ಮಂಗನ ಕಾಯಿಲೆ ಭೀತಿ: ಶಿವಮೊಗ್ಗದ ಬಳಿಕ, ಶಿರಸಿಯಲ್ಲೂ ಲ್ಯಾಬ್ ಆರಂಭಕ್ಕೆ ನಿರ್ಧಾರ – Kannada News | New KFD Lab in Sirsi, Karnataka Boosts Fight Against Monkey Fever
ಬೆಂಗಳೂರು, ಡಿಸೆಂಬರ್ 24: ಮಂಗನ ಕಾಯಿಲೆ ಭೀತಿ ಹಿನ್ನೆಲೆ ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೊಂದು KFD ಪರೀಕ್ಷಾ ಲ್ಯಾಬ್ ತೆರೆಯಲು ನಿರ್ಧರಿಸಲಾಗಿದೆ. ಶಿವಮೊಗ್ಗದಲ್ಲಿ ಒಂದು ಲ್ಯಾಬ್ ಕಾರ್ಯಾಚರಣೆ ಚಾಲ್ತಿಯಲ್ಲಿರುವ ನಡುವೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮತ್ತೊಂದು ಪರೀಕ್ಷಾ ಕೇಂದ್ರ ತೆರೆಯಲು ತಯಾರಿ ನಡೆದಿದೆ. ಮಂಗನ ಕಾಯಿಲೆಯನ್ನು ಗುರುತಿಸಲು ಹಾಗೂ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು ಆರೋಗ್ಯ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. 13 ಜನರಲ್ಲಿ ಮಂಗನ ಕಾಯಿಲೆ ಪತ್ತೆ ಪ್ರತಿವರ್ಷವೂ ಅಕ್ಟೋಬರ್ನಿಂದ ಜೂನ್ವರೆಗೆ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ…