ಒಲಿಂಪಿಕ್ಸ್‌ಗೆ ಕೊಹ್ಲಿಯನ್ನು ಆಯ್ಕೆ ಮಾಡಿ: ಮಾಜಿ ಆಟಗಾರನ ಸಲಹೆ! – Kannada News
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ವಿರಾಟ್ ಕೊಹ್ಲಿಯನ್ನು ಕೂಡ ಆಯ್ಕೆ ಮಾಡಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಎಸ್. ಶ್ರೀಶಾಂತ್ ಆಗ್ರಹಿಸಿದ್ದಾರೆ. ‘ಸ್ಪೋರ್ಟ್ಸ್ ವಿತ್ ರವಿಶ್’ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶ್ರೀಶಾಂತ್, ಒಲಿಂಪಿಕ್ಸ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ವೈಭವ್ ಸೂರ್ಯವಂಶಿಯನ್ನು ಜೊತೆಯಾಗಿ ಕಣಕ್ಕಿಳಿಸಬೇಕು. ಇದರಿಂದ ಜಾಗತಿಕ ಕ್ರೀಡಾಕೂಟದಲ್ಲಿ ಕ್ರಿಕೆಟ್ ಜನಪ್ರಿಯತೆ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕ್ರಿಕೆಟ್ ಜಗತ್ತಿನ ‘ಡ್ರೀಮ್ ಜೋಡಿ’ 128 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಮರಳಿ ಸೇರ್ಪಡೆಯಾಗಲು…