Headlines

ರಾಯಚೂರಲ್ಲಿ ಆರ್‌ಟಿಒ ಸಿಬ್ಬಂದಿ ಗೂಂಡಾಗಿರಿ: 500 ರೂ. ಲಂಚ ಪಡೆಯುತ್ತಿದ್ದ ವಿಡಿಯೋ ಮಾಡಿದ್ದಕ್ಕೆ ಚಾಲಕನಿಗೆ ಧರ್ಮದೇಟು – Kannada News

ರಾಯಚೂರು, ಜೂ.10: ಗಡಿ ಜಿಲ್ಲೆ ರಾಯಚೂರಿನಲ್ಲಿ ಆರ್‌ಟಿಒ (RTO) ಅಧಿಕಾರಿಗಳು ಹಾಗೂ ಸಿಬ್ಬಂದಿಯ ಲಂಚಾವತಾರ ಮತ್ತು ದಬ್ಬಾಳಿಕೆ ಮಿತಿಮೀರಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಆರ್‌ಟಿಒ ಸಿಬ್ಬಂದಿ ಬೇಕಾಬಿಟ್ಟಿ ಲಂಚ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ನಿನ್ನೆ ರಾತ್ರಿ ಭಾರಿ ಹೈಡ್ರಾಮಾವೊಂದು ನಡೆದಿದೆ. ಸಿಬ್ಬಂದಿಯ ಬೇಜವಾಬ್ದಾರಿತನದಿಂದಾಗಿ ಹೆದ್ದಾರಿಯಲ್ಲಿ ಬರೋಬ್ಬರಿ 3 ಗಂಟೆಗಳ ಕಾಲ ಭಾರಿ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಮತ್ತು ಸವಾರರು…

Read More

ನೆರೆಯ ದೇಶದ ವಿರುದ್ಧ ಟೆಸ್ಟ್ ಸರಣಿಯನ್ನಾಡಲಿದೆ ಭಾರತ; ಸ್ವಾತಂತ್ರ್ಯ ದಿನದಂದು ಮೊದಲ ಪಂದ್ಯ – Kannada News

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ದಾಖಲೆಯ ಜಯ ಸಾಧಿಸಿದರೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾಕ್ಕೆ (Team India) ಯಾವುದೇ ಪ್ರಯೋಜನವಾಗಿರಲಿಲ್ಲ. ಏಕೆಂದರೆ ಈ ಟೆಸ್ಟ್ ಪಂದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಭಾಗವಾಗಿರಲಿಲ್ಲ. ಹೀಗಾಗಿ ಟೀಂ ಇಂಡಿಯಾ ಡಬ್ಲ್ಯೂಟಿಸಿ ಪಾಯಿಂಟ್ ಪಟ್ಟಿಯಲ್ಲಿ ( WTC Points Table) 6ನೇ ಸ್ಥಾನದಲ್ಲಿಯೇ ಇದೆ. ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್ ಆಡಬೇಕೆಂದರೆ ಉಳಿದಿರುವ ಸರಣಿಗಳು ನಿರ್ಣಾಯಕವಾಗಿದೆ. ಅದರಂತೆ ಟೀಂ ಇಂಡಿಯಾ ತನ್ನ ಮುಂದಿನ ಟೆಸ್ಟ್ ಸರಣಿಯನ್ನು…

Read More

Dude 2: ಬರಲಿದೆ ‘ಡ್ಯೂಡ್ 2’ ಸಿನಿಮಾ; ಕಥೆ ಮೆಚ್ಚಿದ ನಟ ಪ್ರದೀಪ್ ರಂಗನಾಥನ್ – Kannada News

ಕಾಲಿವುಡ್‌ನ ಯುವ ಸೆನ್ಸೇಷನ್ ಪ್ರದೀಪ್ ರಂಗನಾಥನ್ (Pradeep Ranganathan) ನಟನೆಯ ‘ಡ್ಯೂಡ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಎಷ್ಟು ದೊಡ್ಡ ಮಟ್ಟದ ಯಶಸ್ಸು ಗಳಿಸಿತ್ತು ಎಂಬುದು ಎಲ್ಲರಿಗೂ ಗೊತ್ತೇ ಇದೆ. ಯಾವುದೇ ದೊಡ್ಡ ನಿರೀಕ್ಷೆಯಿಲ್ಲದೆ ಬಿಡುಗಡೆಯಾಗಿದ್ದ ಈ ರೊಮ್ಯಾಂಟಿಕ್ ಎಂಟರ್‌ಟೈನರ್ ಸಿನಿಮಾ, ವಿಶ್ವಾದ್ಯಂತ ಬರೋಬ್ಬರಿ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಅಚ್ಚರಿ ಮೂಡಿಸಿತ್ತು. ‘ಡ್ಯೂಡ್’ (Dude) ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ ಕೀರ್ತೀಶ್ವರನ್ ಮೊದಲ ಚಿತ್ರದಲ್ಲೇ ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡರು. ಈಗ ಅವರು ಈ…

Read More

ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ನಡುವೆ ಫೈಟ್; ಹೇಗಿದೆ ಮುಖಾಮುಖಿ ದಾಖಲೆ? – Kannada News

2026 ರ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಜೂನ್ 12 ರಿಂದ ಆರಂಭವಾಗಲಿದೆ. ಇಂಗ್ಲೆಂಡ್​ನ ಆತಿಥ್ಯದಲ್ಲಿ ನಡೆಯುತ್ತಿರುವ 10ನೇ ಆವೃತ್ತಿಯ ಟಿ20 ವಿಶ್ವಕಪ್​ನ ಹೈವೋಲ್ಟೇಜ್ ಕದನ ಜೂನ್ 14 ರಂದು ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ನಡೆಯಲಿದೆ. ಟೂರ್ನಿಯಲ್ಲಿ ಈ ಎರಡು ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಮೊದಲ ಮುಖಾಮುಖಿ ಇದಾಗಿದೆ. ಅಂದರೆ, ಭಾರತ ಮತ್ತು ಪಾಕಿಸ್ತಾನ ತಂಡಗಳು 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಪರಸ್ಪರ ವಿರುದ್ಧವಾಗಿ…

Read More

ನಾಳೆ ಪ್ರಧಾನಿ ಮೋದಿ-ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಕೇಂದ್ರ ಸಚಿವರ ಜತೆಗೂ ಮಾತುಕತೆಗೆ ಪ್ಲಾನ್ – Kannada News

ದೆಹಲಿ, ಜೂ.10: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿರುವ ಡಿ.ಕೆ. ಶಿವಕುಮಾರ್ ಅವರು ನಾಳೆ (ಜೂ.11) ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕೃತವಾಗಿ ಭೇಟಿ ಮಾಡಲಿದ್ದಾರೆ. ಪ್ರಧಾನಮಂತ್ರಿಯವರ ಭೇಟಿಗೆ ಅಧಿಕೃತ ಸಮಯ ಸಿಕ್ಕಿರುವುದನ್ನು ಖಚಿತಪಡಿಸಿರುವ ಸಿಎಂ, ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಹಲವು ಪ್ರಮುಖ ವಿಷಯಗಳನ್ನು ಹಂಚಿಕೊಂಡಿದ್ದಾರೆ. “ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದರು….

Read More

ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ವೈದ್ಯರು ಹೇಳುವ ಈ ಸರಳ ಸಲಹೆಗಳನ್ನು ಪಾಲಿಸಿ – Kannada News

ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹವಾಮಾನದಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಅವುಗಳಲ್ಲಿ ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಹಾಗೂ ಮಲಬದ್ಧತೆ (Constipation) ಸಮಸ್ಯೆಗಳು ಕೂಡ ಒಂದು. ಸಾಮಾನ್ಯವಾಗಿ ಇಂತಹ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ. ಅದರಲ್ಲಿಯೂ ಉಷ್ಣತೆ ಹೆಚ್ಚಿದ್ದಾಗ ದೇಹದಲ್ಲಿ ನೀರಿನ ಕೊರತೆ ಉಂಟಾಗಿ ಮಲ ವಿಸರ್ಜನೆ ಕಷ್ಟಕರವಾಗಬಹುದು. ಇದರ ಪರಿಣಾಮವಾಗಿ ದೇಹದಲ್ಲಿ ದೌರ್ಬಲ್ಯ, ಅಸ್ವಸ್ಥತೆ ಮತ್ತು ದಣಿವು ಕಾಣಿಸಿಕೊಳ್ಳಬಹುದು. ತಜ್ಞರ ಪ್ರಕಾರ, ದೇಹವು ಹೆಚ್ಚು ಬೆವರುವವರು ಸಾಕಷ್ಟು ನೀರು ಕುಡಿಯದಿದ್ದರೆ ದೇಹವು ತನ್ನಲ್ಲಿರುವ ನೀರನ್ನೇ ಹೀರಿಕೊಳ್ಳುತ್ತದೆ….

Read More

ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆಗೆ ವಿಶೇಷ ಪೂಜೆ, ಉರುಳು ಸೇವೆ – Kannada News

ರಾಯಚೂರು, ಜೂನ್ 10): ಡಿಕೆ ಶಿವಕುಮಾರ್ ಸರ್ಕಾರದ ಸಂಪುಟ ವಿಸ್ತರಣೆ ಆಗಬೇಕಿದ್ದು, ಬಾಕಿ ಇರುವ 20 ಸಚಿವ ಸ್ಥಾನಗಳಿಗೆ ಬರೋಬ್ಬರಿ 40 ಆಕಾಂಕ್ಷಿಗಳು ಲಾಬಿ ಮಾಡುತ್ತಿದ್ದಾರೆ. ಕೆಲವರು ದೆಹಲಿಯಲ್ಲಿ ಮಂತ್ರಿ ಸ್ಥಾನಕ್ಕೆ ತೀವ್ರ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಅವರ ಬೆಂಬಲಿಗರು ಕ್ಷೇತ್ರದಲ್ಲಿ ಪ್ರತಿಭಟನೆಗಳಿದಿದ್ದಾರೆ. ಇದಕ್ಕೆ ಪೂರಕವೆಂಬಂತೆ ರಾಯಚೂರು ಜಿಲ್ಲೆ ಸಿಂಧನೂರು ಕ್ಷೇತ್ರದ ಹಿರಿಯ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಆಗ್ರಹಿಸಿದ್ದಾರೆ. ಇನ್ನು  ಹಂಪನಗೌಡ ಬಾದರ್ಲಿಗೆ ಮತ್ರಿ ಸ್ಥಾನ ಕರುಣಿಸಲಿ ಎಂದು…

Read More

ಇಷ್ಟು ದೂರ ಬರುತ್ತೇನೆಂದು ಕನಸಲ್ಲೂ ಅಂದುಕೊಂಡಿರಲಿಲ್ಲ; ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ – Kannada News

ನವದೆಹಲಿ, ಜೂನ್ 10: ಅತಿ ದೀರ್ಘಾವಧಿಗೆ ಪ್ರಧಾನಿಯಾಗಿ ಅಧಿಕಾರ ನಡೆಸಿದ ಪ್ರಧಾನಮಂತ್ರಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನರೇಂದ್ರ ಮೋದಿ (PM Narendra Modi) ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಸಂದರ್ಭವನ್ನು ಆಚರಿಸಲು ದೆಹಲಿಯ ಭಾರತ್ ಮಂಟಪದಲ್ಲಿ ಎನ್​ಡಿಎ ನಾಯಕರ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ಸಮಾವೇಶದಲ್ಲಿ ಎನ್​ಡಿಎ ಮೈತ್ರಿಕೂಟದ ಎಲ್ಲಾ ನಾಯಕರಲ್ಲದೆ, ಎನ್‌ಡಿಎ ಆಡಳಿತವಿರುವ ಎಲ್ಲಾ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಕೂಡ ಉಪಸ್ಥಿತರಿದ್ದರು. ಈ…

Read More

ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ

ನಟಿ ಶ್ರುತಿ (Shruthi) ಕನ್ನಡ ಚಿತ್ರರಂಗದ ಹಿರಿಯ ನಟಿ. ಹಾಸ್ಯ, ಗಂಭೀರ, ಎಮೋಷನಲ್, ಗ್ರಾಮೀಣ, ಪೌರಾಣಿಕ, ಜನಪದ, ಕಲಾತ್ಮಕ ಸಿನಿಮಾ ಹೀಗೆ ಹಲವು ರೀತಿಯ ಸಿನಿಮಾಗಳು, ಪಾತ್ರಗಳಲ್ಲಿ ನಟಿಸಿ ಎಲ್ಲದರಲ್ಲೂ ಸೈ ಎನಿಸಿಕೊಂಡಿದ್ದಾರೆ. ಇದೀಗ ಶ್ರುತಿ ಅವರ 175ನೇ ಸಿನಿಮಾ ‘ಮದರ್’ ಸೆಟ್ಟೇರಿದೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನೆರವೇರಿದ್ದು, ನಟಿ ಶ್ರುತಿ ಅವರು ಮುಹೂರ್ತದ ಸಂದರ್ಭದಲ್ಲಿ ಮಾಧ್ಯಮದವರೊಟ್ಟಿಗೆ ಮಾತನಾಡುತ್ತಾ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source…

Read More

Viral: ಆಟೋ ಹಿಂಬದಿ ಬರೆದ ಸಾಲಿನಲ್ಲಿ ತಂದೆ ತಾಯಿ ಮಹತ್ವ ಸಾರಿದ ಆಟೋ ಡ್ರೈವರ್ – Kannada News

ಆಟೋ ಹಿಂಬದಿ ಬರೆದ ಸಾಲುImage Credit source: Instagram ಆಟೋ (auto) ಹಾಗೂ ಬೈಕ್ ಹಿಂಬದಿ ಮನಮುಟ್ಟುವ ಸಂದೇಶಗಳು, ಕೈ ಕೊಟ್ಟ ಪ್ರೇಯಸಿಯನ್ನು ಹಾಗೂ ತಂದೆ ತಾಯಿಯನ್ನು ನೆನಪಿಸುವಂತಹ ಸಾಲುಗಳು ಕಣ್ಣಿಗೆ ಕಾಣಿಸುತ್ತದೆ. ಇನ್ನು ಕೆಲ ಸಾಲುಗಳನ್ನು ಕಂಡಾಗ ತುಟಿಯಂಚಿನಲ್ಲಿ ನಗುವಿಗೂ ಕಾರಣವಾಗುತ್ತದೆ. ಇದೀಗ ಇಂತಹದ್ದೇ ಸಾಲೊಂದು ವೈರಲ್ ಆಗಿದ್ದು, ಇದು ಪ್ರಪಂಚದಲ್ಲಿ ತಂದೆ-ತಾಯಿಯ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ ಎಂಬುದನ್ನು ನೆನಪಿಸುವಂತಿದೆ. ಹೌದು, ತನ್ನ ಜೀವನದ ಹೀರೋ ತಂದೆ ಹಾಗೂ ತಾಯಿಯೇ ದೇವರು ಎನ್ನುವ ಅರ್ಥ…

Read More