ಬೆಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ರೈಲು ಆರಂಭಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ – Kannada News | Union Minister H.D. Kumaraswamy Writes to Railway Minister for Bengaluru–Madgaon Vande Bharat Express
ವಂದೇ ಭಾರತ್ ರೈಲು ಆರಂಭಕ್ಕೆ ಹೆಚ್ಡಿಕೆ ಮನವಿ ಬೆಂಗಳೂರು, ಡಿಸೆಂಬರ್ 23: ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವಂತೆ ಆಗ್ರಹಿಸಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಹಾಸನ, ಮಂಗಳೂರು, ಉಡುಪಿ, ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ರೈಲು ಸಂಚಾರ ಆರಂಭಿಸಿದಲ್ಲಿ ಪ್ರವಾಸೋದ್ಯಮ, ಆರ್ಥಿಕ, ಕೈಗಾರಿಕೋದ್ಯಮಕ್ಕೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಹೆಚ್ಡಿಕೆ ಬರೆದ ಪತ್ರದಲ್ಲೇನಿದೆ? ಬೆಂಗಳೂರಿನಿಂದ ಕರಾವಳಿ ಜಿಲ್ಲೆಗಳ ಮಾರ್ಗವಾಗಿ ಗೋವಾ ಸಂಪರ್ಕಿಸುವ ಉತ್ತಮ…