CBI Recruitment 2026: ಸೆಂಟ್ರಲ್ ಬ್ಯಾಂಕ್ನಲ್ಲಿ 350 ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ – Kannada News | Central Bank of India SO Recruitment 2026: Last Date Extended for 350 Posts!
ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಯುವಜನರಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಉತ್ತಮ ಅವಕಾಶವನ್ನು ಒದಗಿಸಿದೆ. 2026ರ ಸ್ಪೆಷಲಿಸ್ಟ್ ಆಫೀಸರ್ (SO) ನೇಮಕಾತಿ ಪ್ರಕ್ರಿಯೆಯಡಿಯಲ್ಲಿ ಒಟ್ಟು 350 ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಬ್ಯಾಂಕ್ ವಿಸ್ತರಿಸಿದೆ. ಮೊದಲಿಗೆ ಫೆಬ್ರವರಿ 3ಕ್ಕೆ ನಿಗದಿಯಾಗಿದ್ದ ಅರ್ಜಿ ಸಲ್ಲಿಕೆಯ ಗಡುವನ್ನು ಇದೀಗ ಫೆಬ್ರವರಿ 15 ರವರೆಗೆ ಮುಂದೂಡಲಾಗಿದೆ. ಇದರಿಂದ ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ದೊರಕಿದೆ. ಈ ನೇಮಕಾತಿ ಅಭಿಯಾನದಡಿಯಲ್ಲಿ ಮಾರ್ಕೆಟಿಂಗ್ ಮತ್ತು ವಿದೇಶಿ ವಿನಿಮಯ…