Category Archives: Blog

Your blog category

Karnataka Weather Forecast: ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​; ಎಲ್ಲೆಲ್ಲಿ ವರುಣಾರ್ಭಟ? – Kannada News

ಬೆಂಗಳೂರು, ಜೂನ್​​ 09: ಕರ್ನಾಟಕದ ಹಲವು ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡು ಭಾಗದ ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಭಾರಿ ಗಾಳಿಯೊಂದಿಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮುಖ್ಯಾಂಶಗಳು

  • ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
  • ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಲ್ಲಿ ತೀವ್ರ ಮಳೆ
  • ಉತ್ತರ ಒಳನಾಡು ಭಾಗದ ಹಲವೆಡೆಯೂ ವರುಣಾರ್ಭಟ ಸಾಧ್ಯತೆ

ನಾಳೆ ಎರಡು ಜಿಲ್ಲೆಗಳಲ್ಲಿ ಆರೆಂಜ್​​ ಅಲರ್ಟ್​​

ಕರಾವಳಿ ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯ ನಿರೀಕ್ಷೆ ಹಿನ್ನೆಲೆ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 10 ಮತ್ತು 11ರಂದು ಹಾಗೆಯೇ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್​​ 10 ಮತ್ತು ಉತ್ತರ ಒಳನಾಡು ಭಾಗದಲ್ಲಿ ಜೂನ್​​ 11ರ ವರೆಗೆ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ:  ಬೈಲಹೊಂಗಲದಲ್ಲಿ ವರುಣಾರ್ಭಟ; ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?

ಬೀದರ್​​, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ನಾಳೆ ಮಳೆಯನ್ನು ಅಂದಾಜಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜೇನುಗೂಡಿಗೆ ಕಲ್ಲು ಎಸೆದ ಪರಿಣಾಮ ಹೆಜ್ಜೇನು ದಾಳಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊರಾರ್ಜಿ ಶಾಲೆಯ 21ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – Kannada News

ಕಾರವಾರ, ಜೂ,9: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕರಗಿನಕೊಪ್ಪ ಗ್ರಾಮದಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Desai Residential School) ಕಟ್ಟಡದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನುಗಳು ಒಮ್ಮೆಲೆ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದು, ಪರಿಣಾಮವಾಗಿ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ಎಲ್ಲಾ ವಿದ್ಯಾರ್ಥಿಗಳನ್ನು ತಕ್ಷಣವೇ ಮುಂಡಗೋಡ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಹಿತಿಯ ಪ್ರಕಾರ, ಇಂದು ಮಧ್ಯಾಹ್ನ ಸುಮಾರು 3:30 ರ ವೇಳೆಗೆ ಈ ಘಟನೆ ನಡೆದಿದೆ. ವಸತಿ ಶಾಲಾ ಕಟ್ಟಡದ ಎರಡನೇ ಮಹಡಿಯ ಮೇಲ್ಭಾಗದಲ್ಲಿ ದೊಡ್ಡದಾದ ಹೆಜ್ಜೇನು ಗೂಡು ಇತ್ತು. ಶಾಲೆಯ ಓರ್ವ ಆಟವಾಡುವ ಭರದಲ್ಲಿ ಆ ಜೇನುಗೂಡಿಗೆ ಭಾರವಾದ ಕಲ್ಲು ಎಸೆದಿದ್ದಾನೆ ಎನ್ನಲಾಗಿದೆ. ತಕ್ಷಣ ಜೇನುನೊಣಗಳ ಹಿಂಡು ಒಮ್ಮೆಲೆ ಶಾಲಾ ಆವರಣದಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಮುಗಿಬಿದ್ದಿವೆ. ಜೇನುನೊಣಗಳು ಹಿಂಡುಹಿಂಡಾಗಿ ಬಂದು ಕಚ್ಚಲು ಆರಂಭಿಸುತ್ತಿದ್ದಂತೆ ಗಾಬರಿಗೊಂಡ ವಿದ್ಯಾರ್ಥಿಗಳು ಕಿರುಚಾಡುತ್ತಾ ಓಡಿದ್ದಾರೆ. ಘಟನೆಯನ್ನು ಗಮನಿಸಿದ ಶಾಲೆಯ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣವೇ ಧಾವಿಸಿ ಬಂದು ಜೇನುನೊಣಗಳನ್ನು ಓಡಿಸಿ ಮಕ್ಕಳನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಸದ್ಯ ಮುಂಡಗೋಡ ತಾಲೂಕು ಆಸ್ಪತ್ರೆಯ ವೈದ್ಯರ ತಂಡ ಮಕ್ಕಳಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾತ್ರಿ ಸಮಯದಲ್ಲಿ ಏಕೆ ಉಗುರು ಕತ್ತರಿಸಬಾರದು? ಇದರ ಹಿಂದಿನ ವೈಜ್ಞಾನಿಕ ಕಾರಣವೇನು? – Kannada News

ನಮ್ಮ ಸಂಪ್ರದಾಯದ ಪ್ರಕಾರ, ಸಂಜೆ ವಿಶೇಷವಾಗಿ ಸೂರ್ಯಾಸ್ತದ ನಂತರ, ಲಕ್ಷ್ಮಿ ದೇವಿಯು ಮನೆಗೆ ಪ್ರವೇಶಿಸಿ ಸಂಪತ್ತು ಮತ್ತು ಸಮೃದ್ಧಿಯನ್ನು ಸ್ಥಾಪಿಸುವ ಸಮಯವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಕಸ ತೆಗೆಯುವುದು ಅಥವಾ ಹಣವನ್ನು ವಿನಿಮಯ ಮಾಡಿಕೊಳ್ಳುವಂತಹ ಕೆಲಸಗಳನ್ನು ಅಶುಭ ಹೇಳಲಾಗುತ್ತದೆ ಮತ್ತು ಇದು ದುರದೃಷ್ಟವನ್ನು ಆಕರ್ಷಿಸುತ್ತದೆ ಎಂಬ ನಂಬಿಕೆ ಹಿಂದಿನಿಂದಲೂ ಇದೆ. ಈ ಪ್ರತಿ ನಂಬಿಕೆಗಳ ಹಿಂದೆ ವೈಜ್ಞಾನಿಕ ಕಾರಣಗಳೂ ಇವೆ. ಇಂತಹ ನಂಬಿಕೆಗಳಲ್ಲಿ ಸೂರ್ಯಾಸ್ತದ ನಂತರ ಉಗುರು (nails) ಕತ್ತರಿಸಬಾರದು ಎಂಬುದು ಸಹ ಒಂದು. ರಾತ್ರಿ ಸಮಯದಲ್ಲಿ ಉಗುರು ಕತ್ತರಿಸಿದರೆ ಹಿರಿಯರು ಗದರುವುದನ್ನು ನೀವು ನೋಡಿರುತ್ತೀರಿ ಅಲ್ವಾ. ಅಷ್ಟಕ್ಕೂ ರಾತ್ರಿ ಏಕೆ ಉಗುರು ಉಗುರು ಕತ್ತರಿಸಬಾರದು, ಅದರ ಹಿಂದಿರುವ ನೈರ್ಮಲ್ಯ, ಆರೋಗ್ಯ ಮತ್ತು ವೈಜ್ಞಾನಿಕ ಕಾರಣವಾದರೂ ಏನು ಎಂಬುದನ್ನು  ತಪ್ಪದೇ ತಿಳಿಯಿರಿ.

ರಾತ್ರಿ ಸಮಯದಲ್ಲಿ ಉಗುರು ಏಕೆ ಕತ್ತರಿಸಬಾರದು?

ರಾತ್ರಿ ಉಗುರು ಕತ್ತರಿಸಬಾರದಂತೆ ಮನೆಯ ಹಿರಿಯರು ಆಗಾಗ್ಗೆ ಹೇಳುತ್ತಿರುತ್ತಾರೆ. ಇದರ ಹಿಂದಿನ ಮುಖ್ಯ ಕಾರಣವೆಂದರೆ ಪ್ರಾಚೀನ ಕಾಲದಲ್ಲಿ ವಿದ್ಯುತ್ ಇರಲಿಲ್ಲ. ರಾತ್ರಿಯಲ್ಲಿ ಬೆಳಕು ಸಹ ತುಂಬಾ ಕಡಿಮೆ ಇತ್ತು, ಸೀಮೆಎಣ್ಣೆ ದೀಪಗಳನ್ನೇ ಹೆಚ್ಚಾಗಿ ಬಳಸಲಾಗುತ್ತಿತ್ತು.  ಅಲ್ಲದೆ ಆ ಸಮಯದಲ್ಲಿ, ಇಂದು ಲಭ್ಯವಿರುವ ಆಧುನಿಕ ನೈಲ್‌ ಕಟರ್‌ಗಳೂ ಇರಲಿಲ್ಲ. ಅಗೆಲ್ಲಾ  ಸಾಮಾನ್ಯವಾಗಿ ಉಗುರುಗಳನ್ನು ಕತ್ತರಿಸಲು ಚಾಕುಗಳು ಅಥವಾ ಚೂಪಾದ ವಸ್ತುಗಳನ್ನು ಬಳಸುತ್ತಿದ್ದರು. ಹೀಗಿರುವಾಗ ರಾತ್ರಿ ಸಮಯದಲ್ಲಿ ಕಡಿಮೆ ಬೆಳಕಿನಲ್ಲಿ ಉಗುರು ಕತ್ತರಿಸಿದರೆ ಬೆರಳಿಗೆ ಗಾಯವಾಗುವ ಸಾಧ್ಯತೆ ಹೆಚ್ಚು. ರಾತ್ರಿಯಲ್ಲಿ ಗಾಯವಾದರೆ, ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯುವುದು ಕಷ್ಟಕರವಾಗಿತ್ತು.  ಇದಲ್ಲದೆ ಕತ್ತರಿಸಿದ ಉಗುರಿನ ತುಂಡುಗಳು ಕೆಳಗೆ ಬಿದ್ದರೆ, ಅವುಗಳನ್ನು ಸಂಗ್ರಹಿಸಿ ಕತ್ತಲೆಯಲ್ಲಿ ಸರಿಯಾಗಿ ವಿಲೇವಾರಿ ಮಾಡುವುದು ಕಷ್ಟಕರವಾಗಿತ್ತು. ಹೀಗೆ ಆರಂಭದಲ್ಲಿ ರಾತ್ರಿ ಉಗುರು ಕತ್ತರಿಸಬಾರದು ಎನ್ನುವುದಕ್ಕೆ ಮುಖ್ಯ ಕಾರಣ ಸುರಕ್ಷತೆ ಮತ್ತು ಸ್ವಚ್ಛತೆಯ ದೃಷ್ಟಿಕೋನವಾಗಿತ್ತು. ಕಾಲಾನಂತರದಲ್ಲಿ, ಜನರು ಇದನ್ನು ಸರಿಯಾಗಿ ಅನುಸರಿಸಲು ಆಧ್ಯಾತ್ಮಿಕ ವಿವರಣೆಗಳು ಮತ್ತು ಕಥೆಗಳನ್ನು ಸೇರಿಸಲಾಯಿತು.

ಆರೋಗ್ಯ ಕಾರಣಗಳು:

ದಿನವಿಡೀ ಕೆಲಸ ಮಾಡುವುದರಿಂದ ನಿಮ್ಮ ಉಗುರುಗಳ ಒಳಗೆ ಕೊಳಕು, ಸೂಕ್ಷ್ಮಜೀವಿಗಳು ಮತ್ತು ಬ್ಯಾಕ್ಟೀರಿಯಾಗಳು ಸಿಕ್ಕಿಹಾಕಿಕೊಳ್ಳುತ್ತವೆ. ಹೀಗಿರುವಾಗ ರಾತ್ರಿಯಲ್ಲಿ ನಿಮ್ಮ ಕೈಗಳನ್ನು ತೊಳೆಯದೆ  ಉಗುರುಗಳನ್ನು ಕತ್ತರಿಸಿದಾಗ, ಆ ತುಂಡುಗಳು  ಬೆಡ್ ಶೀಟ್‌ಗಳು, ಸೋಫಾ ಅಥವಾ ನೆಲದ ಮೇಲೆ ಬಿದ್ದು ಸೂಕ್ಷ್ಮಜೀವಿಗಳು ಹರಡುವ ಅಪಾಯವಿರುತ್ತದೆ.  ಅಲ್ಲದೆ ಕತ್ತರಿಸಿದ ಉಗುರುಗಳು ಆಹಾರ ಅಥವಾ ಇತರ ವಸ್ತುಗಳೊಂದಿಗೆ ಬೆರೆತು ಅದು ಕೂಡ ಸೋಂಕಿಗೆ ಕಾರಣವಾಗಬಹುದು. ಹಗಲು ಹೊತ್ತಿನಲ್ಲಿ ಉಗುರು ಕತ್ತರಿಸಿದರೆ, ಅವುಗಳನ್ನು ವಿಲೇವಾರಿ ಮಾಡಲು ಸುಲಭವಾಗುತ್ತದೆ. ಹಾಗಾಗಿ ರಾತ್ರಿ ಸಮಯದಲ್ಲಿ ಉಗುರು ಕತ್ತರಿಸಬಾರದು.   ಆಯುರ್ವೇದದ ಪ್ರಕಾರ, ಚಂದ್ರನ ಶಕ್ತಿಯು ರಾತ್ರಿಯಲ್ಲಿ ಅತ್ಯಂತ ಬಲವಾಗಿರುತ್ತದೆ ಮತ್ತು ಈ ಸಮಯದಲ್ಲಿ ಉಗುರುಗಳನ್ನು ಕತ್ತರಿಸುವುದರಿಂದ ದೇಹದ ಆಂತರಿಕ ಸಮತೋಲನಕ್ಕೆ ಅಡ್ಡಿಯಾಗುತ್ತದೆ ಮತ್ತು ಇದು  ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಭಯಗೊಂಡಾಗ ಕೈ ಕಾಲುಗಳು ನಡುಗುವುದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ?

ಉಗುರು ಕತ್ತರಿಸಲು ಸರಿಯಾದ ಸಮಯ ಯಾವುದು?

ನಮ್ಮ ಉಗುರುಗಳು ಕೆರಾಟಿನ್ ನಿಂದ ಮಾಡಲ್ಪಟ್ಟಿದೆ. ಆದ್ದರಿಂದ, ಸ್ನಾನದ ನಂತರ ನಿಮ್ಮ ಉಗುರುಗಳನ್ನು ಕತ್ತರಿಸುವುದು ಉತ್ತಮ, ಏಕೆಂದರೆ ಈ ಸಮಯದಲ್ಲಿ  ಉಗುರುಗಳು ನೀರಿನಲ್ಲಿ ನೆನೆದಿರುವ ಕಾರಣ ಅವುಗಳನ್ನು ಕತ್ತರಿಸಲು ಸುಲಭವಾಗುತ್ತದೆ. ಇದಲ್ಲದೆ ಬೆಳಗಿನ ಸಮಯದಲ್ಲಿ ಉಗುರುಗಳನ್ನು ಸೌಮ್ಯವಾದ ಎಣ್ಣೆ ಅಥವಾ ನೀರಿನಲ್ಲಿ ನೆನೆಸಿ, ಉಗುರು ಮೃದುವಾದ ನಂತರ ಉಗುರು ಕತ್ತರಿಸಿ. ಉಗುರಿ ಕತ್ತರಿಸಿದ ಬಳಿಕ ಕೈಗಳನ್ನು ತೊಳೆದುಕೊಳ್ಳಿ. ಕೈ ಒಣಗಿದ ಬಳಿಕ ಮಾಯಿಶ್ಚರೈಸರ್ ಅಥವಾ ಎಣ್ಣೆಯನ್ನು ಹಚ್ಚಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನದಿಂದ ಗುಂಡಿನ ದಾಳಿ; 30 ಜನ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ – Kannada News

ನವದೆಹಲಿ, ಜೂನ್ 9: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಕಳೆದ ಕೆಲವು ದಿನಗಳಿಂದ ಹೆಚ್ಚುತ್ತಿರುವ ಹಣದುಬ್ಬರ, ಗಗನಕ್ಕೇರಿರುವ ವಿದ್ಯುತ್ ಬಿಲ್‌ಗಳು, ಗೋಧಿ ಹಿಟ್ಟಿನ ಬೆಲೆ ಏರಿಕೆ ಹಾಗೂ ಸರ್ಕಾರದ ಅಸಮರ್ಪಕ ನೀತಿಗಳ ವಿರುದ್ಧ ಸಾರ್ವಜನಿಕರು ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದಾರೆ. ‘ಅವಮಿ ಆಕ್ಷನ್ ಕಮಿಟಿ’ ನೇತೃತ್ವದಲ್ಲಿ ಮುಜಾಫರಾಬಾದ್ ಸೇರಿದಂತೆ ಹಲವು ನಗರಗಳಲ್ಲಿ ಜನಾಂದೋಲನ ತೀವ್ರಗೊಂಡಿದೆ. ಈ ವೇಳೆ ಪ್ರತಿಭಟನಾಕಾರರು ಪಾಕಿಸ್ತಾನಿ ವಿರೋಧಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಇದಕ್ಕೆ ಪ್ರತಿಯಾಗಿ

ರಾವಲ್ಕೋಟ್‌ನಲ್ಲಿ ಜನರು ಬೆಳಿಗ್ಗೆಯಿಂದಲೇ ಎಲ್ಲಾ ಪ್ರಮುಖ ರಸ್ತೆಗಳನ್ನು ನಿರ್ಬಂಧಿಸುತ್ತಿದ್ದಾರೆ. ಪ್ರತಿಭಟನಾಕಾರರು ಭಿಂಬರ್‌ನಿಂದ ರಾವಲ್ಕೋಟ್ ಕಡೆಗೆ ಮುನ್ನಡೆಯದಂತೆ ತಡೆಯಲು ಪಾಕಿಸ್ತಾನಿ ಪೊಲೀಸರು, ಸೇನೆ ಮತ್ತು ರೇಂಜರ್‌ಗಳು ತಡೆದರು. ಪ್ರತಿಭಟನಾಕಾರರ ಮೇಲೆ ನೇರವಾಗಿ ಗುಂಡು ಹಾರಿಸುವುದರ ಜೊತೆಗೆ, ಅಶ್ರುವಾಯು ಬಳಸಲಾಯಿತು. ಅತ್ಯಂತ ಅಪಾಯಕಾರಿ ಪೆಲೆಟ್ ಗನ್‌ಗಳನ್ನು ಸಹ ಬಳಸಿದ್ದರಿಂದ 7 ಜನರು ಗಂಭೀರವಾಗಿ ಗಾಯಗೊಂಡರು. ಪಲಾಂದ್ರಿ ಮತ್ತು ಸುಧಾನೋತಿಯಂತಹ ಪ್ರದೇಶಗಳಲ್ಲಿ, ಜನರು ಕೈಯಲ್ಲಿ ಕೋಲುಗಳನ್ನು ಹಿಡಿದು ಪಾಕಿಸ್ತಾನಿ ಪಡೆಗಳನ್ನು ಎದುರಿಸಿದರು. ಪ್ರತಿಭಟನೆಗಳಿಂದಾಗಿ ಪಿಒಕೆಯಾದ್ಯಂತ ಮಾರುಕಟ್ಟೆಗಳು ಮತ್ತು ವ್ಯಾಪಾರ ಸಂಸ್ಥೆಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟವು.

ಇದನ್ನೂ ಓದಿ: ಪಹಲ್ಗಾಮ್ ದಾಳಿ ತನಿಖೆಯಲ್ಲಿ ಮಹತ್ವದ ಸುಳಿವು: ಉಗ್ರರು ಬಳಸಿದ್ದ ಫೋನ್​ಗೆ ಪಾಕಿಸ್ತಾನ ಬ್ಯಾಂಕ್​ ಲಿಂಕ್

ಈ ವೇಳೆ ಭದ್ರತಾ ಪಡೆಗಳು ನಡೆಸಿದ ಲಘು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮತ್ತು ಪ್ಲಾಸ್ಟಿಕ್ ಹಾಗೂ ಜೀವಂತ ಗುಂಡುಗಳ ದಾಳಿಯಿಂದಾಗಿ 200ಕ್ಕೂ ಹೆಚ್ಚು ಪ್ರತಿಭಟನಾಕಾರರು ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ಈ ಘಟನೆಯ ನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪ್ರಮುಖ ನಗರಗಳಲ್ಲಿ ಕರ್ಫ್ಯೂ ಪರಿಸ್ಥಿತಿ ಇದೆ.

ಹಿಂಸಾಚಾರದ ವೀಡಿಯೊಗಳು ಮತ್ತು ಮಾಹಿತಿಗಳು ಹರಡದಂತೆ ತಡೆಯಲು ಪಾಕಿಸ್ತಾನ ಸರ್ಕಾರವು ಇಡೀ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಮತ್ತು ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿದೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಪಾಕಿಸ್ತಾನ ಸರ್ಕಾರವು ಪ್ರತಿಭಟನೆಯನ್ನು ಹತ್ತಿಕ್ಕಲು ಹೆಚ್ಚುವರಿ ಸೇನಾ ಪಡೆಗಳನ್ನು ನಿಯೋಜಿಸಿದೆ.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರ ಮೇಲೆ ಪಾಕಿಸ್ತಾನಿ ಪಡೆಗಳು ನಡೆಸಿರುವ ಈ ಭೀಕರ ದಾಳಿಯು ಅಂತರರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಖಂಡನೆಗೆ ಒಳಗಾಗಿದ್ದು, ಭಾರಿ ಪ್ರಮಾಣದ ಮಾನವ ಹಕ್ಕುಗಳ ಉಲ್ಲಂಘನೆ ನಡೆದಿದೆ ಎಂದು ಸ್ಥಳೀಯ ನಾಯಕರು ಆರೋಪಿಸಿದ್ದಾರೆ.

ಪ್ರತಿಭಟನೆಗೆ ಕಾರಣವೇನು?:

ಪಿಒಕೆ ಜನರು ಮುಖ್ಯವಾಗಿ 38 ಬೇಡಿಕೆಗಳ ಈಡೇರಿಕೆಗಾಗಿ ಈ ದೀರ್ಘ ಹೋರಾಟವನ್ನು ನಡೆಸುತ್ತಿದ್ದಾರೆ. ಮುಜಫರಾಬಾದ್‌ನ ನೀಲಂ ಸೇತುವೆಯಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆದವು. ಪಾಕಿಸ್ತಾನದ ಭಾಗವಲ್ಲದ ಪಿಒಕೆ ಪ್ರದೇಶದಲ್ಲಿ ಮಂಗಳಾ ಅಣೆಕಟ್ಟಿನಂತಹ ಪ್ರತಿಷ್ಠಿತ ಜಲವಿದ್ಯುತ್ ಯೋಜನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಲಾಗಿದ್ದು, ಅಗ್ಗದ ವಿದ್ಯುತ್ ಮತ್ತು ಸಬ್ಸಿಡಿ ಬೆಲೆಯಲ್ಲಿ ಹಿಟ್ಟು, ಅಕ್ಕಿ ಮತ್ತು ಬೇಳೆಕಾಳುಗಳನ್ನು ಒದಗಿಸಬೇಕೆಂದು ಅವರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನ-ಚೀನಾಗೆ ವಿದೇಶಾಂಗ ಸಚಿವಾಲಯ ಚಾಟಿ

ಪಿಒಕೆ ಸಂಸತ್ತಿನಲ್ಲಿರುವ 12 ನಿರಾಶ್ರಿತರ ಸ್ಥಾನಗಳನ್ನು ತಕ್ಷಣ ತೆಗೆದುಹಾಕಬೇಕೆಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. ವಾಸ್ತವವಾಗಿ, ಈ 12 ಸ್ಥಾನಗಳನ್ನು ಭಾರತೀಯ ಕಾಶ್ಮೀರದಿಂದ ವಲಸೆ ಬಂದವರು ಮತ್ತು ಪ್ರಸ್ತುತ ಪಾಕಿಸ್ತಾನದ ವಿವಿಧ ನಗರಗಳಲ್ಲಿ ವಾಸಿಸುತ್ತಿರುವವರಿಗೆ ಮೀಸಲಿಡಲಾಗಿತ್ತು. ಆದರೆ, ಪಾಕಿಸ್ತಾನ ಸೇನೆ ಮತ್ತು ಐಎಸ್‌ಐ ಇಸ್ಲಾಮಾಬಾದ್ ಮತ್ತು ಕರಾಚಿಯಲ್ಲಿ ಅಡಗಿರುವ ‘ಹಿಜ್ಬುಲ್ ಮುಜಾಹಿದ್ದೀನ್’ ಭಯೋತ್ಪಾದಕರು ಮತ್ತು ಅವರ ಕುಟುಂಬ ಸದಸ್ಯರನ್ನು ಈ 12 ಸ್ಥಾನಗಳಿಗೆ ಆಯ್ಕೆ ಮಾಡುತ್ತಿದೆ.

ಇದರಿಂದಾಗಿ, ಪಿಒಕೆ ಸಂಸತ್ತಿನ ಒಟ್ಟು 45 ಸ್ಥಾನಗಳಲ್ಲಿ 12 ಸ್ಥಾನಗಳು ನೇರವಾಗಿ ಪಾಕಿಸ್ತಾನ ಸೇನೆಯ ಕೈಗೆ ಹೋಗುತ್ತಿವೆ. ಇವುಗಳ ಸಹಾಯದಿಂದ, ಪಾಕಿಸ್ತಾನ ಸೇನೆಯು ಪಿಒಕೆಯ ಸ್ಥಳೀಯ ಜನರ ಇಚ್ಛೆಗೆ ವಿರುದ್ಧವಾಗಿ ತನ್ನ ನೆಚ್ಚಿನ ವ್ಯಕ್ತಿಯನ್ನು ಅಲ್ಲಿ ಪ್ರಧಾನಿಯನ್ನಾಗಿ ಪ್ರತಿಷ್ಠಾಪಿಸುತ್ತಿದೆ ಎಂದು ಇಲ್ಲಿನ ಜನರು ಆರೋಪಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಪೆದ್ದಿ’ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು: ರಾಮ್ ಚರಣ್ ಸಿನಿಮಾ ವಿವಾದಕ್ಕೆ ಹೆದರಿದ್ರಾ ನಟಿ? – Kannada News

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಪೆದ್ದಿ’ (Peddi) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಚಿತ್ರದ ಅದ್ಭುತ ಯಶಸ್ಸನ್ನು ಸಂಭ್ರಮಿಸಲು ಸೋಮವಾರ (ಜೂನ್ 8) ಹೈದರಾಬಾದ್‌ನಲ್ಲಿ ಅದ್ಧೂರಿ ಸಕ್ಸಸ್ ಮೀಟ್ ಆಯೋಜಿಸಲಾಗಿತ್ತು. ಆದರೆ, ಈ ಸಂಭ್ರಮದ ಕಾರ್ಯಕ್ರಮದಲ್ಲಿ ಚಿತ್ರದ ನಾಯಕಿ ಜಾನ್ವಿ ಕಪೂರ್ (Janhvi Kapoor) ಅವರ ಗೈರುಹಾಜರಿ ಎದ್ದು ಕಾಣುತ್ತಿದ್ದು, ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಚಿತ್ರದಲ್ಲಿ ಜಾನ್ವಿ ಕಪೂರ್ ನಿರ್ವಹಿಸಿರುವ ಅಚ್ಚಿಯಮ್ಮ ಎಂಬ ಪಾತ್ರದ ಚಿತ್ರಣ ಮತ್ತು ಕೆಲವು ದೃಶ್ಯಗಳಲ್ಲಿನ ಕ್ಯಾಮೆರಾ ಕೋನಗಳ ಬಗ್ಗೆ ಪ್ರೇಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಚಿತ್ರತಂಡ ಜಾನ್ವಿ ಪಾತ್ರವನ್ನು ಕೇವಲ ಗ್ಲಾಮರ್‌ಗಾಗಿ ಬಳಸಿಕೊಂಡಿದೆ ಮತ್ತು ವಸ್ತುವಿನಂತೆ ಬಿಂಬಿಸಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ವಿವಾದ ಮತ್ತು ಟ್ರೋಲ್‌ಗಳ ಹಿನ್ನೆಲೆಯಲ್ಲೇ ಜಾನ್ವಿ ಸಕ್ಸಸ್ ಮೀಟ್‌ನಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಕಾರ್ಯಕ್ರಮದಲ್ಲಿ ರಾಮ್ ಚರಣ್, ನಿರ್ದೇಶಕ ಬುಚ್ಚಿ ಬಾಬು ಸನಾ, ಹಿರಿಯ ನಟ ಜಗಪತಿ ಬಾಬು ಸೇರಿದಂತೆ ಇಡೀ ಚಿತ್ರತಂಡ ಭಾಗವಹಿಸಿತ್ತು. ವೇದಿಕೆ ಮೇಲೆ ಮಾತನಾಡಿದ ಜಗಪತಿ ಬಾಬು, ಸಿನಿಮಾಗೆ ನೆಗೆಟಿವ್ ವಿಮರ್ಶೆ ಕೊಟ್ಟವರಿಗೂ ಧನ್ಯವಾದ ತಿಳಿಸುವ ಮೂಲಕ ಟ್ರೋಲರ್‌ಗಳಿಗೆ ಸೂಕ್ಷ್ಮವಾಗಿ ಟಾಂಗ್ ನೀಡಿದರು. ‘ಪೆದ್ದಿ ಚಿತ್ರವು ಕತ್ತಿಯ ಅಂಚಿನ ಮೇಲೆ ಹೋರಾಡಿ ಎರಡು ಬಾರಿ ಗೆದ್ದಿದೆ’ ಎಂದು ಅವರು ಚಿತ್ರದ ಯಶಸ್ಸನ್ನು ಸಮರ್ಥಿಸಿಕೊಂಡರು.

ಜಾನ್ವಿ ಪಾತ್ರದ ವಿವಾದ ತಾರಕಕ್ಕೇರುತ್ತಿದ್ದಂತೆಯೇ ಎಚ್ಚೆತ್ತ ನಿರ್ದೇಶಕ ಬುಚ್ಚಿ ಬಾಬು ಸನಾ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ‘ಮಹಿಳೆಯರನ್ನು ಗೌರವದಿಂದ ಬಿಂಬಿಸುವುದು ನಮ್ಮ ಆಶಯ. ಯಾರ ಭಾವನೆಗಳಿಗಾದರೂ ಧಕ್ಕೆಯಾಗಿದ್ದರೆ ಕ್ಷಮಿಸಿ. ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಮನದಲ್ಲಿಟ್ಟುಕೊಂಡು ವಿವಾದಾತ್ಮಕ ದೃಶ್ಯಗಳನ್ನು ಕಟ್ ಮಾಡಲು ನಿರ್ಧರಿಸಿದ್ದೇವೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ‘ಪೆದ್ದಿ’ ಚಿತ್ರದ ಆಕ್ಷೇಪಾರ್ಹ ಶಾಟ್‌ಗಳಿಗೆ ಜಾನ್ವಿ ಕಪೂರ್ ವಿರೋಧ? ನಟಿಯ ಮೆಸೇಜ್ ಲೀಕ್

ಸದ್ಯ ವಿಶ್ವಾದ್ಯಂತ ಸುಮಾರು 250 ಕೋಟಿ ರೂಪಾಯಿ ಗಳಿಸುವತ್ತ ಮುನ್ನುಗ್ಗುತ್ತಿರುವ ‘ಪೆದ್ದಿ’ ಚಿತ್ರದಲ್ಲಿ ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರ ಯಶಸ್ವಿಯಾಗುತ್ತಿದ್ದರೂ ಜಾನ್ವಿ ಕಪೂರ್ ಈಗ ಸೋಷಿಯಲ್ ಮೀಡಿಯಾದಲ್ಲಿ ಕೂಡ ಸೈಲೆಂಟ್ ಆಗಿರುವುದು ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೇಂದ್ರ, ರಾಜ್ಯ ಸರ್ಕಾರಗಳ ಉದ್ಯೋಗ ಭರವಸೆ: 40ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದ ತಂದೆ, ಮಗಳು ಅಂದರ್​ – Kannada News

ಬೆಂಗಳೂರು, ಜೂನ್​​ 09: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದ್ಯೋಗಗಳನ್ನು ಕೊಡಿಸುವುದಾಗಿ ನಂಬಿಸಿ 40ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಒಟ್ಟು 5.30 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ ಆರೋಪದಡಿ ಕೇಂದ್ರ ಅಪರಾಧ ವಿಭಾಗದ ಪೊಲೀಸರು (ಸಿಸಿಬಿ) ತಂದೆ-ಮಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ (Bengaluru) ನಿವಾಸಿಗಳಾದ ಎಂ.ಎ. ಮನ್ಸೂರ್ ಅಹ್ಮದ್ ಹಾಗೂ ಅವರ ಪುತ್ರಿ ಶಂಶಾದ್ ಬೇಗಂ ಎಂ.ಎಂ. ಎಂದು ಗುರುತಿಸಲಾಗಿದೆ. ತಮಗೆ ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ರಾಜಕೀಯ ನಾಯಕರೊಂದಿಗೆ ನಿಕಟ ಸಂಪರ್ಕವಿದ್ದು, ಅವರ ಮೂಲಕ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಲವರನ್ನು ನಂಬಿಸಿ ಇವರು ಹಣ ಪಡೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿವಿಧ ಇಲಾಖೆಗಳಲ್ಲಿ ಉದ್ಯೋಗದ ಹೆಸರಲ್ಲಿ ವಂಚನೆ

ರೈಲ್ವೆ, ಆದಾಯ ತೆರಿಗೆ, ನೀರಾವರಿ, ಆರೋಗ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದ ಆರೋಪಿಗಳು, ನಕಲಿ ನೇಮಕಾತಿ ಆದೇಶಗಳನ್ನು ನೀಡಿ, ಬೆಂಗಳೂರಿನ ಜೊತೆಗೆ ಮುಂಬೈ ಮತ್ತು ಕೊಲ್ಕತ್ತಾದಲ್ಲಿಯೂ ನಕಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿ ತಮ್ಮ ವಂಚನೆ ಜಾಲವನ್ನು ನೈಜವೆಂಬಂತೆ ಬಿಂಬಿಸಿದ್ದರು. 2025ರ ನವೆಂಬರ್ 17ರಂದು ವಿಜಯಪುರ ಜಿಲ್ಲೆಯ ನಿವಾಸಿಯೊಬ್ಬರು ಈ ಬಗ್ಗೆ ನೀಡಿದ್ದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಸಿಸಿಬಿ, ಜೂನ್ 4ರಂದು ಆರೋಪಿಗಳನ್ನು ಬಂಧಿಸಿದೆ.

ಇದನ್ನೂ ಓದಿ: ಆವಲಹಳ್ಳಿ ಬಳಿ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆ; 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

ಪ್ರತಿಯೊಬ್ಬರಿಂದ 5 – 10 ಲಕ್ಷದವರೆಗೆ ಹಣ ಸಂಗ್ರಹ

ದೂರುದಾರರಿಗೆ ವಿಜಯಪುರ ಜಿಲ್ಲೆಯ ರೈಲ್ವೆ ನೌಕರ ಮಹೇಶ್ ಎಂಬಾತನ ಮೂಲಕ ಆರೋಪಿಗಳ ಪರಿಚಯವಾಗಿತ್ತು. ಅವರ ಮೂಲಕವೇ ಹಲವರು ಆರೋಪಿಗಳ ಸಂಪರ್ಕಕ್ಕೆ ಬಂದು ಸರ್ಕಾರಿ ಉದ್ಯೋಗದ ಆಸೆಯಿಂದ ಹಣ ಪಾವತಿಸಿದ್ದರು . ಈ ವಂಚನೆ ಪ್ರಕರಣದಲ್ಲಿ ಸುಮಾರು 40ರಿಂದ 45 ಮಂದಿ ಮೋಸ ಹೋಗಿರುವ ಸಾಧ್ಯತೆಯಿದ್ದು, ಪ್ರತಿ ಅಭ್ಯರ್ಥಿಯಿಂದ 5 ಲಕ್ಷದಿಂದ 10 ಲಕ್ಷದವರೆಗೆ ಹಣ ಸಂಗ್ರಹಿಸಲಾಗಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. 2023ರಿಂದ 2025ರ ಅವಧಿಯಲ್ಲಿ ಹೆಚ್ಚಿನ ಹಣ ಆನ್‌ಲೈನ್ ವಹಿವಾಟಿನ ಮೂಲಕ ಪಡೆದಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

ಸಂಶಯ ಮೂಡದಂತೆ ಹಾಗೂ ನಂಬಿಕೆ ಉಳಿಸಿಕೊಳ್ಳುವ ಉದ್ದೇಶದಿಂದ ಕೆಲ ಅಭ್ಯರ್ಥಿಗಳಿಗೆ ನಾಲ್ಕು ತಿಂಗಳವರೆಗೆ ಸಂಬಳವನ್ನೂ ನೀಡಲಾಗಿತ್ತು. ಈ ತಂತ್ರದ ಮೂಲಕ ಮತ್ತಷ್ಟು ಜನರನ್ನು ಸೆಳೆದು ದೀರ್ಘಕಾಲ ವಂಚನೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲ ಅಭ್ಯರ್ಥಿಗಳಿಗೆ ನೀಡಲಾದ ನೇಮಕಾತಿ ಆದೇಶಗಳು ನಕಲಿ ಎಂಬುದು ಬೆಳಕಿಗೆ ಬಂದ ನಂತರ ಅನುಮಾನ ಮೂಡಿತ್ತು. ಬಳಿಕ ಸಂತ್ರಸ್ತರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ತನಿಖೆಯಲ್ಲಿ ಸರ್ಕಾರಿ ಇಲಾಖೆಗಳ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶಗಳನ್ನು ನೀಡಿರುವುದು ದೃಢಪಟ್ಟಿದೆ. ಆರೋಪಿಗಳು ಒಟ್ಟು 5.30 ಕೋಟಿಗೂ ಅಧಿಕ ಹಣ ಸಂಗ್ರಹಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ, ಆರೋಪಿಗಳ ಪರಿಚಯ ಮಾಡಿಕೊಟ್ಟ ಮಹೇಶ್ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲೂ ಜೋರಾದ ಶಾಸಕರ ಲಾಬಿ, ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ – Kannada News

ಬೆಂಗಳೂರು, (ಜೂನ್ 09): ಡಿಕೆ ಶಿವಕುಮಾರ್ (DK Shivakumar) ಮೊದಲ ಹಂತದ ಸಂಪುಟದ ಸಚಿವರ ಖಾತೆ ಕ್ಯಾತೆ ಇನ್ನೂ ಮುಗಿದಿಲ್ಲ. ಖಾತೆ ಸಂಬಂಧ ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ ಹಾಗೂ ಕೃಷ್ಣಭೈರೇಗೌಡ ಅಸಮಾಧಾನಗೊಂಡಿದ್ದಾರೆ. ಇದರ ನಡುವೆ ಇದೀಗ ಎರಡನೇ ಹಂತದ ಸಚಿವ ಸಂಪುಟ ಪುನಾರಚನೆ ಕಸರತ್ತು ನಡೆದಿದ್ದು, ನವದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ಜೋರಾಗಿದೆ. ಶ್ರೀನಿವಾಸ್ ಮಾನೆ, ಅಜಯ್ ಸಿಂಗ್, ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಶಾಸಕರು ದಿಲ್ಲಿಗೆ ಹಾರಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ.

ಇನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ ನಾಳೆ (ಜೂನ್ 10) ದೆಹಲಿಗೆ ತೆರಳಲಿದ್ದು, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ. ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಕೃತಜ್ಞತೆ ತಿಳಿಸಲಿದ್ದಾರೆ. ಬಳಿಕ ಹೈಕಮಾಂಡ್ ನಾಯಕರ ಜೊತೆ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ನೋಡಿ: ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ, ಸಚಿವ ಸ್ಥಾನದ ರೇಸ್​ನಲ್ಲೂ ಇಲ್ಲ: ರಾಜಣ್ಣ ಖಡಕ್ ಮಾತು

Source link

ಕಾಡ ನಟರಾಜ್ ಅಭಿನಯದ ‘ಕರಿಕಾಡ’ ಸಿನಿಮಾ ‘ಅಮೆಜಾನ್ ಪ್ರೈಮ್’ ಒಟಿಟಿಯಲ್ಲಿ ಪ್ರಸಾರ – Kannada News

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More

Source link

ಪುರುಷರಿಗೆ ದೊಡ್ಡ ಹೊಟ್ಟೆ ಬರುವುದಕ್ಕೆ ಕೇವಲ ಆಹಾರ ಮಾತ್ರ ಕಾರಣವಲ್ಲ! ಹಾಗಾದ್ರೆ ಯಾಕೆ ಈ ರೀತಿ ಆಗುತ್ತೆ? – Kannada News

ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ಹೊಟ್ಟೆ ಭಾಗದಲ್ಲಿ ಕೊಬ್ಬು (Belly Fat) ಹೆಚ್ಚಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಹೆಚ್ಚಿನವರು ಇದನ್ನು ಹೆಚ್ಚು ಆಹಾರ ಸೇವನೆ, ವ್ಯಾಯಾಮದ ಕೊರತೆ ಅಥವಾ ಅಸ್ವಸ್ಥ ಜೀವನಶೈಲಿಯ ಪರಿಣಾಮ ಎಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಕೆಲ ಸಂದರ್ಭಗಳಲ್ಲಿ ಹೊಟ್ಟೆ ಹೊರಬರುವುದಕ್ಕೆ ದೇಹದ ಒಳಗಿನ ಹಾರ್ಮೋನಲ್ ಬದಲಾವಣೆಗಳೂ ಕಾರಣವಾಗಬಹುದು. ವಯಸ್ಸು ಹೆಚ್ಚಾದಂತೆ ಪುರುಷರ ದೇಹದಲ್ಲಿ ಹಲವು ಹಾರ್ಮೋನಲ್ ಬದಲಾವಣೆಗಳು ಸಂಭವಿಸುತ್ತವೆ. ಅಸಮತೋಲನವಾದ ಆಹಾರ ಪದ್ಧತಿ, ಒತ್ತಡ, ನಿದ್ರಾಹೀನತೆ, ಶಾರೀರಿಕ ಚಟುವಟಿಕೆಯ ಕೊರತೆ ಮತ್ತು ಅಸ್ವಸ್ಥ ಜೀವನಶೈಲಿ ಹಾರ್ಮೋನ್ ಮಟ್ಟವನ್ನು ಪ್ರಭಾವಿಸಬಹುದು. ಹಾರ್ಮೋನುಗಳು ದೇಹದ ಮೆಟಾಬಾಲಿಸಂ, ಕೊಬ್ಬು ಸಂಗ್ರಹಣೆ ಮತ್ತು ಶಕ್ತಿಯ ಸಮತೋಲನವನ್ನು ನಿಯಂತ್ರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಈ ಸಮತೋಲನದಲ್ಲಿ ವ್ಯತ್ಯಾಸ ಉಂಟಾದರೆ ಹೊಟ್ಟೆ ಭಾಗದಲ್ಲಿ ಕೊಬ್ಬು ಹೆಚ್ಚಾಗುವ ಸಾಧ್ಯತೆ ಹೆಚ್ಚುತ್ತದೆ. ಹಾಗಾದರೆ ಯಾವ ಹಾರ್ಮೋನ್ ಸಮಸ್ಯೆಯಿಂದ ಹೊಟ್ಟೆ ಬೊಜ್ಜು ಕಂಡುಬರುತ್ತದೆ, ಯಾವ ರೀತಿಯ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು ಮತ್ತು ಹಾರ್ಮೋನ್ ಸಮತೋಲನ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾವ ಹಾರ್ಮೋನ್ ಸಮಸ್ಯೆಯಿಂದ ಹೊಟ್ಟೆ ಹೆಚ್ಚಾಗಬಹುದು?

ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ (NLM) ಪ್ರಕಟಿಸಿದ ಅಧ್ಯಯನದ ಪ್ರಕಾರ, ಪುರುಷರಲ್ಲಿ ಟೆಸ್ಟೋಸ್ಟೆರೋನ್ ಹಾರ್ಮೋನ್ ಮಟ್ಟ ಕಡಿಮೆಯಾಗುವುದರಿಂದ ಹೊಟ್ಟೆ ಭಾಗದಲ್ಲಿ ಕೊಬ್ಬು ಹೆಚ್ಚಾಗುವ ಅಪಾಯ ಇದೆ. ಟೆಸ್ಟೋಸ್ಟೆರೋನ್ ದೇಹದ ಸ್ನಾಯುಗಳ ಬೆಳವಣಿಗೆ ಮತ್ತು ಕೊಬ್ಬಿನ ವಿತರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಮಟ್ಟ ಕಡಿಮೆಯಾದರೆ ದೇಹದಲ್ಲಿ ಕೊಬ್ಬು ಹೆಚ್ಚಾಗಿ ಸಂಗ್ರಹವಾಗಬಹುದು. ಇದರ ಜೊತೆಗೆ ಇನ್ಸುಲಿನ್, ಕಾರ್ಟಿಸೋಲ್ ಮತ್ತು ಥೈರಾಯ್ಡ್ ಹಾರ್ಮೋನುಗಳ ಅಸಮತೋಲನವೂ ತೂಕ ಹೆಚ್ಚಳಕ್ಕೆ ಕಾರಣವಾಗಬಹುದು. ಹಾರ್ಮೋನುಗಳ ವ್ಯತ್ಯಾಸದಿಂದ ದೇಹದ ಶಕ್ತಿ ಬಳಕೆ ಮತ್ತು ಕೊಬ್ಬಿನ ಸಂಗ್ರಹಣೆಯ ಪ್ರಕ್ರಿಯೆ ಬದಲಾಗಬಹುದು.

ಇದನ್ನೂ ಓದಿ: ಮದುವೆಯ ನಂತರ ಪುರುಷರ ತೂಕ ಹೆಚ್ಚಾಗಿ ಬೊಜ್ಜಿನ ಸಮಸ್ಯೆ ಕಂಡು ಬರಲು ಕಾರಣವೇನು?

ಈ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬೇಡಿ;

ಹೊಟ್ಟೆ ಹೆಚ್ಚಾಗುವುದರ ಜೊತೆಗೆ ದಣಿವು, ಶಕ್ತಿಯ ಕೊರತೆ, ಸ್ನಾಯು ದುರ್ಬಲತೆ, ನಿದ್ರಾಹೀನತೆ, ಮನಸ್ಥಿತಿ ಬದಲಾವಣೆ ಅಥವಾ ಲೈಂಗಿಕ ಆಸಕ್ತಿ ಕಡಿಮೆಯಾಗುವುದು ಕಂಡುಬಂದರೆ ಅದು ಹಾರ್ಮೋನ್ ಸಮಸ್ಯೆಯ ಸೂಚನೆಯಾಗಿರಬಹುದು. ಈ ರೀತಿಯ ಲಕ್ಷಣಗಳು ದೀರ್ಘಕಾಲ ಮುಂದುವರಿದರೆ ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ಹಾರ್ಮೋನ್ ಸಮತೋಲನ ಕಾಪಾಡಲು ಏನು ಮಾಡಬೇಕು?

ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ ಮತ್ತು ಸರಿಯಾಗಿ ನಿದ್ರೆ ಮಾಡುವುದರಿಂದ ಹಾರ್ಮೋನ್ ಸಮತೋಲನ ಕಾಪಾಡಲು ಸಹಕಾರಿ. ಒತ್ತಡವನ್ನು ನಿಯಂತ್ರಿಸುವುದೂ ಬಹಳ ಮುಖ್ಯ. ಜೊತೆಗೆ ಆರೋಗ್ಯ ತಪಾಸಣೆಗಳನ್ನು ನಿಯಮಿತವಾಗಿ ಮಾಡಿಸಿಕೊಳ್ಳಬೇಕು. ತೂಕ ವೇಗವಾಗಿ ಹೆಚ್ಚಾಗುತ್ತಿದ್ದರೆ ಅಥವಾ ಸಾಮಾನ್ಯವಲ್ಲದ ಲಕ್ಷಣಗಳು ಕಂಡುಬಂದರೆ ವೈದ್ಯರ ಸಲಹೆ ಪಡೆಯುವುದು ಅಗತ್ಯ. ಆರೋಗ್ಯಕರ ಜೀವನಶೈಲಿ ಅನುಸರಿಸುವುದರಿಂದ ತೂಕ ನಿಯಂತ್ರಣದ ಜೊತೆಗೆ ಹಾರ್ಮೋನ್ ಸಮತೋಲನವನ್ನೂ ಕಾಪಾಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊದಲ ಬಾರಿ ಜಡ್ಜ್ ಪಾತ್ರದಲ್ಲಿ ನಟಿ ತಾರಾ, ಪಾತ್ರದ ಬಗ್ಗ ನಟಿ ಮಾತು

‘ಉತ್ತರ’ (Uthara) ಮತ್ತು ‘ಅಭ್ಯಂಜನ’ ಹೆಸರಿನ ಎರಡು ಕನ್ನಡ ಸಿನಿಮಾಗಳ ಟ್ರೈಲರ್ ಇತ್ತೀಚೆಗಷ್ಟೆ ಒಟ್ಟಿಗೆ ಬಿಡುಗಡೆ ಆಗಿದೆ. ಎರಡೂ ಸಿನಿಮಾಗಳಿಗೂ ಒಬ್ಬರೇ ನಿರ್ದೇಶಕ. ಕಾರ್ಯಕ್ರಮದಲ್ಲಿ ನಟಿ ತಾರಾ ಸೇರಿದಂತೆ ಎರಡೂ ಸಿನಿಮಾಗಳ ಕಲಾವಿದರು ಮತ್ತು ಕೆಲ ತಂತ್ರಜ್ಞರು ಸಹ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ತಾರಾ, ಸಿನಿಮಾದ ನಿರ್ದೇಶಕ ದಿನೇಶ್ ಬಾಬು ಮತ್ತು ನಿರ್ಮಾಪಕ ನಾಗೇಶ್ವರ ಅವರನ್ನು ಕೊಂಡಾಡಿದರು. ಸಿನಿಮಾನಲ್ಲಿ ತಾವು ಜಡ್ಜ್ ಪಾತ್ರದಲ್ಲಿ ನಟಿಸಿರುವುದಾಗಿ ಹೇಳಿದ ನಟಿ ತಾರಾ. ಇದೊಂದು ಬಹಳ ಕ್ಲಿಷ್ಟವಾದ ವಿಷಯ ಹೊಂದಿರುವ ಸಿನಿಮಾ. ಇದನ್ನು ಬಹಳ ಪರಿಣಾಮಕಾರಿಯಾಗಿ ತೆರೆಗೆ ತರಲಾಗಿದೆ ಎಂದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link