ನಮ್ಮ ನಿಲುವು ಸ್ಪಷ್ಟ, ಭಾರತದ ವಿರುದ್ಧ ಕಣಕ್ಕಿಳಿಯಲ್ಲ: ಪಾಕ್ ಪ್ರಧಾನಿ – Kannada News | Pakistan Will Not Play Against India: PAK PM Shehbaz Sharif
2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ್ ಬಹಿಷ್ಕರಿಸಲಿದೆ ಎಂದು ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಅಧಿಕೃತವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಫೆಬ್ರವರಿ 15 ರಂದು ಇಂಡೊ–ಪಾಕ್ ನಡುವಣ ಕ್ರಿಕೆಟ್ ಪಂದ್ಯ ನಡೆಯುವುದಿಲ್ಲ ಎಂಬುದು ಖಚಿತವಾಗಿದೆ. ಫೆಬ್ರವರಿ 4, 2026 ರಂದು ಫೆಡರಲ್ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಶೆಹಬಾಝ್ ಷರೀಫ್, ಈ ನಿರ್ಧಾರದ ಹಿಂದಿನ ಪ್ರಮುಖ ಕಾರಣಗಳನ್ನುಸಹ ಸ್ಪಷ್ಟಪಡಿಸಿದ್ದಾರೆ. ಆ ಕಾರಣಗಳೇನು ಎಂದು ನೋಡುವುದಾದರೆ… ಬಾಂಗ್ಲಾದೇಶ್ಗೆ ಬೆಂಬಲ: ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಮುಖ್ಯ…