RCB ಆಟಗಾರನ ನಿಧಾನಗತಿಯ ಬ್ಯಾಟಿಂಗ್: ಆದರೂ ರೋಚಕ ಗೆಲುವು! – Kannada News
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್ ಟೂರ್ನಿಯ 52ನೇ ಪಂದ್ಯದಲ್ಲಿ ಎಸೆಕ್ಸ್ ತಂಡವು ರೋಚಕ ಜಯ ಸಾಧಿಸಿದೆ. ಚೆಲ್ಮ್ಸ್ಫೋರ್ಡ್ನ ಕೌಂಟ್ರಿ ಗ್ರೌಂಡ್ನಲ್ಲಿ ನಡೆದ ಈ ಪಂದ್ಯದಲ್ಲಿ ಎಸೆಕ್ಸ್ ಹಾಗು ಕೆಂಟ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಂಟ್ ತಂಡದ ನಾಯಕ ಸ್ಯಾಮ್ ಬಿಲ್ಲಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಸೆಕ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಪೌಲ್ ವಾಲ್ಟರ್ 17 ರನ್ಗಳಿಸಿ ಔಟಾದರೆ, ಮೈಕೆಲ್ ಪೆಪ್ಪೆರ್ 6 ರನ್ಗಳಿಗೆ ಇನಿಂಗ್ಸ್…