78 ವರ್ಷ ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಬೇಕಿತ್ತು; ಸದ್ಗುರು ಅಭಿಮತ – Kannada News | 78 Year Old Siliguri Corridor Should Have Been Corrected In 1971 says Sadhguru
ಬೆಂಗಳೂರು, ಡಿಸೆಂಬರ್ 29: ಬಾಂಗ್ಲಾದೇಶದ ಬೆದರಿಕೆಗಳ ನಡುವೆಯೇ ಸಿಲಿಗುರಿ ಕಾರಿಡಾರ್ ಬಗ್ಗೆ ಇಶಾ ಫೌಂಡೇಶನ್‌ನ (Isha Foundation) ಸಂಸ್ಥಾಪಕ ಸದ್ಗುರು (Sadhguru) ಪ್ರತಿಕ್ರಿಯೆ ನೀಡಿದ್ದಾರೆ. “78 ವರ್ಷಗಳಷ್ಟು ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಿಕೊಂಡಿದ್ದರೆ ಈ ಬಿಕ್ಕಟ್ಟು ಎದುರಾಗುತ್ತಿರಲಿಲ್ಲ” ಎಂದು ಟೀಕಿಸಿದ್ದಾರೆ. ಇದನ್ನು ದಶಕಗಳ ಹಿಂದೆಯೇ ಸರಿಪಡಿಸಬೇಕಾಗಿತ್ತು. ಚಿಕನ್ ನೆಕ್ ಎಂದು ಕರೆಯಲ್ಪಡುವ ಈ ಜಾಗವನ್ನು ಆನೆಯ ಕುತ್ತಿಗೆಯಾಗಿ ಮಾಡಬೇಕಿದೆ ಎಂದಿದ್ದಾರೆ. ಸಿಲಿಗುರಿ ಕಾರಿಡಾರ್ ಕುರಿತು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ನೀಡಿದ ಹೇಳಿಕೆಗಳ ಕುರಿತು ಬೆಂಗಳೂರಿನಲ್ಲಿ…