Category Archives: Blog

Your blog category

‘ಟಾಕ್ಸಿಕ್’ ಟೀಸರ್ ನೋಡಿ ಅಚ್ಚರಿ ವ್ಯಕ್ತಪಡಿಸಿದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ – Kannada News | Sandeep Reddy Vanga praises Toxic Movie Teaser ft Yash

‘ರಾಕಿಂಗ್ ಸ್ಟಾರ್’ ಯಶ್ (Yash) ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಯಾವುದೇ ಸದ್ದು ಗದ್ದಲ ಇಲ್ಲದೇ ಟೀಸರ್ ಬಿಡುಗಡೆ ಮಾಡಲಾಯಿತು. ಬಿಡುಗಡೆ ಆದ ಈ ಟೀಸರ್ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಯಶ್ ಅಭಿಮಾನಿಗಳು ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದ ಸ್ಟಾರ್ ಸೆಲೆಬ್ರಿಟಿಗಳು ಕೂಡ ‘ಟಾಕ್ಸಿಕ್’ ಟೀಸರ್ (Toxic Movie Teaser) ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’, ‘ಅನಿಮಲ್’ ಸಿನಿಮಾಗಳ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರು ಈ ಟೀಸರ್ ನೋಡಿ ಮೆಚ್ಚಿಕೊಂಡಿದ್ದಾರೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಅವರು ರಾಯಾ ಎಂಬ ಪಾತ್ರ ಮಾಡಿದ್ದಾರೆ. ಈ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ಈ ಟೀಸರ್ ಮೂಲಕ ತೋರಿಸಲಾಗಿದೆ. ಈ ಸಿನಿಮಾ ತುಂಬಾ ಬೋಲ್ಡ್ ಆಗಿರಲಿದೆ ಎಂಬುದು ಖಚಿತವಾಗಿದೆ. ಈಗಾಗಲೇ ಬೋಲ್ಡ್ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ಸಂದೀಪ್ ರೆಡ್ಡಿ ವಂಗಾ ಕೂಡ ‘ಟಾಕ್ಸಿಕ್’ ಟೀಸರ್ ನೋಡಿ ಭೇಷ್ ಎಂದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಂದೀಪ್ ರೆಡ್ಡಿ ವಂಗಾ ಅವರು ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್ ಟೀಸರ್ ನನ್ನನ್ನು ತಟ್ಟಿತು. ಸ್ಟೈಲ್, ಆ್ಯಟಿಟ್ಯೂಟ್, ಕೆಯಾಸ್.. ಹುಟ್ಟುಹಬ್ಬದ ಶುಭಾಶಯಗಳು ಯಶ್’ ಎಂದು ಸಂದೀಪ್ ರೆಡ್ಡಿ ವಂಗಾ ಅವರು ಟ್ವೀಟ್ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಗೀತು ಮೋಹನ್​ದಾಸ್ ಅವರು ‘ಟಾಕ್ಸಿಕ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಟೀಸರ್​​ನಲ್ಲಿ ಇಷ್ಟು ಬೋಲ್ಡ್ ಸೀನ್ ಇರುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಸಿನಿಮಾ ಯಾವ ರೀತಿ ಇರಬಹುದು ಎಂಬ ಕೌತುಕ ನಿರ್ಮಾಣ ಆಗಿದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗಲಿದೆ. ಅದೇ ದಿನ ‘ಧುರಂಧರ್ 2’ ಕೂಡ ರಿಲೀಸ್ ಆಗಲಿದ್ದು, ಸಖತ್ ಪೈಪೋಟಿ ಏರ್ಪಡಲಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಟೀಸರ್​​​ನಲ್ಲಿ ಮಾಸ್ ಹಾಗೂ ಹಸಿಬಿಸಿ ದೃಶ್ಯ; ಇಲ್ಲಿವೆ ಫೋಟೋಸ್

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಜೊತೆ ರುಕ್ಮಿಣಿ ವಸಂತ್, ತಾರಾ ಸುತಾರಿಯಾ, ಹುಮಾ ಖುರೇಶಿ, ಕಿಯಾರಾ ಅಡ್ವಾಣಿ, ನಯನತಾರಾ, ಅಕ್ಷಯ್ ಒಬೆರಾಯ್ ಮುಂತಾದವರು ನಟಿಸುತ್ತಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ಏಕಕಾಲಕ್ಕೆ ಈ ಸಿನಿಮಾ ಸಿದ್ಧವಾಗುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಿಗೆ ಡಬ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

14 ವರ್ಷದ ಬಾಲಕಿ ಮೇಲೆ ಚಲಿಸುವ ಕಾರಿನೊಳಗೆ ಯೂಟ್ಯೂಬರ್, ಪೊಲೀಸ್ ಸೇರಿ ಅತ್ಯಾಚಾರ – Kannada News | 14 year old girl gangraped by YouTuber and Police sub inspector in Kanpur

ಕಾನ್ಪುರ, ಜನವರಿ 8: ಉತ್ತರ ಪ್ರದೇಶದ ಕಾನ್ಪುರದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ (Physical Harassment) ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಅಪರಾಧವೆಸಗಿದ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿಯಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಸ್ಥಳೀಯ ಪೊಲೀಸರು ಈ ಕೃತ್ಯವನ್ನು ಮುಚ್ಚಿಹಾಕಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಎಲ್ಲಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯೊಂದಿಗೆ ತನಿಖೆಗಳು ನಡೆಯುತ್ತಿವೆ.

ಈ ಪ್ರಕರಣದಲ್ಲಿ ಸತ್ಯಗಳನ್ನು ತಪ್ಪಾಗಿ ನಿರೂಪಿಸಿದ ಆರೋಪದ ಮೇಲೆ ಕಾನ್ಪುರ ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ದಿನೇಶ್ ಚಂದ್ರ ತ್ರಿಪಾಠಿ ಅವರನ್ನು ವಜಾಗೊಳಿಸಿದ್ದಾರೆ. ಸಚೇಂಡಿ ಸ್ಟೇಷನ್ ಹೌಸ್ ಅಧಿಕಾರಿ ವಿಕ್ರಮ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ಮುಂಬೈ: 10 ಅಪ್ರಾಪ್ತ ಬಾಲಕಿಯರಿಗೆ ನಿದ್ರೆ ಮಾತ್ರೆ ನೀಡಿ ಅತ್ಯಾಚಾರ, ಆರೋಪಿಯ ಬಂಧನ

ಏನಿದು ಘಟನೆ?:

ಕಾನ್ಪುರದ ಸಚೆಂಡಿ ಪ್ರದೇಶದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. 7ನೇ ತರಗತಿಯ ವಿದ್ಯಾರ್ಥಿನಿಯನ್ನು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಮಹೀಂದ್ರಾ ಸ್ಕಾರ್ಪಿಯೋದಲ್ಲಿ ಅಪಹರಿಸಲಾಗಿತ್ತು. ಆಕೆಯನ್ನು ಸ್ಕಾರ್ಪಿಯೋದಲ್ಲೇ ರೈಲ್ವೆ ಹಳಿಯ ಬಳಿಯ ದೂರದ ಸ್ಥಳಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಸುಮಾರು ಎರಡು ಗಂಟೆಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಿ, ನಂತರ ಆಕೆಯ ಮನೆಯ ಹೊರಗೆ ಎಸೆಯಲಾಗಿತ್ತು.

ಇದನ್ನೂ ಓದಿ: ಹೋಟೆಲ್​ಗೆ ಕರೆಸಿಕೊಂಡು 17 ವರ್ಷದ ಮಹಿಳಾ ಶೂಟರ್ ಮೇಲೆ ಅತ್ಯಾಚಾರ, ನ್ಯಾಷನಲ್ ಕೋಚ್ ಅಮಾನತು

ಆಕೆಯ ಹೇಳಿಕೆಯ ಆಧಾರದ ಮೇಲೆ, ಸಬ್-ಇನ್ಸ್‌ಪೆಕ್ಟರ್ ಅಮಿತ್ ಕುಮಾರ್ ಮೌರ್ಯ ಮತ್ತು ಯೂಟ್ಯೂಬರ್ ಶಿವಬರನ್ ಯಾದವ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ಶಿವಬರನ್ ಯಾದವ್ ಅವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಎಸ್‌ಐ ಅನ್ನು ಬಂಧಿಸಲು ಪೊಲೀಸರು 4 ತಂಡಗಳನ್ನು ರಚಿಸಿದ್ದಾರೆ. ಅಪರಾಧಕ್ಕೆ ಬಳಸಲಾದ ಎಸ್‌ಯುವಿಯನ್ನು ಮೌರ್ಯ ಅವರ ಹೆಸರಿನಲ್ಲಿಯೇ ನೋಂದಾಯಿಸಲಾಗಿದೆ.

ಸಂತ್ರಸ್ತೆಯ ಕುಟುಂಬಸ್ಥರು ಸ್ಥಳೀಯ ಪೊಲೀಸರು ಈ ಕೃತ್ಯವನ್ನು ಮುಚ್ಚಿಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಲ್ಲಿ ಪೊಲೀಸರು ಭಾಗಿಯಾಗಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:52 pm, Thu, 8 January 26

Source link

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ವಿಡಿಯೋ ವೈರಲ್ – Kannada News | Stray Dog Attack on 3 year old Child in Sangareddy

ಸಂಗಾರೆಡ್ಡಿ, ಜನವರಿ 8: ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳ (Stray Dogs) ದಾಳಿ ದಿನೇ ದಿನೇ ಹೆಚ್ಚುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರಗೆ ಬಿಡಲು ಹೆದರುತ್ತಿದ್ದಾರೆ. ಇತ್ತೀಚೆಗೆ ಸಂಗಾರೆಡ್ಡಿ ಜಿಲ್ಲೆಯಲ್ಲಿ ಸುಮಾರು 15 ನಾಯಿಗಳು 3 ವರ್ಷದ ಬಾಲಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿವೆ. ಈ ದಾಳಿಯ ದೃಶ್ಯಗಳು ಅಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ದಾಖಲಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಬೀದಿ ನಾಯಿಗಳ ದಾಳಿಯಿಂದ ಮೂರು ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಾಲಕನ ಕಿರುಚಾಟ ಕೇಳಿ ಅಲ್ಲಿದ್ದ ಮಹಿಳೆಯರು ಓಡಿ ಬಂದರು. ಅವರು ನಾಯಿಗಳ ಮೇಲೆ ಕಲ್ಲು ತೂರಿ ಬಾಲಕನನ್ನು ರಕ್ಷಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

T20 World Cup 2026: ಟಿ20 ವಿಶ್ವಕಪ್​ನಿಂದ ಬಾಂಗ್ಲಾ ಹಿಂದೆ ಸರಿದರೆ ಯಾವ ತಂಡಕ್ಕೆ ಅವಕಾಶ? – Kannada News | T20 World Cup 2026: Bangladesh ICC Row Over India Matches; Who Replaces Them?

ಈಗ ಪ್ರಶ್ನೆಯೆಂದರೆ, ಅಂತಿಮವಾಗಿ ಎಲ್ಲಾ ಪ್ರಯತ್ನಗಳು ನಡೆದ ಬಳಿಕವೂ ಐಸಿಸಿ, ಬಾಂಗ್ಲಾದೇಶದ ಬೇಡಿಕೆಯನ್ನು ಸ್ವೀಕರಿಸದಿದ್ದರೆ, ಇತ್ತ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿದ್ದರೆ ಏನಾಗುತ್ತದೆ? ಎಂಬುದು. ಐಸಿಸಿ ಹೇಳಿದಂತೆ ಬಾಂಗ್ಲಾ ಕೇಳದಿದ್ದರೆ, ಅದನ್ನು ಟಿ 20 ವಿಶ್ವಕಪ್‌ನಿಂದ ಹೊರಹಾಕಲಾಗುತ್ತದೆ. ಇದು ನಡೆದರೆ ಬಾಂಗ್ಲಾದೇಶ ತಂಡದ ಬದಲು ಬೇರೆ ತಂಡಕ್ಕೆ ಟಿ20 ವಿಶ್ವಕಪ್‌ ಆಡುವ ಅವಕಾಶ ಸಿಗಲಿದೆ. ಹಾಗಿದ್ದರೆ ಆ ತಂಡ ಯಾವುದು?

Source link

ಪ್ರೇಯಸಿಯನ್ನು ಮದುವೆಯಾಗಲು ಅಪಘಾತದ ನಾಟಕವಾಡಿದ ಯುವಕನ ಪ್ಲಾನ್ ಉಲ್ಪಾ ಆಗಿದ್ದು ಹೇಗೆ? – Kannada News | Kerala Youth Arrested for Staging Accident to impress his Girlfriends Family for Wedding

ತಿರುವನಂತಪುರಂ, ಜನವರಿ 8: ಕೇರಳದಲ್ಲಿ ಕೆಲವು ದಿನಗಳ ಹಿಂದೆ ಅಪಘಾತವೊಂದು ನಡೆದಿತ್ತು. ಆರಂಭದಲ್ಲಿ ಇದೊಂದು ಗಂಭೀರ ರಸ್ತೆ ಅಪಘಾತ (Accident) ಎಂದು ಪೊಲೀಸರು ಕೂಡ ನಂಬಿದ್ದರು. ಆದರೆ, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಈ ಘಟನೆಯನ್ನು ಉದ್ದೇಶಪೂರ್ವಕವಾಗಿ ಪ್ಲಾನ್ ಮಾಡಲಾಗಿದೆ ಎಂಬುದನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳಾದ ಕೋನ್ನಿ ಬಳಿಯ ಮಮ್ಮೂಡು ಮೂಲದ ರಂಜಿತ್ ರಾಜನ್ (24) ಮತ್ತು ಎರಡನೇ ಆರೋಪಿ ಅಜಾಸ್ (19) ಅವರನ್ನು ವಶಕ್ಕೆ ಪಡೆಯಲಾಯಿತು.

ತನ್ನ ಗೆಳತಿಯನ್ನು ಮೆಚ್ಚಿಸಿ ಅವಳನ್ನು ಮದುವೆಯಾಗಬೇಕೆಂದು ಕನಸು ಕಂಡಿದ್ದ ಪ್ರೇಮಿ ಅದಕ್ಕಾಗಿ ಆಕೆಯ ಮನೆಯವರನ್ನು ಮೆಚ್ಚಿಸಲು ಅಪಘಾತದ ನಾಟಕವನ್ನು ಆಡಿದನು. ಆ ಯುವತಿ ಹೋಗುತ್ತಿದ್ದ ಸ್ಕೂಟಿಗೆ ತಾನೇ ಅಪಘಾತ ಮಾಡಿಸಿದನು. ಬಳಿಕ ತಾನೇ ಆಕೆಯನ್ನು ರಕ್ಷಿಸಿ ಹೀರೋ ಆಗಲು ಪ್ಲಾನ್ ಮಾಡಿದ್ದನು. ಈ ವಿಚಿತ್ರ ಘಟನೆ ಕೇರಳದ ಪಥನಂತಿಟ್ಟದಲ್ಲಿ ನಡೆದಿದೆ.

ಇದನ್ನೂ ಓದಿ: 20 ದಿನ ಸಾವು ಬದುಕಿನ ನಡುವೆ ಹೋರಾಡಿದರೂ ಉಳಿಯಲಿಲ್ಲ ಜೀವ! ಚಿಕಿತ್ಸೆ ಫಲಿಸದೆ ಸಾವು

ಕೇರಳದ ಪಥನಂತಿಟ್ಟದ ರಂಜಿತ್ ರಾಜನ್ ಎಂಬ ಯುವಕ ಒಬ್ಬಳು ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಆಕೆಯ ಮನೆಯವರಿಗೆ ತನ್ನ ಬಗ್ಗೆ ಒಳ್ಳೆಯ ಅಭಿಪ್ರಾಯ ಬಂದರೆ ಮಾತ್ರ ಅವರು ಆಕೆಯನ್ನು ತನಗೆ ಮದುವೆ ಮಾಡಿಕೊಡುತ್ತಾರೆ ಎಂದು ಅವನು ಭಾವಿಸಿದ್ದ. ಆಕೆಯ ಮನೆಯವರನ್ನು ಹೇಗೆ ಮೆಚ್ಚಿಸಬಹುದು? ಎಂದು ಯೋಚಿಸಿದ ಆತ ತನ್ನ ಸ್ನೇಹಿತರೊಂದಿಗೆ ಕುಳಿತು ತನ್ನ ಗೆಳತಿಯ ಪೋಷಕರ ದೃಷ್ಟಿಯಲ್ಲಿ ತನ್ನನ್ನು ತಾನು ಹೀರೋ ಎಂದು ತೋರಿಸಲು ಅಪಘಾತದ ಪ್ಲಾನ್ ಮಾಡಿದ್ದ. ಆ ಪ್ಲಾನ್​​ನಂತೆ ತನ್ನ ಸ್ನೇಹಿತ ಅಜೇಶ್ ಮೂಲಕ ಸ್ಕೂಟಿಯಲ್ಲಿ ಬರುತ್ತಿದ್ದ ತನ್ನ ಪ್ರೇಯಸಿಗೆ ಕಾರಿನಿಂದ ಡಿಕ್ಕಿ ಹೊಡೆಸಿದ್ದ. ಆ ವೇಳೆ ಇನ್ನೊಂದು ಕಾರಿನಲ್ಲಿ ಹಾದುಹೋಗುತ್ತಿದ್ದ ರಂಜಿತ್ ತಾನೇ ಅವಳನ್ನು ಉಳಿಸಿ ಆಸ್ಪತ್ರೆಗೆ ಕರೆದೊಯ್ದಂತೆ ನಾಟಕ ಮಾಡಿದ್ದ.

ಆದರೆ, ಈ ಅಪಘಾತದಲ್ಲಿ ಆಕೆಯ ಮೊಣಕೈ ಮತ್ತು ಬೆರಳು ಮುರಿದಿತ್ತು. ಕಳೆದ ವರ್ಷ ಡಿಸೆಂಬರ್ 23ರಂದು ಈ ಘಟನೆ ನಡೆದಿತ್ತು. ರಂಜಿತ್‌ನ ಪ್ರೇಯಸಿ ಕೋಚಿಂಗ್ ಸೆಂಟರ್‌ನಿಂದ ಸ್ಕೂಟಿಯಲ್ಲಿ ಬರುತ್ತಿದ್ದಾಗ ಆತನ ಸ್ನೇಹಿತ ಕಾರಿನಲ್ಲಿ ಆಕೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಈ ಅಪಘಾತದಲ್ಲಿ ತಮ್ಮ ಮಗಳನ್ನು ರಕ್ಷಿಸಿದ್ದಕ್ಕಾಗಿ ಆಕೆಯ ಪೋಷಕರು ಮೆಚ್ಚಿ, ಆಕೆಯನ್ನು ತನಗೆ ಮದುವೆ ಮಾಡಿಕೊಡುತ್ತಾರೆ ಎಂದು ರಂಜಿತ್ ಭಾವಿಸಿದ್ದ.

ಇದನ್ನೂ ಓದಿ: ಸಾವನ್ನಪ್ಪಿದ ಭಿಕ್ಷುಕನ ಬ್ಯಾಗ್​​ನಲ್ಲಿತ್ತು 4.5 ಲಕ್ಷ ರೂ. ವಿದೇಶಿ ಕರೆನ್ಸಿ

ಆದರೆ ಈ ಕಥೆ ಬೇರೆ ತಿರುವು ಪಡೆದುಕೊಂಡಿತು. ರಂಜಿತ್​​ನ ಈ ಪ್ಲಾನ್ ಬಗ್ಗೆ ತಿಳಿದಿಲ್ಲದ ಆ ಯುವತಿ ಪೊಲೀಸರಿಗೆ ದೂರು ನೀಡಿದಳು. ಅವರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಪೊಲೀಸ್ ತನಿಖೆಯ ಸಮಯದಲ್ಲಿ, ಹಿಟ್-ಆ್ಯಂಡ್ ರನ್‌ ಕೇಸ್​​ನಲ್ಲಿ ರಂಜಿತ್​​ನ ಗೆಳೆಯ ಅಜೇಶ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆತನ ವಿಚಾರಣೆ ವೇಳೆ ರಂಜಿತ್​​ನ ಪ್ಲಾನ್ ಬಯಲಾಯಿತು. ಇದೀಗ ಪೊಲೀಸರು ರಂಜಿತ್ ಮತ್ತು ಅಜೇಶ್ ಇಬ್ಬರ ವಿರುದ್ಧವೂ ಕೊಲೆ ಯತ್ನ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಬರ್ ಆಝಂ ವಿಶ್ವ ದಾಖಲೆ ಮುರಿದ ರುತುರಾಜ್ ಗಾಯಕ್ವಾಡ್

Source link

ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಂಗ್ರೆಸ್​​ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು – Kannada News | Karnataka Cabinet Meeting Decisions: Government Grants Land for Congress Bhavan in Tumakuru and Raichur

ಬೆಂಗಳೂರು, ಜನವರಿ 08: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ತುಮಕೂರು ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್​​ ಭವನ ಟ್ರಸ್ಟ್​​ಗೆ ಜಾಗ ನೀಡಲು ಸಂಪುಟ ಒಪ್ಪಿದ್ದು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲೂ ಒಪ್ಪಿಗೆ ಸೂಚಿಸಿದೆ.

ಸಚಿವ ಸಂಪುಟ ಸಭೆಯ ತೀರ್ಮಾನಗಳು

  • KSDL ಬೆಂಗಳೂರು ಸಂಕೀರ್ಣಕ್ಕೆ 17.70 ಕೋಟಿ ಮೊತ್ತದ ಸಾಬೂನು ತಯಾರಿಸುವ ಯಂತ್ರ ಖರೀದಿ
  • ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ 24.96 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯ 50 TPD ಬಯೋ ಸಿಎನ್​ಜಿ ಘಟಕ ಸ್ಥಾಪನೆ
  • KKRDB ಅನುದಾನದಿಂದ ಕಲಬುರಗಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೇರಿ ನಿರ್ಮಾಣ
  • KKRDB ಅನುದಾನದಿಂದ ಕಲಬುರಗಿಯಲ್ಲಿ 10 ಕೋಟಿ ವೆಚ್ಚದಲ್ಲಿ ಪ್ರಾದೇಶಿಕ ಸಹಕಾರ ಭವನ
  • 127.40 ಕೋಟಿ ಅಂದಾಜು ಮೊತ್ತದಲ್ಲಿ PM-ABHIM ಯೋಜನೆಯಡಿ 2024-26ನೇ ಸಾಲಿನಲ್ಲಿ ರಾಜ್ಯಾದ್ಯಂತ 196 SC-AAM (Rural Health and Wellness Centre) ಸ್ಥಾಪನೆ
  • 24 ಕೋಟಿ ರೂ. ಅಂದಾಜು ಮೊತ್ತದಲ್ಲಿ ಬೆಂಗಳೂರಿನ ಜಯನಗರದಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ 2ನೇ ಹಂತದ ಕಟ್ಟಡ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
  • 40 ಕೋಟಿ ರೂ. ಅಂದಾಜು ಮೊತ್ತದಲ್ಲಿ ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೂತನ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಪೀಠೋಪಕರಣ ಖರೀದಿ
  • ಹೊಳೆನರಸೀಪುರ ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯ 12.30 ಕೋಟಿ ರೂ. ಪರಿಷ್ಕೃತ ಮೊತ್ತಕ್ಕೆ ಅನುಮೋದನೆ
  • ಚಾಮರಾಜನಗರ ಜಿಲ್ಲೆಯಲ್ಲಿ166 ಗ್ರಾಮಗಳ ಬಹುಗ್ರಾಮ ಕುಡಿಯುವ ಸರಬರಾಜು ನೀರು ಯೋಜನೆಯ 3 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಮಗಾರಿ 33.04 ಕೋಟಿ ಮೊತ್ತದಲ್ಲಿ ಅನುಷ್ಠಾನ
  • ಹಳಿಯಾಳ ಪಟ್ಟಣಕ್ಕ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯಡಿ ನಿರ್ಮಿಸಲಾಗಿರುವ ವಿವಿಧ ಘಟಕಗಳ 5 ವರ್ಷಗಳ ನಿರ್ವಹಣೆ ಮತ್ತು ದುರಸ್ತಿ ಕಾಮಗಾರಿಯನ್ನು 10.60 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
  • ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮಾ ಗಾಂಧಿ, ఇంದಿರಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಪುತ್ಥಳಿಗಳನ್ನು ಸ್ಥಾಪಿಸಲು ಅನುಮೋದನೆ
  • ಲೋಕೋಪಯೋಗಿ ಇಲಾಖೆಯ ಮೂಲಕ 70.70 ಕೋಟಿ ವೆಚ್ಚದಲ್ಲಿ ಮಂಡ್ಯದ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಡಳಿತ ಭವನ ನಿರ್ಮಾಣ
  • 11.03 ಕೋಟಿ ವೆಚ್ಚದಲ್ಲಿಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಬ್ಬನಶಶಿಯ ಮತ್ತು ಗಂಗೆಕೊಳ್ಳದ ಕಡಲ ತೀರದಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಯ ಪರಿಷ್ಕೃತ ಅಂದಾಜಿಗೆ ಅನುಮೋದನೆ
  • ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬಾಳೆಪುಣಿ ಗ್ರಾಮದ ಸ.ನಂ. 87/4ರಲ್ಲಿ 5 ಎಕರೆ ಜಮೀನನ್ನು ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗಕ್ಕೆ ಮಂಜೂರಿಗೆ ಒಪ್ಪಿಗೆ

ಇದನ್ನೂ ಓದಿ: ಮೃತ IAS ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ ನೀಡಲು ಸಂಪುಟ ಒಪ್ಪಿಗೆ, ಯಾವ ಹುದ್ದೆ?

ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಭೂಮಿ ಮಂಜೂರು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಲ್ಲುಕೋಟೆ ಗ್ರಾಮದ ಸ.ನಂ.49 ರಲ್ಲಿ 7.5 ಗುಂಟೆ ಜಮೀನು ಮತ್ತು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿರವಾರ ಸೀಮಾದಲ್ಲಿ 10 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರಿಗೆ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಸನ್ನಡತೆ ಆಧಾರದಲ್ಲಿ 33 ಕೈದಿಗಳಿಗೆ ಬಿಡುಗಡೆ ಭಾಗ್ಯ

ಸನ್ನಡತೆ ಆಧಾರದ ಮೇಲೆ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 33 ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಬ್ಬರು ಶಿಕ್ಷಾ ಬಂಧಿಗಳ ಬಿಡುಗಡೆಗೆ ಕೇಂದ್ರ ಗೃಹ ಇಲಾಖೆ ಅನುಮತಿ ಪಡೆಯಲು ನಿರ್ಧರಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:59 pm, Thu, 8 January 26

Source link

ಸಾವನ್ನಪ್ಪಿದ ಭಿಕ್ಷುಕನ ಬ್ಯಾಗ್​​ನಲ್ಲಿತ್ತು 4.5 ಲಕ್ಷ ರೂ. ವಿದೇಶಿ ಕರೆನ್ಸಿ – Kannada News | Over 4 lakhs banned and foreign currency found in Kerala Beggars Bag after death

ಆಲಪ್ಪುಳ, ಜನವರಿ 8: ಕೇರಳದ ರಸ್ತೆ ಅಪಘಾತದ ನಂತರ ಸಾವನ್ನಪ್ಪಿದ ಭಿಕ್ಷುಕನೊಬ್ಬನ ಬಳಿ 4.5 ಲಕ್ಷ ರೂಪಾಯಿಗೂ ಹೆಚ್ಚು ಹಣ ಇದ್ದುದು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯ ಗುರುತನ್ನು ಪತ್ತೆಹಚ್ಚಲು ಪೊಲೀಸರು ಆತನ ಬ್ಯಾಗ್ ಪರಿಶೀಲಿಸಿದರು. ಈ ವೇಳೆ ಅಲ್ಲಿದ್ದ ಭಾರೀ ಪ್ರಮಾಣದ ವಿದೇಶಿ ಕರೆನ್ಸಿಯನ್ನು ಕಂಡು ಆಲಪ್ಪುಳ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ಆಘಾತವಾಗಿದೆ. ಚಾರುಮ್ಮೂಟ್ ಮತ್ತು ಆಲಪ್ಪುಳ ಹತ್ತಿರದ ಪ್ರದೇಶಗಳಲ್ಲಿ ಪರಿಚಿತ ವ್ಯಕ್ತಿಯಾಗಿದ್ದ ಭಿಕ್ಷುಕನಿಗೆ (Beggar) ಸೇರಿದ ಬ್ಯಾಗ್​​ನಿಂದ ಲಕ್ಷಾಂತರ ರೂ ಮೌಲ್ಯದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಸೋಮವಾರ ರಾತ್ರಿ ಭಿಕ್ಷುಕ ಅಪಘಾತಕ್ಕೀಡಾದಾಗ ಈ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿಗಳು ಆತನನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ, ಯಾರೊಂದಿಗೂ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳದೆ ಆ ವ್ಯಕ್ತಿ ತಾನೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಟುಹೋದ. ಆಸ್ಪತ್ರೆ ದಾಖಲೆಗಳ ಪ್ರಕಾರ, ಆ ವ್ಯಕ್ತಿ ತನ್ನ ಹೆಸರು ಅನಿಲ್ ಕಿಶೋರ್ ಎಂದು ಹೇಳಿದ್ದ.

ಮಂಗಳವಾರ ಬೆಳಿಗ್ಗೆ ಅಂಗಡಿಯೊಂದರ ಹೊರಗೆ ಅನಿಲ್ ಕಿಶೋರ್ ಮೃತಪಟ್ಟಿರುವುದು ಕಂಡುಬಂದಿದೆ. ಆತನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಆ ಶವದ ಬಳಿ ಸಿಕ್ಕಿದ ಬ್ಯಾಗ್ ಅನ್ನು ಪರಿಶೀಲನೆಗಾಗಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಲಾಯಿತು.

ಇದನ್ನೂ ಓದಿ: 14 ವರ್ಷದ ಬಾಲಕಿ ಮೇಲೆ ಚಲಿಸುವ ಕಾರಿನೊಳಗೆ ಯೂಟ್ಯೂಬರ್, ಪೊಲೀಸ್ ಸೇರಿ ಅತ್ಯಾಚಾರ

ಸ್ಥಳೀಯ ಪಂಚಾಯತ್ ಸದಸ್ಯ ಫಿಲಿಪ್ ಉಮ್ಮನ್ ಅವರ ಸಮ್ಮುಖದಲ್ಲಿ ಬ್ಯಾಗ್ ತೆರೆದಾಗ ಪೊಲೀಸ್ ಅಧಿಕಾರಿಗಳು ದಿಗ್ಭ್ರಮೆಗೊಂಡರು. ಆ ಬ್ಯಾಗ್​​ನಲ್ಲಿ ಬ್ಯಾನ್ ಆಗಿರುವ ನೋಟುಗಳು ಮತ್ತು ವಿದೇಶಿ ಕರೆನ್ಸಿಗಳಿದ್ದವು. ಆ ಬ್ಯಾಗ್​​ನಲ್ಲಿ ಒಟ್ಟು 4.5 ಲಕ್ಷ ರೂ.ಗಳಿಗೂ ಹೆಚ್ಚು ಹಣ ಸಿಕ್ಕಿತು. ಆ ಹಣವನ್ನು ಒಂದು ಹಳೆಯ ಪ್ಲಾಸ್ಟಿಕ್ ಬಾಕ್ಸ್​ ಒಳಗೆ ಹಾಕಿ, ಆ ಬಾಕ್ಸನ್ನು ಬ್ಯಾಗ್​​ನಲ್ಲಿ ಇಟ್ಟುಕೊಂಡಿದ್ದ. ನಗದು ಹಣದಲ್ಲಿ ನಿಷೇಧಿತ 2,000 ರೂ. ನೋಟುಗಳು ಮತ್ತು ವಿದೇಶಿ ಕರೆನ್ಸಿ ಕೂಡ ಸೇರಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಅನಿಲ್ ಕಿಶೋರ್ ಪ್ರತಿದಿನ ಹಣಕ್ಕಾಗಿ ಭಿಕ್ಷೆ ಬೇಡುತ್ತಿದ್ದ. ಆಹಾರಕ್ಕಾಗಿ ಎಲ್ಲರ ಬಳಿ ಹಣ ಕೇಳುತ್ತಿದ್ದ. ಊಟಕ್ಕೇ ಹಣವಿಲ್ಲವೆಂದು ಹೇಳುತ್ತಿದ್ದ ಆ ಭಿಕ್ಷುಕ ಇಷ್ಟು ದೊಡ್ಡ ಪ್ರಮಾಣದ ಹಣವನ್ನು ಬ್ಯಾಗ್​​ನಲ್ಲಿ ಇಟ್ಟುಕೊಂಡಿದ್ದಾನೆಂದು ಯಾರಿಗೂ ತಿಳಿದಿರಲಿಲ್ಲ. ಈ ವಿಷಯ ಕೇಳಿ ಸುತ್ತಲಿನ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ.

ಇದನ್ನೂ ಓದಿ: ಆಗಷ್ಟೇ ಹುಟ್ಟಿದ ಮಗುವನ್ನು ಕಸದ ತೊಟ್ಟಿಗೆ ಎಸೆದ ತಾಯಿ!

ಈ ಹಣದ ಮೂಲವೇನು? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಆತನ ಕುಟುಂಬದ ಯಾವುದೇ ಸದಸ್ಯರು ಅದನ್ನು ಪಡೆಯಲು ಮುಂದೆ ಬರುತ್ತಾರೋ ಇಲ್ಲವೋ ಎಂಬುದನ್ನು ನೋಡಿಕೊಂಡು, ನಂತರ ಆ ಹಣವನ್ನು ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಜನ ನಾಯಗನ್’ ಬಳಿಕ ಈಗ ‘ಪರಾಶಕ್ತಿ’ಗೂ ಸಿಬಿಎಫ್​​ಸಿ ಸಂಕಟ – Kannada News | CBFC suggests 23 cuts to Sivakarthikeyan’s Parashakti movie

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ನಾಳೆ (ಜನವರಿ 09) ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ ಪ್ರಮಾಣ ಪತ್ರ ಸಿಗದ ಕಾರಣ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ. ‘ಜನ ನಾಯಗನ್’ ಎದುರಾಗಿ ಶಿವಕಾರ್ತಿಕೇಯನ್, ಶ್ರೀಲೀಲಾ ನಟನೆಯ ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಗುತ್ತಿತ್ತು. ಆದರೆ ಈಗ ಅದೂ ಸಹ ಸಂಕಷ್ಟದಲ್ಲಿ ಸಿಲುಕಿದೆ. ಸಿನಿಮಾಕ್ಕೆ ಬರೋಬ್ಬರಿ 23 ಕಟ್​​ಗಳನ್ನು ಸಿಬಿಎಫ್​​ಸಿ ಸೂಚಿಸಿದ್ದು, ‘ಪರಾಶಕ್ತಿ’ ನಿರ್ಮಾಪಕರು ಸಿಬಿಎಫ್​​ಸಿ ವಿರುದ್ಧ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ ಇದೆ.

ಶಿವಕಾರ್ತಿಕೇಯನ್ ಮತ್ತು ಶ್ರೀಲೀಲಾ ನಟಿಸಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕಿ ಸುಧಾ ಕೊಂಗರ ನಿರ್ದೇಶನ ಮಾಡಿರುವ ‘ಪರಾಶಕ್ತಿ’ ಸಿನಿಮಾ ತಮಿಳುನಾಡಿನಲ್ಲಿ ನಡೆದ ಹಿಂದಿ ವಿರೋಧಿ ಚಳವಳಿಯ ಕತೆಯನ್ನು ಹೊಂದಿದ್ದು, ಸಿನಿಮಾ ಜನವರಿ 10 ರಂದು ಬಿಡುಗಡೆ ಆಗಲಿಕ್ಕಿತ್ತು, ಆದರೆ ಸಿನಿಮಾಕ್ಕೆ ಇದೀಗ ಸಿಬಿಎಫ್​​ಸಿ ಸಮಸ್ಯೆ ಎದುರಾಗಿದೆ. ವಿಶೇಷವೆಂದರೆ ಜನವರಿ 09 ರಂದು ಬಿಡುಗಡೆ ಆಗಲಿದ್ದ ‘ಜನ ನಾಯಗನ್’ ಸಿನಿಮಾಕ್ಕೂ ಸಿಬಿಎಫ್​​ಸಿ ಸಮಸ್ಯೆ ಎದುರಾಗಿದೆ. ಈಗ ‘ಪರಾಶಕ್ತಿ’ ಸಿನಿಮಾಕ್ಕೂ ಸಿಬಿಎಫ್​​ಸಿ ಕಠಿಣ ನಿಯಮಗಳನ್ನು ಹೇರಿದೆ.

‘ಪರಾಶಕ್ತಿ’ ಸಿನಿಮಾಕ್ಕೆ ಸಿಬಿಎಫ್​​ಸಿ ಬರೋಬ್ಬರಿ 23 ಕಟ್​​ಗಳನ್ನು ಸೂಚಿಸಿದೆಯಂತೆ. ಇದು ಸಿನಿಮಾ ತಂಡಕ್ಕೆ ಆಘಾತ ತಂದಿದೆ. ಹಿಂದಿ ವಿರೋಧಿ ಚಳವಳಿಯ ಬಗ್ಗೆ ಸಿನಿಮಾ ಆಗಿರುವ ಕಾರಣ ಸಹಜವಾಗಿಯೇ ಸಿನಿಮಾನಲ್ಲಿ ರಾಜಕೀಯ ಅಂಶವೂ ಇದ್ದು, ಇದು ಸಿಬಿಎಫ್​​ಸಿಯ ಅವಕೃಪೆಗೆ ಕಾರಣವಾಗಿದೆ. ರಾಷ್ಟ್ರಪ್ರಶಸ್ತಿ ವಿಜೇತ ‘ಸೂರರೈ ಪೋಟ್ರು’ ಸಿನಿಮಾ ನಿರ್ದೇಶಿಸಿರುವ ಸುಧಾ ಕೊಂಗರಗೆ ಇದು ಸಹನೀಯವಾಗಿಲ್ಲ ಎನ್ನಲಾಗುತ್ತಿದ್ದು, ಚಿತ್ರತಂಡ ಸಿಬಿಎಫ್​​ಸಿಯ ನಿರ್ಣಯಕ್ಕೆ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಸಾಧ್ಯತೆ ಇದೆ.

ಇದನ್ನೂ ಓದಿ:ವಿಜಯ್ ಹಿಟ್ ಸಾಂಗ್​​ನ ಕೆಟ್ಟದಾಗಿ ಹಾಡಿ ಟ್ರೋಲ್ ಆದ ಮಮಿತಾ ಬೈಜು

‘ಪರಾಶಕ್ತಿ’ ಸಿನಿಮಾದ ನಿರ್ಮಾಪಕರು ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆಯ ಮುಖಂಡರುಗಳಿಗೆ ಆಪ್ತರಾಗಿದ್ದು, ಡಿಎಂಕೆಗೆ ವಿಪಕ್ಷವಾಗಿ ಉದಯವಾಗುತ್ತಿರುವ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ಗೆ ಎದುರು ರಾಜಕೀಯ ದಾಳವಾಗಿ ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಮಾಡಲಾಗುತ್ತಿದ್ದೆ ಎಂದೇ ನಂಬಲಾಗಿತ್ತು. ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡದೇ ಇರುವಲ್ಲಿ ಡಿಎಂಕೆಯ ಕೈವಾಡವೂ ಇದೆ ಎನ್ನಲಾಗಿತ್ತು. ಆದರೆ ಈಗ ಸ್ವತಃ ‘ಪರಾಶಕ್ತಿ’ ಸಿನಿಮಾಕ್ಕೂ ಸಹ ಸಿಬಿಎಫ್​​ಸಿ 23 ಕಟ್​​ಗಳನ್ನು ಸೂಚಿಸಿದ್ದು, ಚಿತ್ರತಂಡಕ್ಕೆ ಆಘಾತ ನೀಡಿದೆ.

‘ಪರಾಶಕ್ತಿ’ ಸಿನಿಮಾ ಶಿವಕಾರ್ತಿಕೇಯನ್ ಅವರ 25ನೇ ಸಿನಿಮಾ ಆಗಿದ್ದು, ಶ್ರೀಲೀಲಾಗೆ ಇದು ಮೊದಲ ತಮಿಳು ಸಿನಿಮಾ ಆಗಿದೆ. ಸಿನಿಮಾವನ್ನು 125 ಕೋಟಿ ಬಜೆಟ್​​ನಲ್ಲಿ ನಿರ್ಮಾಣ ಮಾಡಲಾಗಿದ್ದು, ಸಿನಿಮಾದ ಮೇಲೆ ಶಿವಕಾರ್ತಿಕೇಯನ್​​ಗೆ ಭಾರಿ ನಿರೀಕ್ಷೆ ಇತ್ತು. ಆದರೆ ಈಗ ಸಿನಿಮಾದ ಬಿಡುಗಡೆಯೇ ಇಕ್ಕಟ್ಟಿಗೆ ಸಿಲುಕಿದಂತಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕುಂದಾಪುರದಲ್ಲಿ 5 ಕೋತಿಗಳ ಸಾವು: ಮಲೆನಾಡಲ್ಲಿ ಮಂಗನ ಕಾಯಿಲೆ ಆತಂಕ – Kannada News | Kundapur: Five Monkeys Die, Raising Fears of Monkey Disease in Malnad Region

ಉಡುಪಿ, ಜನವರಿ 08: ಮಲೆನಾಡು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ (Monkeypox virus) ಆತಂಕ ಹೆಚ್ಚುತ್ತಿರುವ ನಡುವೆ ಕುಂದಾಪುರ ತಾಲ್ಲೂಕಿನ ಹೊಸಂಗಡಿ ಭಾಗದಲ್ಲಿ ಮಂಗಗಳ ಮೃತ ದೇಹ ಪತ್ತೆಯಾಗಿದೆ. ಇದರಿಂದ ಕಳೆದ ಒಂದು ವಾರದಲ್ಲಿ ಆ ಪ್ರದೇಶದಲ್ಲಿ ಸಾವನ್ನಪ್ಪಿದ ಮಂಗಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಹಾಗೂ ಅರಣ್ಯ ಇಲಾಖೆ ತೀವ್ರ ನಿಗಾ ವಹಿಸಿ ಸ್ಯಾಂಪಲ್‌ ಕಲೆ ಹಾಕಿದೆ. ಆದರೆ ಇದುವರೆಗೂ ಮಂಗಗಳ ಸಾವಿಗೆ ನಿಖರ ಕಾರಣ ಪತ್ತೆಯಾಗದ ಹಿನ್ನಲೆ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ರಾಜ್ಯದಲ್ಲಿ ಮತ್ತೊಮ್ಮೆ ಮಂಗನ ಕಾಯಿಲೆ ಸದ್ದು ಮಾಡುತ್ತಿದೆ. ಮಲೆನಾಡು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ತೀವ್ರತೆ ಹೆಚ್ಚಿದ ಹಿನ್ನೆಲೆಯಲ್ಲಿ ಈ ಕಾಯಿಲೆ ನೆರೆ ಜಿಲ್ಲೆ ಉಡುಪಿಯಲ್ಲೂ ಭೀತಿ ಹುಟ್ಟಿಸಿದೆ. ಮುಖ್ಯವಾಗಿ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇತ್ತೀಚೆಗೆ ಮಂಗಗಲು ಸಾವನ್ನಪ್ಪಿರುವ ಪ್ರಕರಣಗಳು ಸಹಜವಾಗಿಯೇ ಈ ಭಾಗದ ಜನರಲ್ಲಿ ಆತಂಕವನ್ನು ಹೆಚ್ಚುವಂತೆ ಮಾಡಿದೆ.

ಇದನ್ನೂ ಓದಿ: ಮಂಗನ ಕಾಯಿಲೆ ಭೀತಿ: ಶಿವಮೊಗ್ಗದ ಬಳಿಕ, ಶಿರಸಿಯಲ್ಲೂ ಲ್ಯಾಬ್​​ ಆರಂಭಕ್ಕೆ ನಿರ್ಧಾರ

ಕಳೆದ ದಿನಗಳ ಅಂತರದಲ್ಲಿ ಜಿಲ್ಲೆಯ ಕುಂದಾಪುರ ತಾಲೂಕು ಹೊಸಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಾರೂರುರಲ್ಲಿ ಐದು ಕೋತಿಗಳು ಸಾವನ್ನಪ್ಪಿದೆ. ಐದರಲ್ಲಿ ನಾಲ್ಕು ಮಂಗಗಳು ಸಂಪೂರ್ಣವಾಗಿ ಕೊಳೆತು ಹೋಗಿದ್ದು, ಒಂದು ಮಂಗದ ಶವ ಪರೀಕ್ಷೆ ನಡೆಸಿ ಸ್ಯಾಂಪಲ್‌ ಸಂಗ್ರಹಿಸಿ ಪರಿಶೀಲನೆ ಕಳುಹಿಸುವ ಕೆಲಸವನ್ನು ಜಿಲ್ಲಾ ಆರೋಗ್ಯ ಇಲಾಖೆ ನಡೆಸಿದೆ. ಸದ್ಯ ಕಳೆದ ವರ್ಷದಂತೆ ಇದೇ ಪ್ರದೇಶದಲ್ಲಿ ಐದು ಮಂಗಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.

30 ವರ್ಷಗಳ ಬಳಿಕ ಮಂಗನ ಕಾಯಿಲೆ

ಸದ್ಯ ಹೊಸಂಗಡಿ ಭಾಗದಲ್ಲಿ ಮಂಗಗಳ ಸಾವಿನ ಬಳಿಕ ಮತ್ತೆ ಆತಂಕ ಮನೆ ಮಾಡಿದೆ. 2019ರಲ್ಲಿ ಉಡುಪಿ ಜಿಲ್ಲೆಗೆ ಸುಮಾರು 30 ವರ್ಷಗಳ ಬಳಿಕ ಮಂಗನ ಕಾಯಿಲೆ ಕಾಣಿಸಿಕೊಂಡಿತ್ತು. ಮಂಗನ ಕಾಯಿಲೆಯ ಅಬ್ಬರಕ್ಕೆ ಕರಾವಳಿ ಮತ್ತು ಮಲೆನಾಡಿನ ಜನ ತತ್ತರಿಸಿ ಹೋಗಿದ್ದರು. ಮಣಿಪಾಲದ ಕೆಎಂಸಿ ಆಸ್ಪತ್ರೆಯೊಂದರಲ್ಲೇ 73 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿತ್ತು. 2019ರಲ್ಲಿ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 12 ಮಂದಿ ಕೆಎಫ್‌ಡಿ ಸೋಂಕಿಗೆ ಬಲಿಯಾಗಿದ್ದು, 344 ಜನರಲ್ಲಿ ಸೋಂಕು ದೃಢಪಟ್ಟಿತ್ತು. ಉತ್ತರ ಕನ್ನಡ ಜಿಲ್ಲೆಯ 85 ಮಂದಿಗೆ ಸೋಂಕು ದೃಢಪಟ್ಟು ಮೂವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.

ಉಡುಪಿಯಲ್ಲಿ ಇಬ್ಬರು, ಮೈಸೂರು, ಬೆಳಗಾವಿ, ಚಿಕ್ಕಮಗಳೂರು ಹಾಗೂ ಹಾವೇರಿಯಲ್ಲಿ ತಲಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿತ್ತು. ಕಳೆದ ವರ್ಷವು ಕೂಡ ಓರ್ವ ಮಹಿಳೆ ಮಂಗನ ಕಾಯಿಲೆಯಿಂದ ಮೃತಪಟ್ಟಿರುವ ವಿಚಾರ ಮಾಸುವ ಮುನ್ನವೇ ಮತ್ತೆ ಜಿಲ್ಲೆಯಲ್ಲಿ ಮಂಗಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.

ಮಂಗಗಳ ಸಾವಿಗೆ ಕಾರಣ ತಿಳಿಸದ ಆರೋಗ್ಯ ಇಲಾಖೆ

ಇನ್ನು ಆರೋಗ್ಯ ಇಲಾಖೆ ಸತ್ತ ಮಂಗನ ದೇಹದ ಸ್ಯಾಂಪಲ್‌ ಪಡೆದು ತೆರಳಿದ ಬಳಿಕ ಇದುವರೆಗೂ ಸಾವಿಗೆ ಕಾರಣ ತಿಳಿಸದೆ ಇರುವುದು ಹೊಸಂಗಡಿ ಭಾಗದ ಸ್ಥಳೀಯರ ಆತಂಕ ಹೆಚ್ಚುವಂತೆ ಮಾಡಿದೆ. ಇನ್ನು ಕಾರೂರುನಲ್ಲಿರುವ ನೀರಿನ ಮೂಲದ ಬಳಿಯೇ ಐದು ಮಂಗಳ ಶವ ಪತ್ತೆಯಾಗಿರುವುದು ಮತ್ತು ಪ್ರತಿ ವರ್ಷವು ಕೂಡ ಇದೇ ಪರಿಸರದಲ್ಲಿ ಮಂಗಗಳು ಸಾಯುತ್ತಿರುವುದು ಸ್ಥಳೀಯರಲ್ಲಿ ಸಾಕಷ್ಟು ಪ್ರಶ್ನೆ ಹುಟ್ಟು ಹಾಕಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಮತ್ತೆ ವಕ್ಕರಿಸಿದ ಮಂಗನ ಕಾಯಿಲೆ: ಕಾಡಿನಂಚಿನ ಜನರಲ್ಲಿ ಆತಂಕ

ಒಟ್ಟಾರೆಯಾಗಿ ಮಾರಣಾಂತಿಕ ಮಂಗನ ಕಾಯಿಲೇ ಮಲೆನಾಡಿನಲ್ಲಿ ಹೆಚ್ಚುತ್ತಿರುವ ಹಿನ್ನಲೆ ಪಶ್ಚಿಮ ಘಟ್ಟದ ಗಡಿ ಭಾಗದ ಜನರಿಗೆ ಆತಂಕ ಹೆಚ್ಚಾಗಿದೆ. ಜಿಲ್ಲಾ ಆರೋಗ್ಯ ಇಲಾಖೆ ಶೀಘ್ರದಲ್ಲಿ ಮಂಗಗಳ ಸಾವಿಗೆ ನಿಖರ ಕಾರಣದ ಜೊತೆಗೆ ಹೊಸಂಗಡಿ ಸಿದ್ಧಾಪುರ ಭಾಗದಲ್ಲಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link