Category Archives: Blog

Your blog category

Video: ಕೆಳಗಿಳಿಯಲು ಮೆಟ್ಟಿಲುಗಳೇ ಇಲ್ಲದೆ ವಿಮಾನದಿಂದ ಜಂಪ್ ಮಾಡಿದ ಪ್ರಯಾಣಿಕರು – Kannada News | Air Congo Passengers Forced to Exit Aircraft Without Stairs at Kindu Airport

ಕಿಂದು, ಡಿಸೆಂಬರ್ 24: ಕೆಳಗಿಳಿಯಲು ಮೆಟ್ಟಿಲುಗಳೇ ಇಲ್ಲದೆ ಪ್ರಯಾಣಿಕರು ವಿಮಾನದಿಂದ ಜಂಪ್ ಮಾಡಿರುವ ಘಟನೆ ಕಿಂದು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕಿಂದು ವಿಮಾನ ನಿಲ್ದಾಣದಲ್ಲಿ ಏರ್ ಕಾಂಗೋ ವಿಮಾನದ ಪ್ರಯಾಣಿಕರು ಗಂಟೆಗಟ್ಟಲೆ ವಿಮಾನದೊಳಗೆ ಕಾಯುವಂತಾಗಿತ್ತು. ಪ್ರಯಾಣಿಕರು ಮೆಟ್ಟಿಲುಗಳಿಲ್ಲದೆ ಬೇಸರಗೊಂಡು ಬಾಗಿಲಿನಿಂದ ಸುಮಾರು 5-6 ಅಡಿಯಷ್ಟು ಕೆಳಗೆ ಹಾರಿದ್ದಾರೆ. ಮಣಿಮಾ ಪ್ರಾಂತ್ಯದಲ್ಲಿರುವ ಕಿಂದು ವಿಮಾನ ನಿಲ್ದಾಣವು ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ. ವಿಮಾನಯಾನ ಸಂಸ್ಥೆಯು ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದರೂ, ಈ ರೀತಿಯ ಘಟನೆಗಳು ಸಣ್ಣ ವಿಮಾನ ನಿಲ್ದಾಣಗಳಲ್ಲಿನ ಕೊರತೆಯನ್ನು ಒತ್ತಿ ಹೇಳುತ್ತವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಎಲ್ಲಿ? – Kannada News | Delhi take on Andhra at the BCCI’s Centre of Excellence ground in Bengaluru

ವಿಜಯ ಹಝಾರೆ ಟೂರ್ನಿಗೆ ಇಂದಿನಿಂದ ಚಾಲನೆ ದೊರೆಯಲಿದೆ. ಮೊದಲ ದಿನವೇ 32 ತಂಡಗಳು ಕೂಡ ಕಣಕ್ಕಿಳಿಯಲಿವೆ. ಈ ಮೂವತ್ತೆರಡು ತಂಡಗಳಲ್ಲಿ ಎಲ್ಲರ ಕಣ್ಣು ನೆಟ್ಟಿರುವುದು ದೆಹಲಿ ಮತ್ತು ಆಂಧ್ರ ನಡುವಣ ಪಂದ್ಯದ ಮೇಲೆ. ಏಕೆಂದರೆ ಈ ಮ್ಯಾಚ್ ಮೂಲಕ ವಿರಾಟ್ ಕೊಹ್ಲಿ (Virat Kohli) ವಿಜಯ ಹಝಾರೆ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ.

Source link

ಬೆಂಗಳೂರಿಗೆ ಬ್ರೆಡ್​ನಲ್ಲಿ ಬರುತ್ತಿತ್ತು ಡ್ರಗ್ಸ್! ನೈಜಿರಿಯಾ ಮಹಿಳೆಯ ಬಂಧನ – Kannada News | Cocaine Hidden Inside Bread, Professor Turned Thief and Daylight Burglar Nabbed: Bengaluru Police Crack Major Crime Cases

ಬ್ರೆಡ್​ನಲ್ಲಿ ಡ್ರಗ್ಸ್, ಒಳಚಿತ್ರದಲ್ಲಿ ಆರೋಪಿ ಒಲಾಜಿಡೆ ಎಸ್ತಾರ್

ಬೆಂಗಳೂರು, ಡಿಸೆಂಬರ್ 24: ಬೆಂಗಳೂರು (Bangalore) ನಗರದಲ್ಲಿ ಮಾದಕ ವಸ್ತು ಸಾಗಣೆ ಹಾಗೂ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಒಂದೇ ದಿನ ಮೂರು ವಿಭಿನ್ನ ಪ್ರಕರಣಗಳನ್ನು ಭೇದಿಸಿದ್ದು, ಆರೋಪಿಗಳನ್ನು ಬಂಧಿಸಿ ಅಪಾರ ಪ್ರಮಾಣದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಪ್ರಕರಣವೊಂದರಲ್ಲಿ, ತಿನ್ನುವ ಬ್ರೆಡ್‌ನೊಳಗೆ ಕೊಕೇನ್ ಮರೆಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯನ್ ಮೂಲದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಒಲಾಜಿಡೆ ಎಸ್ತಾರ್, ಬ್ರೆಡ್ ಪೀಸ್‌ಗಳನ್ನು ಕಟ್ ಮಾಡಿ ಅದರೊಳಗೆ ಕೊಕೇನ್ ಇಟ್ಟು ಮುಂಬೈಯಿಂದ ಬೆಂಗಳೂರಿಗೆ ಖಾಸಗಿ ಬಸ್ ಮೂಲಕ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದಳು. ಆ ಸಂದರ್ಭದಲ್ಲಿ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಕಾರ್ಯಾಚರಣೆ ವೇಳೆ ಸುಮಾರು 65 ಲಕ್ಷ ರೂ. ಮೌಲ್ಯದ 120 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ, ಮಾದಕ ವಸ್ತುಗಳನ್ನು ಆಹಾರ ಪದಾರ್ಥಗಳ ಮೂಲಕ ಸಾಗಿಸುವ ಹೊಸ ತಂತ್ರ ಬಳಕೆಯಾಗಿರುವುದು ಪೊಲೀಸರಿಗೂ ಅಚ್ಚರಿ ಮೂಡಿಸಿದೆ.

ವಾರದ ದಿನಗಳಲ್ಲಿ ಪ್ರೊಫೆಸರ್, ವಾರಾಂತ್ಯದಲ್ಲಿ ಕಳ್ಳಿ!

ಇನ್ನೊಂದು ಪ್ರಕರಣದಲ್ಲಿ, ವಾರದ ದಿನಗಳಲ್ಲಿ ಕಾಲೇಜಿನಲ್ಲಿ ಕನ್ನಡ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದ ರೇವತಿ ಎಂಬ ಮಹಿಳೆಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ರೇವತಿ ವಾರಾಂತ್ಯದಲ್ಲಿ ಮದುವೆ ನಡೆಯುವ ಕಲ್ಯಾಣಮಂಟಪಗಳಿಗೆ ಸಂಬಂಧಿಕಳಂತೆ ಪ್ರವೇಶಿಸಿ, ಅನುಮಾನ ಬಾರದಂತೆ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದಳು. ಕಳೆದ ನವೆಂಬರ್ 25ರಂದು ಬಸವನಗುಡಿಯ ದ್ವಾರಕನಾಥ್ ಕಲ್ಯಾಣಮಂಟಪದಲ್ಲಿ ನಡೆದ ಕಳ್ಳತನದ ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು, ಕೆ.ಆರ್.ಪುರಂನಲ್ಲಿ ವಾಸವಾಗಿದ್ದ ರೇವತಿಯನ್ನು ಬಂಧಿಸಿ, 32 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಇರುಳುಗಣ್ಣೆಂದು ಹಗಲಲ್ಲೇ ಕಳ್ಳತನ ಮಾಡುತ್ತಿದ್ದವ ಅರೆಸ್ಟ್

ಇನ್ನೊಂದೆಡೆ, ‘ಇರುಳು ಕುರುಡು’ ಸಮಸ್ಯೆ ಎಂದು ಹೇಳಿಕೊಂಡು ಹಗಲಲ್ಲೇ ಮನೆ ಕಳ್ಳತನ ಮಾಡುತ್ತಿದ್ದ ಮೊಹಮ್ಮದ್ ಖಾನ್ ಎಂಬಾತನನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಖಾನ್, ಇತ್ತೀಚೆಗೆ ಕಿರುತೆರೆ ನಟ ಪ್ರವೀಣ್ ಅವರ ಮನೆಯಲ್ಲಿ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ. ತನಿಖೆ ವೇಳೆ ಖಾನ್ ವಿರುದ್ಧ ಏಳು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ಬಂಧಿತನಿಂದ 65.28 ಲಕ್ಷ ರೂ. ಮೌಲ್ಯದ 470 ಗ್ರಾಂ ಚಿನ್ನಾಭರಣ, 1.5 ಕೆಜಿ ಬೆಳ್ಳಿ ಹಾಗೂ 4.60 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಇರುಳು ಕುರುಡು ಸಮಸ್ಯೆ ಎಂದು ಹಗಲಿನಲ್ಲೇ ಕಿರುತೆರೆ ನಟನ ಮನೆಗೆ ಕನ್ನ ಹಾಕಿದ ಅಂತಾರಾಜ್ಯ ಕಳ್ಳ!

ಈ ಅಪರಾಧ ಪ್ರಕರಣಗಳ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದು, ನಗರದಲ್ಲಿ ಅಪರಾಧ ನಿಯಂತ್ರಣಕ್ಕೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನೀ ನಂಗೆ ಅಲ್ಲವ’ ಹಾಡನ್ನು ಸಂಜಿತ್ ಹಾಡಿದ್ದು ಯಾರಿಗಾಗಿ? ಉತ್ತರಿಸಿದ ಗಾಯಕ – Kannada News | Sanjith Hegde’s Nange Allava: The Viral Hit Song’s Emotional Backstory

 ಸಂಜಿತ್ ಹೆಗಡೆ ಅವರು ಗಾಯನದ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಅವರು ಹೊಸ ಹೊಸ ಹಾಡುಗಳ ಮೂಲಕ ಗಮನ ಸೆಳೆಯುತ್ತಾರೆ. ಇತ್ತೀಚೆಗೆ ಬೆಂಗಳೂರಲ್ಲಿ ನಡೆದ ಅವರ ಕಾನ್ಸರ್ಟ್ಗೆ ಸಾಕಷ್ಟು ಜನರು ಸೇರಿದ್ದರು. ಇದು ಯಶಸ್ಸು ಕಂಡಿತ್ತು. ಇದರ ಕ್ಲಿಪ್​ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದರಲ್ಲಿ ಗಮನ ಸೆಳೆದಿದ್ದು ‘ನಂಗೆ ಅಲ್ಲವ’ ಹಾಡು.

ಸಂಜಿತ್ ಹೆಗಡೆ ಈಗಾಗಲೇ ಸಾಕಷ್ಟು ಹಾಡುಗಳನ್ನು ಹೇಳಿದ್ದಾರೆ. ಆ ಪೈಕಿ ಸಾಕಷ್ಟು ಗಮನ ಸೆಳೆದಿದ್ದು, ‘ನಂಗೆ ಅಲ್ಲವ’ ಹಾಡು. ಅವರು ಯಾವುದೇ ವೇದಿಕೆ ಏರಿದರೂ ಈ ಹಾಡನ್ನು ಹಾಡುವಂತೆ ಕೇಳುತ್ತಾರೆ. ಈ ಹಾಡನ್ನು ಅವರು ಹುಡಗಿ ಒಬ್ಬರಿಗಾಗಿ ಕಂಪೋಸ್ ಮಾಡಿದ್ದರಂತೆ. ಅವರು ಈಗ ಅವರ ಜೊತೆ ಇಲ್ಲ.

ಈ ಹಾಡನ್ನು ಕಂಪೋಸ್ ಮಾಡಿದ್ದು ಸಂಜಿತ್ ಹೆಗಡೆ. ನಾಗಾರ್ಜುನ ಶರ್ಮ ಅವರು ಈ ಹಾಡನ್ನು ಬರೆದಿದ್ದಾರೆ. ಈ ಹಾಡನ್ನು ಯಾರಿಗಾಗಿ ಹೇಳಿದ್ದು ಎಂದು ಸಂಜಿತ್ ಹೆಗಡೆ ಅವರಿಗೆ ಕೇಳಲಾಯಿತು. ಈ ವೇಳೆ ಅವರು ಯಾವುದೇ ಮುಚ್ಚುಮರೆ ಇಲ್ಲದೆ ಉತ್ತರ ನೀಡಿದ್ದರು.

ನಂಗೆ ಅಲ್ಲವಾ ಸಂಜಿತ್ ಯಾರಿಗೆ ಹೇಳುತ್ತಾರೆ’ ಎಂದು ಸಂಜಿತ್​ ಅವರಿಗೆ ಕೇಳಲಾಯಿತು. ‘ನಾನು ಮಾಡುವಾಗ ಒಂದು ಹುಡುಗಿ ಇದ್ದರು. ಈಗ ಅವಳು ನನ್ನಿಂದ ದೂರಾಗಿದ್ದಾಳೆ. ಆ ಟೈಮ್ ಅಲ್ಲಿ ಅವಳಿಗೆ ಹೇಳಿದ್ದು. ಈವಾಗ ಇನ್ನೊಬ್ಬರಿಗೆ ಹೇಳ್ತೀನಿ. ನೀವು ಇನ್ಯಾರಿಗೋ ಹೇಳ್ತೀರಾ’ ಎಂದು ಸಂಜಿತ್ ಹೇಳಿದ್ದಾರೆ.

ಆ ಹುಡುಗಿಯ ಹೆಸರು ಹೇಳೋದು ಬೇಡ. ನಾನು ಆ ವಿಷಯದಲ್ಲಿ ಖಾಸಗಿ ವ್ಯಕ್ತಿ. ಈಗ ಬೇರೆ ಯಾರೋ ಇದಾರೆ’ ಎಂದು ಒಪ್ಪಿಕೊಂಡರು ಸಂಜಿತ್ ಹೆಗಡೆ. ‘ನಂಗೆ ಅಲ್ಲವ’ ಹಾಡು 2024ರ ಜೂನ್​ ಅಲ್ಲಿ ರಿಲೀಸ್ ಆಯಿತು. ಈ ಹಾಡು ಬರೋಬ್ಬರಿ 14 ಮಿಲಿಯನ್ ವೀಕ್ಷಣೆ ಕಂಡಿದೆ. ಜನರು ಸಂಜಿತ್ ಹೆಗಡೆ ಧ್ವನಿಯಲ್ಲಿ ಈ ಹಾಡನ್ನು ಕೇಳಲು ಬಯಸುತ್ತಾರೆ. ಇದು ಆಲ್ಬಂ ಸಾಂಗ್ ಎಂಬುದು ವಿಶೇಷ.

ಇದನ್ನೂ ಓದಿ: ನಂದಿನಿ-ಸಂಜಿತ್ ಹೆಗಡೆ ಕೊಲ್ಯಾಬರೇಷನ್; ಸಖತ್ ಫನ್ ಆಗಿದೆ ಸಾಂಗ್

ಸಂಜಿತ್ ಅವರು ಕನ್ನಡದವರಿಗೆ ಮಾತ್ರವಲ್ಲ, ಪರಭಾಷೆ ಅವರಿಗೂ ಪರಿಚಯ ಇದ್ದಾರೆ. ಅವರು ಪರಭಾಷೆಯಲ್ಲಿ ಹಾಡಿದ ಹಾಡೂ ಕೂಡ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ನಿಯಂತ್ರಣ ತಪ್ಪಿ ಮಗುವಿನ ಮೇಲೆ ಪಲ್ಟಿ ಹೊಡೆದ ಟ್ರಕ್ – Kannada News | Truck Overturns at Vikarabad Junction, Multiple Vehicles Damaged

ವಿಕಾರಾಬಾದ್, ಡಿಸೆಂಬರ್ 24: ಟ್ರಕ್​ ಒಂದು ನಿಯಂತ್ರಣ ತಪ್ಪಿ ಮಗುವಿನ ಮೇಲೆ ಪಲ್ಟಿ ಹೊಡೆದ ಘಟನೆ ತೆಲಂಗಾಣದ ವಿಕಾರಾಬಾದ್​ನಲ್ಲಿ ನಡೆದಿದೆ. ವಾಹನವು ಸಮತೋಲನವನ್ನು ಕಳೆದುಕೊಂಡು, ಬಲಭಾಗದ ಟೈರ್‌ಗಳು ನೆಲದಿಂದ ಮೇಲಕ್ಕೆತ್ತಿ ಟ್ರಕ್ ವಾಹನಗಳ ಮೇಲೆ ಎಡಭಾಗಕ್ಕೆ ಉರುಳುತ್ತದೆ, ಕೆಲವು ವಾಹನಗಳು ನಜ್ಜುಗುಜ್ಜಾಗುತ್ತವೆ. ಟ್ರಕ್ ಪಲ್ಟಿಯಾಗುತ್ತಿದ್ದಂತೆ, ಭಾರವಾದ ಕಬ್ಬಿಣ ಅಥವಾ ಲೋಹದ ರ‍್ಯಾಕ್ ಕುಸಿದು ಮಗುವನ್ನು ಕೆಳಗೆ ಸಿಲುಕಿಸುತ್ತದೆ. ಆ ಕ್ಷಣ ತೀರಾ ಭಯಾನಕವಾಗಿದ್ದು ಜನರನ್ನು ಆಘಾತಗೊಳಿಸಿದೆ. ಬಿದ್ದ ಲೋಹದ ರ‍್ಯಾಕ್ ಅನ್ನು ಎತ್ತಿಕೊಂಡು ಮಗುವನ್ನು ಹೊರತೆಗೆಯುತ್ತಿರುವುದನ್ನು ಕಾಣಬಹುದು. ಅಪಘಾತದ ನಂತರ, ಸುಮಾರು ಎರಡು ಗಂಟೆಗಳ ಕಾಲ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ, ಹೆದ್ದಾರಿಯಲ್ಲಿ ಪ್ರಯಾಣಿಕರಿಗೆ ಅನನುಕೂಲವಾಯಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ – Kannada News | Bengaluru temperature: Extreme cold with misty weather in Bengaluru, Dry weather elsewhere

ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಬೆಂಗಳೂರು, ಡಿಸೆಂಬರ್ 23: ಬೆಂಗಳೂರಿನ ಹಲವೆಡೆ ಮೈಕೊರೆಯುವ ಚಳಿಯಿದ್ದು (Weather Forecast) , ರಾಜ್ಯದಲ್ಲೂ ಶೀತದಲೆಯ ಅಬ್ಬರ ಹೆಚ್ಚಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ಕರಾವಳಿಯಲ್ಲೂ ಒಣಹವೆ ಇರಲಿದ್ದು, ತಾಪಮಾನದಲ್ಲೂ ಏರುಪೇರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಲ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಎಲ್ಲೆಲ್ಲಿ ಒಣ ಹವೆ

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಾರತದ ವಿರುದ್ಧದ ಸರಣಿಗೆ ನ್ಯೂಝಿಲೆಂಡ್​ ತಂಡ ಪ್ರಕಟ – Kannada News | New Zealand Squad For India tour

ಭಾರತದ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಜನವರಿ 11 ರಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ನ್ಯೂಝಿಲೆಂಡ್ ತಂಡವನ್ನು ಮೈಕೆಲ್ ಬ್ರೇಸ್​ವೆಲ್ ಮುನ್ನಡೆಸಲಿದ್ದಾರೆ. ಇನ್ನು ಟಿ20 ಸರಣಿಯಲ್ಲಿ ಮಿಚೆಲ್ ಸ್ಯಾಂಟ್ನರ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ವಿಶೇಷ ಎಂದರೆ ಈ ಎರಡು ತಂಡಗಳಲ್ಲೂ ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೆ ವಿಲಿಯಮ್ಸನ್​ ಆಯ್ಕೆಯಾಗುವುದು ಅನುಮಾನ ಎನ್ನಬಹುದು.

ಇನ್ನು ಏಕದಿನ ಸರಣಿ ವೇಳೆ ಮ್ಯಾಟ್ ಹೆನ್ರಿ, ಮಾರ್ಕ್ ಚಾಪ್ಮನ್, ರಚಿನ್ ರವೀಂದ್ರ ಮತ್ತು ನಾಯಕ ಮಿಚೆಲ್ ಸ್ಯಾಂಟ್ನರ್​ಗೆ  ವಿಶ್ರಾಂತಿ ನೀಡಲಾಗಿದೆ. ಹೀಗಾಗಿಯೇ ಮೂರು ಪಂದ್ಯಗಳ ಸರಣಿಯಲ್ಲಿ ಬ್ರೇಸ್​​ವೆಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅದರಂತೆ ಭಾರತದ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ತಂಡಗಳು ಈ ಕೆಳಗಿನಂತಿವೆ…

ನ್ಯೂಝಿಲೆಂಡ್ ಏಕದಿನ ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಆದಿ ಅಶೋಕ್, ಕ್ರಿಸ್ಟಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೆ, ಝ್ಯಾಕ್ ಫೌಲ್ಕ್ಸ್, ಮಿಚ್ ಹೇ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇ, ವಿಲ್ ಯಂಗ್.

ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ (ವಿಕೆಟ್ ಕೀಪರ್), ಜೇಕಬ್ ಡಫಿ, ಝ್ಯಾಕ್ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಬೆವೊನ್ ಜೇಕಬ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ರಾಬಿನ್ಸನ್, ಇಶ್ ಸೋಧಿ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಭಾರತ ಏಕದಿನ ತಂಡ: ಇನ್ನೂ ಘೋಷಣೆಯಾಗಿಲ್ಲ.

ಭಾರತ vs ನ್ಯೂಝಿಲೆಂಡ್ ಏಕದಿನ ಸರಣಿ ವೇಳಾಪಟ್ಟಿ

  • ಮೊದಲ ಏಕದಿನ ಪಂದ್ಯ – ಜನವರಿ 11 – ವಡೋದರಾ – ಮಧ್ಯಾಹ್ನ 1:30
  • ಎರಡನೇ ಏಕದಿನ ಪಂದ್ಯ – ಜನವರಿ 14 – ರಾಜ್‌ಕೋಟ್ – ಮಧ್ಯಾಹ್ನ 1:30
  • ಮೂರನೇ ಏಕದಿನ ಪಂದ್ಯ – ಜನವರಿ 18 – ಇಂದೋರ್ – ಮಧ್ಯಾಹ್ನ 1:30

ಇದನ್ನೂ ಓದಿ: ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ

ಭಾರತ vs ನ್ಯೂಝಿಲೆಂಡ್ ಟಿ20 ಸರಣಿ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ – ಜನವರಿ 21 – ನಾಗ್ಪುರ – ರಾತ್ರಿ 7:00
  • ಎರಡನೇ ಟಿ20 ಪಂದ್ಯ – ಜನವರಿ 23 – ರಾಯ್ಪುರ – ರಾತ್ರಿ 7:00
  • ಮೂರನೇ ಟಿ20 ಪಂದ್ಯ – ಜನವರಿ 25 – ಗುವಾಹಟಿ – ರಾತ್ರಿ 7:00
  • ನಾಲ್ಕನೇ ಟಿ20 ಪಂದ್ಯ – ಜನವರಿ 28 – ವಿಶಾಖಪಟ್ಟಣ – ರಾತ್ರಿ 7:00
  • ಐದನೇ ಟಿ20 ಪಂದ್ಯ – ಜನವರಿ 31 – ತಿರುವನಂತಪುರಂ – ರಾತ್ರಿ 7:00

Source link

ಅಪೆಕ್ಸ್ ಬ್ಯಾಂಕ್ ಜಟಾಪಟಿ: ರಾಜಣ್ಣ ಭೇಟಿ ಮಾಡಿದ್ದ ಡಿಕೆ ಶಿವಕುಮಾರ್​ಗೆ ಚೆಕ್​ಮೇಟ್ ಕೊಟ್ಟ ಸಿದ್ದರಾಮಯ್ಯ! – Kannada News | Apex Bank Power Tussle in Karnataka: Siddaramaiah Counters DK Shivakumar Amid Leadership Row

ಬೆಂಗಳೂರು, ಡಿಸೆಂಬರ್ 24: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹುದ್ದೆ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಕೆಎನ್ ರಾಜಣ್ಣ (KN Rajanna) ಹಲವು ಬಾರಿ ಚರ್ಚೆ ನಡೆಸಿದ್ದು, ಯಾವುದೇ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಇದೀಗ ಅಪೆಕ್ಸ್ ಬ್ಯಾಂಕ್​ಗೆ ಆಡಳಿತಾಧಿಕಾರಿ (ಎಒ) ನೇಮಕ ಮಾಡಿದ್ದಾರೆ. ಆ ಮೂಲಕ ಡಿಕೆ ಶಿವಕುಮಾರ್​ಗೆ ಕೌಂಟರ್ ಕೊಟ್ಟಿದ್ದಾರೆ. ಸಹಕಾರ ಇಲಾಖೆಯ ಜವಾಬ್ದಾರಿ ಸಿದ್ದರಾಮಯ್ಯ ಬಳಿಯೇ ಇದ್ದು, ಕಾರ್ಯಚಟುವಟಿಕೆಯನ್ನು ಸಿಎಂ ಹೆಚ್ಚುವರಿ ಕಾರ್ಯದರ್ಶಿ ಜಿಯಾವುಲ್ಲಾಗೆ ವಹಿಸಲಾಗಿದೆ.

ಮಂಗಳವಾರ ಸಂಜೆ ಅಪೆಕ್ಸ್ ಬ್ಯಾಂಕ್​ ಆಡಳಿತಾಧಿಕಾರಿಯಾಗಿ ಜಿಯಾವುಲ್ಲ ಅಧಿಕಾರ ಸ್ವೀಕರಿಸಿದ್ದಾರೆ. ಇದರೊಂದಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹುದ್ದೆಯ ಆಯ್ಕೆ ಮತ್ತಷ್ಟು ಜಟಿಲವಾದಂತಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್ ಸಂಬಂಧಿಯಾಗಿರುವ ಎಂಎಲ್​ಸಿ ರವಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಡಿಕೆ ಶಿವಕುಮಾರ್​ಗೆ ರಾಜಣ್ಣ ಟಾಂಗ್

ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎಂಬ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಸಿಎಂ ನಿವಾಸ ಕಾವೇರಿಯಲ್ಲಿ ಪ್ರತಿಕ್ರಿಯಿಸಿದ ರಾಜಣ್ಣ, ಎಸ್​ಎಂ ಕೃಷ್ಟ ಅವರ ಕಾಲದಲ್ಲಿ ನಾನು ಅಧ್ಯಕ್ಷ ಆಗಿದ್ದು. ಡಿಕೆ ಶಿವಕುಮಾರ್ ಅವರದ್ದು ಸಹಕಾರ ಇರಬಹುದು, ಇಲ್ಲ ಅಂತ ಏನಿಲ್ಲ. ಸಹಾಯ ಮಾಡಿದರೆ ನನಪಿಸಿಕೊಳ್ಳುವುದು ನನ್ನ ಗುಣ. ಅಂದು ಡಿಕೆಶಿ ಸಹಕಾರ ಸಚಿವರಾಗಿದ್ದರು, ಆಗ ಸಹಾಯ ಆಗಿದೆ. ಅಂದು ನಮಗೆ ಹೆಚ್ಚು ಸಹಾಯ ಮಾಡಿದ್ದು ಜಾಲಪ್ಪ, ಬಸವರಾಜು, ಪರಮ ಹಣದ. ಅವರು ಚುನಾವಣೆ ದಿನ ಎಸ್​ಎಂ ಕೃಷ್ಣ ಮನವೊಲಿಸಿ ನನ್ನ ಅಧ್ಯಕ್ಷನನ್ನಾಗಿ ಮಾಡಿದರು ಎಂದು ಹೇಳಿದ್ದಾರೆ.

ಹಿಂದೆ ಸಿದ್ದರಾಮಯ್ಯ ಕೂಡ ನನ್ನನ್ನು ಅಧ್ಯಕ್ಷನಾಗಿ ಮಾಡಿದ್ದಾರೆ. ಅಲ್ಲಿ ಇರುವ ನಿರ್ದೇಶಕರು ಸೇರಿ ಆಯ್ಕೆ ಮಾಡಬೇಕಾಗಿರುವ ಹುದ್ದೆ ಅದು, ಸರ್ಕಾರ ಅಲ್ಲ. 21 ಜನ ನಮ್ಮನ್ನು ಆಯ್ಕೆ ಮಾಡಬೇಕು, ಸಲಹೆ ಮೇರೆಗೆ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ರಾಜಣ್ಣ ಟಾಂಗ್ ಕೊಟ್ಟರು.

ಇದನ್ನೂ ಓದಿ: ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು

ನಾಯಕತ್ವ ಬಿಕ್ಕಟ್ಟಿನ ಮಧ್ಯೆ ಹಳೇ ವಿಚಾರವನ್ನು ಡಿಕೆ ಶಿವಕುಮಾರ್ ಪ್ರಸ್ತಾಪ ಮಾಡಿದ್ರಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಹಳೇ ವಿಚಾರ ದೇಶಕ್ಕೇ ಗೊತ್ತಿದೆ, ಯಾರೆಲ್ಲಾ ನೆರವಾಗಿದ್ದಾರೆ ಎಂಬುದನ್ನು ನಾನು ಮರೆಯಲ್ಲ ಎಂದರು.

ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ದೆಹಲಿಗೆ ಹೋದಾಗ ಹೈಕಮಾಂಡ್ ನಾಯಕರ ಭೇಟಿ ಸಹಜ. ನಾನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನಾಗಬೇಕೆಂದು ಆಸೆ ಪಟ್ಟಿಲ್ಲ. ಅದರ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಜೊತೆ ಮಾತನಾಡಿಲ್ಲ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:57 am, Wed, 24 December 25

Source link

ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ – Kannada News | Bigg Boss Kannada 12: Rashika’s mother talks about her daughter

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ ಆಗಿದೆ. ರಾಶಿಕಾ ಅವರ ಸಹೋದರ ಮತ್ತು ಅವರ ತಾಯಿ ಅವರು ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಾಶಿಕಾ ಅವರ ಸಹೋದರನ ಎಂಟ್ರಿ ಸಖತ್ ಆಗಿದೆ. ರಾಶಿಕಾ ಅವರ ತಾಯಿಯೂ ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಮನೆ ಮಂದಿಯ ಜೊತೆಗೆಲ್ಲ ಬೆರೆತು ಮಾತನಾಡಿರುವ ರಾಶಿಕಾ ಅವರ ತಾಯಿ, ರಾಶಿಕಾ ಬಗ್ಗೆ ಕೆಲವು ಅಪರೂಪದ ವಿಷಯಗಳನ್ನು ಮನೆ ಮಂದಿಯ ಮುಂದೆ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನ ಮಾಲೀಕರು ಪರದಾಟ – Kannada News | Karnataka Vehicle Owners Face Crisis as Emission Certificates Fail to Update on VAHAN 4 System

ಬೆಂಗಳೂರು, ಡಿಸೆಂಬರ್​ 23: ರಾಜ್ಯದಲ್ಲಿ ವಾಹನಗಳ ಮಾಲೀಕರು ಪ್ರಸ್ತುತ ಸಾರಿಗೆ ಇಲಾಖೆಯ ವಾಹನ್-4 ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಪರಿವಾಹನ್ ಪೋರ್ಟಲ್‌ನಲ್ಲಿ ವಾಹನಗಳ ಎಮಿಷನ್ ಸರ್ಟಿಫಿಕೇಟ್‌ಗಳು ನವೀಕರಣಗೊಳ್ಳದಿರುವುದು ಪ್ರಮುಖ ಸಮಸ್ಯೆಯಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಟ್ರಾವೆಲ್ ಆಪರೇಟರ್ಸ್ ಅಸೋಸಿಯೇಷನ್‌ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಅವರು ಧ್ವನಿ ಎತ್ತಿದ್ದು, ಇದು ಹಲವು ತಿಂಗಳಿಂದ ವಾಹನ ಮಾಲೀಕರಿಗೆ ತಲೆನೋವಾಗಿದೆ ಎಂದಿದ್ದಾರೆ. ಈಗಾಗಲೇ ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಗಳು, ಸಚಿವರು ಮತ್ತು ಆಯುಕ್ತರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link