Category Archives: Blog

Your blog category

Horoscope Today 21 December: ಇಂದು ಈ ರಾಶಿಯವರಿಗೆ ವ್ಯವಹಾರಿಕ ಸೋಲಿನಿಂದ ಅಸಮಾಧಾನ

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಧೃತಿ, ಕರಣ : ನಾಗವಾನ್, ಸೂರ್ಯೋದಯ – 06 – 45 am, ಸೂರ್ಯಾಸ್ತ – 06 – 00 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16:36 – 18:00, ಯಮಗಂಡ ಕಾಲ 12:23- 13:47, ಗುಳಿಕ ಕಾಲ 15:51 – 16:36.

ಮೇಷ ರಾಶಿ: ಕನಸಿನಲ್ಲೇ ತೇಲಿದರೆ ವಾಸ್ತವಿಕ ನಷ್ಟವಾಗುವ ಸಂಭವ. ಪ್ರಯೋಗಾತ್ಮಕ ಚಿಂತನೆಯು ಯಶಸ್ಸನ್ನು ತರುತ್ತದೆ. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ಆಭರಣ ಖರೀದಿಗೆ ಉತ್ತಮ ದಿನವಿದಾಗಲಿದೆ. ವೃದ್ಧರ ಸೇವೆಯಲ್ಲಿ ತೊಡಗಿಕೊಳ್ಳುವಿರಿ. ಉದ್ಯೋಗವನ್ನು ನಂಬಿ ಜೀವನ ಸಾಗಿಸುವವರಿಗೆ ಬೇಸರ ಎದುರಾಗಬಹುದು. ನಿಮ್ಮ ವ್ಯಾಪಾರದ ತಂತ್ರವು ಫಲಿಸಬಹುದು. ವ್ಯಾಪಾರದಲ್ಲಿ ಲಾಭವನ್ನು ತಂದೀತು. ಕಲಾತ್ಮಕ ಕೆಲಸಗಳಲ್ಲಿ ಸಂತೋಷ ಸಿಗುತ್ತದೆ. ಮನಸ್ಸಿಗೆ ಶಾಂತಿ ದೊರೆಯುತ್ತದೆ. ಸನ್ನಿವೇಶಕ್ಕೆ ತಕ್ಕುದಾದ ಮಾತನ್ನು ಆಡಿ. ಎಲ್ಲ ಕಾರ್ಯಕ್ಕೂ ಲಾಭವನ್ನು ನಿರೀಕ್ಷಿಸುವುದು ಬೇಡ. ಅನುವಾದಕರಿಗೆ ಹೆಚ್ಚು ಕಾರ್ಯಗಳು ಬರಬಹುದು. ಮನಸ್ಸಿನ ಭಾರವನ್ನು ಕಳೆಯುವ ದಾರಿಗಳು ನಿಮ್ಮ ಮುಂದೆ ಇರುವುದು.

ವೃಷಭ ರಾಶಿ: ನಿಮ್ಮ ಇ‌ಂದಿನ ಅಭಿಪ್ರಾಯವನ್ನು ಇತರರು ತಪ್ಪಾಗಿ ಅರ್ಥೈಸಿಕೊಳ್ಳಬಹುದು. ಸ್ಪಷ್ಟ ಸಂವಹನದಿಂದ ನಷ್ಟವನ್ನು ತಪ್ಪಿಸಬಹುದು. ನಿಮ್ಮ ಅಂತಶ್ಶಕ್ತಿಯೇ ನಿಮ್ಮ ನಿಜವಾದ ಬಲವಾದುದರಿಂದ ಯಾವ ಸಮಸ್ಯೆಗಳಿಗೂ ನಿರಾತಂಕವಾಗಿ ಇರುವಿರಿ. ಸ್ನೇಹಿತರು ನಿಮಗೆ ಸುಳ್ಳು ಹೇಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಬರಬೇಕಾದ ಹಣವು ಆಕಸ್ಮಿಕವಾಗಿ ಬಂದಿದ್ದು ಖುಷಿ ಕೊಡುವುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗದು. ಆದಾಯದ ವಿಚಾರದಲ್ಲಿ ಹಿನ್ನಡೆಯಾಗಿದ್ದು ನಿಮ್ಮ ತಂತ್ರವು ಪೂರ್ಣವಾಗಿ ಫಲಿಸದು. ವೈಶಿಷ್ಟ್ಯತೆಯಿಂದ ಗುರುತಿಸಿಕೊಳ್ಳುವ ದಿನ. ಹೊಸ ಪ್ರಯೋಗಗಳಲ್ಲಿ ಯಶಸ್ಸು ಸಾಧ್ಯ. ಸ್ನೇಹವಲಯ ವಿಸ್ತಾರವಾಗುತ್ತದೆ. ನಿಮ್ಮ ತಪ್ಪಿಗೂ ಇನ್ನೊಬ್ಬರನ್ನು ಕೈ ಮಾಡಿ ತೋರಿಸುವುದು ಬೇಡ. ಮಾತಿನಿಂದಲೇ ಸಂಕಟವನ್ನು ತಂದುಕೊಳ್ಳುವಿರಿ. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ.

ಮಿಥುನ ರಾಶಿ: ದೇಹಾರೋಗ್ಯವನ್ನು ನಿರ್ಲಕ್ಷಿಸಿದರೆ ಅನಾರೋಗ್ಯದ ಆಧಿಕ್ಯ.‌ ಕೆಲಸ ಮತ್ತು ವಿಶ್ರಾಂತಿ ಸಮತೋಲನದಲ್ಲಿದ್ದರೆ ದಿನ ಶುಭಕರ. ಇರುವ ಚೈತನ್ಯವನ್ನು ಬೆಳೆಸಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳಬಡೆಕು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಪ್ರೀತಿಯ ವಿಷಯದಲ್ಲಿ ಇಂದು ದುಃಖವುಂಟಾಗಬಹುದು. ಮನಸ್ತಾಪವನ್ನು ದ್ವೇಷವಾಗಿ ಪರಿವರ್ತಿಸಿಕೊಳ್ಳುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ನೀವು ತಳ್ಳಿಹಾಕುವಿರಿ. ಶ್ರಮಕ್ಕೆ ತಕ್ಕ ಫಲ ದೊರೆಯುವ ದಿನ. ಹಿರಿಯರಿಂದ ಮಾರ್ಗದರ್ಶನ ಸಿಗುತ್ತದೆ. ಕಾರ್ಯಕ್ಷೇತ್ರದಲ್ಲಿ ಸ್ಥಿರತೆ ಕಾಣಿಸುತ್ತದೆ. ವ್ಯವಹಾರದಲ್ಲಿ ಇರಬೇಕಾದ ಚಾಕಚಕ್ಯತೆಯನ್ನು ಬೆಳೆಸಿಕೊಳ್ಳಬೇಕಾಗುವುದು. ಪ್ರೀತಿಯ ಮಾತುಗಳಿಂದ ನಿಮ್ಮತ್ತ ಜನರು ಆಕರ್ಷಿತರಾಗುವುದು. ವಿದ್ಯಾರ್ಥಿಗಳಿಗೆ ಅನ್ಯರ ಸಹವಾಸ ಸಿಗಬಹುದು. ಬಿಡುಗಡೆಗಾಗಿ ದಾರಿಯನ್ನು ನೀವೇ ಹುಡುಕಿಕೊಳ್ಳುವಿರಿ.

ಕರ್ಕಾಟಕ ರಾಶಿ: ಆಶಾವಾದ ನಿಮ್ಮ ಬಲವನ್ನು ಹೆಚ್ಚು ಮಾಡುತ್ತದೆ. ಆದರೆ ಅತಿಯಾದ ನಿರೀಕ್ಷೆಗಳು ಮನಸ್ಸಿಗೆ ನೋವು ತರುತ್ತವೆ. ಏನೇ ಮಾಡಿದರೂ ಚಾಂಚಲ್ಯವನ್ನು ನಿಯಂತ್ರಿಸಲಾಗದೇ ಕಷ್ಟವಾಗುವುದು. ಸುಳ್ಳನ್ನಾಡಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳಬೇಕಾದೀತು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದು ಕಾರ್ಯಕ್ಕೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಉತ್ತಮ. ವಿದ್ಯೆಯ ಕಾರಣಕ್ಕೆ ಇಂದು ನಿಮಗೆ ಗೌರವವು ಸಿಗಲಿದೆ. ಕಾರ್ಯದ ಒತ್ತಡದಿಂದ‌ ಶಿರೋವೇದನೆ ಕಾಣಿಸಿಕೊಳ್ಳುವುದು. ಹೊಸ ಆಲೋಚನೆಗಳು ಯಾರದೋ ಪ್ರೋತ್ಸಾಹವಿಲ್ಲದೇ ಚೈತನ್ಯ ನೀಡುತ್ತವೆ. ಪ್ರಯಾಣ ಅಥವಾ ಅಧ್ಯಯನದಲ್ಲಿ ಲಾಭ ಸಿಗುತ್ತದೆ. ವಾಸ್ತವಿಕ ದೃಷ್ಟಿಯಿಂದ ನಡೆದುಕೊಂಡರೆ ಯಶಸ್ಸು ಖಚಿತ. ಸಹಾಯವನ್ನು ಕೇಳಿ ಬಂದವರಿಗೆ ಇಲ್ಲ ಎನ್ನುವುದು ಬೇಡ.

ಸಿಂಹ ರಾಶಿ: ಕೆಲಸದಲ್ಲಿ ಸ್ಥಿರ ಯಶಸ್ಸು ಕಾಣಬಹುದು. ಆದರೆ ಅನುಮಾನ ಮತ್ತು ಅಸಹನೆ ದೂರ ಮಾಡಿಕೊಳ್ಳಬೇಕು. ಇಂದು ಅನಿರೀಕ್ಷಿತ ಬಂಧುಗಳ ಆಗಮನದಿಂದ ಯೋಜಿತವಾದ ಕಾರ್ಯಗಳನ್ನು ಬದಲಿಸುವುದು ಬೇಡ. ಪ್ರಯಾಣದಿಂದ ಹಿಂಸೆ ಆಗಬಹುದು.‌ ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ನಿರೀಕ್ಷಿತ ಫಲವು ಲಭಿಸದು. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ. ಸಹೋದ್ಯೋಗಿಗಳ ಮೇಲೆ‌ ನಿಮಗೆ ಅಸೂಯೆ ಉಂಟಾಗಬಹುದು. ಆಂತರಿಕ ಶಕ್ತಿ ಹೆಚ್ಚಾಗುವ ದಿನ. ಗುಪ್ತ ಪ್ರಯತ್ನಗಳು ಫಲ ನೀಡುತ್ತವೆ. ವಿಶ್ವಾಸ ಮತ್ತು ಧೈರ್ಯದಿಂದ ನಡೆದುಕೊಂಡರೆ ಜಯ ಸಿಗುತ್ತದೆ. ನಿಮ್ಮ ಯೋಜನೆ ಉತ್ತಮವಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕಷ್ಟವಾದೀತು. ನಿಮ್ಮ‌ ಕಾರ್ಯಕ್ಕೆ ಇನ್ಯಾರೋ ಯಶಸ್ಸು ಪಡೆವರು. ಸಂಗಾತಿಯ ಬಗ್ಗೆ ಇದ್ದ ಪೂರ್ವಾಗ್ರಹವು ಬದಲಾಗಿ ಅವರ ಜೊತೆ ಅನ್ಯೋನ್ಯವಾಗಿ ಇರುವಿರಿ. ಒಂದೇ ಕಾರ್ಯವನ್ನು ಎರಡು ರೀತಿಯ ಲಾಭವಾಗುವಂತೆ ನೋಡಿಕೊಳ್ಳುವಿರಿ.

ಕನ್ಯಾ ರಾಶಿ: ಆರ್ಥಿಕ ವಿಷಯಗಳಲ್ಲಿ ಲಾಭದ ಸೂಚನೆ. ಆದರೆ ತೀರ್ಮಾನದಲ್ಲಿ ವಿಳಂಬ ನಿರ್ದಿಷ್ಟ ಗುರಿಯನ್ನು ತಲುಪದೇ ಬೇಸರ ಕಾರಣವಾಗಬಹುದು. ಸಮಯಕ್ಕೆ ಸರಿಯಾದ ನಿರ್ಧಾರ ದಿನವನ್ನು ಯಶಸ್ವಿಗೊಳಿಸುತ್ತದೆ. ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗಬಹುದು. ಇಲ್ಲವಾದರೆ ನಿಮಗೇ ತೊಂದರೆ. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು.‌ ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದ್ದು ನಿಮ್ಮ‌ ಇಂದಿನ ಕಾರ್ಯವು ಬದಲಾಗಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ. ನಿಮ್ಮ ಮನಸ್ಸಿಗೆ ಹಿಡಿಸದೇ ಇರುವವರಿಂದ ದೂರ ಉಳಿಯುವಿರಿ. ಅನ್ಯರನ್ನು ಪೀಡಿಸಿ ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಕಾನೂನಿನ ಕೆಲಸವನ್ನು ಯಾರ ಸಲಹೆಯನ್ನು ಪಡೆಯದೇ ಮಾಡುವಿರಿ. ಸಂಬಂಧಗಳಲ್ಲಿ ಸಮತೋಲನ ಸಿಗುತ್ತದೆ. ಮಾತುಕತೆಗಳಿಂದ ಸಮಸ್ಯೆಗಳು ಪರಿಹಾರವಾಗುತ್ತವೆ. ಭವಿಷ್ಯದ ಭದ್ರೆತೆಗೆ ಬೇಕಾದ ಬುನಾದಿಯನ್ನು ಹಾಕಿಕೊಳ್ಳುವಿರಿ.

ತುಲಾ ರಾಶಿ: ಆರೋಗ್ಯದ ಕಡೆ ಗಮನ ಹರಿಸಿದರೆ ಶಕ್ತಿ ಹೆಚ್ಚುತ್ತದೆ. ಆದರೆ ಅತಿಯಾದ ಚಿಂತನೆ ಮನಸ್ಸನ್ನು ಕುಗ್ಗಿಸಬಹುದು. ಉದ್ಯೋಗದಲ್ಲಿ ಬಡ್ತಿಗೆ ಅವಕಾಶಗಳು ಬರಬಹುದು. ಆದಾಯ ಹೆಚ್ಚಲಿದೆ. ಸಿಕ್ಕ ಅವಕಾಶದಲ್ಲಿ ತೃಪ್ತಿ ಪಡೆಯುವುದು ಮುಖ್ಯವಾಗಿರಲಿ. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು.‌ ಮನಶ್ಚಾಂಚಲ್ಯದಿಂದ ಕಛೇರಿಯಲ್ಲಿ ಸರಿಯಾದ ಕೆಲಸವನ್ನು ಮಾಡಲಾಗದು. ಪ್ರೀತಿಯು ನಿಮ್ಮ ಯಶಸ್ಸಿನ ವೇಗಕ್ಕೆ ಕಡಿವಾಣ ಹಾಕಬಹುದು. ನಿಮ್ಮ ಉದ್ದೇಶವೇ ಬದಲಾದರೂ ಅಚ್ಚರಿ ಪಡಬೇಕಾಗಿಲ್ಲ. ಸ್ನೇಹಿತರು ನಿಮ್ಮ ಸಮಯವನ್ನು ವ್ಯರ್ಥಮಾಡಿಯಾರು. ಯೋಜಿತವಾಗಿ ಕೆಲಸ ಮಾಡುವ ದಿನ. ಸೂಕ್ಷ್ಮ ಗಮನದಿಂದ ಲಾಭ ದೊರೆಯುತ್ತದೆ. ಸರಳ ದೃಷ್ಟಿಕೋನ ಇಟ್ಟುಕೊಂಡರೆ ಯಶಸ್ಸು ನಿಮ್ಮದಾಗುತ್ತದೆ. ಎಲ್ಲ ಕಡೆಗಳಿಂದಲೂ ಮಾನಸಿಕ ಸಂತೃಪ್ತಿ ಇರದೇ ಇರುವುದು ಯಾರ ಬಳಿ ಹೇಳಿಕೊಳ್ಳಬೇಕು ಎಂದು ಗೊತ್ತಾಗದು.

ವೃಶ್ಚಿಕ ರಾಶಿ: ಕೆಲಸದಲ್ಲಿ ದೃಢತೆ ಸಿಗುತ್ತದೆ. ನಾಯಕತ್ವ ಗುಣದಿಂದ ಯಶಸ್ಸು ದೊರೆಯುತ್ತದೆ. ಆದರೆ ಅಹಂಕಾರ ಮತ್ತು ಅತಿಯಾದ ಆತ್ಮವಿಶ್ವಾಸ ಅಪಯಶಸ್ಸಿಗೆ ಕಾರಣವಾಗಬಹುದು. ಕೌಟುಂಬಿಕ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ನಿಮ್ಮ ಅಂತರಂಗದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಯೋಚಿಸುವಿರಿ. ಕಛೇರಿಯ ಕಾರ್ಯವನ್ನು ಮನೆಯಲ್ಲಿ ಇದ್ದು ಮಾಡಬೇಕಾಗಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ಸಾಮಾಜಿಕ ತಾಣದಲ್ಲಿ ಹೆಚ್ಚು ಸಮಯ ಕಳೆಯುವಿರಿ. ಸ್ನೇಹಿತರ ತಮಾಷೆಯು ನಿಮಗೆ ಇಷ್ಟವಾಗದು. ದ್ವಿಚಕ್ರ ವಾಹನವನ್ನು ಓಡಿಸುವಾಗ ಎಚ್ಚರ ಇರಲಿ. ಸಂಗಾತಿಯ ಮನಃಸ್ಥಿತಿಗೆ ಪೂರಕವಾಗಿ ನಿಮ್ಮ ಆಲೋಚನೆಯೂ ಇರಲಿದ್ದು ನಿಮಗೆ ಖುಷಿಯಾಗುವುದು. ನಿಮ್ಮ ಪ್ರತಿಭೆ ಹೊರಹೊಮ್ಮುತ್ತದೆ. ಸರಳತೆ ಮತ್ತು ಸಂಯಮದಿಂದ ದಿನವನ್ನು ಇನ್ನಷ್ಟು ಉಜ್ಜ್ವಲ ಮಾಡಿಕೊಳ್ಳುವಿರಿ. ನಿಮ್ಮವರನ್ನು ಹೊಗಳಿ ಮೆಚ್ಚಿಸಿ ಅವರಿಂದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಕೋಪವನ್ನು ನಿಯಂತ್ರಣದಲ್ಲಿ ಇರಿಸಿದಷ್ಟು ನೀವು ಕಾರ್ಯದಲ್ಲಿ ಸಫಲರಾಗುವಿರಿ.

ಧನು ರಾಶಿ: ಸಣ್ಣ ಸಣ್ಣ ಸಂತೋಷಗಳು ದಿನವನ್ನು ಸುಂದರಗೊಳಿಸುತ್ತವೆ. ಆದರೆ ಭಾವನಾತ್ಮಕವಾಗಿ ತೆಗೆದುಕೊಳ್ಳುವ ನಿರ್ಧಾರಗಳು ಗೊಂದಲ ತರಬಹುದು. ತಾಳ್ಮೆಯಿಂದ ನಡೆದುಕೊಂಡರೆ ಫಲ ಉತ್ತಮ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ‌ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ. ನಿಮ್ಮ ನಡತೆಯಿಂದ‌ ಕುಲಕ್ಕೆ ಅವಮಾನವಾಗಬಹುದು. ನಿದ್ರೆಯನ್ನು ಹೆಚ್ಚು ಮಾಡುವಿರಿ. ಜವಾಬ್ದಾರಿಯನ್ನು ಪಡೆದ ಬೆನ್ನಲ್ಲೇ ಹಿತಶತ್ರುಗಳನ್ನೂ ಹೆಚ್ಚಿಸಿಕೊಳ್ಳುವಿರಿ. ಚಂಚಲ‌ವಾದ ಮನಸ್ಸು ನಿಮ್ಮ ಸಂಗಾತಿಗೆ ಇಷ್ಡವಾಗದು. ಆದಾಯ ಮೂಲದ ರಹಸ್ಯವನ್ನು ಹೇಳಿಕೊಳ್ಳುವುದು ಬೇಡ. ನಕಾರಾತ್ಮಕ ಚಿಂತನೆಯನ್ನು ಕಡಿಮೆ ಮಾಡುವುದು ಉತ್ತಮ. ಹಳೆಯ ಗೆಳತಿಯು ನಿಮ್ಮನ್ನು ಇಷ್ಟಪಡಬಹುದು. ಅತಿಯಾದರೆ ಅಮೃತವೂ ವಿಷ ಎನ್ನುವ ಮಾಹಿತಿ ಗೊತ್ತಿರಲಿ. ಎಲ್ಲದಕ್ಕೂ ಸಿಟ್ಟು ಮಾತ್ರವೇ ಪರಿಹಾರವಲ್ಲ. ಮನಸ್ಸಿಗೆ ಹಿತ ನೀಡುವ ದಿನ. ಕುಟುಂಬದವರು ನಿಮ್ಮ ಬೆಂಬಲ ನಿಲ್ಲುವರು.

ಮಕರ ರಾಶಿ: ಹೊಸ ಸಂಪರ್ಕಗಳಿಂದ ಲಾಭ. ಆದರೆ ಅನಗತ್ಯ ಚರ್ಚೆಗಳು ಮನಸ್ಸಿಗೆ ಒತ್ತಡ ತರುತ್ತವೆ. ಸಮಯಕ್ಕೆ ಮಿತಿಮೀರಿ ಮಾತನಾಡದೆ ಇದ್ದರೆ ಉತ್ತಮ. ನಿಮಗೆ ಉದ್ಯೋಗದಿಂದ ನಿವೃತ್ತಿಯು ಬೇಕೆನಿಸಬಹುದು. ಮುಖಂಡರಿಗೆ ಪ್ರಶಂಸೆ ಗೌರವಗಳು ಸಿಗಲಿವೆ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ‌ ಇರಲಿ. ನಟರಿಗೆ ಅವಕಾಶವು ಸಿಕ್ಕೂ ಸಿಗದಂತೆ ಆಗಬಹುದು. ಒಂದೇ ವಿಚಾರವನ್ನು ಹೆಚ್ಚು ಯೋಚಿಸಿದಷ್ಟೂ ಮನಸ್ಸು ದುರ್ಬಲವಾಗಬಹುದು. ಅಲ್ಪ ಮೊತ್ತವನ್ನು ಸಾಮಾಜಿಕ‌ ಕಾರ್ಯಕ್ಕೆ ಕೊಡುವಿರಿ. ಒತ್ತಡವು ಬಂದರೆ ಸ್ವಲ್ಪ ಕಾಲ ಎಲ್ಲವನ್ನೂ ಮರೆತು ಓಡಾಡಿ ಬನ್ನಿ. ರಾಜಕೀಯವಾಗಿ ಮೇಲೆ‌ ಬರಲು ನಿಮ್ಮ ತಂತ್ರಗಾರಿಕೆ ಇರುವುದು. ಸ್ನೇಹಿತರ ಜೊತೆಗಿನ ಓಡಾಟದಿಂದ‌ ನಿಮ್ಮವರಿಗೆ ಅನುಮಾನವು ಬರುವುದು. ನೀವಾಡುವ ಮಾತು ಜವಾಬ್ದಾರಿಯ ಸ್ಥಾನದ್ದು ಎನ್ನುವುದನ್ನು ನೆನಪಿನಲ್ಲಿ ಇಡಿ. ಮಾತು ಮತ್ತು ಯೋಚನೆಯಿಂದ ಕೆಲಸ ಸುಲಭವಾಗುತ್ತದೆ. ಉದ್ಯೋಗದ ಪ್ರಯತ್ನವು ಫಲಿಸುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು.

ಕುಂಭ ರಾಶಿ: ಹಠ ಮತ್ತು ಹಳೆಯ ವಿಷಯಗಳ ಮೇಲೆ ಒತ್ತಡ ಅಪಯಶಸ್ಸು ತರುವುದು. ವಿನಯದಿಂದ ವರ್ತಿಸಿದರೆ ಯಶಸ್ಸು ನಿಮ್ಮದಾಗುತ್ತದೆ. ಇಂದು ನಿಮಗೆ ಸಣ್ಣ ತಡೆಯೂ ದೊಡ್ಡದಾಗಿ ಕಾಣಿಸುವುದು. ಇಂದು ನಿಮ್ಮ ಯಾವುದಾದರೂ ಕಾರ್ಯಕ್ಕೆ ಸ್ನೇಹಿತರ ಬೆಂಬಲದಿಂದ ಸಾಧ್ಯವಾಗಿಸುವಿರಿ. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ವ್ಯವಹಾರದಲ್ಲಿ ಗೊಂದಲವಿಟ್ಟುಕೊಳ್ಳುವುದು ಬೇಡ. ನಿಮ್ಮ ಸೋಲನ್ನು ಒಪ್ಪಿಕೊಳ್ಳದೇ ವಾದಿಸುವಿರಿ. ಪರೀಕ್ಷೆಯ ಸಮಯವಿದ್ದರೂ ವಿದ್ಯಾರ್ಥಿಗಳು ಅನ್ಯ ಚಟುವಟಿಕೆಯಲ್ಲಿ ನಿಶ್ಚಿಂತೆಯಿಂದ ಭಾಗವಹಿಸುವರು. ಆರ್ಥಿಕವಾಗಿ ಸಮತೋಲನದ ದಿನ. ಕುಟುಂಬದಲ್ಲಿ ನೆಮ್ಮದಿ ವಾತಾವರಣ ಇರುತ್ತದೆ. ಸಣ್ಣ ಲಾಭದಿಂದ ಸಂತೋಷ ಸಿಗುತ್ತದೆ. ಯೋಗ್ಯತೆ ಇದ್ದರೂ ಯೋಗವೂ ಜೊತೆಗೆ ಬಂದಾಗ ಸಿಗಬೇಕಾದುದು ಸಿಗಲಿದೆ. ಆತುರದಲ್ಲಿ ಏನನ್ನಾದರೂ ಮಾಡಿಕೊಳ್ಳುವುದು ಬೇಡ.

ಮೀನ ರಾಶಿ: ಆತುರದ ನಿರ್ಧಾರ ಅಪಯಶಸ್ಸಿಗೆ ಕಾರಣವಾಗಬಹುದು. ಶಾಂತ ಮನಸ್ಸಿನಿಂದ ನಡೆದುಕೊಂಡರೆ ದಿನ ಸುಂದರವಾಗಿ ಮುಗಿಯುತ್ತದೆ. ಮೇಲ್ನೋಟಕ್ಕೆ ಯಾವುದನ್ನೂ ತೀರ್ಮಾನಿಸುವುದು ಕಷ್ಟವೇ. ಎಲ್ಲವನ್ನೂ ವ್ಯಾವಹಾರಿಕ ದೃಷ್ಟಿ ರಿಂದಲೇ ನೋಡುವುದು ಕಷ್ಟ. ಆಪ್ತರಿಗೆ ಇಷ್ಟವಾದ ಉಡುಗೊರೆಯನ್ನು ಕೊಡಲಿದ್ದೀರಿ. ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಧೈರ್ಯ ಯಶಸ್ಸಿಗೆ ದಾರಿ ಮಾಡಿಕೊಡುತ್ತದೆ. ಸ್ನೇಹಿತರ ಸಹಕಾರ ಸಿಗುತ್ತದೆ. ಕೆಲವರ ವ್ಯಕ್ತಿತ್ವವು ನಿಮಗೆ ಇಷ್ಟವಾದೀತು. ಅಪರಿಚಿತರು ಇರುವ ಕಡೆ ನೀವು‌ ಮೌನವಾಗಿ ಇರುವಿರಿ. ನಿಮ್ಮ ಬಗ್ಗೆ ನಕಾರಾತ್ಮಕ ಭಾವನೆಯು ಇರಲಿದ್ದು ಅದನ್ನು ಲೆಕ್ಕಿಸದೇ ಕಾರ್ಯದಲ್ಲಿ ಮಗ್ನರಾಗುವಿರಿ. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ.

ಲೋಹಿತ ಹೆಬ್ಬಾರ್ – 8762924271 (what’s app only)

Source link

ಅವರ ತಾಯಿಯ ಬಗ್ಗೆ ಹೇಗೆ ಮಾತನಾಡಿದಿರಿ: ಅಶ್ವಿನಿ ವಿರುದ್ಧ ಕಿಚ್ಚ ಗರಂ – Kannada News | Bigg Boss Kannada: Sudeep criticized Ahwini’s fight with Kavya

ಬಿಗ್​​ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಅವರ ಅಬ್ಬರ ಜೋರಾಗಿದೆ. ಅದರಲ್ಲೂ ಬಿಗ್​​ಬಾಸ್ ಪ್ರಾರಂಭವಾದ ಮೊದಲ ಕೆಲ ವಾರಗಳಲ್ಲಿ ಅಶ್ವಿನಿ ಅವರು ಇಡೀ ಮನೆಯನ್ನು ನಿಯಂತ್ರಣದಲ್ಲಿ ಇಟ್ಟಿದ್ದರು. ಆದರೆ ತಮ್ಮ ಧಮನಕಾರಿ ಮಾತುಗಳಿಂದಾಗಿ ಸುದೀಪ್ ಅವರಿಂದ ಟೀಕೆಗೆ ಸಹ ಗುರಿಯಾದರು. ರಕ್ಷಿತಾರ ಸ್ಟೇಟಸ್ ಬಗ್ಗೆ ಆಡಿದ ಮಾತು, ಗೆಜ್ಜೆ ವಿಷಯದಲ್ಲಿ ರಕ್ಷಿತಾರನ್ನು ಸಿಕ್ಕಿ ಹಾಕಿಸಿ ಮಜಾ ತೆಗೆದುಕೊಂಡಿದ್ದು, ಕೆಲವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿದ್ದು, ಹೀಗೆ ಹಲವು ವಿಷಯಗಳಿಗೆ ಸುದೀಪ್ ಅವರಿಂದ ಟೀಕೆಗೆ ಒಳಪಟ್ಟ ಬಳಿಕ ಅಶ್ವಿನಿ ತುಸು ಮೆತ್ತಗಾಗಿದ್ದರು. ಆದರೆ ಕಳೆದ ವಾರ ಮತ್ತೊಮ್ಮೆ ಅವರು ತಮ್ಮ ಹಳೆಯ ವರಸೆ ತೋರಿಸಿದ್ದಾರೆ.

ಕಳೆದ ವಾರ ನೀರಿನ ಟಬ್​​ನ ಟಾಸ್ಕ್ ಒಂದು ನಡೆದಿತ್ತು. ಈ ವೇಳೆ ಅಶ್ವಿನಿ ಹಾಗೂ ಕಾವ್ಯಾ ಅವರುಗಳು ಪರಸ್ಪರ ಎದುರಾಳಿ ತಂಡಗಳಲ್ಲಿ ಇದ್ದರು. ಇಬ್ಬರೂ ಸಹ ಗೆಲ್ಲಲೇ ಬೇಕೆಂದು ಆಟ ಆಡುತ್ತಿದ್ದರು. ಈ ವೇಳೆ ಅಶ್ವಿನಿ ಅವರು ತಮ್ಮ ತೋಲ್ಬಳ ಬಳಸಿ ಕಾವ್ಯಾ ಅವರನ್ನು ಸೋಲಿಸಿದರು. ಆಗ ಸಿಟ್ಟಾದ ಕಾವ್ಯಾ ಚರ್ಚೆಯ ವೇಳೆ, ‘ಆಯ್ತು ಹೋಗಮ್ಮ’ ಎಂದೇನೋ ಹೇಳಿದರು. ಅದನ್ನು ತುಸು ಅಫೆನ್ಸಿವ್ ಆಗಿ ತೆಗೆದುಕೊಂಡ ಅಶ್ವಿನಿ, ‘ಅದನ್ನೆಲ್ಲ ನಿನ್ನ ಅಮ್ಮನ ಬಳಿ ಹೇಳಿಕೊ’ ಎಂದರು. ಇದು ಕಾವ್ಯಾರನ್ನು ಕೆರಳಿಸಿತು, ‘ನನ್ನ ಅಮ್ಮನ ಬಗ್ಗೆ ಮಾತನಾಡಬೇಡಿ, ಅವರ 10% ಸಹ ನೀವಿಲ್ಲ’ ಎಂದು ಕಿರುಚಾಡಲು ಆರಂಭಿಸಿದರು. ಆದರೆ ಅಶ್ವಿನಿ ‘ನಿನ್ನ ಅಮ್ಮನ ಬಳಿ ಹೇಳು ಹೋಗು’ ಎಂದು ಕೆಲ ಬಾರಿ ಹೇಳಿದರು.

ಇದನ್ನೂ ಓದಿ:ಸುದೀಪ್ ಎದುರೇ ಧ್ರುವಂತ್​​ಗೆ ಬೆದರಿಕೆ ಹಾಕಿದ ರಕ್ಷಿತಾ ಶೆಟ್ಟಿ

ಶನಿವಾರದ ಎಪಿಸೋಡ್​​ನಲ್ಲಿ ಸುದೀಪ್ ಅವರು ಈ ವಿಷಯ ಚರ್ಚೆ ಮಾಡಿದರು. ಮೊದಲಿಗೆ ಟಾಸ್ಕ್ ವಿಚಾರವಾಗಿ ಚರ್ಚೆ ಮಾಡಿ, ರಾಶಿಕಾ ಅವರು ಕೆಟ್ಟದಾಗಿ ಉಸ್ತುವಾರಿ ಮಾಡಿದ ರೀತಿಯನ್ನು ಟೀಕೆ ಮಾಡಿದರು. ಆ ನಂತರ ರಘು, ಚೈತ್ರಾ ಇನ್ನಿತರರು ಟಾಸ್ಕ್ ಅನ್ನು ತಪ್ಪಾಗಿ ಅರ್ಥೈಸಿಕೊಂಡು, ತಪ್ಪಾಗಿ ಆಡಿದ್ದರ ಬಗ್ಗೆ ಟೀಕೆ ಮಾಡಿದರು. ‘ನೀವೆಲ್ಲ 10-12 ವರ್ಷ ಮಕ್ಕಳಿಗಿಂತಲೂ ಕಡೆಯಾಗಿ ವರ್ತಿಸಿದಿರಿ. ಪರಸ್ಪರ ಬೈಯ್ಯುವುದು, ಗಿಲ್ಲುವುದು, ಕೂದಲೆಳೆಯುವುದು, ಉಗಿಯುವುದು ಇದೆಲ್ಲ ಆಡುವ ರೀತಿಯೇ?’ ಎಂದು ಸುದೀಪ್ ಪ್ರಶ್ನೆ ಮಾಡಿದರು.

ಅಂತಿಮವಾಗಿ ಅಶ್ವಿನಿ ವಿಷಯಕ್ಕೆ ಬಂದ ಸುದೀಪ್, ‘ಮನೆಯಲ್ಲಿ ಇರುವವರನ್ನು ಬಿಗ್​ಬಾಸ್ ಮನೆಗೆ ಏಕೆ ತರುತ್ತೀರಿ, ಕಾವ್ಯಾ ಅವರ ತಾಯಿಯ ವಿಷಯ ನಿಮಗೆ ಯಾಕೆ? ನಿಮ್ಮ ಜಗಳ ಕಾವ್ಯಾ ಜೊತೆಗೆ, ಅವರೊಟ್ಟಿಗೆ ಜಗಳ ಮಾಡಿ, ಅವರ ಮನೆಯವರ ವಿಷಯ ನಿಮಗೆ ಯಾಕೆ? ಅವರ ತಾಯಿಯೂ ಸಹ ಶೋ ನೋಡುತ್ತಿರುತ್ತಾರೆ. ಬಹುಷಃ ಕಾವ್ಯಾರ ತಾಯಿ, ನಿಮ್ಮ ಅಭಿಮಾನಿಯೇ ಆಗಿರಬಹುದು? ಆದರೆ ನೀವು ಆಡಿದ ಮಾತಿನಿಂದ ಅವರ ಮನಸ್ಸಿಗೆ ಎಷ್ಟು ಬೇಸರ ಆಗಿರಬಹುದು’ ಎಂದರು. ಅಶ್ವಿನಿ, ಸ್ಪಷ್ಟನೆ ನೀಡುವ ಪ್ರತಯ್ನ ಮಾಡಿದರಾದರೂ ಸುದೀಪ್ ಅದನ್ನು ಒಪ್ಪಲಿಲ್ಲ, ‘ನೀವು ಏನೇ ಹೇಳಿದರೂ ಸಹ ನಾನು ಒಪ್ಪುವುದಿಲ್ಲ’ ಎಂದರು. ಬಳಿಕ ಅಶ್ವಿನಿ, ಕ್ಷಮೆ ಕೇಳಿದರು. ನಾನು ತಪ್ಪು ಮಾಡಿದೆ, ಅವರ ತಾಯಿಯ ವಿಷಯ ಎತ್ತಬಾರದಿತ್ತು ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 10:57 pm, Sat, 20 December 25

Source link

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡೆ – Kannada News | DK Shivakumar and KN Rajanna Meet; Watch Video

ಬೆಂಗಳೂರು, ಡಿಸೆಂಬರ್​ 20: ರಾಜ್ಯ ರಾಜಕೀಯದಲ್ಲಿ ಪಟ್ಟದಾಟ ಜೋರಾಗಿದೆ. ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬೆಂಗಳೂರಿನ ಖಾಸಗಿ ಅತಿಥಿ ಗೃಹದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​​ ಮತ್ತು ಮಾಜಿ ಸಚಿವ ಕೆ.ಎನ್ ರಾಜಣ್ಣ ಭೇಟಿ ಮಾಡಿದ್ದಾರೆ. ಕಾಂಗ್ರೆಸ್​ ನಾಯಕರ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಅಪೆಕ್ಸ್ ಬ್ಯಾಂಕ್ ಚುನಾವಣೆ ವಿಚಾರವಾಗಿ ಚರ್ಚೆ ಮಾಡಿರುವ ಸಾಧ್ಯತೆ ಎನ್ನಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಕೋಳಿ‌ ಕಾಳಗಕ್ಕೆ ಪೊಲೀಸ ‌ನಿರ್ಬಂಧ: ತಾವೇ ಮುಂದೆ ನಿಂತು ಕೋಳಿ‌ ಅಂಕ ಮಾಡಿಸಿದ ಕಾಂಗ್ರೆಸ್​ ಶಾಸಕ – Kannada News | Puttur MLA Ashok Rai Supports Traditional Koli Anka Despite Police restriction in Kepu

ಮಂಗಳೂರು, ಡಿಸೆಂಬರ್​​ 20: ಧಾರ್ಮಿಕ ಹಿನ್ನೆಲೆಯ ಕೋಳಿ‌ ಕಾಳಗಕ್ಕೆ ಪೊಲೀಸರಿಂದ ‌ನಿರ್ಬಂಧ ಬೆನ್ನಲ್ಲೇ ಖುದ್ದು ಸ್ಥಳಕ್ಕೆ ಭೇಟಿ ನೀಡಿ ತಾವೇ ಮುಂದೆ ನಿಂತು ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ಕೋಳಿ‌ ಅಂಕ ಮಾಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಗ್ರಾಮದ ಸಮೀಪ ಘಟನೆ ನಡೆದಿದೆ. ನಾನಿಲ್ಲೆ ಇರ್ತೇನೆ ನೀವು ಕೋಳಿ‌ ಅಂಕ ಮುಂದುವರಿಸಿ. ಬಂಧಿಸುವುದಾದರೆ ಮೊದಲು ನನ್ನ ಬಂಧಿಸಿ ಎಂದು ಶಾಸಕ ಹೇಳಿದ್ದಾರೆ.

ಉಳ್ಳಾಲ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಹಿನ್ನೆಲೆ ವರ್ಷಕ್ಕೊಮ್ಮೆ ಕೋಳಿ‌ ಅಂಕ ನಡೆಯುತ್ತದೆ. ಜೂಜು ಕಟ್ಟದೆ ಕೇವಲ ಪದ್ಧತಿಗಾಗಿ ಕೋಳಿ ಕಾಳಗ ಮಾಡಲಾಗುತ್ತದೆ. ಆದರೆ ಈ ಕೋಳಿ‌ ಅಂಕ ಮಾಡದಂತೆ ವಿಟ್ಲ ಪೊಲೀಸರು ನಿರ್ಬಂಧ ಹೇರಿದ್ದರು. ಖುದ್ದು ಸ್ಥಳಕ್ಕೆ ಬಂದ ಅಶೋಕ್ ಕುಮಾರ್ ರೈ, ಕೋಳಿ‌ ಅಂಕ ನಡೆಸಲು ಅನುಕೂಲ ಮಾಡಿದರು. ಈ ವೇಳೆ ಕೋಳಿ‌ ಅಂಕ ಕಾನೂನು ಬಾಹಿರ ಎಂದ ಸಬ್​ಇನ್ಸ್​ಪೆಕ್ಟರ್​​ಗೆ,  ಇದು ಧಾರ್ಮಿಕ ಹಿನ್ನೆಲೆಯಲ್ಲಿ ನಡೆಯುವ ಕೋಳಿ‌ ಅಂಕ. 3 ದಿನದ ಬದಲು 1 ದಿನ ನಡೆಯಲಿ ಮೇಲಾಧಿಕಾರಿಗಳಿಗೆ ಈ ಬಗ್ಗೆ ತಿಳಿಸಿ ಎಂದಿದ್ದಾರೆ.

ಕಾನೂನಿಗೆ ವಿರುದ್ಧವಾಗಿ ನಾವು ಯಾವುದನ್ನು ಮಾಡಿಲ್ಲ: ಅಶೋಕ್ ಕುಮಾರ್ ರೈ

ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ‌ ಅಶೋಕ್ ಕುಮಾರ್ ರೈ, ಕಾನೂನಿಗೆ ವಿರುದ್ಧವಾಗಿ ನಾವು ಯಾವುದನ್ನು ಮಾಡಿಲ್ಲ. ಪ್ರತಿ ವರ್ಷ ಮೂರು‌ ದಿನ ಕೋಳಿ‌ ಅಂಕ ನಡೆಯುತ್ತೆ. ಇಲ್ಲಿ ಸಾವಿರಾರು ಜನ ದೇವರಲ್ಲಿ ಹರಕೆ ಹೊತ್ತಿರುತ್ತಾರೆ. ಇಲ್ಲಿ ಯಾವುದೇ ಜೂಜುಗಳಿಲ್ಲ, ಧಾರ್ಮಿಕ ನಂಬಿಕೆ. ಹರಕೆ ರೂಪದಲ್ಲಿ ಕೋಳಿ ತಂದು ಅಂಕ ಮಾಡಿಸ್ತಾರೆ ಎಂದರು.

ಇದನ್ನೂ ಓದಿ: ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಟಿವಿ9 ವರದಿ ಇಂಪ್ಯಾಕ್ಟ್; ಶಾಲೆಗಳಿಗೆ ಬಂತು ಗುಣಮಟ್ಟದ ಬೇಳೆ

ಕಾನೂನಿನಲ್ಲಿ ಇದಕ್ಕೆ ಅವಕಾಶಗಳಿಲ್ಲ ಅಂತಾ ಗೊತ್ತಿದೆ, ಆದರೆ ಇದು ಜನರ ಧಾರ್ಮಿಕ ಭಾವನೆಗಳ ವಿಚಾರ ಅದಕ್ಕೆ ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದೆವು. 3 ಗಂಟೆ ಅವಕಾಶ ಮಾಡಿಕೊಡಿ ಎಂದು ಕೇಳಿದ್ದೆವು. ಆದರೂ ಸಹ ಪೊಲೀಸರು ಜನರನ್ನ ಚದುರಿಸಲು ಯತ್ನಿಸಿದ್ದಾರೆ. ಧರ್ಮವನ್ನು ಕಿತ್ತುಕೊಳ್ಳುವ ಪ್ರಯತ್ನ ಆಗ್ತಿದೆ. ನನ್ನ ವಿಧಾನಸಭಾ ಕ್ಷೇತ್ರದ ಜನರು ನನ್ನ ಬಳಿ ಹೇಳಿದರು. ನಾನು ಜನರ ಜೊತೆಗೆ ಮೂರು ಗಂಟೆಗಳ ಕಾಲ ಇದ್ದೆ‌. ಜನರು ತಮ್ಮ ಹರಕೆಯನ್ನು ತೀರಿಸಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ಶಾಸಕ ಅಶೋಕ್ ರೈ ಸೇರಿ 17 ಜನ FIR ದಾಖಲು

ವಿಟ್ಲ ಠಾಣೆಯ ಪೊಲೀಸರು ಶಾಸಕ ಅಶೋಕ್ ರೈ ಸೇರಿದಂತೆ 17 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಕಾನೂನು ಬಾಹಿರ ಕೃತ್ಯವನ್ನು ನಡೆಸಲು ಪ್ರಚೋದನೆ ಮತ್ತು ದುಷ್ಪ್ರೇರಣೆಯನ್ನು ನೀಡಿದ ಆರೋಪದ ಮೇಲೆ ಅಶೋಕ್ ರೈ ವಿರುದ್ಧ ಪ್ರಕರಣ ದಾಖಲಾಗಿದೆ. ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿ ಕೊಂಡಿದ್ದಾರೆ ಎಂದು ಆರೋಪಿಸಿ 16 ಜನರ ವಿರುದ್ದ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:13 pm, Sat, 20 December 25

Source link

ಸುದೀಪ್ ಎದುರೇ ಧ್ರುವಂತ್​​ಗೆ ಬೆದರಿಕೆ ಹಾಕಿದ ರಕ್ಷಿತಾ ಶೆಟ್ಟಿ – Kannada News | Bigg Boss Kannada 12: Rakshita Shetty threatens Dhruvanth Infront of Dhruvanth

ಮತ್ತೊಂದು ವೀಕೆಂಡ್ ಬಂದಿದೆ. ಸುದೀಪ್ (Sudeep) ಮತ್ತೆ ಬಂದಿದ್ದಾರೆ. ಶನಿವಾರದ ಎಪಿಸೋಡ್​​ನಲ್ಲಿ ಸುದೀಪ್ ಅವರು ಸಾಧ್ಯವಾದಷ್ಟು ಗಂಭೀರವಾಗಿರುತ್ತಾರೆ. ಆದರೆ ಶನಿವಾರದ ಎಪಿಸೋಡ್ ಈ ಹಿಂದಿನ ಶನಿವಾರದ ಎಪಿಸೋಡ್​​ಗಳಿಗಿಂತಲೂ ತುಸು ಭಿನ್ನವಾಗಿತ್ತು. ಸುದೀಪ್ ಅವರು ಆರಂಭದಿಂದ ತುಸು ತಮಾಷೆಯಾಗಿಯೇ ಎಪಿಸೋಡ್​ ಪ್ರಾರಂಭಿಸಿದರು. ಅದರಲ್ಲೂ ಸೀಕ್ರೆಟ್ ರೂಂನಲ್ಲಿರುವ ಧ್ರುವಂತ್ ಮತ್ತು ರಕ್ಷಿತಾ ಅವರನ್ನು ಮಾತನಾಡಿಸುವಾಗ ಸ್ವತಃ ನಕ್ಕ ಸುದೀಪ್ ಸ್ಪರ್ಧಿಗಳನ್ನು, ಪ್ರೇಕ್ಷಕರನ್ನೂ ಸಹ ನಗಿಸಿದರು.

‘ನನಗೆ ಈ ವಾರ ಬಹಳ ಎಂಟರ್ಟೈನ್​​ಮೆಂಟ್ ಆಗಿದ್ದಿದ್ದು ಬಿಗ್​​ಬಾಸ್ ಮನೆಯ ಮೇಯಿನ್ ಮನೆಯವರ ಆಟ ಅಲ್ಲ. ಬದಲಿಗೆ ಸೀಕ್ರೆಟ್ ರೂಂನಲ್ಲಿದ್ದ ನಿಮ್ಮಿಬ್ಬರ ಆಟ. ನಿಮ್ಮಿಬ್ಬರ ಜಗಳ, ನಿಮ್ಮಿಬ್ಬರ ಚರ್ಚೆ, ನಿಮ್ಮಿಬ್ಬರ ಮಾತುಗಳೇ ನನಗೆ ಹೆಚ್ಚು ಖುಷಿ ಕೊಟ್ಟಿತು. ಆ ಮನೆಯಲ್ಲಿ (ಮುಖ್ಯ ಮನೆಯಲ್ಲಿ) ಸ್ಪರ್ಧಿಗಳು ಟಾಸ್ಕ್, ರೂಲ್ಸ್, ಜಗಳ ಎಂದು ತಲೆ ನೋವು ತರಿಸಿದರು’ ಎಂದರು ಸುದೀಪ್.

ಆದರೆ ರಕ್ಷಿತಾ ಮತ್ತು ಧ್ರುವಂತ್ ಅವರು ಪರಸ್ಪರರ ಬಗ್ಗೆ ದೂರುಗಳ ಸರಮಾಲೆಯನ್ನೇ ಸುದೀಪ್ ಎದುರು ಹೇಳಿದರು. ರಕ್ಷಿತಾ ಅಂತು, ಸುದೀಪ್ ಅವರು ಏನನ್ನಾದರೂ ಕೇಳುವ ಮುಂಚೆಯೇ ಸರ್ ನನಗೆ ಇಲ್ಲಿ ಇರಲು ಆಗುತ್ತಿಲ್ಲ, ನನಗೆ ಇವರನ್ನು ನೋಡೋಕೆ ಸಹ ಆಗಲ್ಲ. ನಾನು ಅವಾಯ್ಡ್ ಮಾಡುತ್ತೇನೆ ಆದರೂ ಬೇರೆ ಆಪ್ಷನ್ ನನಗೆ ಇಲ್ಲ, ನನ್ನನ್ನು ಇಲ್ಲಿಂದ ಕರೆಸಿಕೊಂಡು ಬಿಡಿ, ನನ್ನನ್ನು ಆ ಮನೆಗೆ ಕಳಿಸಿಕೊಡಿ ಎಂದು ಕೇಳಿಕೊಂಡರು.

ಇದನ್ನೂ ಓದಿ:ಅಪ್ಪನ ಸಿನಿಮಾ ಮೂಲಕ ವಿತರಕಿ ಆದ ಸುದೀಪ್ ಪುತ್ರಿ

ಧ್ರುವಂತ್ ಅವರು ಸಹ ರಕ್ಷಿತಾ ಮೇಲೆ ದೂರು ಹೇಳಿದರು. ಆದರೆ ಧ್ರುವಂತ್ ಅವರು, ತುಸು ಗಾಂಭಿರ್ಯದಿಂದ ದೂರುಗಳನ್ನು ಹೇಳಿದರು. ಆದರೆ ಸುದೀಪ್ ಅವರು ನೀವಿಬ್ಬರು ಚೆನ್ನಾಗಿ ಆಡುತ್ತಿದ್ದೀರ, ಹಾಗಾಗಿ ನಿಮ್ಮನ್ನು ಇನ್ನೂ ಒಂದು ವಾರ ಇಲ್ಲೇ ಇಡೋಣ ಅಂದುಕೊಂಡಿದ್ದೀವಿ, ಇನ್ನೂ ಚೆನ್ನಾಗಿ ಆಡಿದರೆ ಇನ್ನೂ ಒಂದು ವಾರ ಇಲ್ಲೇ ಇರಿಸುತ್ತೀವಿ, ನೀವುಗಳು ನೇರವಾಗಿ ಫಿನಾಲೆಗೆ ಇಲ್ಲಿಂದಲೇ ಹೋಗಬಹುದು ಎಂದರು. ಇದು ಧ್ರುವಂತ್​​ಗೆ ಆಸಕ್ತಿಕರ ಆಯ್ಕೆ ಎನಿಸಿತು, ಆದರೆ ರಕ್ಷಿತಾಗೆ ಇದು ಇಷ್ಟ ಆಗಲಿಲ್ಲ.

ಸುದೀಪ್ ಅವರು ರಕ್ಷಿತಾಗೆ ಅವಕಾಶ ನೀಡಿ, ‘ಆ ಮನೆಗೆ ಹೋಗಲು ನೀವು ಧ್ರುವಂತ್ ಅವರನ್ನು ಒಪ್ಪಿಸಿ ನೋಡೋಣ?’ ಎಂದರು. ಅದರಂತೆ ರಕ್ಷಿತಾ, ಧ್ರುವಂತ್ ಅವರನ್ನು ಒಪ್ಪಿಸುವ ಪ್ರಯತ್ನ ಮಾಡಿದರು. ಆದರೆ ಧ್ರುವಂತ್ ಒಪ್ಪಲಿಲ್ಲ. ಮೂರು-ನಾಲ್ಕು ಬಾರಿ ಪ್ರಯತ್ನ ಮಾಡಿದರೂ ಸಹ ಧ್ರುವಂತ್, ಇಲ್ಲಿಂದ ನೇರವಾಗಿ ಫಿನಾಲೆಗೆ ಹೋಗೋಣ ಆ ಮನೆಗೆ ಹೋಗೋದು ಇಷ್ಟ ಇಲ್ಲ ಎಂದರು. ಎಲ್ಲ ಬುದ್ಧಿವಂತಿಕೆ ಬಳಸಿದ ಬಳಿಕ ಕೊನೆಗೆ ಬೆದರಿಕೆ ಹಾಕಲು ಶುರು ಮಾಡಿದರು ರಕ್ಷಿತಾ, ನೀವು ಇದೇ ಮನೆಯಲ್ಲಿ ಉಳಿಯಬೇಕು ಎಂದರೆ ನಾನು ನಿಮ್ಮನ್ನು ನೆಮ್ಮದಿಯಾಗಿ ಇರಲು ಬಿಡುವುದಿಲ್ಲ’ ಎಂದರು. ಇದು ಧ್ರುವಂತ್​​ಗೆ ಶಾಕ್ ತಂದಿತು. ಸುದೀಪ್ ಸಹ ರಕ್ಷಿತಾರ ಮಾತು ಕೇಳಿ ನಕ್ಕರು. ಕೊನೆಗೆ ಧ್ರುವಂತ್ ಮತ್ತು ರಕ್ಷಿತಾ ಇಬ್ಬರನ್ನೂ ಮನೆಯೊಳಗೆ ಕಳಿಸಲಾಯ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ – Kannada News | Ancient Lord Sri Ram Idol found During Road Works in Vizag

ವಿಶಾಖಪಟ್ಟಣ, ಡಿಸೆಂಬರ್ 20: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (visakhapatnam) ರಸ್ತೆ ಕಾಮಗಾರಿಯ ಸಮಯದಲ್ಲಿ ಪ್ರಾಚೀನವಾದ ಶ್ರೀರಾಮನ ವಿಗ್ರಹ (Sri Ram Idol) ಪತ್ತೆಯಾಗಿದೆ. ರಸ್ತೆಗೆ ಡಾಂಬರು ಹಾಕಿದ ನಂತರ ಹೆಚ್ಚುವರಿಯಾದ ಮಣ್ಣನ್ನು ಎಲ್ಲೋ ಸುರಿಯಲಾಗಿತ್ತು. ಅದರಲ್ಲಿ ಶ್ರೀರಾಮನ ವಿಗ್ರಹ ಇರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಸೊಂಟದಿಂದ ತಲೆಯವರೆಗೆ ಮಾತ್ರ ಇರುವ ರಾಮನ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಈ ವಿಷಯ ಹರಡುತ್ತಿದ್ದಂತೆ, ರಾಮನ ಪ್ರತಿಮೆಯನ್ನು ನೋಡಲು ಜನರು ಜಮಾಯಿಸಿದರು. ಆ ರಾಮನ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಿದರು. ಪುರಾತತ್ವ ಇಲಾಖೆಯ ಅಧಿಕಾರಿಗಳು ಈ ವಿಗ್ರಹ ಯಾವ ಕಾಲದ್ದು ಮತ್ತು ಅದು ಎಲ್ಲಿಂದ ಬಂತು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಊಟಿಯಲ್ಲಿ ಹಿಮಪಾತ; ಪ್ರವಾಸಿಗರನ್ನು ಸೆಳೆಯುತ್ತಿವೆ ಬಿಳಿ ಸೆರಗು ಹೊದ್ದ ಹೂಗಳು – Kannada News | Minimum temperature in Ooty Severe frost in the Nilgiri district

ಊಟಿ, ಡಿಸೆಂಬರ್ 20: ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಹಿಮಪಾತವಾಗಿದ್ದು, ಕನಿಷ್ಠ ತಾಪಮಾನ 0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದನ್ನು ಅನುಭವಿಸಲು ಪ್ರವಾಸಿಗರು ತಲೈಕುಂಧ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಊಟಿಯಲ್ಲಿ (Ooty) ಇಂದು ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಗಾಳಿಯು 40 ಡಿಗ್ರಿಗಳಷ್ಟು ಚಲಿಸಲಿದ್ದು, 2.78ರ ಆಸುಪಾಸಿನಲ್ಲಿ ಬೀಸಲಿದೆ. ಊಟಿಯಲ್ಲಿ ತಾಪಮಾನವು ಭಾನುವಾರದಿಂದ ಶುಕ್ರವಾರದವರೆಗೆ 7 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಪೇಂದ್ರ ವೀಕ್​​ನೆಸ್ ಏನು ಎಂದು ಕಂಡು ಹಿಡಿದುಕೊಂಡ ರಾಜ್: ನಿಮ್ಗೂ ಅಚ್ಚರಿ ಆಗುತ್ತೆ – Kannada News | Raj B Shetty talks about Upendra and his weakness

ರಾಜ್ ಬಿ. ಶೆಟ್ಟಿ, ಉಪೇಂದ್ರ (Upendra), ಶಿವರಾಜ್​ಕುಮಾರ್ ಅವರು ‘45’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹುಟ್ಟಿದೆ. ಈಗ ಚಿತ್ರದ ಪ್ರಚಾರದ ಭಾಗವಾಗಿ ರಾಜ್, ಉಪೇಂದ್ರ ಹಾಗೂ ಸಿನಿಮಾ ನಿರ್ದೇಶಕ ಅರ್ಜುನ್ ಜನ್ಯ ಅವರು ಸಂದರ್ಶನ ನೀಡಿದ್ದಾರೆ.ಈ ಸಂದರ್ಶನದಲ್ಲಿ ಹಲವು ವಿಷಗಳನ್ನು ಇವರು ಹಂಚಿಕೊಂಡಿದ್ದಾರೆ. ಅದರಲ್ಲೂ ರಾಜ್ ಹೇಳಿದ ಒಂದು ಮಾತು ಗಮನ ಸೆಳೆಯಿತು.

ಟಿವಿ9 ಕನ್ನಡಕ್ಕೆ ಉಪೇಂದ್ರ, ರಾಜ್ ಹಾಗೂ ಅರ್ಜುನ್ ಸಂದರ್ಶನ ನೀಡಿದರು ಮತ್ತು ಈ ಸಂದರ್ಶನ ಉಪೇಂದ್ರ ಮನೆಯಲ್ಲೇ ನಡೆಯಿತು ಅನ್ನೋದು ವಿಶೇಷ. ಉಪೇಂದ್ರ ಅವರ ಮೈನಸ್ ಪಾಯಿಂಟ್ ಏನು ಎಂದು ಹೇಳೋದು ತುಂಬಾನೇ ಕಷ್ಟ. ಆದರೆ, ರಾಜ್ ಅವರು ಇದನ್ನು ಕಂಡು ಹಿಡಿದ್ದಾರೆ. ಇತ್ತೀಚೆಗೆ ಆ ವಿಷಯ ಅವರಿಗೆ ಗೊತ್ತಾಗಿದೆಯಂತೆ.

ರಾಜ್ ಅವರ ಬಗ್ಗೆ ಉಪೇಂದ್ರ ಮಾತನಾಡಿದರು. ‘ರಾಜ್ ಅವರು ಪ್ರತಿ ವಿಷಯವನ್ನು ಪದರ ಪದರವಾಗಿ ನೋಡುತ್ತಾರೆ. ತುಂಬಾನೇ ಆಳವಾಗಿ ಅರ್ಥ ಮಾಡಿಕೊಳ್ಳುತ್ತಾರೆ. ನೀವು ಇದನ್ನು ಒಪ್ಪಿಕೊಳ್ಳಲೇಬೇಕು’ ಎಂದು ಉಪೇಂದ್ರ ಅವರು ರಾಜ್​ಗೆ ಹೇಳಿದರು. ಇದನ್ನು ರಾಜ್ ಅವರು ಒಪ್ಪಲು ಸಿದ್ಧರೇ ಇರಲಿಲ್ಲ. ‘ನೀವು ತುಂಬಾನೇ ಜನರಿಗೆ ಸ್ಫೂರ್ತಿ ನೀಡಿದ್ದೀರಾ’ ಎಂದು ಉಪೇಂದ್ರ ಹೇಳಿದರು. ಆ ರಾಜ್ ಒಂದು ಅಚ್ಚರಿಯ ವಿಷಯ ಹೇಳಿದರು.

ಇದನ್ನೂ ಓದಿ:ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

‘ನಾನು ಇತ್ತೀಚೆಗೆ ಉಪೇಂದ್ರ ಅವರ ಒಂದು ಮೈನಸ್ ಪಾಯಿಂಟ್ ಕಂಡು ಹಿಡಿದುಕೊಂಡಿದ್ದೇನೆ. ಅವರನ್ನು ಹೊಗಳಿದರೆ ಅವರಿಗೆ ಕಣ್ಣಲ್ಲಿ ಕಣ್ಣಿಟ್ಟು ಮಾತನಾಡೋಕೆ ಆಗಲ್ಲ. ಈಗಲೂ ಹಾಗೆಯೇ ಮಾಡುತ್ತಿದ್ದಾರೆ’ ಎಂದರು ರಾಜ್. ‘ನೀವು ಹಾಗೆ ಮಾಡ್ತೀರಾ’ ಎಂದರು ಉಪೇಂದ್ರ. ಈ ವಿಷಯವನ್ನು ರಾಜ್ ಒಪ್ಪಿದರು.

ಸಾಮಾನ್ಯವಾಗಿ ಯಾರಾದರೂ ಹೊಗಳಿದರೆ ಆ ಬಗ್ಗೆ ಖುಷಿ ಆಗುತ್ತದೆ. ಆದರೆ, ಇಲ್ಲಿ ಉಪೇಂದ್ರ ಹಾಗೂ ರಾಜ್ ಮಾತ್ರ ಭಿನ್ನ. ತುಂಬಿದ ಕೊಡ ತುಳುಕುವುದಿಲ್ಲ ಎಂಬುದಕ್ಕೆ ಇದು ಉತ್ತಮ ಉದಾಹರಣೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ – Kannada News | Road Accident in Chikkaballapur Drunk Car driver Hits Scooty

ಚಿಕ್ಕಬಳ್ಳಾಪುರ, ಡಿಸೆಂಬರ್ 20: ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ತ್ರಿಚಕ್ರ ಬೈಕ್​ನಲ್ಲಿ ವಿಶೇಷಚೇತನ ವ್ಯಕ್ತಿ ತನ್ನ ಪತ್ನಿ ಹಾಗೂ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದರು. ಚಿಕ್ಕಬಳ್ಳಾಪುರದ ಬೈಪಾಸ್​​ನಲ್ಲಿ ಕಾರು ಆ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಪಘಾತದ ರಭಸಕ್ಕೆ ವಿಶೇಷ ಚೇತನ ಸ್ಕೂಟಿ ಸವಾರನಾದ ಮುನಿಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ. ಹೆಂಡತಿ ಮುನಿರತ್ನಮ್ಮನವರ ಪ್ರಜ್ಞೆ ತಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿವೆ.

ಕಾರಿನಲ್ಲಿದ್ದ ಯುವಕರು ಕುಡಿದು ಕಾರು ಚಲಾಯಿಸಿದ ಆರೋಪ ಕೇಳಿಬಂದಿದೆ. ಮದ್ಯ ಸೇವಿಸಿದ ಅಮಲಿನಲ್ಲಿ ಮುಂದೆ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಕಾರಿನ ಚಾಲಕ ಸೇರಿ ಕಾರಿನಲ್ಲಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಟಿವಿ9 ವರದಿ ಇಂಪ್ಯಾಕ್ಟ್; ಶಾಲೆಗಳಿಗೆ ಬಂತು ಗುಣಮಟ್ಟದ ಬೇಳೆ – Kannada News | Worms Found in School Meals: Impact of TV9 Report Leads to Supply of Quality Pulses

ಬೆಂಗಳೂರು, ಡಿಸೆಂಬರ್​ 20: ಅನ್ನದಲ್ಲೂ ಹುಳು (maggots), ಸಾಂಬರ್​​ನಲ್ಲೂ ಹುಳು, ಅಕ್ಕಿ, ಬೇಳೆಗಳಲ್ಲೂ ಹುಳುವೋ ಹುಳು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಬಿಸಿಯೂಟ ಅಧ್ವಾನ ಎದ್ದಿದೆ. ವಿದ್ಯಾರ್ಥಿಗಳಿಗೆ ನೀಡುತ್ತಿರುವ ಕಳಪೆ ಆಹಾರದ ವಿರುದ್ಧ ಟಿವಿ9 ಸಮರ ಸಾರಿದ್ದು, ಶಾಲೆಗಳಲ್ಲಿನ ಕರ್ಮಕಾಂಡವನ್ನೂ ತೆರೆದಿಟ್ಟಿದೆ. ವರದಿ ಇಂಪ್ಯಾಕ್ಟ್ ಬೆನ್ನಲ್ಲೇ ಶಾಲೆಗಳಿಗೆ ಗುಣಮಟ್ಟದ ಬೇಳೆ ಬಂದಿದೆ. ಮತ್ತೊಂದೆಡೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಚಿಕ್ಕಮಗಳೂರಲ್ಲೂ ‘ಹುಳು ಊಟದ’ ಕರ್ಮಕಾಂಡ!

ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಬಿಟ್ಟೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪೂರೈಸ್ತಿದ್ದ ಊಟದಲ್ಲಿ ಕೂಡ ಹುಳು ಪತ್ತೆ ಆಗಿದೆ. ಇವತ್ತು ಅಡುಗೆ ಮನೆಗೆ ತೆರೆಳಿದ್ದ ಪೋಷಕರು, ಅನ್ನ, ಸಾಂಬರ್​​​ನಲ್ಲಿ ಹುಳು ಕಂಡು ಕೆರಳಿದ್ದಾರೆ. ಆದರೆ ಸರ್ಕಾರದಿಂದ ಬರೋದೆ ಹೀಗೆ ನಾವೇನ್ ಮಾಡೋಣ ಅಂತ ಶಿಕ್ಷಕರು ಅಳಲು ತೋಡಿಕೊಂಡಿದ್ದಾರೆ.

ಶಾಲೆಗೆ ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷರ ಭೇಟಿ

ಯಾದಗಿರಿಯ ರಾಮಸಮುದ್ರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ, ಬಿಸಿಯೂಟಕ್ಕೆ ಬಳಸ್ತಿದ್ದ ಅಕ್ಕಿ, ತೊಗರಿ ಬೇಳೆಯಲ್ಲಿ ಹುಳು ತುಂಬಿ ತುಳುಕುತ್ತಿದ್ದವು. ಕೊಯಿಲೂರಿನ ಶಾಲೆಯಲ್ಲೂ ನುಶಿ ಹಾಗೂ ಬಾಲದುಳು ಇರುವ ಗೋಧಿಯನ್ನೇ ಮಕ್ಕಳ ಊಟಕ್ಕೆ ಬಳಕೆ ಮಾಡ್ತಿದ್ದರು. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು. ಇದೀಗ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ರಾಮಸಮುದ್ರದ ಶಾಲೆಗೆ ದಿಢೀರ್​ ಭೇಟಿ ಕೊಟ್ಟು, ಪರಿಶೀಲಿಸಿದರು. ಕಳಪೆ ಗುಣಮಟ್ಟದ ಬೇಳೆ ಪೂರೈಕೆಗೆ ಕಿಡಿಕಾರಿದ್ದು, ವರದಿ ಸಲ್ಲಿಕೆಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಮಧ್ಯಾಹ್ನದ ಬಿಸಿಯೂಟದ ತುಂಬ ಹುಳಗಳ ರಾಶಿ! ಪೋಷಕರು ಕೆಂಡಾಮಂಡಲ

ಇನ್ನು ಟಿವಿ9 ವರದಿ ಆಧರಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಬಗ್ಗೆ ಕಲಬುರಗಿಯಲ್ಲಿ ಅಧ್ಯಕ್ಷ ಶಶೀಧರ್ ಕೋಸುಂಬೆ ಪ್ರತಿಕ್ರಿಯಿಸಿದ್ದು, ಟಿವಿ9 ವರದಿ ನೋಡಿ ಎಲ್ಲಾ ಡಿಡಿಪಿಐಗಳಿಗೆ ಸೂಚಿಸಿದ್ದೇನೆ. 3 ದಿನದೊಳಗೆ ಸಮಗ್ರ ವರದಿ ನೀಡಲು ರಾಜ್ಯ ಬಿಸಿಯೂಟ ಯೋಜನೆ ಉಪಕಾರ್ಯರ್ಶಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ.

ಟಿವಿ9 ಇಂಪ್ಯಾಕ್ಟ್​: ಶಾಲೆಗೆ ಬಂತು ಗುಣಮಟ್ಟದ ಬೇಳೆ

ತುಮಕೂರಿನ ವಡ್ಡರಹಳ್ಳಿ ಸರ್ಕಾರಿ ಶಾಲೆಯಲ್ಲಿ ಹಾಳಾದ ತೊಗರಿ ಬೇಳೆ ಬಗ್ಗೆ ಟಿವಿ9 ನಿನ್ನೆ ವರದಿ ಪ್ರಸಾರ ಮಾಡಿತ್ತು. ಗುಡಿಪಾಳ್ಯದ ಶಾಲೆಯಲ್ಲಿನ ಬೇಳೆಗೆ ಬಂದ ದುಸ್ಥಿತಿಯನ್ನ ತೆರೆದಿಟ್ಟಿತ್ತು. ಇದೀಗ ಅಕ್ಷರ ದಾಸೋಹ ಅಧಿಕಾರಿಗಳು ಎಚ್ಚೆತ್ತಿದ್ದು, ಶಾಲೆಗಳಿಗೆ ಗುಣಮಟ್ಟದ ತೊಗರಿ ಬೇಳೆ ಪೂರೈಸಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಹುಳ ಬಿದ್ದಿರೋ ಅಕ್ಕಿ ಬೇಳೆ; TV9 ರಿಯಾಲಿಟಿ ಚೆಕ್​ನಲ್ಲಿ ಬಯಲಾಯ್ತು ಅಸಲಿಯತ್ತು

ಹುಳು ಬಿದ್ದ ತೊಗರಿ ಬೇಳೆಗಳನ್ನು ಅಧಿಕಾರಿಗಳು ಗುತ್ತಿಗೆದಾರರಿಗೆ ವಾಪಾಸ್ ಕಳುಹಿಸಿದ್ದಾರೆ. ಈಗಾಗಲೇ ತುಮಕೂರಿನ ಗುಬ್ಬಿ ಗೇಟ್​​ ಬಳಿಯ ಗೋಡೌನ್​​​ಗೆ 179 ಕ್ವಿಂಟಾಲ್​ ಬೇಳೆ ಬಂದಿದೆ. ಎಲ್ಲಾ ಶಾಲೆಗಳಿಗೆ ಗುಣಮಟ್ಟದ ಬೇಳೆ ವಿತರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಆ ಮೂಲಕ ಮಕ್ಕಳು ಹಾಗೂ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಬ್ಯುರೋ ರಿಪೋರ್ಟ್, ಟಿವಿ9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link