New Year 2026: ಹೊಸ ವರ್ಷಾಚರಣೆಗೆ ಗುಡ್ ನ್ಯೂಸ್: ತಡರಾತ್ರಿ ವರೆಗೂ ಇರುತ್ತೆ ನಮ್ಮ ಮೆಟ್ರೋ ರೈಲು ಸಂಚಾರ! – Kannada News | New Year 2026: Namma Metro Extends Late Night Train Services in Bengaluru for New Year Celebrations, timing details here
ನಮ್ಮ ಮೆಟ್ರೋ ರೈಲು (ಸಾಂದರ್ಭಿಕ ಚಿತ್ರ) ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯ (New Year) ಸಂಭ್ರಮ ಕಳೆಗಟ್ಟಿದ್ದು, ಎಲ್ಲೆಡೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇದೇ ವೇಳೆ, ಹೊಸ ವರ್ಷಾಚರಣೆ ಪಾರ್ಟಿಗಳಲ್ಲಿ ಭಾಗವಹಿಸುವವರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಕೂಡ ರಾತ್ರಿ ಸಂಚಾರದ ಸಮಯ ವಿಸ್ತರಣೆ ಮಾಡಿದೆ. ಈ ಕುರಿತು ಪ್ರಕಟಣೆ ಮೂಲಕ ಬಿಎಂಆರ್ಸಿಎಲ್ (BMRCL) ಮಾಹಿತಿ ಹಂಚಿಕೊಂಡಿದ್ದು, ಯಾವ ಮಾರ್ಗಗಳಲ್ಲಿ ಎಷ್ಟು ಗಂಟೆಗೆ ಕೊನೆಯ ಮೆಟ್ರೋ ಸಂಚಾರ ಮಾಡಲಿದೆ ಎಂಬ ಮಾಹಿತಿ ನೀಡಿದೆ. ಯಾವ ನಿಲ್ದಾಣದಿಂದ…