ಮೇಘಾಲಯದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ವೇಳೆ ಸ್ಫೋಟ, 16 ಕಾರ್ಮಿಕರ ಸಾವು – Kannada News | 16 labourers from Assam killed many injured in illegal coal mine blast in Meghalaya
ಶಿಲ್ಲಾಂಗ್, ಫೆಬ್ರವರಿ 5: ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ (Coal Mining) ವೇಳೆ ಸಂಭವಿಸಿದ ಸ್ಫೋಟದಲ್ಲಿ ಅಸ್ಸಾಂನ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಥಾಂಗ್ಸ್ಕು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗಣಿಯಿಂದ 16 ಶವಗಳನ್ನು ಹೊರತೆಗೆದಿದ್ದು, ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಶಿಲ್ಲಾಂಗ್‌ಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು…