ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ
ಬೆಂಗಳೂರು, ಜೂನ್ 11: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ಹೊಸ ನಿಯಮಾವಳಿಗಳು ಜಾರಿಯಾಗುತ್ತಿವೆ. ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದ್ದು, ಒಂದು ತಿಂಗಳೊಳಗೆ ಬಯೋಮೆಟ್ರಿಕ್ ದೃಢೀಕರಣ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಈ ನಿಯಮ ಪಾಲಿಸದಿದ್ದರೆ ಫಲಾನುಭವಿಗಳ ಖಾತೆಗೆ 2,000 ರೂಪಾಯಿ ಹಣ ಜಮಾವಣೆ ನಿಲ್ಲಲಿದೆ. ಬಯೋಮೆಟ್ರಿಕ್ ದೃಢೀಕರಣವನ್ನು ಬೆಂಗಳೂರು ಒನ್, ಗ್ರಾಮ ಒನ್, ಸೇವಾ ಕೇಂದ್ರ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮಾಡಿಸಬಹುದು. ಇದಕ್ಕಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್…