟಕಿಗಳ ವಿನ್ಯಾಸಕ್ಕೆ ಮಾತ್ರ ಸೀಮಿತವಾಗಿಲ್ಲ; ಮನೆಯೊಳಗಿನ ಪ್ರತಿಯೊಂದು ವಸ್ತುವಿನ ಸ್ಥಾನ ಮತ್ತು ಅದರ ಪರಿಣಾಮಗಳ ಕುರಿತೂ ಸ್ಪಷ್ಟ ಮಾರ್ಗದರ್ಶನ ನೀಡುತ್ತದೆ. ವಿಶೇಷವಾಗಿ ಅಡುಗೆಮನೆ ಮನೆಯ ಹೃದಯವೆಂದು ಪರಿಗಣಿಸಲಾಗುತ್ತದೆ. ನಮ್ಮ ದೈನಂದಿನ ಆಹಾರ ಇಲ್ಲಿ ಸಿದ್ಧವಾಗುವುದರಿಂದ ಇದು ಆರೋಗ್ಯ, ಮನಶಾಂತಿ ಮತ್ತು ಕುಟುಂಬದ ಆರ್ಥಿಕ ಸ್ಥಿತಿಯ ಮೇಲೂ ನೇರ ಪ್ರಭಾವ ಬೀರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಅಡುಗೆಮನೆ ಅನ್ನಪೂರ್ಣ ದೇವಿಯ ನಿವಾಸವಾಗಿರುವ ಪವಿತ್ರ ಸ್ಥಳ. ಆದ್ದರಿಂದ ಇಲ್ಲಿ ಸ್ವಚ್ಛತೆ, ಸಕಾರಾತ್ಮಕತೆ ಮತ್ತು ಸರಿಯಾದ ವ್ಯವಸ್ಥೆ ಅತ್ಯಂತ ಮುಖ್ಯ. ಅಸಮರ್ಪಕವಾಗಿ ಇಡಲಾಗಿರುವ ಕೆಲವು ವಸ್ತುಗಳು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸಿ ಆರ್ಥಿಕ ನಷ್ಟ ಹಾಗೂ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಶುಚಿಗೊಳಿಸುವ ವಸ್ತುಗಳು:

ಅಡುಗೆಮನೆಯಲ್ಲಿ ಪೊರಕೆ, ಮಾಪ್, ತೊಳೆಯುವ ಬ್ರಷ್‌ಗಳಂತಹ ಶುಚಿಗೊಳಿಸುವ ಸಾಮಗ್ರಿಗಳನ್ನು ಇಡುವುದನ್ನು ತಪ್ಪಿಸಬೇಕು. ಇವುಗಳನ್ನು ಅಶುದ್ಧತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ ಮತ್ತು ಪವಿತ್ರ ಸ್ಥಳದಲ್ಲಿ ಇಡುವುದರಿಂದ ವಾಸ್ತು ದೋಷ ಉಂಟಾಗಬಹುದು. ಅದೇ ರೀತಿ ಔಷಧಿಗಳನ್ನು ಅಡುಗೆಮನೆಯಲ್ಲಿ ಸಂಗ್ರಹಿಸುವುದು ಶ್ರೇಯಸ್ಕರ ಅಲ್ಲ. ಔಷಧಿಗಳು ರೋಗಗಳ ಸಂಕೇತವಾಗಿರುವುದರಿಂದ ಅವುಗಳನ್ನು ಅಡುಗೆಮನೆಗೆ ಸಂಬಂಧಿಸದ ಸ್ಥಳದಲ್ಲಿ ಇಡುವುದು ಉತ್ತಮ. ಇಲ್ಲವಾದರೆ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ.

ಹಳೆಯ ಕಾಗದಗಳು:

ಹಳೆಯ ಕಾಗದಗಳು, ಬಿಲ್‌ಗಳು, ದಾಖಲೆಗಳು ಮತ್ತು ಅನಾವಶ್ಯಕ ವಸ್ತುಗಳನ್ನು ಅಡುಗೆಮನೆಯಲ್ಲಿ ಸಂಗ್ರಹಿಸಬಾರದು. ಇವು ಗೊಂದಲ ಮತ್ತು ಅಶುದ್ಧತೆಯನ್ನು ಹೆಚ್ಚಿಸಿ ನಕಾರಾತ್ಮಕ ಶಕ್ತಿಯ ಹರಿವಿಗೆ ಕಾರಣವಾಗಬಹುದು. ಅಡುಗೆಮನೆ ಸದಾ ಹಗುರವಾಗಿಯೂ ಸ್ವಚ್ಛವಾಗಿಯೂ ಇರಬೇಕು. ಕಸದ ಡಬ್ಬಿಯನ್ನು ಸಿಂಕ್ ಕೆಳಗೆ ಇಡುವುದು ಸಾಮಾನ್ಯ ಪದ್ಧತಿ ಆದರೂ ವಾಸ್ತು ದೃಷ್ಟಿಯಿಂದ ಇದು ಸರಿಯಲ್ಲ. ಸಿಂಕ್ ನೀರಿನ ಅಂಶವನ್ನು ಸೂಚಿಸುವುದರಿಂದ ಅಲ್ಲಿ ಕಸ ಇಡುವುದು ಮನೆಯಲ್ಲಿ ಅಶಾಂತಿ ಮತ್ತು ಹಣಕಾಸಿನ ಅಡೆತಡೆಗಳಿಗೆ ಕಾರಣವಾಗಬಹುದು. ಕಸದ ಡಬ್ಬಿಯನ್ನು ಸಾಧ್ಯವಾದಷ್ಟು ದೂರ ಹಾಗೂ ಮುಚ್ಚಿದ ಸ್ಥಿತಿಯಲ್ಲಿ ಇಡುವುದು ಉತ್ತಮ.

ಇದನ್ನೂ ಓದಿ: ಈ ರಾಶಿಯವರು ತಪ್ಪಿಯೂ ಬೆಳ್ಳಿ ಧರಿಸಬೇಡಿ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು!

ಖಾಲಿ ಡಬ್ಬಿಗಳು:

ಹಳೆಯ ಖಾಲಿ ಡಬ್ಬಿಗಳು ಅಥವಾ ಧಾನ್ಯವಿಲ್ಲದ ಪಾತ್ರೆಗಳನ್ನು ಅಡುಗೆಮನೆಯಲ್ಲಿ ಇಡುವುದೂ ಒಳ್ಳೆಯದಲ್ಲ. ಖಾಲಿತನವು ಕೊರತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಧಾನ್ಯ ಪಾತ್ರೆಗಳು ಸದಾ ತುಂಬಿರಲಿ ಮತ್ತು ಬಳಕೆಯಿಲ್ಲದ ಡಬ್ಬಿಗಳನ್ನು ತೆಗೆದುಹಾಕಬೇಕು. ಇದು ಸಮೃದ್ಧಿ ಮತ್ತು ಐಶ್ವರ್ಯವನ್ನು ಆಕರ್ಷಿಸುತ್ತದೆ ಎಂಬ ನಂಬಿಕೆ ಇದೆ.

ಒಟ್ಟಾರೆ, ಅಡುಗೆಮನೆ ಸ್ವಚ್ಛ, ಕ್ರಮಬದ್ಧ ಮತ್ತು ಸಕಾರಾತ್ಮಕ ವಾತಾವರಣ ಹೊಂದಿದ್ದರೆ ಕುಟುಂಬದ ಆರೋಗ್ಯ, ಸಂತೋಷ ಮತ್ತು ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಸಣ್ಣ ವಾಸ್ತು ಸೂಚನೆಗಳನ್ನು ಪಾಲಿಸುವುದರಿಂದ ಮನೆಯಲ್ಲಿ ಶಾಂತಿ, ಸಮೃದ್ಧಿ ಮತ್ತು ಶುಭಶಕ್ತಿ ನೆಲೆಸುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ವಾಹನ ಓಡಾಡುವ ರಸ್ತೆಗಳು ಮಾತ್ರವಲ್ಲ, ಮನಷ್ಯರು ತಿರುಗಾಡುವ ಫುಟ್​​​ಬಾತ್​​​ಗಳು ಸರಿ ಇಲ್ಲ – Kannada News | School Student Fell Into Drain In Bengaluru for GBA Negligence

ಬೆಂಗಳೂರು, (ಫೆಬ್ರವರಿ 06): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವಾಹನ ಓಡಾಡಲು ರಸ್ತೆಗಳು ಸರಿ ಇಲ್ಲ, ಇನ್ನೊಂದೆಡೆ ಮನಷ್ಯರು ಓಡಾಡುವ ಫುಟ್​​ಪಾತ್​ಗಳು ಸಹ ಸರಿ ಇಲ್ಲ. ಹೀಗಾಗಿ ಸಾರ್ವಜನಿಕರು ಫುಟ್​ಪಾತ್ ಮೇಲೆ ಓಡಾಡುವಾಗ ಹುಷಾರಾಗಿರಬೇಕು. ಯಾಕಂದ್ರೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯೋರ್ವ ದಿಢೀರ್ ಚರಂಡಿಗೆ ಬಿದ್ದಿದ್ದಾನೆ. ಬೆಂಗಳೂರಿನ ಸರ್ವಜ್ಞನಗರದ ಗೋವಿಂದಪುರದಲ್ಲಿ ಈ ಘಟನೆ ನಡೆದಿದೆ. ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೇ ಶಾಲೆಯ ಮುಂದೆ ಕಾಮಗಾರಿ ಕೈಗೊಂಡಿದ್ದು, ಅದೆ ಮಾರ್ಗದಲ್ಲಿ ನಡೆದುಕೊಂಡು ಶಾಲೆಗೆ ತೆರಳುತ್ತಿದ್ದಾಗ 1ನೇ ತರಗತಿ ವಿದ್ಯಾರ್ಥಿ ಚರಂಡಿಗೆ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಬಾಲಕನ್ನು ಮೇಲೆ ಎತ್ತಿದ್ದು, ಅದೃಷ್ಟವಶಾತ್ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚರಂಡಿ ಸ್ಲ್ಯಾಬ್ ಕ್ಲೋಸ್ ಮಾಡದೇ ಹಾಗೇ ಬಿಡಲಾಗಿದೆ. ಜಲಮಂಡಳಿ ನಿರ್ಲಕ್ಷ್ಯದ ಬೆನ್ನಲ್ಲೇ ಜಿಬಿಎದಿಂದಲೂ ನಿರ್ಲಕ್ಷ್ಯತನದಿಂದ ಈ ದುರ್ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link