ಲ್ಯಾಡಲ್ ಸ್ಫೋಟಕ್ಕೆ 8 ಕಾರ್ಮಿಕರು ಬಲಿ, ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್ಡಿ ಕುಮಾರಸ್ವಾಮಿ – Kannada News
ವಿಶಾಖಪಟ್ಟಣಂ, ಜೂನ್ 09: ವಿಶಾಖಪಟ್ಟಣಂನ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಎಂಟು ಕಾರ್ಮಿಕರು ಬಲಿಯಾಗಿದ್ದಾರೆ. ಕರಗಿದ ಕಬ್ಬಿಣವನ್ನು ಸಾಗಿಸುವಾಗ ಕ್ರೇನ್ ಕುಸಿದು, ಬಿಸಿ ಲೋಹ ಚೆಲ್ಲಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಈ ಪರಿಹಾರ ಕಾಯಂ ನೌಕರರು ಹಾಗೂ ಹೊರಗುತ್ತಿಗೆ…