Category Archives: Blog

Your blog category

ಮ್ಯೂಚುವಲ್ ಫಂಡ್​ಗಿಂತಲೂ ಹೆಚ್ಚಿನ ಲಾಭ ನೀಡುತ್ತಾ ಇಪಿಎಫ್? ಪಿಂಚಣಿ ಸ್ಕೀಮ್​ನಲ್ಲಿ ಹೆಚ್ಚಿನ ಜನರಿಗೆ ಗೊತ್ತಿಲ್ಲದ ಸಂಗತಿಯೊಂದಿದೆ – Kannada News

ಇಪಿಎಫ್ (EPF) ಎಂಬುದು ಉದ್ಯೋಗಿಗಳ ನಿವೃತ್ತಿ ಅಥವಾ ಭವಿಷ್ಯದ ಕಾಲದ ಸುರಕ್ಷತೆಗೆಂದು ರೂಪಿಸಲಾಗಿದೆ. ಇದರಲ್ಲಿ ಸಾಮಾನ್ಯ ಎಫ್​ಡಿಗಳಿಗಿಂತಲೂ ಹೆಚ್ಚಿನ ಬಡ್ಡಿಯನ್ನು ಸರ್ಕಾರ ಒದಗಿಸುತ್ತದೆ. ಆದರೆ, ಇಪಿಎಫ್​ನಲ್ಲಿ ವಾರ್ಷಿಕವಾಗಿ ಶೇ. 8.25 ಮಾತ್ರವೇ ಬಡ್ಡಿ ಸಿಗುತ್ತದೆ. ಮ್ಯೂಚುವಲ್ ಫಂಡ್​ಗಳಲ್ಲಿ ಹೆಚ್ಚಿನ ರಿಟರ್ನ್ ಸಿಗುತ್ತದೆ. ಹೀಗಾಗಿ, ಇಪಿಎಫ್​ನಿಂದ ಹಣ ತೆಗೆದು ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡಿ ಎಂದು ಕೆಲ ಹಣಕಾಸು ಪರಿಣಿತರು ಸಲಹೆ ನೀಡುವುದುಂಟು. ಆದರೆ, ಇಪಿಎಫ್​ನ ಉದ್ದೇಶ ಬೇರೆ, ಮ್ಯೂಚುವಲ್ ಫಂಡ್​ನ ಉದ್ದೇಶ ಬೇರೆ. ಎರಡೂ ಬೇರೆ ಬೇರೆ ಪ್ರಾಡಕ್ಟ್ಸ್. ಆದರೂ ರಿಟರ್ನ್ ಲೆಕ್ಕಾಚಾರಕ್ಕೆ ಬಂದರೆ ಇಪಿಎಫ್​ನಲ್ಲಿ ಬಡ್ಡಿ ಜೊತೆಗೆ ಇರುವ ಇನ್ನೊಂದು ಅಂಶವು ಅನುಕೂಲ ಮಾಡಿಕೊಡುತ್ತದೆ.

ಬಹಳಷ್ಟು ಜನರು ಇಪಿಎಫ್‌ನ ಶೇ. 8.25 ಬಡ್ಡಿಯನ್ನು ಮ್ಯೂಚುವಲ್ ಫಂಡ್‌ಗಳ ಶೇ. 12-15 ಗಳಿಕೆಗೆ ಹೋಲಿಸಿ, ಇದು ಕಡಿಮೆ ಎಂದು ಭಾವಿಸುತ್ತಾರೆ. ಆದರೆ, ಇಪಿಎಫ್‌ಗೆ ಇರುವ E-E-E (Exempt-Exempt-Exempt) ಸ್ಥಾನಮಾನವೇ ಅದರ ನಿಜವಾದ ಶಕ್ತಿಯಾಗಿದೆ. ಅದರಲ್ಲೂ ಶೇ. 30ರ ಟ್ಯಾಕ್ಸ್ ಬ್ರಾಕೆಟ್​ನಲ್ಲಿರುವ ತೆರಿಗೆ ಪಾವತಿದಾರರಿಗೆ ಇಪಿಎಫ್ ಮ್ಯಾಜಿಕ್ ಮಾಡುತ್ತದೆ.

ವಾರ್ಷಿಕವಾಗಿ ₹2.5 ಲಕ್ಷದವರೆಗಿನ ಇಪಿಎಫ್ ಕೊಡುಗೆಗೆ ಸಿಗುವ ಬಡ್ಡಿಯು ಸಂಪೂರ್ಣವಾಗಿ ತೆರಿಗೆ ಮುಕ್ತವಾಗಿರುತ್ತದೆ (Tax-Free). ಅದೇ ಫಿಕ್ಸೆಡ್ ಡೆಪಾಸಿಟ್, ಮ್ಯೂಚುವಲ್ ಫಂಡ್​ಗಳಲ್ಲಿ ಬೇರೆಯೇ ವಸೂಲಿ ಇರುತ್ತದೆ. ಎಫ್​ಡಿ ವಿಚಾರಕ್ಕೆ ಬಂದರೆ, ನೀವು ಶೇ. 30 ರಷ್ಟು ತೆರಿಗೆ ವ್ಯಾಪ್ತಿಯಲ್ಲಿದ್ದರೆ (Tax Slab), ಬ್ಯಾಂಕ್ ನೀಡುವ ಶೇ. 7.5 ರಷ್ಟು ಬಡ್ಡಿಯು ತೆರಿಗೆ ಕಡಿತದ ನಂತರ ಕೇವಲ ಶೇ. 5.25ಕ್ಕೆ ಕುಸಿಯುತ್ತದೆ! ಆದರೆ ಇಪಿಎಫ್‌ನಲ್ಲಿ ಶೇ. 8.25 ಎಂದರೆ ಅದು ನಿವ್ವಳ ಶೇ. 8.25 ರಷ್ಟೇ ಆಗಿರುತ್ತದೆ.

ಇದನ್ನೂ ಓದಿ: ಟಿಸಿಎಸ್​ನಲ್ಲಿ 3 ವರ್ಷದಲ್ಲಿ ಎಐ ಏಜೆಂಟ್​ಗಳು ಉದ್ಯೋಗಿಗಳ ಸಮಕ್ಕೆ ಬರಲಿವೆಯಂತೆ

ಚಕ್ರಬಡ್ಡಿಯ ಶಕ್ತಿ (Power of Compounding)

ಇಪಿಎಫ್‌ನಲ್ಲಿ ಪ್ರತಿ ತಿಂಗಳು ನಿಮ್ಮ ಸಂಬಳದಿಂದ ಹಣ ಕಡಿತವಾಗಿ ಜಮೆಯಾಗುತ್ತದೆ. ಇದರ ಬಡ್ಡಿಯು ಪ್ರತಿ ವರ್ಷದ ಕೊನೆಯಲ್ಲಿ ಅಸಲಿಗೆ ಸೇರುತ್ತಾ ಹೋಗುತ್ತದೆ. ಇದರ ಜೊತೆಗೆ ಟ್ಯಾಕ್ಸ್ ಉಳಿತಾಯವನ್ನೂ ಸೇರಿಸಿದರೆ ನಿಮ್ಮ ಇಪಿಎಫ್ ನಿಧಿ ದೀರ್ಘಾವಧಿಯಲ್ಲಿ ವಾರ್ಷಿಕ ಶೇ. 11ರಿಂದ 12ರಷ್ಟು ರಿಟರ್ನ್ ಕೊಡಬಲ್ಲುದು.

ಮ್ಯೂಚುವಲ್ ಫಂಡ್‌ಗಳ ಮೇಲಿನ ತೆರಿಗೆ ಗಮನಿಸಿ..!

ಮ್ಯೂಚುವಲ್ ಫಂಡ್‌ಗಳು ಹೆಚ್ಚಿನ ಆದಾಯ ನೀಡಿದರೂ, ಹಣ ಹಿಂಪಡೆಯುವಾಗ ದೀರ್ಘಾವಧಿ ಬಂಡವಾಳ ಗಳಿಕೆ ತೆರಿಗೆ (LTCG – Long Term Capital Gains Tax) ಪಾವತಿಸಬೇಕಾಗುತ್ತದೆ. ಆದರೆ ಇಪಿಎಫ್‌ನಲ್ಲಿ ಐದು ವರ್ಷಗಳ ನಿರಂತರ ಸೇವೆಯ ನಂತರ ಹಿಂಪಡೆಯುವ ಸಂಪೂರ್ಣ ಮೊತ್ತಕ್ಕೆ ಯಾವುದೇ ತೆರಿಗೆ ಇರುವುದಿಲ್ಲ.

ಹಳೆಯ ಟ್ಯಾಕ್ಸ್ ರಿಜೈಮ್​ನಲ್ಲಿ ಪಿಪಿಎಫ್ ರೀತಿಯಲ್ಲಿ ಇಪಿಎಫ್​ನಿಂದಲೂ ಟ್ಯಾಕ್ಸ್ ಡಿಡಕ್ಷನ್ ಅವಕಾಶ ಇರುತ್ತದೆ. ವರ್ಷಕ್ಕೆ ಒಂದೂವರೆ ಲಕ್ಷ ರೂವರೆಗಿನ ಇಪಿಎಫ್ ಕೊಡುಗೆಗೆ ಟ್ಯಾಕ್ಸ್ ಇರುವುದಿಲ್ಲ. ಅಂದರೆ, ಒಂದೂವರೆ ಲಕ್ಷ ರೂಗೆ ಟ್ಯಾಕ್ಸ್ ಉಳಿತಾಯ ಆಗುತ್ತದೆ. ಶೇ. 30ರ ಟ್ಯಾಕ್ಸ್ ಸ್ಲಾಬ್​ನಲ್ಲಿರುವ ವ್ಯಕ್ತಿಗಳು ಇದರಿಂದ ವರ್ಷಕ್ಕೆ 45,000 ರೂ ಟ್ಯಾಕ್ಸ್ ಉಳಿಸಬಹುದು.

ಇದನ್ನೂ ಓದಿ: ವಿಶ್ವದಾಖಲೆ ಸನಿಹದಲ್ಲಿ 23 ವರ್ಷದ ಆದಿತ್ ಪಲಿಚಾ; ಲಿಸ್ಟೆಡ್ ಕಂಪನಿಯ ಅತಿ ಕಿರಿಯ ಸಿಇಒ ಎನಿಸಲಿದ್ದಾರೆ ಝೆಪ್ಟೋ ಸಂಸ್ಥಾಪಕ

ಮ್ಯೂಚುವಲ್ ಫಂಡ್‌ಗಿಂತ ಇಪಿಎಫ್ ಹೇಗೆ ಸುರಕ್ಷಿತ?

ಮ್ಯೂಚುವಲ್ ಫಂಡ್‌ಗಳು (Equity Mutual Funds) ಶೇ. 12 ಕ್ಕಿಂತ ಹೆಚ್ಚಿನ ಆದಾಯ ನೀಡಬಹುದಾದರೂ, ಅವುಗಳಲ್ಲಿ ಮಾರುಕಟ್ಟೆಯ ಅಪಾಯವಿರುತ್ತದೆ (Market Risk). ಷೇರು ಮಾರುಕಟ್ಟೆ ಕುಸಿದಾಗ ನಿಮ್ಮ ಹಣದ ಮೌಲ್ಯವೂ ಕುಸಿಯುತ್ತದೆ.

ಆದರೆ, ಇಪಿಎಫ್ ಭಾರತ ಸರ್ಕಾರದಿಂದ ಖಾತರಿಪಡಿಸಲ್ಪಟ್ಟ ಸಂಪೂರ್ಣ ಸುರಕ್ಷಿತ ಹೂಡಿಕೆಯಾಗಿದೆ. ಸ್ಥಿರವಾದ ಆರ್ಥಿಕ ಭವಿಷ್ಯ ಮತ್ತು ನಿವೃತ್ತಿ ಜೀವನಕ್ಕಾಗಿ (Retirement Planning) ಯಾವುದೇ ಅಪಾಯವಿಲ್ಲದೆ ಶೇ. 8.25 ರಷ್ಟು ಗ್ಯಾರಂಟಿ ರಿಟರ್ನ್ಸ್ ನೀಡುವ ಮತ್ತೊಂದು ಹೂಡಿಕೆ ಸದ್ಯಕ್ಕೆ ಮಾರುಕಟ್ಟೆಯಲ್ಲಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪಿಒಕೆಯಲ್ಲಿ ಪಾಕಿಸ್ತಾನದ ಸೇನಾ ಹೆಲಿಕಾಪ್ಟರ್ ಪತನ; ಅಧಿಕಾರಿಗಳು ಸೇರಿದಂತೆ ಎಲ್ಲ ಸೈನಿಕರೂ ಸಜೀವದಹನ – Kannada News

ಇಸ್ಲಮಾಬಾದ್, ಜೂನ್ 10: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಪಾಕಿಸ್ತಾನ ಸೇನೆಗೆ ಸೇರಿದ ಯುದ್ಧ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಪತನಗೊಂಡಿದೆ. ಈ ದುರಂತದಲ್ಲಿ ಅದರಲ್ಲಿದ್ದ ಎಲ್ಲಾ ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಆಯಕಟ್ಟಿನ ಪ್ರದೇಶವೊಂದರಲ್ಲಿ ಪಾಕಿಸ್ತಾನ ಸೇನೆಗೆ ಸೇರಿದ ಹೆಲಿಕಾಪ್ಟರ್ ಭೀಕರವಾಗಿ ಪತನಗೊಂಡಿದೆ. ಹೆಲಿಕಾಪ್ಟರ್ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ ಉನ್ನತ ಮಿಲಿಟರಿ ಅಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗವಾದ ಐಎಸ್‌ಪಿಆರ್ (ISPR) ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಹೆಲಿಕಾಪ್ಟರ್ ಪಿಒಕೆಯ ಮುಜಾಫರಾಬಾದ್ ಸಮೀಪದ ಸೇನಾ ನೆಲೆಯಿಂದ ತುರ್ತು ಕಾರ್ಯಾಚರಣೆಗಾಗಿ ಟೇಕ್-ಆಫ್ ಆಗುತ್ತಿತ್ತು. ನೆಲದಿಂದ ಕೆಲವೇ ಅಡಿಗಳಷ್ಟು ಎತ್ತರಕ್ಕೆ ಹಾರುತ್ತಿದ್ದಂತೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ ರನ್‌ವೇ ಪಕ್ಕದ ಮೈದಾನಕ್ಕೆ ಅಪ್ಪಳಿಸಿತು. ಈ ವೇಳೆ ಇಂಧನ ಟ್ಯಾಂಕ್ ಸ್ಫೋಟಗೊಂಡಿದ್ದರಿಂದ ಇಡೀ ಹೆಲಿಕಾಪ್ಟರ್ ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿದೆ. ಅಪಘಾತದ ತೀವ್ರತೆಗೆ ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಪೈಲಟ್‌ಗಳು (ಮೇಜರ್ ಶ್ರೇಣಿಯ ಅಧಿಕಾರಿಗಳು) ಮತ್ತು ಇಬ್ಬರು ತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 4ರಿಂದ 5 ಸೈನಿಕರು ಸಜೀವ ದಹನವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಮೃತದೇಹಗಳನ್ನು ಗುರುತಿಸಲಾಗದಷ್ಟು ಸುಟ್ಟುಹೋಗಿದ್ದು, ಅವುಗಳನ್ನು ಮುಜಾಫರಾಬಾದ್‌ನ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನದಿಂದ ಗುಂಡಿನ ದಾಳಿ; 30 ಜನ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ

ಕೆಲವು ದಿನಗಳಿಂದ ಪಿಒಕೆಯ ರಾವಲಕೋಟ್ ಮತ್ತು ಮೀರ್‌ಪುರ ಭಾಗಗಳಲ್ಲಿ ಜಾಯಿಂಟ್ ಅವಮಿ ಆಕ್ಷನ್ ಕಮಿಟಿ (JAAC) ನೇತೃತ್ವದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ಭಾರಿ ನಾಗರಿಕ ಪ್ರತಿಭಟನೆಗಳು ಮತ್ತು ಹಿಂಸಾಚಾರಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಸೇನೆಯು ಪ್ರತಿಭಟನಾಕಾರರನ್ನು ಹತ್ತಿಕ್ಕಲು ಮತ್ತು ಕಣ್ಗಾವಲು ಇಡಲು ಹೆಲಿಕಾಪ್ಟರ್‌ಗಳನ್ನು ಬಳಸುತ್ತಿತ್ತು. ಇಂತಹ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಸೇನಾ ಹೆಲಿಕಾಪ್ಟರ್ ಪತನಗೊಂಡಿರುವುದು ಪಾಕಿಸ್ತಾನ ರಕ್ಷಣಾ ಪಡೆಗಳಿಗೆ ದೊಡ್ಡ ಹಿನ್ನಡೆಯಾಗಿದೆ.

ದಾಳಿ ಅಥವಾ ವಿಧ್ವಂಸಕ ಕೃತ್ಯದ ಸಾಧ್ಯತೆಯನ್ನು ಸದ್ಯಕ್ಕೆ ಪಾಕಿಸ್ತಾನ ಸೇನೆ ತಳ್ಳಿಹಾಕಿದ್ದು, ಕೇವಲ ಯಾಂತ್ರಿಕ ವೈಫಲ್ಯದಿಂದಲೇ ಈ ದುರಂತ ಸಂಭವಿಸಿದೆ ಎಂದು ಹೇಳಿದೆ. ಈ ಘಟನೆಯ ಕುರಿತು ಉನ್ನತ ಮಟ್ಟದ ಮಿಲಿಟರಿ ತನಿಖೆಗೆ ಆದೇಶಿಸಲಾಗಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ, 11 ಮಕ್ಕಳು ಸೇರಿ 13 ಮಂದಿ ಸಾವು

ಪಾಕಿಸ್ತಾನದ ಚೀಫ್ ಆಫ್ ಆರ್ಮಿ ಸ್ಟಾಫ್ ಹಾಗೂ ಚೀಫ್ ಆಫ್ ಡಿಫೆನ್ಸ್ ಫೋರ್ಸಸ್ ಫೀಲ್ಡ್ ಮಾರ್ಷಲ್ ಅಸೀಮ್ ಮುನೀರ್ ಅವರು, ಪಾಕಿಸ್ತಾನ ಸೇನೆಯ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಹೆಲಿಕಾಪ್ಟರ್ ದುರಂತದಲ್ಲಿ ಜೀವಹಾನಿಯಾಗಿರುವುದಕ್ಕೆ ತೀವ್ರ ಕಳವಳ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಮಿಲಿಟರಿ ನಾಯಕತ್ವವು ಮೃತರ ಕುಟುಂಬಗಳಿಗೆ ತಮಗಿರುವ ತೀವ್ರ ಸಂತಾಪವನ್ನು ಸೂಚಿಸಿದ್ದು, ಕರ್ತವ್ಯದ ಅವಧಿಯಲ್ಲಿ ಪ್ರಾಣ ಕಳೆದುಕೊಂಡ ಸೈನಿಕರಿಗೆ ಗೌರವ ನಮನ ಸಲ್ಲಿಸಿದೆ.

ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರೂ ಸಹ ಮುಜಾಫರಾಬಾದ್ ಸಮೀಪ ನಡೆದ ಹೆಲಿಕಾಪ್ಟರ್ ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತಪಟ್ಟ ಸೇನಾ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, “ಪಾಕಿಸ್ತಾನದ ಮಣ್ಣಿನ ವೀರ ಪುತ್ರರ ತ್ಯಾಗಕ್ಕೆ ಇಡೀ ದೇಶವೇ ತಲೆಬಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 5:57 pm, Wed, 10 June 26

Source link

ಚೊಚ್ಚಲ ಟೆಸ್ಟ್​ನಲ್ಲಿ ಮಿಂಚಿ ವಿದೇಶಿ ತಂಡವನ್ನು ಸೇರಿಕೊಂಡ ಮಾನವ್ ಸುತಾರ್

Source link

ಚೊಚ್ಚಲ ಟೆಸ್ಟ್​ನಲ್ಲಿ ಮಿಂಚಿ ವಿದೇಶಿ ತಂಡವನ್ನು ಸೇರಿಕೊಂಡ ಮಾನವ್ ಸುತಾರ್

Source link

36 ಸಾವಿರ ಕೋಟಿ ರೂ. ಲೂಟಿ ಆರೋಪ: ರಾಜ್ಯಪಾಲರಾಯ್ತು ಈಗ ಲೋಕಾಯುಕ್ತಕ್ಕೂ ಬಿಜೆಪಿ ದೂರು

ಬೆಂಗಳೂರು, (ಜೂನ್ 10): ಬೆಂಗಳೂರಿನ ಕಸದ ಟೆಂಡರ್​​​ನಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಆರೋಪ ಮಾಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದು, ಸಿಬಿಐ ತನಿಗೆ ಮನವಿ ಮಾಡಿದೆ. ಇದರ ಬೆನ್ನಲ್ಲೇ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೂ ದೂರು ನೀಡಿದೆ.  ​​ 36 ಸಾವಿರ ಕೋಟಿ ರೂಪಾಯಿಯ ಬೆಂಗಳೂರು ಕಸದ ಟೆಂಡರ್ ನಲ್ಲಿ ಬರೋಬ್ಬರಿ 10 ಸಾವಿರ ಕೋಟಿ ರೂ. ಕಿಕ್‌ಬ್ಯಾಕ್ ಪಡೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾ‌ನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಧೀರಜ್ ಮುನಿರಾಜು ದೂರು ನೀಡಿದ್ದು,ಅಕ್ರಮದ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ನೋಡಿ: ಏನಿದು ಕಸದಿಂದ ಕಾಸು? ಬಹುದೊಡ್ಡ ಹಗರಣವನ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್

Source link

ಪವನ್​ ಕಲ್ಯಾಣ್​​ಗೆ ಇಷ್ಟವಾದ ಎರಡು ಹಿಂದಿ ಸಿನಿಮಾ ಇವು – Kannada News

ಪವನ್ ಕಲ್ಯಾಣ್ (Pawan Kalyan), ಸ್ಟಾರ್ ನಟರಾಗಿರುವ ಜೊತೆಗೆ ಆಂಧ್ರ ಪ್ರದೇಶ ಸರ್ಕಾರದ ಉಪ ಮುಖ್ಯಮಂತ್ರಿ ಸಹ ಹೌದು. ಹಲವು ಪ್ರಮುಖ ಖಾತೆಗಳನ್ನು ಅವರು ನಿಭಾಯಿಸುತ್ತಿದ್ದಾರೆ. ಇತ್ತೀಚೆಗೆ ನೆರೆ ತೆಲುಗು ರಾಜ್ಯವಾದ ತೆಲಂಗಾಣ ಸರ್ಕಾರ ಹಾಗೂ ಪವನ್ ಕಲ್ಯಾಣ್ ನಡುವೆ ರಾಜಕೀಯ ಭಿನ್ನಾಭಿಪ್ರಾಯಗಳು ಏರ್ಪಟ್ಟಿವೆ. ಇದೀಗ ಡಿಸಿಎಂ ಆದ ಬಳಿಕ ಪವನ್ ಕಲ್ಯಾಣ್ ಅವರು ಮೊದಲ ಬಾರಿಗೆ ಪಾಡ್​​ಕಾಸ್ಟ್ ಒಂದರಲ್ಲಿ ಭಾಗಿ ಆಗಿದ್ದಾರೆ. ಎಎನ್​​ಐ ನಡೆಸಿದ ಪಾಡ್​​ಕಾಸ್ಟ್​​ನಲ್ಲಿ ಭಾಗವಹಿಸಿದ್ದ ಪವನ್ ಕಲ್ಯಾಣ್, ತಮ್ಮಿಷ್ಟದ ಎರಡು ಹಿಂದಿ ಸಿನಿಮಾಗಳನ್ನು ಹೆಸರಿಸಿದ್ದಾರೆ.

ಪವನ್ ಕಲ್ಯಾಣ್ ಅವರು ಎಎನ್​​ಐ ಪಾಡ್​​ಕಾಸ್ಟ್​​ನಲ್ಲಿ ರಾಜಕೀಯ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದು, ಪಾಡ್​​ಕಾಸ್ಟ್​ನ ಪ್ರೋಮೊ ಮಾತ್ರವೇ ಇದೀಗ ಬಿಡುಗಡೆ ಆಗಿದೆ. ಪಾಡ್​​ಕಾಸ್ಟ್​​ನ ಪ್ರೋಮೊನಲ್ಲಿ ತೋರಿಸಿರುವಂತೆ ಸಂದರ್ಶಕಿ, ಪವನ್ ಕಲ್ಯಾಣ್ ಅವರಿಗೆ ಇಷ್ಟದ ಸಿನಿಮಾಗಳ ಬಗ್ಗೆ ಪ್ರಶ್ನಿಸಿದ್ದಾರೆ. ವಿಶೇಷವಾಗಿ ಇತ್ತೀಚೆಗೆ ಇಷ್ಟವಾದ ಹಿಂದಿ ಸಿನಿಮಾಗಳು ಯಾವುವು ಎಂದು ಪ್ರಶ್ನೆ ಕೇಳಿದ್ದಾರೆ.

ಅದಕ್ಕೆ ಪವನ್ ಕಲ್ಯಾಣ್, ‘ನನಗೆ ‘ಧುರಂಧರ್’ ಸಿನಿಮಾ ಬಹಳ ಇಷ್ಟವಾಯ್ತು ಎಂದಿದ್ದಾರೆ. ಜೊತೆಗೆ ‘ಬಾರಾಮುಲ್ಲ’ ಹೆಸರಿನ ಹಿಂದಿ ಸಿನಿಮಾ ಸಹ ಬಹಳ ಇಷ್ಟವಾಯ್ತು ಎಂದಿದ್ದಾರೆ. ‘ಧುರಂಧರ್’ ಸಹಜವಾಗಿಯೇ ಬಹುತೇಕರಿಗೆ ಇಷ್ಟವಾದ ಸಿನಿಮಾ, ಖುದ್ದು ಪ್ರಧಾನಿ ಮೋದಿ ಅವರು ಸಹ ‘ಧುರಂಧರ್’ ಸಿನಿಮಾದ ಬಗ್ಗೆ ಪ್ರಶಂಸಿಸಿ ಮಾತನಾಡಿದ್ದರು. ಪವನ್ ಕಲ್ಯಾಣ್ ಅವರಿಗೂ ಆ ಸಿನಿಮಾ ಇಷ್ಟವಾಗಿದೆ.

ಇದನ್ನೂ ಓದಿ:ದಳಪತಿ ವಿಜಯ್ ರಾಜಕೀಯ ಯಶಸ್ಸಿನಿಂದ ಪವನ್ ಕಲ್ಯಾಣ್​ಗೆ ಅಸೂಯೆ; ಸತ್ಯ ಒಪ್ಪಿಕೊಂಡ ಡಿಸಿಎಂ

‘ಬಾರಾಮುಲ್ಲ’ ಸಿನಿಮಾ ದೊಡ್ಡ ಹಿಟ್ ಸಿನಿಮಾ ಅಲ್ಲದಿದ್ದರೂ ಭಿನ್ನವಾದ ಹಾರರ್ ಸಿನಿಮಾ. ಹೆಸರೇ ಸೂಚಿಸುತ್ತಿರುವಂತೆ ಕಾಶ್ಮೀರದಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಹಾರರ್ ಕತೆ ಹೊಂದಿರುವ ಜೊತೆಗೆ ಕಾಶ್ಮೀರದ ರಾಜಕೀಯ, ವಸ್ತುಸ್ಥಿತಿಯ ಮೇಲೆಯೂ ಬೆಳಕು ಚೆಲ್ಲುತ್ತದೆ. ವಿಶೇಷವೆಂದರೆ ಈ ಸಿನಿಮಾಕ್ಕೆ ಚಿತ್ರಕತೆ ಬರೆದಿರುವವರು ‘ಧುರಂಧರ್’ ನಿರ್ದೇಶಕ ಆದಿತ್ಯ ಧರ್. ಸಿನಿಮಾ ನಿರ್ದೇಶಿಸಿರುವುದು ಆದಿತ್ಯ ಸುಹಾಸ್.

ಇದೇ ಪಾಡ್​​ಕಾಸ್ಟ್​​ನಲ್ಲಿ ಪವನ್ ಕಲ್ಯಾಣ್ ಅವರು ತಾವು ಕಾಶ್ಮೀರದಲ್ಲಿ ಸಿನಿಮಾಗಳನ್ನು ಚಿತ್ರೀಕರಿಸುವಾಗ ಎದುರಿಸುತ್ತಿದ್ದ ಸಮಸ್ಯೆ, ಸ್ಥಳೀಯರಿಂದ ಎದುರಾಗುತ್ತಿದ್ದ ದೌರ್ಜನ್ಯಗಳನ್ನು ನೆನಪು ಮಾಡಿಕೊಂಡಿದ್ದಾರೆ. ಪಾಡ್​​ಕಾಸ್ಟ್​​ನಲ್ಲಿ ಅವರು ತಾವು ನಕ್ಸಲೈಟ್ ಆಗಬೇಕೆಂದು ಹೊರಟಿದ್ದಾಗಿಯೂ ಹೇಳಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​

ಉಡುಪಿ, ಜೂನ್​​ 10: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಜೂನ್​​ 12 (ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ ಆಗಮಿಸಲಿರುವ ವಿಜಯ್ ಅವರು, ಮಧ್ಯಾಹ್ನ 3 ಗಂಟೆಗೆ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಲುಪಲಿದ್ದಾರೆ. ದೇವಿಯ ದರ್ಶನ ಮತ್ತು ಪೂಜಾ ಕೈಂಕರ್ಯಗಳನ್ನು ಪೂರೈಸಿದ ನಂತರ, ಅಂದೇ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ವಾಪಸಾಗಲಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್

ನವದೆಹಲಿ, ಜೂನ್ 10: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರ ನಡುವಿನ ಬಂಡಾಯದಿಂದ ಮಮತಾ ಬ್ಯಾನರ್ಜಿ (Mamata Banerjee) ಪಕ್ಷವನ್ನು ಉಳಿಸಿಕೊಳ್ಳುವುದು ಹೇಗೆಂಬ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಧಿಕಾರದಿಂದ ದೂರ ಸರಿದಾಯಿತು, ಇದೀಗ ಪಕ್ಷವೂ ಕೈ ತಪ್ಪಿಹೋಗುತ್ತದೆಯೇ? ಎಂಬ ಆತಂಕದಲ್ಲಿ ದೀದಿ ಇದ್ದಾರೆ. ಇದರ ನಡುವೆ ದೆಹಲಿಯಲ್ಲಿ ‘ಕೈ’ ನಾಯಕರ ಜೊತೆ ಟಿಎಂಸಿ ನಾಯಕರ ಚರ್ಚೆ ನಡೆದಿದ್ದು, ನಿನ್ನೆ ಸೋನಿಯಾ ಗಾಂಧಿಯನ್ನು ಮಮತಾ ಬ್ಯಾನರ್ಜಿ ಭೇಟಿಯಾಗಿದ್ದರು. ಇಂದು ರಾಹುಲ್ ಗಾಂಧಿಯನ್ನು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಭೇಟಿಯಾಗಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿಗೆ ಎಐಸಿಸಿ ಉಪಾಧ್ಯಕ್ಷರ ಸ್ಥಾನದ ಆಫರ್ ನೀಡಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಇದಕ್ಕೆ ದೀದಿ ಒಪ್ಪಿದರೆ ಕಾಂಗ್ರೆಸ್ ಜೊತೆ ಟಿಎಂಸಿ ವಿಲೀನವಾಗಲಿದೆ.

ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ತೀವ್ರ ಆಂತರಿಕ ಬಂಡಾಯ ಮತ್ತು ಸರಣಿ ರಾಜೀನಾಮೆಗಳ ಬೆನ್ನಲ್ಲೇ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಬಲ್ಲ ಅತ್ಯಂತ ಮಹತ್ವದ ಬೆಳವಣಿಗೆಯೊಂದು ವರದಿಯಾಗಿದೆ. ಕಾಂಗ್ರೆಸ್‌ನ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ನಡೆದ ರಹಸ್ಯ ಮಾತುಕತೆಯ ನಂತರ, ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಅತ್ಯುನ್ನತ ಹುದ್ದೆಗಳನ್ನು ಆಫರ್ ಮಾಡಲಾಗಿದೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಶಾಸಕರು ಮತ್ತು ಸಂಸದರ ಸರಣಿ ಬಂಡಾಯದಿಂದಾಗಿ ಮಮತಾ ಬ್ಯಾನರ್ಜಿ ಅವರ ಹಿಡಿತ ಸಡಿಲಗೊಳ್ಳುತ್ತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅನ್ನು ಮತ್ತೆ ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸುವ ಅಥವಾ ಮೈತ್ರಿಯನ್ನು ಸಂಪೂರ್ಣವಾಗಿ ಪುನರ್ರಚಿಸುವ ನಿಟ್ಟಿನಲ್ಲಿ ತೆರೆಮರೆಯ ರಾಜಕೀಯ ಕಸರತ್ತುಗಳು ಆರಂಭವಾಗಿವೆ. ಕಾಂಗ್ರೆಸ್ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಸಳ ಹಾಗೂ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಟಿಎಂಸಿಯಲ್ಲಿ ಉಂಟಾಗಿರುವ ಬಿರುಕನ್ನು ಬಳಸಿಕೊಂಡು ಬಂಗಾಳದಲ್ಲಿ ಬಿಜೆಪಿಯ ಪ್ರಭಾವವನ್ನು ತಡೆಯಲು ಕಾಂಗ್ರೆಸ್ ಹೈಕಮಾಂಡ್ ಈ ಮಾಸ್ಟರ್ ಪ್ಲಾನ್ ರೂಪಿಸಿದೆ. ಮಾತುಕತೆಯ ವೇಳೆ ಕಾಂಗ್ರೆಸ್ ನಾಯಕರು ಕೆಲವು ಪ್ರಮುಖ ಪ್ರಸ್ತಾಪಗಳನ್ನು ಮಮತಾ ಬ್ಯಾನರ್ಜಿಯ ಮುಂದೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಮತಾ ಬ್ಯಾನರ್ಜಿ ಅವರನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಅಥವಾ ಎಐಸಿಸಿ (AICC) ಉನ್ನತ ನೀತಿ ನಿರೂಪಣಾ ಸಮಿತಿಯ ಮುಖ್ಯಸ್ಥರನ್ನಾಗಿ ಮಾಡಲು ಆಫರ್ ನೀಡಲಾಗಿದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಮತ್ತೊಂದು ಆಘಾತ; ಟಿಎಂಸಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ

ಅಭಿಷೇಕ್ ಬ್ಯಾನರ್ಜಿ ಅವರಿಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯಲ್ಲಿ (AICC) ಅತ್ಯಂತ ಪ್ರಭಾವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಅಥವಾ ಲೋಕಸಭೆಯಲ್ಲಿ ಪಕ್ಷದ ಪ್ರಮುಖ ಜವಾಬ್ದಾರಿಯನ್ನು ನೀಡುವ ಭರವಸೆ ನೀಡಲಾಗಿದೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ 58 ಶಾಸಕರು ಬಂಡಾಯ ಎದ್ದು ರಿತಬ್ರತ ಬ್ಯಾನರ್ಜಿ ಅವರನ್ನು ಬೆಂಬಲಿಸಿದ್ದು, ಸಂಸತ್ತಿನಲ್ಲಿ ಸುಖೇಂದು ಶೇಖರ್ ರಾಯ್ ಮತ್ತು ಸುಶ್ಮಿತಾ ದೇವ್ ಅವರಂತಹ ಹಿರಿಯ ನಾಯಕರು ರಾಜ್ಯಸಭೆಗೆ ರಾಜೀನಾಮೆ ನೀಡಿರುವುದು ಮಮತಾ ಬ್ಯಾನರ್ಜಿ ಅವರಿಗೆ ಶಾಕ್ ನೀಡಿದೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಜನಾಭಿಪ್ರಾಯ ರೂಪಿಸಿ ಬಿಜೆಪಿ ಭಾರಿ ಯಶಸ್ಸು ಗಳಿಸುತ್ತಿರುವುದರಿಂದ, ಒಂಟಿಯಾಗಿ ಹೋರಾಡುವ ಬದಲು ಕಾಂಗ್ರೆಸ್ ಜೊತೆ ಶಕ್ತಿ ಮರುಸಂಗ್ರಹಿಸುವುದು ಮಮತಾ ಬ್ಯಾನರ್ಜಿಗೂ ಅನಿವಾರ್ಯ ಎನಿಸಿದೆ ಎನ್ನಲಾಗಿದೆ. ಮಮತಾ ಬ್ಯಾನರ್ಜಿ 1998ರಲ್ಲಿ ಕಾಂಗ್ರೆಸ್ ತೊರೆದು ಟಿಎಂಸಿ ಸ್ಥಾಪಿಸಿದ್ದರು. ಇದೀಗ ಸುಮಾರು 3 ದಶಕಗಳ ನಂತರ ಪರಿಸ್ಥಿತಿಯ ಒತ್ತಡಕ್ಕೆ ಮಣಿದು ಕಾಂಗ್ರೆಸ್ ಜೊತೆ ಕೈಜೋಡಿಸುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಈ ಬಂಪರ್ ಆಫರ್ ಕುರಿತು ಮಮತಾ ಬ್ಯಾನರ್ಜಿ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ತಮ್ಮ ಪಾಳಯದಲ್ಲಿ ಉಳಿದುಕೊಂಡಿರುವ ನಿಷ್ಠಾವಂತ ನಾಯಕರು ಹಾಗೂ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿ, ಶೀಘ್ರದಲ್ಲೇ ಅವರು ತಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಟಿಎಂಸಿ ಆಪ್ತ ಮೂಲಗಳು ಸೂಚಿಸಿವೆ. ಒಂದು ವೇಳೆ ಈ ವಿಲೀನ ಅಥವಾ ಮೈತ್ರಿ ಯಶಸ್ವಿಯಾದರೆ, ಅದು ದೇಶದ ರಾಜಕಾರಣದ ದಿಕ್ಕನ್ನೇ ಬದಲಿಸಬಲ್ಲ ದಿಕ್ಸೂಚಿಯಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: 1,280 ವೈದ್ಯರು, ನರ್ಸ್‌ಗಳ ಭರ್ತಿಗೆ ಯು.ಟಿ. ಖಾದರ್ ಆದೇಶ – Kannada News

ಬೆಂಗಳೂರು, ಜೂ.10: ರಾಜ್ಯದ ಆರೋಗ್ಯ ಸಚಿವ ಯುಟಿ ಖಾದರ್​ ಅವರು ಚುರುಕಿನ ಕಾರ್ಯಕ್ಕೆ ಮುಂದಾಗಿದ್ದಾರೆ. ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳನ್ನು ತರಲು ಮುಂದಾಗಿದ್ದಾರೆ. ಸಾಮಾನ್ಯ ಜನರು ಕಷ್ಟಕ್ಕೆ ತಕ್ಷಣವೇ ಸ್ಪಂದನೆ ಸಿಗಬೇಕು ಹಾಗೂ ಯಾವುದೇ ವೈದ್ಯಕೀಯ ಕೊರತೆ ಬರಬಾರದು ಎಂದು ಅಧಿಕಾರ ವಹಿಸಿದ ಮರುದಿನವೇ ಕೆಲಸದಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿದ್ದ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಸಮಸ್ಯೆಗೆ ಮುಕ್ತಿ ಹಾಡಲು ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸತತ 5 ಗಂಟೆಗಳ ಸುದೀರ್ಘ ಮೊದಲ ಪರಾಮರ್ಶನಾ ಸಭೆಯಲ್ಲಿ ಇಲಾಖೆಯನ್ನು ತಳಮಟ್ಟದಿಂದ ಬಲಪಡಿಸಲು ದೊಡ್ಡ ಮಟ್ಟದ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ರಾಜ್ಯದಲ್ಲಿ ಸದ್ಯ ಒಟ್ಟು 1,280 ಎಂಬಿಬಿಎಸ್ ವೈದ್ಯರು, 924 ತಜ್ಞ ವೈದ್ಯರುಹಾಗೂ 892 ನರ್ಸ್‌ಗಳ ಕೊರತೆಯಿದೆ. ಈ ಪೈಕಿ 200 ವೈದ್ಯರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆ ಮೂಲಕ ನೇರ ಹಾಗೂ ಖಾಯಂ ಆಗಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಇದಕ್ಕೆ ಈಗಾಗಲೇ ಆರ್ಥಿಕ ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಪರೀಕ್ಷೆ ಮುಗಿದ ಕೇವಲ ಒಂದು ವಾರದೊಳಗೆ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದರೊಂದಿಗೆ ಕೆಇಎ ಮೂಲಕವೇ 400 ನರ್ಸ್‌ಗಳು, 400 ಫಾರ್ಮಸಿಸ್ಟ್‌ಗಳು ಹಾಗೂ 400 ಲ್ಯಾಬ್ ಟೆಕ್ನಿಷಿಯನ್‌ಗಳನ್ನು ಖಾಯಂ ಆಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದುನ ಹೇಳಿದ್ದಾರೆ.

1,000 ವೈದ್ಯರ ‘ವಾಕ್-ಇನ್ ಇಂಟರ್ವ್ಯೂ’ ಗುತ್ತಿಗೆ ನೇಮಕ:

ಉಳಿದ 1,000 ವೈದ್ಯರ ಹುದ್ದೆಗಳನ್ನು ತುಂಬಲು ತಕ್ಷಣವೇ ಜಿಲ್ಲಾ ಆರೋಗ್ಯಾಧಿಕಾರಿಗಳ (DHO) ಮಟ್ಟದಲ್ಲಿ ‘ವಾಕ್-ಇನ್ ಇಂಟರ್ವ್ಯೂ’ ನಡೆಸಲಾಗುವುದು. ಆಸಕ್ತರು ನೇರವಾಗಿ ಡಿಎಚ್‌ಒಗಳಿಗೆ ಅರ್ಜಿ ಸಲ್ಲಿಸಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಬಹುದು. ಇವರಿಗೆ ಪ್ರತಿ ತಿಂಗಳು 1,10,000 ರೂಪಾಯಿ ಗೌರವಧನ ನೀಡಲಾಗುವುದು. ಗುತ್ತಿಗೆ ಆಧಾರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಗ್ರಾಮೀಣ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಉತ್ತಮ ಸೇವೆ ಸಲ್ಲಿಸುವ ವೈದ್ಯರ ಸಾಧನೆಯನ್ನು ಪರಿಗಣಿಸಿ, ಮುಂದೆ ಅವರನ್ನು ಖಾಯಂ ಮಾಡಿಕೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ. ಜೊತೆಗೆ ಇವರಿಗೆ ಉನ್ನತ ಶಿಕ್ಷಣದಲ್ಲಿ ವಿಶೇಷ ಅವಕಾಶ ಕಲ್ಪಿಸಿಕೊಡಲಾಗುವುದು.

ಇದನ್ನೂ ಓದಿ: ‘ರಸ್ತೆ ಗುಂಡಿಗೆ ಬಿದ್ದು ಪ್ರಾಣ ಹೋದರೆ ಇಂಜಿನಿಯರ್‌ಗಳೇ ನೇರ ಹೊಣೆ’: ಸಚಿವ ಯು.ಟಿ.ಖಾದರ್ ಖಡಕ್ ವಾರ್ನಿಂಗ್

ಔಷಧಿ ದರ ಏರಿಕೆ ತಡೆಗೆ ಕೇಂದ್ರಕ್ಕೆ ಮನವಿ:

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯು.ಟಿ. ಖಾದರ್, “ನಗರ ಪ್ರದೇಶಗಳಲ್ಲಿ ವೈದ್ಯರಿದ್ದರೂ ಗ್ರಾಮೀಣ ಭಾಗದಲ್ಲಿ ತೀವ್ರ ಕೊರತೆಯಿದೆ. ಇವತ್ತಿನ ನಮ್ಮ ಇಲಾಖೆಯ ಶ್ರಮದಿಂದ ಶೇ. 80 ರಷ್ಟು ಆರೋಗ್ಯ ಸೇವೆಗಳು ಜನರಿಗೆ ಲಭ್ಯವಾಗುತ್ತಿವೆ. ಇನ್ನು ದೇಶದಲ್ಲಿ ಔಷಧಿಗಳ ದರ ಹೆಚ್ಚಳವಾಗುತ್ತಿರುವ ವಿಚಾರವಾಗಿ ನಾನು ವೈಯಕ್ತಿಕವಾಗಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಸಾರ್ವಜನಿಕರ ಹಿತದೃಷ್ಟಿಯಿಂದ ದರ ಹೆಚ್ಚಿಸದಂತೆ ಮನವಿ ಮಾಡಲಿದ್ದೇನೆ” ಎಂದರು.

ಔಷಧಿಗಳ ಮರುಪರಿಶೀಲನೆ ಹಾಗೂ ಹೊಸ ಟೆಂಡರ್:

ಸರ್ಕಾರಿ ಉಗ್ರಾಣಗಳಿಗೆ (Warehouse) ಬರುವ ಔಷಧಿಗಳ ಗುಣಮಟ್ಟವನ್ನು ಮತ್ತೊಮ್ಮೆ ಕಡ್ಡಾಯವಾಗಿ ಮರುಪರಿಶೀಲನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈಗಾಗಲೇ 81 ಅತ್ಯಗತ್ಯ ಔಷಧಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ‘ಆರೋಗ್ಯ ಸುರಕ್ಷಾ ಸಮಿತಿ’ಯ ಮೂಲಕ ನೇರವಾಗಿ ಔಷಧಿಗಳನ್ನು ಖರೀದಿಸಲು ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka Weather forecast: ಮುಂದಿನ 5 ದಿನ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ – Kannada News

ಬೆಂಗಳೂರು, (ಜೂನ್ 10): ಕರ್ನಾಟಕದಲ್ಲಿ ಮುಂಗಾರು ಮಳೆಯ (Karnataka Monson Rain) ಅಬ್ಬರ ಜೋರಾಗಿದ್ದು, ಮುಂದಿನ ಐದು ದಿನಗಳ ಕಾಲ ವರಣು ಅಬ್ಬರ ಮುಂದುವರೆಯಲಿದೆ. ಇಂದಿನಿಂದ ಅಂದರೆ ಜೂನ್ 10ರಿಂದ ಜೂನ್ 14 ರವರೆಗೆ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಹಾಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಚುರುಕುಕೊಂಡ ಮುಂಗಾರು ಮಳೆ
  • ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮಳೆ
  • ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ಮಳೆ
  • ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ

5 ದಿನಗಳ ಕಾಲ ರಾಜ್ಯಾದ್ಯಂತ ಜೋರು ಮಳೆ

ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದು, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಶೇಷವಾಗಿ, ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಿರಲಿದ್ದು, ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿಯು ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ತಂಪಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ., 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು,  ಗರಿಷ್ಠ ತಾಪಮಾನವು ಸುಮಾರು 30 ಹಾಗೂ ಕನಿಷ್ಠ 21 ಡಿಗ್ರಿ ಆಸುಪಾಸಿನಲ್ಲಿ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link