Headlines

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ರಿಲೀಫ್​, ಬಂಧನದಿಂದ ಪಾರು – Kannada News | Karnataka High Court Grants interim bail to BJP MLA Byrathi Basavaraj In Rowdy Sheeter Biklu Shiva Murder Case

ಬೆಂಗಳೂರು, (ಡಿಸೆಂಬರ್ 26): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrathi Basavaraj) ಮಧ್ಯಂತರ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಜಾಮೀನು ಅರ್ಜಿ ವಜಾಗೊಳಿಸಿದ್ದರಿಂದ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂದು (ಡಿಸೆಂಬರ್ 26) ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಹೈಕೋರ್ಟ್​​ ಪೀಠ, ಬೈರತಿ ಬಸವರಾಜ್​​ಗೆ ಮಧ್ಯಂತ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ನಿರೀಕ್ಷಣಾ ಜಾಮೀನು…

Read More

ಅಶ್ವಿನಿ ಪುನೀತ್ ರಾಜ್​​ಕುಮಾರ್ ಮೆಚ್ಚಿದ ‘ಪ್ರಣಯ ಪಯಣ’ ಗೀತೆ; ಡಿ.27ಕ್ಕೆ ಬಿಡುಗಡೆ – Kannada News | Pranaya Payana new Kannada Music Video to be released on PRK Audio

ಹೊಸ ಪ್ರತಿಭೆಗಳಿಗೆ ಪುನೀತ್ ರಾಜ್​​ಕುಮಾರ್ ಅವರು ಯಾವಾಗಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದರು. ಈಗ ಆ ಕೆಲಸವನ್ನು ಅಶ್ವಿನಿ ಪುನೀತ್ ರಾಜ್​​ಕುಮಾರ್ (Ashwini Puneeth Rajkumar) ಅವರು ಮಾಡುತ್ತಿದ್ದಾರೆ. ‘ಪಿಆರ್​ಕೆ ಪ್ರೊಡಕ್ಷನ್ಸ್’ ಮತ್ತು ‘ಪಿಆರ್​ಕೆ ಆಡಿಯೋ’ ಕಂಪನಿ ಮೂಲಕ ಹೊಸಬರ ಬೆನ್ನುತಟ್ಟುತ್ತಿದ್ದಾರೆ. ಅದಕ್ಕೆ ಹೊಸ ಉದಾಹರಣೆ ಇಲ್ಲಿದೆ. ಅರ್ಜುನ್ ಕಿಶೋರ್ ಚಂದ್ರ ಅವರು ಸಿದ್ಧಪಡಿಸಿದ ಹೊಸ ವಿಡಿಯೋ ಸಾಂಗ್​ ಅನ್ನು ‘ಪಿಆರ್​ಕೆ ಆಡಿಯೋ’ (PRK Audio) ಮೂಲಕ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ. ಅರ್ಜುನ್ ಕಿಶೋರ್…

Read More

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು, 20 ಮಂದಿಗೆ ಗಾಯ – Kannada News | 8 people killed more than 20 injured as massive blast hits mosque during Friday prayers in Syria

ನವದೆಹಲಿ, ಡಿಸೆಂಬರ್ 26: ಸಿರಿಯಾದ ಹೋಮ್ಸ್ ಮಸೀದಿಯಲ್ಲಿ ಇಂದು ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ (Syria Blast) 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ಸ್ಫೋಟ ಸಂಭವಿಸಿ 8 ಜನರು ಸಾವನ್ನಪ್ಪಿದ್ದಾರೆ. ಸರ್ಕಾರಿ ನಿಯಂತ್ರಿತ ಜಿಲ್ಲೆಯಾದ ವಾಡಿ ಅಲ್-ದಹಾಬ್ ನೆರೆಹೊರೆಯಲ್ಲಿರುವ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ. ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು…

Read More

ಕ್ರಿಸ್ಮಸ್ ಸಂಭ್ರಮದ ಮಧ್ಯೆ ಭೀಕರ ದುರಂತ: ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Nelamangala Car Accident: Two Family Members Killed, Four in Critical Condition

ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು ನೆಲಮಂಗಲ, ಡಿಸೆಂಬರ್​​ 26: ಕ್ರಿಸ್ ಮಸ್ ಹಬ್ಬದ ರಜೆಗೆಂದು ಹುಟ್ಟೂರಿಗೆ ಹೋಗಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (accident) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು (death), ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟಗೆರೆ ಕ್ರಾಸ್​ನಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ಮೂಲದ ಹರೀಶ್(39) ಮತ್ತು ವೀರಭದ್ರ(80) ಮೃತರು. ಕಾರಿನಲ್ಲಿದ್ದ ಗೌರಮ್ಮ, ಮೈತ್ರಿ, ಸಿರಿ, ವಂದನಾಗೆ ಗಂಭೀರ ಗಾಯಗಳಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ….

Read More

ಆಪರೇಷನ್ ಸಿಂಧೂರ್ ವೇಳೆ ಸೈನಿಕರಿಗೆ ನೀರು, ಟೀ, ಲಸ್ಸಿ ನೀಡಿದ್ದ 10 ವರ್ಷದ ಬಾಲಕನ ದೇಶಭಕ್ತಿಗೆ ವಿಶೇಷ ಪುರಸ್ಕಾರ – Kannada News | Armys youngest civil warrior Shravan Singh Honoured With Pradhan Mantri Bal Puraskar

ನವದೆಹಲಿ, ಡಿಸೆಂಬರ್ 26: ಪಂಜಾಬ್​ನ ಫಿರೋಜ್‌ಪುರದ ಚಕ್ ತರಣ್ ವಾಲಿ ಗ್ರಾಮದ 10 ವರ್ಷದ ಶ್ರವಣ್ ಸಿಂಗ್ (Shravan Singh) ಆಪರೇಷನ್ ಸಿಂಧೂರ್ ಸಮಯದಲ್ಲಿ ಹೆಚ್ಚಿನ ಅಪಾಯದ ಗಡಿ ಪೋಸ್ಟ್‌ಗಳಲ್ಲಿ ಸೇವಾ ನಿರತರಾಗಿದ್ದ ಸೈನಿಕರಿಗೆ ಚಹಾ, ಲಸ್ಸಿ, ನೀರು ನೀಡುವ ಮೂಲಕ ಅವರ ದಾಹ ನೀಗಿಸುತ್ತಿದ್ದ. ಭಾರತ ಮತ್ತು ಪಾಕಿಸ್ತಾನದ ನಡುವೆ ಗಡಿಯಲ್ಲಿ ದಾಳಿ ನಡೆಯುತ್ತಿದ್ದುದರಿಂದ ಅದು ಅಪಾಯದ ಸ್ಥಳವಾಗಿದ್ದರೂ ಶ್ರವಣ್ ನಿಸ್ವಾರ್ಥವಾಗಿ ಭಾರತೀಯ ಸೇನಾ ಸಿಬ್ಬಂದಿಗೆ ನೀರು, ಹಾಲು ಮತ್ತು ಚಹಾವನ್ನು ನೀಡುತ್ತಿದ್ದ. ಆ ಸಮಯದಲ್ಲಿ…

Read More

IND-W vs SL-W: ಸತತ 3ನೇ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್‌ಪ್ರೀತ್; ಭಾರತ ತಂಡದಲ್ಲಿ 2 ಬದಲಾವಣೆ – Kannada News | India Women vs Sri Lanka Women 3rd T20: IND W Aims to Seal Series, Playing XI and Toss

ಭಾರತ ಮತ್ತು ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಈ ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ 2-0 ಅಂತರದ ಮುನ್ನಡೆ ಸಾಧಿಸಿದ್ದು, ಇದೀಗ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಇನ್ನೇರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ನೋಡುತ್ತಿದೆ. ಇತ್ತ ಮೊದಲೆರಡು ಪಂದ್ಯಗಳಲ್ಲಿ ಏಕಪಕ್ಷೀಯ ಸೋಲು ಅನುಭವಿಸಿದ್ದ ಶ್ರೀಲಂಕಾ ತಂಡ,…

Read More

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು – Kannada News | Bigg Boss Kannada: Raghu became emotion after seeing his family

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ. ಸ್ಪರ್ಧಿಗಳ ಮನೆ ಸದಸ್ಯರುಗಳು ಒಬ್ಬೊಬ್ಬರಾಗಿ ಬಿಗ್​​ಬಾಸ್ ಮನೆಗೆ ಬರುತ್ತಿದ್ದಾರೆ. ಬಹುತೇಕ ಎಲ್ಲ ಸ್ಪರ್ಧಿಗಳ ಮನೆಯವರು ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಘು ಅವರ ಕುಟುಂಬದವರು ಸಹ ಮನೆಗೆ ಬಂದಿದ್ದಾರೆ. ರಘು, ಬಿಗ್​​ಬಾಸ್ ಮನೆಯ ಟಫ್ ಮ್ಯಾನ್. ಭಾರಿ ದೈತ್ಯ ದೇಹಿ, ಟಾಸ್ಕ್​​ಗಳಲ್ಲಿಯೂ ಸಖತ್ ಮುಂದೆ, ಅಡುಗೆ ಮಾಡುವುದಕ್ಕೂ ಸೈ, ಕೆಲಸ ಮಾಡುವುದಕ್ಕೂ ಸೈ. ಟಫ್ ಸ್ಪರ್ಧಿ ಎನಿಸಿಕೊಂಡಿದ್ದರೂ ಸಹ ಮನೆಯವರನ್ನು ನೋಡಿದ ಕೂಡಲೇ ಕಣ್ಣೀರು ಹಾಕಿದ್ದಾರೆ…

Read More

ತಮ್ಮ ಹೆಸರು ಬದಲಿಸಿದ್ದೇಕೆ ಅಕ್ಷಯ್ ಕುಮಾರ್? ಕಾರಣ ವಿವರಿಸಿದ ನಟ – Kannada News | Why Akshay Kumar changed his name from Rajiv to Akshay

ಅಕ್ಷಯ್ ಕುಮಾರ್ (Akshay Kumar) ಬಾಲಿವುಡ್​ನ ಸ್ಟಾರ್ ನಟರುಗಳಲ್ಲಿ ಒಬ್ಬರು. ಈಗಲೂ ಅತ್ಯಂತ ಬ್ಯುಸಿ ಸ್ಟಾರ್ ನಟರೆಂದರು ಅದು ಅಕ್ಷಯ್ ಕುಮಾರ್. ವರ್ಷಕ್ಕೆ ಐದು ಆರು ಸಿನಿಮಾಗಳಲ್ಲಿ ಅವರು ನಟಿಸುತ್ತಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರಿಗೆ ದೊಡ್ಡ ಯಶಸ್ಸು ದೊರೆತಿಲ್ಲವಾದರೂ ಅವರಿಗೆ ಬೇಡಿಕೆ ಏನೂ ಕಡಿಮೆ ಆಗಿಲ್ಲ. ಯಾವುದೇ ಗಾಡ್​ಫಾದರ್​​ಗಳಿಲ್ಲದೆ ಚಿತ್ರರಂಗಕ್ಕೆ ಬಂದ ಅಕ್ಷಯ್ ಕುಮಾರ್, ಸ್ಟಾರ್ ನಟರಾಗಿ ಬೆಳೆದು ನಿಂತಿದ್ದಾರೆ. ಅಂದಹಾಗೆ ಅಕ್ಷಯ್ ಕುಮಾರ್ ಅವರ ನಿಜ ಹೆಸರು ಅದಲ್ಲ ಬದಲಿಗೆ ಅವರ ಹೆಸರು ರಾಜೀವ್…

Read More

ಪುರುಷರು ರಾತ್ರಿ ಮಲಗುವ ಮುನ್ನ ಕಡ್ಡಾಯವಾಗಿ 2 ಹುರಿದ ಖರ್ಜೂರ ಸೇವನೆ ಮಾಡಬೇಕು ಯಾಕೆ ಗೊತ್ತಾ? – Kannada News | Health Benefits of Dates: What Experts Say

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕಾಗಿಯೇ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಅದಲ್ಲದೆ ಈ ಸಮಯದಲ್ಲಿ, ಆಹಾರ ಪದ್ಧತಿಯೂ ಬದಲಾಗುವುದರಿಂದ ಈ ಋತುವಿನಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಒಣ ಹಣ್ಣುಗಳ ಸೇವನೆ ಮಾಡುವುದು ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾದದ್ದು ಖರ್ಜೂರ (Dates). ಇದನ್ನು ಹುರಿದು ಸೇವನೆ ಮಾಡುವುದರಿಂದ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆಯುರ್ವೇದದಲ್ಲಿಯೂ ಇದನ್ನು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಾಗಾದರೆ ಹುರಿದ ಖರ್ಜೂರ ಸೇವನೆ ಮಾಡುವುದರಿಂದ ಯಾವ…

Read More

ದೇಶಿ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಅಬ್ಬರ; ಭಾರತ ತಂಡಕ್ಕೆ ಆಯ್ಕೆ ಯಾವಾಗ? – Kannada News | Devdutt Padikkal’s Vijay Hazare Century Spree: Is an India Call Up Next?

ಕಳೆದ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಕೆಲವೇ ಕೆಲವು ಇನ್ನಿಂಗ್ಸ್​ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕನ್ನಡಿಗ ದೇವದತ್ ಪಡಿಕ್ಕಲ್‌, ಇದೀಗ ದೇಶಿ ಅಂಗಳದಲ್ಲಿ ಶತಕಗಳ ಮಳೆ ಸುರಿಸುತ್ತಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ಮೊದಲ ಪಂದ್ಯದಲ್ಲಿ 147 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದ ಪಡಿಕ್ಕಲ್, ಕರ್ನಾಟಕ ತಂಡ ದಾಖಲೆಯ ಮೊತ್ತವನ್ನು ಬೆನ್ನಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಈ ಟೂರ್ನಿಯ ಎರಡನೇ ಪಂದ್ಯದಲ್ಲೂ ಮಿಂಚಿರುವ ದೇವದತ್ ಸತತ ಎರಡನೇ ಶತಕ ಸಿಡಿಸಿದ್ದಾರೆ. ಜಾರ್ಖಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 118…

Read More