Headlines

ನಿರ್ಣಾಯಕ ಆಡಳಿತ, ದೂರದೃಷ್ಟಿ ಕ್ರಮಗಳು, ಕಾನೂನು ಸರಳತೆ, ಉದ್ಯಮಕ್ಕೆ ಪುಷ್ಟಿ; ಮೋದಿ ಸರ್ಕಾರದ 12 ವರ್ಷಗಳ ಸಾಧನೆಯ ಝಲಕ್ – Kannada News

ನವದೆಹಲಿ, ಜೂನ್ 9: ಪ್ರಧಾನಿ ಮೋದಿ (Narendra Modi) ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಆಡಳಿತಕ್ಕೆ ಬಂದು 12 ವರ್ಷಗಳು ಗತಿಸಿವೆ. ಈ ಡಜನ್ ವರ್ಷಗಳ ಆಡಳಿತದ ದಾಖಲೆಯು ಭಾರತದ ಹಾದಿಯನ್ನೇ ಬದಲಾಯಿಸಿದೆ ಎಂದು ವಿವಿಧ ಕ್ಷೇತ್ರಗಳ ಪರಿಣಿತರು ಹೇಳುತ್ತಾರೆ. ಸಾಕಷ್ಟು ಜಾಗತಿಕ ಪ್ರತಿಕೂಲಕಾರಿ ವಾತಾವರಣಗಳ ನಡುವೆಯೂ ದೇಶದ ಬೆಳವಣಿಗೆ ಸ್ಥಿರವಾಗಿ ಸಾಗುವಂತಾಗಲು ಸರ್ಕಾರ ಕಾಲಕಾಲಕ್ಕೆ ತೆಗೆದುಕೊಂಡ ಸೂಕ್ತ ನಿರ್ಧಾರಗಳು ನಿರ್ಣಾಯಕ ಎನಿಸಿವೆ. 2014ಕ್ಕೆ ಮೊದಲು ನೀತಿ ಪಾರ್ಶ್ವವಾಯುವಿನಿಂದ (Policy Paralysis) ಸರ್ಕಾರ ದಿಕ್ಕೆಟ್ಟಿತ್ತು. ಆ ಪರಿಸ್ಥಿಯಿಂದ ನಿರ್ಣಾಯಕ…

Read More

ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ: ದಾಖಲೆ ನೋಡ್ತಿದ್ದಂತೆ ಚೇರ್ ಬಿಟ್ಟು ಎದ್ದ ತಹಶೀಲ್ದಾರ್ ರೂಪಾ! – Kannada News

ಮಾಲೂರು, ಜೂ.9: ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ಬಳಿ ಇರುವ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಸುಮಾರು 16 ಎಕರೆ ಸರ್ಕಾರಿ ಭೂಮಿಯನ್ನು ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದಾರೆ ಎಂದು ಆರೋಪಿಸಿ ಮಾಲೂರು ಮಾಜಿ ಶಾಸಕ ಕೆ.ಎಸ್. ಮಂಜುನಾಥ್ ಗೌಡ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿಗೆ ಧಿಡೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಜಿ ಶಾಸಕರು ತಹಶೀಲ್ದಾರ್ ರೂಪಾ ಅವರನ್ನು ದಾಖಲೆ ಸಮೇತ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಪ್ರತಿಭಟನೆಯ ವೇಳೆ ಕಬಳಿಕೆಯಾಗಿರುವ ಭೂಮಿಯ…

Read More

ಬೆಳಗಿವಿ ವಂಚನೆ ಪ್ರಕರಣ: ಸನ್ನಿ ಲಿಯೋನಿಗೆ ನೊಟೀಸ್ ನೀಡಿದ ಕರ್ನಾಟಕ ಸಿಐಡಿ ಪೊಲೀಸರು – Kannada News

ಕರ್ನಾಟಕ ಸಿಐಡಿ ಪೊಲೀಸರು ನಟಿ ಸನ್ನಿ ಲಿಯೋನಿಗೆ (Sunny Leone) ನೊಟೀಸ್ ನೀಡಿದ್ದಾರೆ. ಹೆಚ್ಚಿನ ಬಡ್ಡಿ ಕೊಡುವುದಾಗಿ ಆಮಿಷವೊಡ್ಡಿ ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಬೆಳಗಾವಿಯ ‘ಶಿವಂ ಅಸೋಸಿಯೇಟ್ಸ್’ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರಿಗೆ ಕರ್ನಾಟಕ ಅಪರಾಧ ತನಿಖಾ ಇಲಾಖೆ (CID) ನೋಟಿಸ್ ಜಾರಿ ಮಾಡಿದೆ. ಕಂಪನಿಯ ಮಾಲೀಕ ಶಿವಾನಂದ ನೀಲಣ್ಣವರ, ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ಸಂಗ್ರಹಿಸಿದ ಹಣದ ಒಂದು ದೊಡ್ಡ ಭಾಗವನ್ನು ಸನ್ನಿ ಲಿಯೋನ್ ಸೇರಿದಂತೆ ಹಲವು ಚಿತ್ರರಂಗದ ಪ್ರಮುಖ…

Read More

ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ – Kannada News

ನವದೆಹಲಿ, ಜೂನ್ 9: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ತೀವ್ರ ಆಂತರಿಕ ಬಿಕ್ಕಟ್ಟು ಮತ್ತು ಸಂಸದರ ಬಂಡಾಯದ ವಾತಾವರಣ ನಿರ್ಮಾಣವಾಗಿದೆ. ಇದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ದೊಡ್ಡ ರಾಜಕೀಯ ಹೊಡೆತವಾಗಿದೆ. ಇದರ ಬೆನ್ನಲ್ಲೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನವದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದ ವಿರೋಧ ಪಕ್ಷಗಳ ‘ಇಂಡಿಯ’ (INDIA) ಒಕ್ಕೂಟದ ಪ್ರಮುಖ…

Read More

ಒಂದೇ ಕುಟುಂಬದ ಮೂವರು ನಿಗೂಢ ಸಾವು: ಡೆತ್​​ ನೋಟ್​​ನಿಂದ ಸಾವಿನ ರಹಸ್ಯ ಬಯಲಿಗೆ – Kannada News

ಮಂಡ್ಯ, (ಜೂನ್ 09):ಒಂದೇ ಕುಟುಂಬದ ಮೂವರು ಅನುಮಾನಾಸ್ಪಾದವಾಗಿ ಮೃತಪಟ್ಟಿರುವ ಘಟನೆ ಮಂಡ್ಯ (Mandya) ನಗರದ  ನೆಹರು ನಗರದಲ್ಲಿ ನಡೆದಿದೆ. ಪತ್ನಿ ಜ್ಯೋತಿ, ಪತಿ ಪ್ರಭಾಕರ್ ಹಾಗೂ ಇವರ ಪುತ್ರ ಸಂತೋಷ್ ಮೃತರು. ಕಳೆದ ರಾತ್ರಿ ಮನೆಯಲ್ಲಿ ತಾಯಿ ಜ್ಯೋತಿ, ಮಗ ಸಂತೋಷ್​ ಸಾವನ್ನಪ್ಪಿದ್ದರೆ, ಇಂದು (ಜೂನ್ 09) ತಮ್ಮ ಬಟ್ಟೆ ಅಂಗಡಿಯಲ್ಲಿ ಪ್ರಭಾಕರ್ ನೇಣಿಗೆ ಶರಣಾಗಿದ್ದಾರೆ. ಮೊದಲು ಸಾವಿನ ರಹಸ್ಯ ನಿಗೂಢವಾಗಿತ್ತು. ಆದ್ರೆ, ತನಿಖೆ ವೇಳೆ ಪತ್ತೆಯಾದ ಡೆತ್‌ನೋಟ್ (death note) ಹಲವು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ….

Read More

RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ: ಏಕಾಏಕಿ ಖಡಕ್​​ ಎಚ್ಚರಿಕೆ ಕೊಟ್ಟಿದ್ದೇಕೆ ಗೃಹ ಸಚಿವ? – Kannada News

ಪ್ರಿಯಾಂಕ್​​ ಖರ್ಗೆImage Credit source: Priyank Khrage X Account and PTI ಬೆಂಗಳೂರು, ಜೂನ್​​ 09: ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಐಟಿಬಿಟಿ ಸಚಿವರಾಗಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಬಹಿರಂಗ ಸಮರ ಸಾರಿದ್ದ ಪ್ರಿಯಾಂಕ್​​ ಖರ್ಗೆ ಈಗಿನ ಸಿಎಂ ಡಿ.ಕೆ. ಶಿವಕುಮಾರ್​​ ಅವರ ಸಚಿವ ಸಂಪುಟದಲ್ಲಿ ಗೃಹ ಸಚಿವರು. ಅಧಿಕಾರ ಸ್ವೀಕರಿಸುತ್ತಿದ್ದಂತೆ ಬಿಜೆಯನ್ನು ಉದ್ದೇಶಿಸಿ ಎಕ್ಸ್​​ ಪೋಸ್ಟ್​​ ಮಾಡಿರುವ ಪ್ರಿಯಾಂಕ್, RSSಗೆ ಪರೋಕ್ಷ ಎಚ್ಚರಿಕೆ ನೀಡಿರೋದೀಗ ಮತ್ತೊಂದು ಸುತ್ತಿನ ರಾಜಕೀಯ…

Read More

ಆಧ್ಯಾತ್ಮಿಕ ಸ್ಥಳಗಳಿಗೆ ಪ್ರವಾಸ ಹೋಗುವವರಲ್ಲಿ ಜೆನ್‌ ಝೀ ಯುವಕರೇ ಹೆಚ್ಚು; ವರದಿ – Kannada News

ಪ್ರವಾಸ ಎಂದ ತಕ್ಷಣ ನೆನಪಿಗೆ ಬರೋದೇ ಗೋವಾ, ಯುರೋಪ್‌ ಇತ್ಯಾದಿ ಮೋಜು ಮಸ್ತಿಯ ತಾಣ. ಯುವಕರೆಲ್ಲಾ ಇಂತಹ ತಾಣಗಳನ್ನೇ ಇಷ್ಟಪಡುತ್ತಾರೆ, ಆಧ್ಯಾತ್ಮಿಕ ತಾಣಗಳಿಗೆ ಪ್ರವಾಸ (spiritual travel) ಕೈಗೊಳ್ಳೋದು ಹಿರಿ ಜೀವಗಳು ಮಾತ್ರ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಈಗಂತೂ ಹಿರಿಯರಿಗಿಂತ ಯುವಕರೇ ಅತಿ ಹೆಚ್ಚಾಗಿ ಆಧ್ಯಾತ್ಮಿಕ ತಾಣಗಳಿಗೆ ಭೇಟಿ ನೀಡುತ್ತಿದ್ದಾರಂತೆ. ಕಡಲ ತೀರ, ಇತ್ಯಾದಿ ಮೋಜು ಮಸ್ತಿಯ ತಾಣಗಳಿಗೆ ಹೋಗುವ ಬದಲಾಗಿ ಶಾಂತಿ, ನೆಮ್ಮದಿ ಮತ್ತು ಸಕಾರಾತ್ಮಕ ಶಕ್ತಿಯನ್ನು ಕಂಡುಕೊಳ್ಳಲು ಭಾರತದ ಜೆನ್‌ ಝೀ ಯುವಕರು…

Read More

ಉಜ್ವಲ ಗ್ಯಾಸ್ ಯೋಜನೆಯಲ್ಲಿ ಸಬ್ಸಿಡಿಯುಕ್ತ ಸಿಲಿಂಡರ್ ಸಂಖ್ಯೆ ಕಡಿಮೆ ಮಾಡಲು ನಿಜವಾದ ಕಾರಣ ಇದಾ? – Kannada News

ನವದೆಹಲಿ, ಜೂನ್ 9: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY- PM Ujjwala Yojana) ಅಡಿಯಲ್ಲಿ ಫಲಾನುಭವಿಗಳಿಗೆ ಸಿಗುತ್ತಿದ್ದ ಸಬ್ಸಿಡಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸಂಖ್ಯೆಯನ್ನು ಕಡಿತಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪ್ರಬಲ ಕಾರಣವೊಂದು ಇದೆ ಎಂದು ಹೇಳಲಾಗುತ್ತಿದೆ. ಬಡವರಿಗೆಂದು ಇರುವ ಈ ಸ್ಕೀಮ್ ಅನ್ನು ಕೆಲ ದುರುಳರು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಅದಕ್ಕೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಿಎನ್​ಎನ್ ನ್ಯೂಸ್18 ವಾಹಿನಿ ವರದಿ ಮಾಡಿದೆ. ಪಿಎಂ ಉಜ್ವಲ ಯೋಜನೆಯಲ್ಲಿ…

Read More

ನಕಲಿ ಜಡ್ಜ್, ನಕಲಿ ಕೋರ್ಟ್ ಸೃಷ್ಟಿಸಿ ಬಾಗಲಕೋಟೆಯ ಸರ್ಕಾರಿ ನೌಕರನಿಗೆ 83 ಲಕ್ಷ ರೂ. ಟೋಪಿ ಹಾಕಿದ ಸೈಬರ್ ವಂಚಕರು – Kannada News

ಬಾಗಲಕೋಟೆ, ಜೂ.9: ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್​ ವಂಚನೆಗಳು ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಒಂದಲ್ಲ ಒಂದು ಇಂತಹ ಸೈಬರ್​​​​ ವಂಚನೆ ಪ್ರಕರಣಗಳು ಕಂಡು ಬರುತ್ತಿದೆ. ಬೇರೆ ಬೇರೆ ವೇಷದಲ್ಲಿ ಬಂದು ಜನರಿಂದ ಹಣ-ಸಂಪತ್ತುಗಳನ್ನು ದೋಚುತ್ತಿದ್ದಾರೆ. ದೇಶಾದ್ಯಂತ ಸಾರ್ವಜನಿಕರನ್ನು ನಡುಗಿಸುತ್ತಿರುವ ‘ಡಿಜಿಟಲ್ ಅರೆಸ್ಟ್’ ಮತ್ತು ಸೈಬರ್ ವಂಚನೆಯ ಬಲೆಗೆ ಈಗ ಬಾಗಲಕೋಟೆಯ ಹಿರಿಯ ಸರ್ಕಾರಿ ನೌಕರರೊಬ್ಬರು ಬಲಿಯಾಗಿದ್ದಾರೆ. ನಕಲಿ ಪೊಲೀಸ್ ಠಾಣೆ, ನಕಲಿ ವಕೀಲರು ಹಾಗೂ ನಕಲಿ ಜಡ್ಜ್ ಸೃಷ್ಟಿಸಿ ಬೆದರಿಕೆ ಹಾಕಿದ ವಂಚಕರ ಗ್ಯಾಂಗ್, ಅವರಿಂದ ಬರೋಬ್ಬರಿ…

Read More

ಕಳೆದ 12 ವರ್ಷದಲ್ಲಿ ಐಟಿ ಮೊದಲಾದ ಸೆಕ್ಟರ್​ಗಳಲ್ಲಿ ಭಾರತದ ರಫ್ತು ಗಣನೀಯ ಏರಿಕೆ: ದರ್ಪಣ್ ಜೈನ್ – Kannada News

ಬೆಂಗಳೂರು, ಜೂನ್ 9: ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ ಉಪಕರಣ, ಮಸಾಲೆ ಪದಾರ್ಥ, ಔಷಧ ಹಾಗು ಇನ್ನೂ ಬೇರೆ ಬೇರೆ ಸೆಕ್ಟರ್​ಗಳಲ್ಲಿ ಭಾರತದ ರಫ್ತು ಕಳೆದ 12 ವರ್ಷದಲ್ಲಿ ಗಣನೀಯವಾಗಿ ಹೆಚ್ಚಳ ಆಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವಾಲದಯ ಹೆಚ್ಚುವರಿ ಕಾರ್ಯದರ್ಶಿ ದರ್ಪಣ್ ಜೈನ್ (Darpan Jain) ಹೇಳಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಮುಕ್ತ ವ್ಯಾಪಾರ ಒಪ್ಪಂದಗಳ ದೆಸೆಯಿಂದ ಭಾರತದ ಮಾರುಕಟ್ಟೆ ಮತ್ತಷ್ಟು ವಿಸ್ತರಣೆ ಆಗಿರುವ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ….

Read More