Category Archives: Blog

Your blog category

412 ರನ್​ಗಳ ಬೃಹತ್ ಗುರಿ; 147 ರನ್​ ಸಿಡಿಸಿದ ದೇವದತ್ ಪಡಿಕ್ಕಲ್ – Kannada News | Karnataka vs Jharkhand: Devdutt Padikkal Century in High Scoring Vijay Hazare Game

ಇದು ಮಾತ್ರವಲ್ಲದೆ ಮೊದಲ ವಿಕೆಟ್​ಗೆ ದೇವದತ್ ಪಡಿಕ್ಕಲ್ ಹಾಗೂ ಮಯಾಂಕ್ ಅಗರ್ವಾಲ್ 114 ರನ್​ಗಳ ಭರ್ಜರಿ ಜೊತೆಯಾಟವನ್ನು ನೀಡಿದರು. ಇವರಿಬ್ಬರು ಕೇವಲ 11.5 ಓವರ್​ಗಳಲ್ಲಿ ತಂಡವನ್ನು ಇಷ್ಟು ಮೊತ್ತಕ್ಕೆ ಕೊಂಡೊಯ್ದಿದ್ದು, ಇವರಿಬ್ಬರ ಸ್ಫೋಟಕ ಆಟಕ್ಕೆ ಸಾಕ್ಷಿಯಾಗಿದೆ.

Source link

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಂ ಇಂಡಿಯಾದ ಐವರಿಗೆ ಅಗ್ರಸ್ಥಾನ – Kannada News | ICC Rankings: 5 Indian Cricketers Crowned No.1; Suryakumar Yadav Drops Out of Top 10

ಐಸಿಸಿ ಮೂರು ಮಾದರಿಗಳ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಒಂದಲ್ಲ, ಎರಡಲ್ಲ, ಐದು ಭಾರತೀಯ ಆಟಗಾರರು ಈ ಶ್ರೇಯಾಂಕದಲ್ಲಿ ನಂ. 1 ಸ್ಥಾನವನ್ನು ಅಲಂಕರಿಸಿದ್ದಾರೆ. ಟೆಸ್ಟ್, ಏಕದಿನ, ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾದ ಆಟಗಾರರು ಪ್ರಾಬಲ್ಯ ಸಾಧಿಸಿದ್ದಾರೆ.

ರೋಹಿತ್ ಶರ್ಮಾ ಏಕದಿನ ಶ್ರೇಯಾಂಕದಲ್ಲಿ ನಂ. 1 ಬ್ಯಾಟ್ಸ್‌ಮನ್ ಆಗಿ ಮುಂದುವರೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಟೆಸ್ಟ್ ಶ್ರೇಯಾಂಕದಲ್ಲಿ ನಂ. 1 ಬೌಲರ್ ಆಗಿದ್ದರೆ, ರವೀಂದ್ರ ಜಡೇಜಾ ಟೆಸ್ಟ್ ಆಲ್‌ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಅಭಿಷೇಕ್ ಶರ್ಮಾ ಟಿ 20 ಶ್ರೇಯಾಂಕದಲ್ಲಿ ನಂ. 1 ಬ್ಯಾಟ್ಸ್‌ಮನ್ ಆಗಿದ್ದರೆ, ವರುಣ್ ಚಕ್ರವರ್ತಿ ನಂ. 1 ಟಿ20 ಬೌಲರ್ ಎನಿಸಿಕೊಂಡಿದ್ದಾರೆ.

ಆದಾಗ್ಯೂ ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್​ಗೆ ಆಘಾತ ಎದುರಾಗಿದೆ. ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಸೂರ್ಯ, ಟಿ20 ಶ್ರೇಯಾಂಕದಲ್ಲಿ ಅಗ್ರ 10 ರಿಂದ ಹೊರಬಿದ್ದಿದ್ದಾರೆ. ಕಳೆದ ಎರಡು ವರ್ಷಗಳಿಂದ ಮೌನಕ್ಕೆ ಶರಣಾಗಿರುವ ಸೂರ್ಯ ಆಡಿರುವ 21 ಟಿ20 ಪಂದ್ಯಗಳಲ್ಲಿ 13 ಸರಾಸರಿಯಲ್ಲಿ ಕೇವಲ 218 ರನ್ ಗಳಿಸಿದ್ದಾರೆ. ಇದರಿಂದಾಗಿ ಸೂರ್ಯಕುಮಾರ್ ಯಾದವ್ ಟಿ20 ಶ್ರೇಯಾಂಕದಲ್ಲಿ ನಿರಂತರವಾಗಿ ಕುಸಿತ ಕಂಡಿದ್ದಾರೆ.

ಇತ್ತ ಜಸ್ಪ್ರೀತ್ ಬುಮ್ರಾ ಮತ್ತು ವರುಣ್ ಚಕ್ರವರ್ತಿ ಕೂಡ ಐಸಿಸಿ ಶ್ರೇಯಾಂಕದಲ್ಲಿ ನಂ.1 ಸ್ಥಾನವನ್ನು ಕಳೆದುಕೊಳ್ಳುವ ಹಂತದಲ್ಲಿದ್ದಾರೆ. ಪ್ರಸ್ತುತ ಬುಮ್ರಾ 879 ರೇಟಿಂಗ್ ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ಆದರೆ ಆಶಸ್ ಸರಣಿಯ ಕೇವಲ ಒಂದು ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಪ್ಯಾಟ್ ಕಮ್ಮಿನ್ಸ್, 849 ರೇಟಿಂಗ್ ಅಂಕಗಳೊಂದಿಗೆ ನಾಲ್ಕು ಬೌಲರ್‌ಗಳನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ.

ವರುಣ್ ಚಕ್ರವರ್ತಿ ಕೂಡ ಟಿ20 ಬೌಲರ್​ಗಳ ಶ್ರೇಯಾಂಕದಲ್ಲಿ ನಂ. 1 ಸ್ಥಾನದಲ್ಲಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ, ಅವರು 14 ರೇಟಿಂಗ್ ಅಂಕಗಳನ್ನು ಕಳೆದುಕೊಂಡಿದ್ದಾರೆ. ವರುಣ್ ಅವರ ರೇಟಿಂಗ್ಸ್​ 818 ರಿಂದ 804 ಕ್ಕೆ ಕುಸಿದಿದೆ. ಆದಾಗ್ಯೂ, ವರುಣ್ ಮತ್ತು ನಂ. 2 ಬೌಲರ್ ಜಾಕೋಬ್ ಡಫಿ ನಡುವೆ ಗಮನಾರ್ಹ ಅಂತರವಿದ್ದು, ವರುಣ್ ನಂ.1 ಸ್ಥಾನ ಕೆಲ ದಿನಗಳವರೆಗೆ ಮುಂದುವರೆಯಲಿದೆ.

Published On – 4:55 pm, Wed, 24 December 25

Source link

ಬಿಗ್ ಬಾಸ್ ಮನೆಯೊಳಗೆ ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ – Kannada News | Gilli Nata talks with Ashwini Gowda mother in Bigg Boss Kannada Season 12 family week

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಅಂದರೆ, ಬಿಗ್ ಬಾಸ್ ಸ್ಪರ್ಧಿಗಳ ಕುಟುಂಬದವರು ಒಬ್ಬೊಬ್ಬರಾಗಿಯೇ ದೊಡ್ಮನೆಗೆ ಬಂದು ಹೋಗುತ್ತಿದ್ದಾರೆ. ಅಶ್ವಿನಿ ಗೌಡ (Ashwini Gowda) ಅವರ ತಾಯಿ ಕೂಡ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಅವರು ಬಂದ ಕ್ಷಣ ಅಶ್ವಿನಿ ಗೌಡ ತುಂಬಾ ಎಮೋಷನಲ್ ಆದರು. ಅಶ್ವಿನಿ ತಾಯಿ ಅವರು ಗಿಲ್ಲಿ ಜೊತೆ ಮಾತನಾಡಿ, ‘ಒಬ್ಬರಿಗೊಬ್ಬರು ಮನಸ್ತಾಪ ಮಾಡಿಕೊಳ್ಳಬೇಡಿ. ಚೆನ್ನಾಗಿರಿ’ ಎಂದು ಸಲಹೆ ನೀಡಿದ್ದಾರೆ. ಅವರನ್ನು ಅತ್ತೆ ಎಂದು ಕರೆಯಲು ಗಿಲ್ಲಿ ನಟ (Gilli Nata) ಶುರು ಮಾಡಿದರು. ಈ ಕ್ಷಣ ಸಖತ್ ಫನ್ ಆಗಿದೆ. ಡಿಸೆಂಬರ್ 24ರ ಸಂಚಿಕೆಯ ಪ್ರೋಮೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ‘ಜಿಯೋ ಹಾಟ್​ ಸ್ಟಾರ್’ ಒಟಿಟಿ ಹಾಗೂ ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪೂರ್ತಿ ಸಂಚಿಕೆ ವೀಕ್ಷಿಸಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Dharwad: ನಶೆಯಲ್ಲಿದ್ದವನ ಬರ್ಬರ ಕೊಲೆ; ದೇವಸ್ಥಾನದ ಎದುರೇ ಹರಿದ ನೆತ್ತರು – Kannada News | Drunk Man Brutally Murdered by Brother and Brother in Law in Kalaghatagi

ಧಾರವಾಡ, ಡಿಸೆಂಬರ್​​ 24: ಬಸಪ್ಪನ ದೇವಸ್ಥಾನದ ಎದುರೇ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮ ನಿವಾಸಿ ವಿಟ್ಠಲ್​ ಕೂರಾಡಿ ಮೃತ ದುರ್ದೈವಿಯಾಗಿದ್ದು, ಇವರ ಸಂಬಂಧಿಕರೇ ಆರೋಪಿಗಳು ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕಸ್ತೂರಿ ಜೊತೆ ವಿವಾಹವಾಗಿದ್ದ ವಿಟ್ಠಲ್, ಪೆಂಡಾಲ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ನಿತ್ಯವೂ ಕುಡಿದು ಬಂದು ಈತ ಜಗಳ ಮಾಡುತ್ತಿದ್ದ ಹಿನ್ನೆಲೆ ಪತ್ನಿ ಕಸ್ತೂರಿ ತವರುಮನೆಗೆ ಬಂದು ಹೆತ್ತವರ ಜೊತೆ ವಾಸವಿದ್ದರು. ಕಸ್ತೂರಿ ಮತ್ತು ವಿಟ್ಠಲ್​​ ದಂಪತಿಗೆ ಮೂವರು ಮಕ್ಕಳೂ ಇದ್ದು, ಮಾವನ ಮನೆಗೆ ಆಗಾಗ ವಿಟ್ಠಲ್​​ ಬಂದು ಹೋಗುತ್ತಿದ್ದರು. ಅದರಂತೆ ನಿನ್ನೆ ರಾತ್ರಿಯೂ ಮಾವನ ಮನೆಗೆ ಬಂದಿದ್ದರು. ಬಳಿಕ ದೇವಸ್ಥಾನದಲ್ಲಿ ಮಲಗಿದ್ದರು. ಆದರೆ ರಾತ್ರಿ ಬೆಳಗಾಗುವುದರ ಒಳಗೆ ವಿಟ್ಠಲ್​​ ಕೊಲೆಯಾಗಿದೆ.

ಇದನ್ನೂ ಓದಿ: ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!

ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕಲಘಟಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಜೊತೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಖಾಕಿ ಮುಂದಾದಾಗ ಕೊಲೆಯಾದ ವಿಟ್ಠಲ್​​ ಸಹೋದರ ಅಣ್ಣಪ್ಪ ಮತ್ತು ಕಸ್ಸೂರಿ ಅವರ ಸಹೋದರ ಪುಂಡಲೀಕ ಎಂಬುದು ಬಹಿರಂಗವಾಗಿದೆ.

ಕಳ್ಳತನವನ್ನೂ ವಿಟ್ಠಲ್​​ ಮಾಡುತ್ತಿದ್ದರು ಎನ್ನಲಾಗಿದ್ದು, ಸ್ವತಃ ಸಹೋದರನ ಬೈಕ್ ಕದ್ದು ತಂದು ಅದಕ್ಕೆ ಬೆಂಕಿ ಹಚ್ಚಿದ್ದರಂತೆ. ಹೀಗಾಗಿ ಅಣ್ಣಪ್ಪ, ವಿಟ್ಠಲ್​ ಮೇಲೆ ಸಿಟ್ಟಾಗಿದ್ದ. ಇನ್ನೊಂದು ಕಡೆ ಕುಡಿದು ಬಂದು ತನ್ನ ಸಹೋದರಿಗೆ ಕಿರುಕುಳ ನೀಡುತ್ತಿದ್ದ ಕಾರಣ ಪುಂಡಲೀಕ ಕೂಡ ಮುನಿಸಿಕೊಂಡಿದ್ದ. ಹೀಗಾಗಿ ಈ ಇಬ್ಬರು ಸೇರಿ ಕೊಲೆಗೆ ಸಂಚು ರೂಪಿಸಿದ್ದರು. ವಿಟ್ಠಲ್​​ಗೆ ಸರಿಯಾಗಿ ಮದ್ಯ ಕುಡಿಸಿದ್ದ ಇವರು, ರಾತ್ರಿ ವೇಳೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ವಿಟ್ಠಲ್​ ಕೊಲೆ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕೃತ್ಯದಲ್ಲಿ ಬೇರೆಯವರ ಪಾತ್ರವಿದೆಯಾ ಎನ್ನುವ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:55 pm, Wed, 24 December 25

Source link

ಬೆಂಗಳೂರು ಕ್ರಿಸ್‌ಮಸ್ ಸಂಚಾರ ಸಲಹೆ: ವಾಹನ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳು ಇಲ್ಲಿದೆ – Kannada News | Bengaluru Christmas Traffic: Police Advisory and Road Restrictions Dec 24 25

ಬೆಂಗಳೂರು, ಡಿ.24: ಇಂದು (ಡಿ.24) ಮತ್ತು ನಾಳೆ (ಡಿ.25) ಬೆಂಗಳೂರಿನಲ್ಲಿ ಕ್ರಿಸ್‌ಮಸ್ (Bengaluru Christmas traffic) ಹಬ್ಬದ ಸಂಭ್ರಮ ಜೋರಾಗಿ ಇರುತ್ತದೆ. ಬೆಂಗಳೂರಿನ ಕೆಲವೊಂದು ಭಾಗದಲ್ಲಿ ಅದ್ದೂರಿಯಾಗಿ ಕ್ರಿಸ್‌ಮಸ್ ಆಚರಣೆ ಮಾಡಿಕೊಳ್ಳುತ್ತಾರೆ. ಇಂದಿನಿಂದಲೇ ಬೆಂಗಳೂರಿನಲ್ಲಿ ಆಚರಣೆ ಶುರುವಾಗುತ್ತದೆ. ಜತೆಗೆ ನಾಳೆ ಅಂದರೆ ಡಿ.25ರಂದು ರಜೆ ಇರುವ ಕಾರಣ, ಬೆಂಗಳೂರಿನ ಬೀದಿಗಳು ಜನರಿಂದ ತುಂಬಿರುತ್ತದೆ. ಹೀಗಾಗಿ ವಾಹನ, ಜನ ದಟ್ಟಣೆ ಕೂಡ ಹೆಚ್ಚಾಗಿರುತ್ತದೆ. ಅದಕ್ಕಾಗಿ ಸಂಚಾರಿ ಪೊಲೀಸ್​​​ ಇಲಾಖೆ ಸಂಚಾರ ಸಲಹೆಯನ್ನು ನೀಡಿದೆ.

ಪುಲಕೇಶಿನಗರದ ಹೋಲಿ ಗೋಸ್ಟ್ ಚರ್ಚ್ ಮತ್ತು ಮಹಾದೇವಪುರದ ಫೀನಿಕ್ಸ್ ಮಾಲ್, ವಿಆರ್ ಮಾಲ್ ಮತ್ತು ನೆಕ್ಸಸ್ ಶಾಂತಿನಿಕೇತನ ಬಳಿ ಭಾರಿ ಜನದಟ್ಟಣೆ ಆಗುವ ಸಾಧ್ಯತೆಗಳು ಇದೆ. ಅದಕ್ಕಾಗಿ ವಾಹನ ಚಾಲಕರು ತಮ್ಮ ಪ್ರಯಾಣವನ್ನು ಈ ರಸ್ತೆಗಳಲ್ಲಿ ತಪ್ಪಿಸುವುದು ಸೂಕ್ತ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಹಬ್ಬ ಇರುವ ಕಾರಣ ಜನದಟ್ಟಣೆ ಆಗುವ ಸಾಧ್ಯತೆ ಇದೆ. ಈ ಸಮಯದಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಪಾದಚಾರಿಗಳ ಸುರಕ್ಷತೆಗಾಗಿ, ಸುಗಮ ವಾಹನ ಸಂಚಾರಕ್ಕಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಡಿಸೆಂಬರ್ 24ರ ಸಂಜೆಯಿಂದ ಡಿಸೆಂಬರ್ 25 ರ ಮಧ್ಯಾಹ್ನದವರೆಗೆ ಹೋಲಿ ಗೋಸ್ಟ್ ಚರ್ಚ್‌ನಲ್ಲಿ ದೊಡ್ಡ ಜನ ದಟ್ಟಣೆ ಆಗುವ ನಿರೀಕ್ಷೆಯಿದೆ, ಹಾಗಾಗಿ ಕೆಲವೊಂದು ಸಂಚಾರ ಸಲಹೆಗಳನ್ನು ಇಲ್ಲಿ ನೀಡಲಾಗಿದೆ.

ಡಿಸೆಂಬರ್ 24 ರಂದು ಸಂಜೆ 7 ಗಂಟೆಯಿಂದ ಡಿಸೆಂಬರ್ 25 ರಂದು ಮಧ್ಯಾಹ್ನ 12 ರವರೆಗೆ ಜಾನ್ ಆರ್ಮ್‌ಸ್ಟ್ರಾಂಗ್ ರಸ್ತೆ ಜಂಕ್ಷನ್ ಮತ್ತು ಕುಕ್ಸನ್ ರಸ್ತೆ ಜಂಕ್ಷನ್ ನಡುವಿನ ಸಂಚಾರಕ್ಕೆ ಡೇವಿಸ್ ರಸ್ತೆಯನ್ನು ಮುಚ್ಚಲಾಗುವುದು.

ಪರ್ಯಾಯ ಮಾರ್ಗಗಳು

ಡೇವಿಸ್ ರಸ್ತೆಯಿಂದ HM ರಸ್ತೆಯ ಕಡೆಗೆ ಚಲಿಸುವ ವಾಹನಗಳು:

– ಜಾನ್ ಆರ್ಮ್‌ಸ್ಟ್ರಾಂಗ್ ರಸ್ತೆ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ.

– ಅಲ್ಲಿಂದ ನೇರ ಹೋಗಿ ವಿವಿಯಾನಿ ರಸ್ತೆಯಲ್ಲಿ ಎಡಕ್ಕೆ ತಿರುಗಿ.

– ಅಲ್ಲಿಂದ ಕುಕ್ಸನ್ ರಸ್ತೆಗೆ ಎಡಕ್ಕೆ ತಿರುಗಿ.

– ಇಲ್ಲಿಂದ ಡೇವಿಸ್ ರಸ್ತೆಗೆ ಮತ್ತೆ ಸೇರಿ HM ರಸ್ತೆಯ ಕಡೆಗೆ ಹೋಗಿ.

ಇಲ್ಲಿದೆ ನೋಡಿ ಎಕ್ಸ್​​​ ಪೋಸ್ಟ್​:

ಪಾರ್ಕಿಂಗ್ ನಿರ್ಬಂಧಗಳು

ಎಲ್ಲಾ ವಾಹನಗಳ ಪಾರ್ಕಿಂಗ್ ಅನ್ನು ಈ ಕೆಳಗಿನ ಸ್ಥಳಗಳಲ್ಲಿ ನಿಷೇಧಿಸಲಾಗುವುದು:

ಡೇವಿಸ್ ರಸ್ತೆ

ಬಾಣಸವಾಡಿ ಮುಖ್ಯ ರಸ್ತೆ

ವೀಲರ್ ರಸ್ತೆ

ಸೇಂಟ್ ಜಾನ್ಸ್ ಚರ್ಚ್ ರಸ್ತೆ

ಹೈನ್ಸ್ ರಸ್ತೆ

ಪ್ರೊಮೆನೇಡ್ ರಸ್ತೆ

ಇದನ್ನೂ ಓದಿ: ನ್ಯೂ ಇಯರ್ ಹೆಸರಲ್ಲಿ ರೇವ್ ಪಾರ್ಟಿ ಮಾಡಿದ್ರೆ ಹುಷಾರ್! ಬೆಂಗಳೂರಿನಾದ್ಯಂತ ಖಾಕಿ ಸರ್ಪಗಾವಲು

ಮಹದೇವಪುರ ಸಂಚಾರ ಪೊಲೀಸ್ ಮಿತಿಗಳು:

ಡಿಸೆಂಬರ್ 24 ಅಂದರೆ ಇಂದು ಮಧ್ಯಾಹ್ನ 12 ರಿಂದ ರಾತ್ರಿ 11 ರವರೆಗೆ ಫೀನಿಕ್ಸ್ ಮಾಲ್, ವಿಆರ್ ಮಾಲ್ ಮತ್ತು ನೆಕ್ಸಸ್ ಶಾಂತಿನಿಕೇತನ ಬಳಿ ಭಾರಿ ಜನಸಂದಣಿ ಉಂಟಾಗುವ ನಿರೀಕ್ಷೆಯಿದೆ. ಹಾಗಾಗಿ ಈ ಪ್ರದೇಶದಲ್ಲಿ ಸಂಚಾರ ಮತ್ತು ಪಾರ್ಕಿಂಗ್ ನಿರ್ಬಂಧ ಮಾಡಲಾಗಿದೆ.

ಈ ಕೆಳಗಿನ ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ:

– ಐಟಿಪಿಎಲ್ ಮುಖ್ಯ ರಸ್ತೆ (ಎರಡೂ ಬದಿಗಳು)

– ಶೆಲ್ ಪೆಟ್ರೋಲ್ ಬಂಕ್, ಬಿ ನಾರಾಯಣಪುರದಿಂದ ಗರುಡಾಚಾರ್ಪಾಳ್ಯ (ಡೆಕಾಥ್ಲಾನ್ ಹತ್ತಿರ)

– ಮೆಡಿಕೇರ್ ಆಸ್ಪತ್ರೆಯಿಂದ ಬಿಗ್ ಬಜಾರ್ ಜಂಕ್ಷನ್ ವರೆಗೆ

ಕ್ಯಾಬ್ ಪಿಕಪ್ ಮತ್ತು ಡ್ರಾಪ್-ಆಫ್ ಪಾಯಿಂಟ್‌ಗಳು

ಫೀನಿಕ್ಸ್ ಮಾಲ್:

ಡ್ರಾಪ್: ಐಟಿಪಿಎಲ್ ಮುಖ್ಯ ರಸ್ತೆಯಲ್ಲಿರುವ ಬೆಸ್ಕಾಂ ಕಚೇರಿಯ ಹತ್ತಿರ.

ಪಿಕಪ್ ಸ್ಥಳ: ಲೌರಿ ಜಂಕ್ಷನ್ ಹತ್ತಿರ

ನೆಕ್ಸಸ್ ಶಾಂತಿನಿಕೇತನ:

ಡ್ರಾಪ್: ರಾಜಪಾಳ್ಯ ಹತ್ತಿರ

ಪಿಕಪ್: ಆಸ್ಟರ್ ಆಸ್ಪತ್ರೆ ಹತ್ತಿರ

ಇಲ್ಲಿದೆ ನೋಡಿ ಎಕ್ಸ್​​ ಪೋಸ್ಟ್​:

ಪರ್ಯಾಯ ಸಲಹೆಗಳು:

ಹೂಡಿಯಿಂದ ಫೀನಿಕ್ಸ್ ಮಾಲ್ ಕಡೆಗೆ ಹೋಗುವ ವಾಹನಗಳು ಕಾಮಧೇನು ನಗರದಲ್ಲಿ ಯು-ಟರ್ನ್ ತೆಗೆದುಕೊಂಡು, ಶೆಲ್ ಪೆಟ್ರೋಲ್ ಬಂಕ್‌ನಲ್ಲಿ ಎಡಕ್ಕೆ ತಿರುಗಿ, ರೈಲ್ವೆ ರಸ್ತೆಯಲ್ಲಿ ಸಾಗಿ ಹಿಂಭಾಗದ ಗೇಟ್ ಮೂಲಕ ಪ್ರವೇಶಿಸಬೇಕು. ಕೆ.ಆರ್. ಪುರಂ ರೈಲು ನಿಲ್ದಾಣದಿಂದ ಬರುವ ವಾಹನಗಳು ಶೆಲ್ ಪೆಟ್ರೋಲ್ ಬಂಕ್‌ನಲ್ಲಿ ಎಡಕ್ಕೆ ತಿರುಗಿ, ರೈಲ್ವೆ ರಸ್ತೆಯನ್ನು ಬಳಸಿ, ಹಿಂಭಾಗದ ಪ್ರವೇಶ ದ್ವಾರದ ಮೂಲಕ ಫೀನಿಕ್ಸ್ ಮಾಲ್ ಪ್ರವೇಶಿಸಲು ಸೂಚಿಸಲಾಗಿದೆ. ಇದರ ಜತೆಗೆ ಖಾಸಗಿ ವಾಹನಕ್ಕಿಂತ ಸಾರ್ವಜನಿಕ ಸಾರಿಗೆಯನ್ನು ಬಳಸಬೇಕು ಮತ್ತು ಸಲಹೆಗಳನ್ನು ಪಾಲಿಸಬೇಕು ಎಂದು ಸಂಚಾರ ಪೊಲೀಸರು ಕೋರಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

12,000 ಕೋಟಿ ರೂ ವೆಚ್ಚದಲ್ಲಿ ಡೆಲ್ಲಿ ಮೆಟ್ರೋ ವಿಸ್ತರಣೆ; ಬರಲಿವೆ 13 ಹೊಸ ನಿಲ್ದಾಣಗಳು; ಸಂಪುಟ ಅನುಮೋದನೆ – Kannada News | Union cabinet approves for Delhi Metro expansion at cost of Rs 12,000 crore

ನವದೆಹಲಿ, ಡಿಸೆಂಬರ್ 24: ಡೆಲ್ಲಿ ಮೆಟ್ರೋ ಜಾಲ (Delhi Metro) ಮತ್ತಷ್ಟು ವಿಸ್ತರಣೆಯಾಗಲಿದೆ. 12,015 ಕೋಟಿ ರೂ ವೆಚ್ಚದಲ್ಲಿ ಮೆಟ್ರೋ ವಿಸ್ತರಣೆಯ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಎ ವೈಷ್ಣವ್ ಅವರು ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಡೆಲ್ಲಿ ಮೆಟ್ರೋ ಫೇಸ್-5 (ಎ) ಪ್ರಾಜೆಕ್ಟ್ ಅಡಿಯಲ್ಲಿ ಮೂರು ಹೊಸ ಕಾರಿಡಾರ್ ಮೊದಲಾದವರು ನಿರ್ಮಾಣವಾಗಲಿವೆ. ಈ ಮೂರು ಕಾರಿಡಾರ್​ಗಳ ಒಟ್ಟು ಉದ್ದ 16.076 ಕಿಮೀ ಆಗಿರಲಿದೆ.

ಪ್ರಸ್ತಾಪವಾಗಿರುವ ಯೋಜನೆಯಲ್ಲಿ 16 ಕಿಮೀ ಜಾಲ ವಿಸ್ತರಣೆ ಆಗುವುದರ ಜೊತೆಗೆ 13 ಹೊಸ ಮೆಟ್ರೋ ಸ್ಟೇಷನ್​ಗಳು ನಿರ್ಮಾಣವಾಗಲಿವೆ. ಈ ಪೈಕಿ 10 ಸುರಂಗ ನಿಲ್ದಾಣಗಳಾದರೆ, ಉಳಿದ ಮೂರು ಎಲಿವೇಟೆಡ್ ನಿಲ್ದಾಣವಾಗಲಿವೆ. ಸದ್ಯ ಡೆಲ್ಲಿ ಮೆಟ್ರೋ ಭಾರತದಲ್ಲಿರುವ ಅತಿದೊಡ್ಡ ಮೆಟ್ರೋ ಜಾಲ ಎನಿಸಿದೆ. 395 ಕಿಮೀ ಉದ್ದದ ನೆಟ್ವರ್ಕ್ ಹೊಂದಿದೆ. ಈಗ ಐದನೇ ಹಂತದ ಮೆಟ್ರೋ ಕಾಮಗಾರಿ ಪೂರ್ಣಗೊಂಡರೆ, ಇದರ ಒಟ್ಟು ಜಾಲ 400 ಕಿಮೀ ದಾಟುತ್ತದೆ.

ಇದನ್ನೂ ಓದಿ: ದೆಹಲಿ ಮಾಲಿನ್ಯದ ಭೀಕರತೆಯನ್ನು ತೆರೆದಿಟ್ಟ ಸಚಿವ ನಿತಿನ್ ಗಡ್ಕರಿ

ಡೆಲ್ಲಿ ಮೆಟ್ರೋದ ಹೊಸ ಪ್ರಸ್ತಾವಿತ ಮೂರು ಕಾರಿಡಾರ್​ಗಳಿವು…

  • ಆರ್.ಕೆ. ಆಶ್ರಮ್ ಮಾರ್ಗ್​ನಿಂದ ಇಂದ್ರಪ್ರಸ್ಥವರೆಗೆ 9.913 ಕಿಮೀ.
  • ಏರೋಸಿಟಿಯಿಂದ ಇಂದಿರಾಗಾಂಧಿ ಏರ್​ಪೋರ್ಟ್ ಟರ್ಮಿನಲ್ 1ರವರೆಗೆ 2.263 ಕಿಮೀ
  • ತುಘಲಕಾಬಾದ್​ನಿಂದ ಕಾಲಿಂದಿ ಕುಂಜ್​ವರೆಗೆ 3.9 ಕಿಮೀ.

ಭಾರತದ ಮೆಟ್ರೋ ಜಾಲ, ಡಿಲ್ಲಿ ನಂ. 1

ಭಾರತದ ಕೆಲವು ನಗರಗಳಲ್ಲಿ ಮೆಟ್ರೋ ರೈಲು ಸೇವೆ ಇದೆ. ಡೆಲ್ಲಿ ಮೆಟ್ರೋ 400 ಕಿಮೀಯೊಂದಿಗೆ ಅತಿದೊಡ್ಡ ಜಾಲ ಹೊಂದಿದೆ. ಬೆಂಗಳೂರಿನ ನಮ್ಮ ಮೆಟ್ರೋ ಎರಡನೇ ಸ್ಥಾನ ಪಡೆಯುತ್ತದೆ. ಇದು ಸುಮಾರು 100 ಕಿಮೀ ಜಾಲ ಹೊಂದಿದೆ. ಹೈದರಬಾದ್, ಮುಂಬೈ ಮತ್ತು ಕೋಲ್ಕತಾದ ಮೆಟ್ರೋಗಳ ಜಾಲ 50ರಿಂದ 80 ಕಿಮೀ ಇದೆ.

ಇದನ್ನೂ ಓದಿ: ಇಸ್ರೋದಿಂದ ಐತಿಹಾಸಿಕ ಸಾಧನೆ, ಬ್ಲೂಬರ್ಡ್​ ಬ್ಲಾಕ್-2 ಇಂಟರ್ನೆಟ್ ಉಪಗ್ರಹ ಯಶಸ್ವಿ ಉಡಾವಣೆ

ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಸಿಸ್ಟಂ ಭಾರತದ್ದು…

ಭಾರತದ ಮೆಟ್ರೋ ಜಾಲವು ವಿಶ್ವದಲ್ಲೇ ಮೂರನೇ ಗರಿಷ್ಠ ಮಟ್ಟದ್ದೆನಿಸಿದೆ. ಡೆಲ್ಲಿ ಮೆಟ್ರೋ, ಬೆಂಗಳೂರು ಮೆಟ್ರೋ ಸೇರಿ ಒಟ್ಟು ಮೆಟ್ರೋಗಳ ಒಟ್ಟೂ ಜಾಲ ಸುಮಾರು 1,000ದಿಂದ 1,100 ಕಿಮೀಯಷ್ಟಾಗುತ್ತದೆ.

ಮೆಟ್ರೋ ಮತ್ತು ಹೈಸ್ಪೀಡ್ ನೆಟ್ವರ್ಕ್​ನಲ್ಲಿ ಬಹಳ ಮುಂದಿರುವ ಚೀನಾದಲ್ಲಿ ಬರೋಬ್ಬರಿ 11,000ಕ್ಕೂ ಅಧಿಕ ಕಿಮೀಗಳಷ್ಟು ಮೆಟ್ರೋ ಜಾಲ ಇದೆ. ಅಮೆರಿಕ ತನ್ನ ವಿವಿಧ ನಗರಗಳನ್ನು ಸೇರಿಸಿದರೆ ಸುಮಾರು 1,400 ಕಿಮೀ ಮೆಟ್ರೋ ಜಾಲ ಹೊಂದಿದೆ. ನಂತರದ ಸ್ಥಾನ ಭಾರತದ್ದು. ಆದರೆ, ವಿವಿಧ ನಗರಗಳಲ್ಲಿ ಮೆಟ್ರೋ ಜಾಲ ಕ್ಷಿಪ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲ ವರ್ಷಗಳಲ್ಲಿ ಭಾರತದ ಮೆಟ್ರೋ ಜಾಲ ಅಮೆರಿಕದ್ದನ್ನೂ ಮೀರಿಸುವ ಸಂಭವ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ

ರಾಜ್ಯದಲ್ಲಿ ಮತ್ತೊಮ್ಮೆ ಫ್ಯಾನ್ಸ್ ವಾರ್ (Fans war) ಶುರುವಾಗಿದೆ. ಸುದೀಪ್ ಅಭಿಮಾನಿಗಳು, ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಚ್ಚಾಡುತ್ತಿದ್ದಾರೆ. ಇದರ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ದಾವಣಗೆರೆಯಲ್ಲಿ ಹೇಳಿದ ಮಾತು ಬೆಂಕಿಗೆ ತುಪ್ಪ ಸುರಿದಂತಾಗಿದೆ. ಸುದೀಪ್ ಕುರಿತಾಗಿಯೇ ವಿಜಯಲಕ್ಷ್ಮಿ ಮಾತನಾಡಿದ್ದಾರೆಂದು ಕಿಚ್ಚನ ಅಭಿಮಾನಿಗಳು ಗರಂ ಆಗಿದ್ದಾರೆ. ವಿಜಯಲಕ್ಷ್ಮಿ ಅವರು ಸ್ಪಷ್ಟನೆ ನೀಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಇದೀಗ ಸುದೀಪ್ ಹಾಗೂ ದರ್ಶನ್ ಇಬ್ಬರಿಗೂ ಆಪ್ತವಾಗಿರುವ ರಕ್ಷಿತಾ ಅವರು ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಚಳಿಗಾಲದಲ್ಲಿ ಹೃದಯಾಘಾತವಾಗಬಾರದು ಎಂದ್ರೆ ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ – Kannada News | Winter Heart Health: Top Tests for Risk Assessment

ಚಳಿಗಾಲದಲ್ಲಿ (Winter) ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ಬೇಸಿಗೆಗೆ ಹೋಲಿಸಿದರೆ ಹೃದಯಾಘಾತದ (Heart Attacks) ಪ್ರಕರಣಗಳು ಕೂಡ ಹೆಚ್ಚಾಗಿ ಕಂಡುಬರುತ್ತದೆ. ಸಾಮಾನ್ಯವಾಗಿ ಚಳಿಯಲ್ಲಿ, ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ, ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತವೆ, ಹಾಗಾಗಿ ಈ ರೀತಿಯ ಸಮಸ್ಯೆಗಳು ಕಂಡುಬರುತ್ತದೆ. ಇಂತಹ ಸಂದರ್ಭಗಳಲ್ಲಿ, ಆರಂಭಿಕ ಹಂತದಲ್ಲಿಯೇ ಹೃದಯ ಸಂಬಂಧಿ ಸಮಸ್ಯೆಗಳನ್ನು ಸುಲಭವಾಗಿ ಪತ್ತೆಹಚ್ಚಲು ಕೆಲವು ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ವೈದ್ಯರು ಶಿಫಾರಸು ಮಾಡುತ್ತಾರೆ. ಅದಕ್ಕಾಗಿಯೇ ಚಳಿಗಾಲದಲ್ಲಿ ಕೆಲವು ಅಗತ್ಯ ಹೃದಯ ಪರೀಕ್ಷೆಗಳನ್ನು ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಬಹುದು. ಮಾತ್ರವಲ್ಲ, ಹೃದಯಾಘಾತದ ಪ್ರಕರಣಗಳನ್ನೂ ಕೂಡ ಕಡಿಮೆ ಮಾಡಬಹುದು. ಹಾಗಾದರೆ ಚಳಿಗಾಲದಲ್ಲಿ ಅಗತ್ಯವಾಗಿ ಮಾಡಬೇಕಾದ ಟೆಸ್ಟ್ ಗಳು ಯಾವವು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ದೆಹಲಿಯ ಅಪೋಲೋ ಆಸ್ಪತ್ರೆಯ ಹೃದ್ರೋಗ ವಿಭಾಗದ ಡಾ. ವರುಣ್ ಬನ್ಸಾಲ್ ಅವರು, ಚಳಿಗಾಲದಲ್ಲಿ ತಪ್ಪದೆ ಮಾಡಬೇಕಾದ ಕೆಲವು ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಲಿಪಿಡ್ ಪ್ರೊಫೈಲ್ ಪರೀಕ್ಷೆ

ಈ ಪರೀಕ್ಷೆಯು ದೇಹದಲ್ಲಿನ ಲಿಪಿಡ್‌ಗಳ ಮಟ್ಟವನ್ನು ತಿಳಿಸುತ್ತದೆ. ಆ ಮೂಲಕ, LDL (ಕೆಟ್ಟ ಕೊಲೆಸ್ಟ್ರಾಲ್), HDL (ಉತ್ತಮ ಕೊಲೆಸ್ಟ್ರಾಲ್) ಮತ್ತು ಟ್ರೈಗ್ಲಿಸರೈಡ್‌ಗಳನ್ನು ಕಂಡುಹಿಡಿಯಬಹುದು. ಈ ಮಟ್ಟಗಳು ದೇಹದಲ್ಲಿನ ಪ್ರಮಾಣಿತ ಶ್ರೇಣಿಗಿಂತ ಹೆಚ್ಚಿದ್ದರೆ, ಅದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ ಎಂದರ್ಥ.

ಬಿಪಿ ಟೆಸ್ಟ್ (ರಕ್ತದೊತ್ತಡದ ಮೇಲ್ವಿಚಾರಣೆ)

ರಕ್ತವನ್ನು ಪಂಪ್ ಮಾಡಲು ಹೃದಯವು ಎಷ್ಟು ಒತ್ತಡವನ್ನು ಬಳಸುತ್ತಿದೆ ಎಂಬುದನ್ನು ಈ ಪರೀಕ್ಷೆಯು ತೋರಿಸುತ್ತದೆ. ಚಳಿಗಾಲದಲ್ಲಿ ಹೃದಯದ ನಾಳಗಳು ಸಂಕುಚಿತಗೊಳ್ಳುವುದರಿಂದ ಈ ಸಮಯದಲ್ಲಿ ಈ ಪರೀಕ್ಷೆ ಮಾಡಿಸುವುದು ಬಹಳ ಒಳ್ಳೆಯದು. ಅಧಿಕ ರಕ್ತದೊತ್ತಡ ಹೊಂದಿರುವವರು ಖಂಡಿತವಾಗಿಯೂ ಈ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು.

ಇಸಿಜಿ

ಈ ಪರೀಕ್ಷೆಯು ಹೃದಯ ಬಡಿತ, ಹೃದಯ ಸ್ನಾಯುಗಳ ಬಲ ಮತ್ತು ಹೃದಯ ಸಂಬಂಧಿ ತೊಂದರೆಗಳನ್ನು ಬಹಿರಂಗಪಡಿಸುತ್ತದೆ. ವ್ಯಕ್ತಿಗೆ ಪದೇ ಪದೇ ಎದೆ ನೋವು ಬರುತ್ತಿದ್ದರೆ ಅವರು ಈ ಪರೀಕ್ಷೆಯನ್ನು ಖಂಡಿತವಾಗಿಯೂ ಮಾಡಬೇಕು.

ಇದನ್ನೂ ಓದಿ: ಹೃದಯಾಘಾತ ಪ್ರಕರಣ ಹೆಚ್ಚಳಕ್ಕೆ ಕಾರಣವೇನು? ಸರ್ಕಾರಕ್ಕೆ ಸಲ್ಲಿಕೆಯಾಯ್ತು ತಜ್ಞರ ವರದಿ

ಯಾವ ಸಮಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತದೆ?

ಡಾ. ಬನ್ಸಾಲ್ ಹೇಳುವ ಪ್ರಕಾರ, ಚಳಿಗಾಲದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತವೆ. ಅದರಲ್ಲಿಯೂ ಬೆಳಿಗ್ಗೆ 4 ರಿಂದ 6 ಗಂಟೆಯ ನಡುವೆ, ಈ ಅಪಾಯ ಹೆಚ್ಚಾಗಿ ಕಂಡುಬರುತ್ತವೆ. ಈ ಸಮಯದಲ್ಲಿ, ಬೆಳಗಿನ ತಾಪಮಾನ ಕಡಿಮೆ ಇರುವುದರಿಂದ ಇದು ಹೃದಯದ ನಾಳಗಳ ಮೇಲೆ ಪರಿಣಾಮ ಬೀರುತ್ತದೆ, ಹಾಗಾಗಿ ಇದು ಹೃದಯಾಘಾತಕ್ಕೆ ಕಾರಣವಾಗುತ್ತದೆ. ಇದನ್ನು ತಡೆಯಲು ಈ ಮೂರು ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು. ಇವುಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡುಬಂದರೆ, ಆ ಆಧಾರದ ಮೇಲೆ ಇತರ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ಪರೀಕ್ಷೆಯನ್ನು ಯಾರು ಮಾಡಿಸಿಕೊಳ್ಳಲೇಬೇಕು?

  • 45 ವರ್ಷಕ್ಕಿಂತ ಮೇಲ್ಪಟ್ಟವರು
  • ಅಧಿಕ ರಕ್ತದೊತ್ತಡ ಇರುವವರು
  • ಈಗಾಗಲೇ ಕೆಲವು ರೀತಿಯ ಹೃದಯ ಸಂಬಂಧಿ ಕಾಯಿಲೆ ಇರುವವರು
  • ಅತಿಯಾಗಿ ಧೂಮಪಾನ ಮಾಡುವವರು

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬರಲಿವೆ ಹೊಸ ಏರ್ಲೈನ್ಸ್; ಶಂಖ್ ಏರ್ ಆಯ್ತು, ಈಗ ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್​ಪ್ರೆಸ್​ಗೂ ಸಿಕ್ಕಿತು ಎನ್​ಒಸಿ – Kannada News | After Shankh Air, Al Hind and FlyExpress get NOC for airline operations in India

ನವದೆಹಲಿ, ಡಿಸೆಂಬರ್ 24: ಇತ್ತೀಚೆಗಷ್ಟೇ ಶಂಖ್ ಏರ್ (Shankh Air) ಸಂಸ್ಥೆಗೆ ವಿಮಾನ ಹಾರಾಟ ಸೇವೆಗೆ ಅನುಮತಿಸಿದ್ದ ಕೇಂದ್ರ ಸರ್ಕಾರ ಈಗ ಇನ್ನೂ ಎರಡು ಸಂಸ್ಥೆಗಳಿಗೆ ಎನ್​ಒಸಿ ಕೊಟ್ಟಿದೆ. ಕೇರಳ ಮೂಲದ ಅಲ್ ಹಿಂದ್ (Al Hind) ಹಾಗೂ ಹೈದರಾಬಾದ್ ಮೂಲದ ಫ್ಲೈ ಎಕ್ಸ್​ಪ್ರೆಸ್ (FlyExpress) ಸಂಸ್ಥೆಗಳಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ನಿರಾಕ್ಷೇಪಣಾ ಪತ್ರ (ಎನ್​ಒಸಿ) ಕೊಟ್ಟಿದೆ. ಭಾರತದ ನಾಗರಿಕ ವಿಮಾನಯಾನ ಮಾರುಕಟ್ಟೆಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಹೊಂದಿರುವ ಪ್ರಾಬಲ್ಯವನ್ನು ಕಡಿಮೆ ಮಾಡಲು ಈ ಹೊಸ ಆಪರೇಟರ್​ಗಳಿಂದ ಸಾಧ್ಯವಾಗಬಹುದು.

ಸಿವಿಲ್ ಏವಿಯೇಶನ್ ಮಿನಿಸ್ಟರ್ ರಾಮಮೋಹನ್ ನಾಯ್ಡು ಕಿಂಜರಪು ಅವರು ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪೋಸ್ಟ್ ಹಾಕಿದ್ದಾರೆ. ವಿಮಾನಯಾನ ಕ್ಷೇತ್ರದಲ್ಲಿ ಹೊಸ ಸಂಸ್ಥೆಗಳಿಗೆ ಉತ್ತೇಜನ ಕೊಡಲು ಸರ್ಕಾರ ಆದ್ಯತೆ ಕೊಟ್ಟಿದೆ. ಈ ನಿಟ್ಟಿನಲ್ಲಿ, ಕಳೆದ ವಾರದಲ್ಲಿ ಶಂಖ್ ಏರ್, ಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್​ಪ್ರೆಸ್​ನ ಪ್ರತಿನಿಧಿಗಳನ್ನು ಭೇಟಿ ಮಾಡಿದೆ. ಶಂಖ್ ಏರ್​ಗೆ ಈ ಹಿಂದೆ ಅನುಮತಿಸಲಾಗಿದೆ. ಈಗ ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್​ಪ್ರೆಸ್ ಎರಡಕ್ಕೂ ಈ ವಾರ ಎನ್​ಒಸಿ ಕೊಡಲಾಗಿದೆ.

ಇದನ್ನೂ ಓದಿ: ಭಾರತದೊಂದಿಗೆ ಇದು ಕೆಟ್ಟ ಒಪ್ಪಂದ: ನ್ಯೂಜಿಲೆಂಡ್ ಸರ್ಕಾರದೊಳಗೆಯೇ ಅಪಸ್ವರ; ಇವರ ತಕರಾರುಗಳೇನು?

ಕೇರಳದ ಅಲ್ ಹಿಂದ್ ಗ್ರೂಪ್ ಟ್ರಾವಲ್ ಮತ್ತು ಟೂರಿಸಂ ಸೇವೆ ನೀಡುತ್ತವೆ. ಅದರ ವಿಮಾನಗಳು ಕೊರಿಯರ್ ಸೇವೆಗೂ ಬಳಕೆ ಆಗುತ್ತವೆ. ಹೈದರಾಬಾದ್​ನ ಫ್ಲೈಎಕ್ಸ್​ಪ್ರೆಸ್ ಸಂಸ್ಥೆಯು ಸರಕು ಸಾಗಣೆಯ ವಿಮಾನ ಸೇವೆ ನೀಡುತ್ತದೆ.

ಈಗಾಗಲೇ ಎನ್​ಒಸಿ ಹೊಂದಿರುವ ಶಂಖ್ ಏರ್ ಸಂಸ್ಥೆ ಸದ್ಯದಲ್ಲೇ ಪ್ರಾದೇಶಿಕ ಮಟ್ಟದಲ್ಲಿ ವಿಮಾನ ಸೇವೆ ಆರಂಭಿಸಬಹುದು. ಉತ್ತರಪ್ರದೇಶದ ಲಕ್ನೋ, ವಾರಾಣಸಿ, ಆಗ್ರಾ, ಗೋರಖಪುರ್ ಮೊದಲಾದ ಪ್ರಮುಖ ನಗರಗಳ ನಡುವೆ ಶಂಕ್ ಏರ್ ವಿಮಾನಗಳು ಸಂಚರಿಸಲಿವೆ.

ಇದನ್ನೂ ಓದಿ: ಚೀನಾ ಹೇಳೋದು ಬೇರೆ, ವಾಸ್ತವ ಬೇರೆಯಾ? 2025ರಲ್ಲಿ ಚೀನಾ ಆರ್ಥಿಕ ಬೆಳವಣಿಗೆ ಶೇ 3 ಮಾತ್ರವಾ?

ಕೇಂದ್ರ ಸರ್ಕಾರದ ಉಡಾನ್ ಸ್ಕೀಮ್ ಅಡಿಯಲ್ಲಿ ಸ್ಟಾರ್ ಏರ್, ಇಂಡಿಯಾ ಒನ್ ಏರ್, ಫ್ಲೈ91 ಇತ್ಯಾದಿ ಸಣ್ಣಪುಟ್ಟ ಸಂಸ್ಥೆಗಳು ಪ್ರಾದೇಶಿಕ ವಿಮಾನ ಸೇವೆ ಒದಗಿಸುತ್ತಿವೆ. ಆದರೆ, ದೇಶದ ಶೇ. 90ರಷ್ಟು ಮಾರುಕಟ್ಟೆಯು ಇಂಡಿಗೋ ಮತ್ತು ಏರ್ ಇಂಡಿಯಾ ಸಂಸ್ಥೆಗಳ ಹಿಡಿತದಲ್ಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Virat Kohli: 16 ವರ್ಷಗಳ ನಂತರ ಶತಕ ಚಚ್ಚಿದ ಕಿಂಗ್ ಕೊಹ್ಲಿ – Kannada News | Virat Kohli Scores Vijay Hazare Century After 16 Years; A Boost Before NZ Series

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ (Virat Kohli), ಇದೀಗ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲೂ (Vijay Hazare Trophy) ತಮ್ಮ ಶತಕಗಳ ಓಟವನ್ನು ಮುಂದುವರೆಸಿದ್ದಾರೆ. ಬರೋಬ್ಬರಿ 15 ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಡೆಲ್ಲಿ ಪರ ಆಡುತ್ತಿರುವ ವಿರಾಟ್, ಆಂಧ್ರಪ್ರದೇಶ ವಿರುದ್ಧದ ಪಂದ್ಯದಲ್ಲಿ ಕೇವಲ 83 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದ್ದಾರೆ. ಅಲ್ಲದೆ 16 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕೊಹ್ಲಿ ಬ್ಯಾಟ್ ಶತಕದ ಇನ್ನಿಂಗ್ಸ್ ಆಡಿದೆ.

16 ವರ್ಷಗಳ ನಂತರ ವಿರಾಟ್ ಶತಕ

ವಿರಾಟ್ ಕೊಹ್ಲಿ ಕೊನೆಯ ಬಾರಿಗೆ 2009 ರಲ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಶತಕ ಬಾರಿಸಿದ್ದರು. ಹರಿಯಾಣ ವಿರುದ್ಧ ನಡೆದಿದ್ದ ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ 124 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಮಾತ್ರವಲ್ಲದೆ ಆ ಆವೃತ್ತಿಯಲ್ಲಿ ರನ್​ಗಳ ಮಳೆ ಹರಿಸಿದ್ದ ವಿರಾಟ್ ಕೊಹ್ಲಿ ನಾಲ್ಕು ಶತಕಗಳು ಸೇರಿದಂತೆ 534 ರನ್ ಕಲೆಹಾಕಿದ್ದರು. ಈಗ, ಮತ್ತೊಮ್ಮೆ ದೇಶಿ ಅಂಗಳದಲ್ಲಿ ಅಬ್ಬರಿಸಿರುವ ವಿರಾಟ್, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ತಮ್ಮ ಫಾರ್ಮ್​ ಮುಂದುವರೆಸಿರುವುದು ಟೀಂ ಇಂಡಿಯಾಗೆ ಆನೆಬಲ ತಂದಿದೆ.

4 ಏಕದಿನ ಇನ್ನಿಂಗ್ಸ್‌ಗಳಲ್ಲಿ 3ನೇ ಶತಕ

ಪ್ರಸ್ತುತ ಅದ್ಭುತ ಫಾರ್ಮ್‌ನಲ್ಲಿರುವ ಕೊಹ್ಲಿ ತಮ್ಮ ಕೊನೆಯ ನಾಲ್ಕು ಏಕದಿನ ಇನ್ನಿಂಗ್ಸ್‌ಗಳಲ್ಲಿ ಮೂರು ಶತಕಗಳನ್ನು ಬಾರಿಸಿದ್ದಾರೆ. ಮೇಲೆ ಹೇಳಿದಂತೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ಎರಡು ಶತಕಗಳನ್ನು ಬಾರಿಸಿದ್ದ ಕೊಹ್ಲಿ, ಮೂರನೇ ಏಕದಿನ ಪಂದ್ಯದಲ್ಲಿ ಅಜೇಯ 65 ರನ್ ಕಲೆಹಾಕಿದ್ದರು. ಈಗ ವಿಜಯ್ ಹಜಾರೆ ಟ್ರೋಫಿಯಲ್ಲಿಯೂ ಕೊಹ್ಲಿ ಶತಕದ ಇನ್ನಿಂಗ್ಸ್ ಆಡಿದ್ದಾರೆ.

Virat Kohli: ಖಾತೆ ತೆರೆದು ಕ್ರಿಕೆಟ್ ದೇವರ ದಾಖಲೆಯನ್ನು ಪುನರಾವರ್ತಿಸಿದ ಕಿಂಗ್ ಕೊಹ್ಲಿ

ಗೆಲುವಿನತ್ತ ಡೆಲ್ಲಿ

ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ.. ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಂಧ್ರಪ್ರದೇಶ ತಂಡ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತು. ತಂಡದ ಪರ ರಿಕಿ ಭುಯಿ 133 ರನ್​ಗಳ ಶತಕದ ಇನ್ನಿಂಗ್ ಆಡಿದರು. ಈ ಗುರಿ ಬೆನ್ನಟ್ಟಿರುವ ಡೆಲ್ಲಿ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಮಾತ್ರವಲ್ಲದೆ ಆರಂಭಿಕ ಪ್ರಿಯಾಂಶ್ ಆರ್ಯ ಜೊತೆಗೂಡಿ ಎರಡನೇ ವಿಕೆಟ್​ಗೆ 113 ರನ್​ಗಳ ಜೊತೆಯಾಟವನ್ನು ನಿರ್ಮಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:01 pm, Wed, 24 December 25

Source link