ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಶೆಡ್, ಶೀಟ್ ಮನೆಗಳು ನೆಲಸಮ: ಸಿಡಿದೆದ್ದ ಸ್ಥಳೀಯರು
ಬೆಂಗಳೂರು, (ಡಿಸೆಂಬರ್ 21) : ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಗೆ ಮೀಸಲಿಟ್ಟ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 150ಕ್ಕೂ ಅಧಿಕ ಶೆಡ್ ಹಾಗೂ ಶೀಟ್ ಮನೆಗಳನ್ನು ಶನಿವಾರ ತೆರವುಗೊಳಿಸಲಾಗಿದೆ.ಹೌದು.. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಕೋಗಿಲು 14.36 ಎಕರೆ ಜಮೀನಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಅನಿಮಲ್ ಇನ್ಸಿನರೇಷನ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ…