ಕರ್ನಾಟಕ ಕಾಂಗ್ರೆಸ್ ಸರ್ಕಾರದ ‘ಬುಲ್ಡೋಜರ್ ರಾಜ್’ ನೀತಿಯಿಂದ ಬೀದಿಗೆ ಬಂದ ಮುಸ್ಲಿಂ ಕುಟುಂಬ: ಪಿಣರಾಯಿ ವಿಜಯನ್ ಆಕ್ರೋಶ – Kannada News | Bengaluru Demolition: Pinarayi Vijayan Condemns Karnataka’s ‘Bulldozer Policy’
ಬೆಂಗಳೂರು, ಡಿ.27: ಕರ್ನಾಟಕದ ರಾಜ್ಯ ಸರ್ಕಾರಕ್ಕೂ ಉತ್ತರ ಪ್ರದೇಶದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ (Bengaluru) ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಅಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು. ಇದೀಗ ಏಕಾಏಕಿ ಬಂದು ಮನೆಗಳನ್ನು ನೆಲಸಮ ಮಾಡಿದ್ರೆ ಅವರು…