Category Archives: Blog

Your blog category

ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಶಾಸಕ ಶಿವಲಿಂಗೇಗೌಡ – Kannada News | Congress MLA shivalingegowda Hits out at BJP Leaders In Assembly Session

ಬೆಂಗಳೂರು, (ಫೆಬ್ರವರಿ 04): ವಿಧಾನಸಭೆ ಕಲಾಪದಲ್ಲಿಂದು (Karnataka Assembly Session) ಅರಸಿಕೆರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ (Congress MLA shivalingegowda )ಹಾಗೂ ಬಿಜೆಪಿ ಶಾಸಕರ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಈ ವೇಳೆ ದೇವೇಗೌಡ್ರಿಗೆ ಚೂರಿ ಹಾಕಿದ ಶಿವಲಿಂಗೇಗೌಡ ಅವರಿಗೆ ಧಿಕ್ಕಾರ, ಕಾಯಿ ಕಳ್ಳ, ಕೊಬ್ಬರಿ ಕಳ್ಳ ಎಂದು ಬಿಜೆಪಿ ಸದಸ್ಯರು ಕೂಗಾಡಿದ್ದು, ಇದು ವೈಯಕ್ತಿಕ ಆರೋಪ ಪ್ರತ್ಯಾರೋಪಕ್ಕೆ ತಿರುಗಿದೆ. ಚಿಂಚೋಳಿಯಲ್ಲಿ ನಿನ್ನ ಹೆಂಡತಿಯನ್ನು ತಹಶೀಲ್ದಾರ್ ಬಿಟ್ಟುಕೊಂಡು ಎಷ್ಟು ದುಡ್ಡು ಹೊಡೆದಿದ್ದೀಯಾ ಎಂದು ಗೊತ್ತಿದೆ. ನಿಮಗೆ ಮಾನ, ಮರ್ಯಾದೆ ಇದೆಯಾ ಎಂದು ಶಿವಲಿಂಗೇಗೌಡ್ರು, ಬಿಜೆಪಿ ಶಾಸಕ ಶರಣು ಸಲಗರ್ ಅವರಿಗೆ ವೈಯಕ್ತಿವಾಗಿ ಬೈದಿದ್ದಾರೆ. ಇದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಶಿವಲಿಂಗೇಗೌಡ್ರು ಕ್ಷಮೆ ಕೇಳಬೇಕೆಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದರು. ಆದ್ರೆ, ಇದಕ್ಕೆ ಜಗ್ಗದ ಶಿವಲಿಂಗೇಗೌಡ, ನನಗೆ ವೈಯಕ್ತಿಕವಾಗಿ ಬೈದಿರುವುದಕ್ಕೆ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಇದಕ್ಕೆ ಇತರೆ ಕಾಂಗ್ರೆಸ್ ಸದಸ್ಯರು ಸಹ ಧ್ವನಿಗೂಡಿಸಿದರು. ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಆರೋಪ ಪ್ರತ್ಯಾರೋಪ ಜೋರಾಯ್ತು.

ಇನ್ನು ತಮ್ಮ ಹೇಳಿಕೆಗೆ ಸಮಜಾಯಿಷಿ ನೀಡಿದ ಶಿವಲಿಂಗೇಗೌಡ, ನನಗೆ ಕಾಯಿ ಕಳ್ಳ, ಕೊಬ್ಬರಿ ಕಳ್ಳ ಎಂದು ಹೇಳಿದ್ದಾರೆ. ನಾನು ಕಳ್ಳತನ ಮಾಡಿದ್ದು ತೋರಿಸಿ. ನಾನು ಕದ್ದಿದ್ದು ನೀವು ತೋರಿಸಿದ್ರೆ ನಿಮ್ಮ ಮನೆಯಲ್ಲಿ ಜೀತ ಮಾಡುತ್ತೇನೆ. ನಾನು ಮಾತನಾಡಿದ್ದಕ್ಕೆ ಈಗಲೂ ಬದ್ಧನಾಗಿದ್ದೇನೆ. ನನಗೆ ಕಳ್ಳ ಅಂದ್ರೆ ಅವರಿಗೆ ಮುತ್ತು ಕೊಡಬೇಕಾ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸುತ್ತಲ್ಲೇ ತಮ್ಮ ಮಾತನ್ನು ಸಮರ್ಥನೆ ಮಾಡಿಕೊಂಡರು.

ಇದನ್ನೂ ನೋಡಿ: ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗರ್- ಶಿವಲಿಂಗೇಗೌಡ

Source link

ಕೊಬ್ಬರಿಗೆ ಬಂಪರ್ ಬೆಲೆ: ರೈತರಿಗೆ ಸಿಗದ ಲಾಭ, ಭಾರೀ ನಿರೀಕ್ಷೆಯಲ್ಲಿದ್ದ ಅನ್ನದಾತ ನಿರಾಸೆ – Kannada News | Tumakuru copra Price Soars Record High: Farmers not getting any profit

ತುಮಕೂರು, ಫೆಬ್ರವರಿ 04: ಕಲ್ಪತರು ನಾಡು ಎಂದೇ ಹೆಸರಾದ ತುಮಕೂರಿನ (Tumakuru) ಕೊಬ್ಬರಿಗೆ (Coconut) ಇದೀಗ ಎಲ್ಲಿಲ್ಲದ ಬೆಂಬಲ ಬೆಲೆ ಸಿಕ್ಕಿದೆ. ಹಿಂದೆಂದು ಕಂಡರಿಯದ ದಾಖಲೆ ಮೊತ್ತ ದತ್ತ ಕೊಬ್ಬರಿ ಸಮೀಪಿಸಿದೆ. ಹೀಗಿದ್ದರೂ ರೈತರ ಮೊಗದಲ್ಲಿ ಮಂದಹಾಸ ಬದಲಿಗೆ ಬೇಸರ ಮನೆಮಾಡಿದೆ. ತೆಂಗು ಬೆಳೆಗೆ ತಲೆದೂರಿದ ನಾನಾ ಕಾಯಿಲೆಗಳು ಇಳುವರಿ ಕಡಿಮೆ ಮಾಡಿದೆ. ಇದರಿಂದ ಆದಾಯಕ್ಕೆ ತಕ್ಕ ಪ್ರತಿಫಲ‌‌ ಸಿಕ್ಕರೆ ಹೆಚ್ಚು ಎಂಬುವಂತಾಗಿದೆ ರೈತರ ಬದುಕು.

ರೈತರ ಕನಸಿಗೆ ತಣ್ಣೀರೆರಚಿದ ರೋಗ ಬಾಧೆ 

ಕಲ್ಪತರು ನಾಡಿನ ಹೆಮ್ಮೆಯ ತೆಂಗು ಬೆಳೆ ಇದೀಗ ರೈತರ ಕಣ್ಣೀರಿಗೆ ಕಾರಣವಾಗಿದೆ. ಕೊಬ್ಬರಿಗೆ ಮಾರುಕಟ್ಟೆಯಲ್ಲಿ ಭರ್ಜರಿ ಬೆಲೆ ಸಿಕ್ಕರೂ, ಅನ್ನದಾತನಿಗೆ ಲಾಭ ಮಾತ್ರ ದೂರದ ಬೆಟ್ಟವಾಗಿದೆ. ಕೊಬ್ಬರಿ ಮಾರಾಟ ಮಾಡಿ ಕೈ ತುಂಬಾ ಹಣ ಬರಬಹುದು ಅನ್ನೋ ಕನಸಿಗೆ, ರೋಗ ಬಾಧೆ ನೀರೆರಚಿದಂತಾಗಿದೆ.

ಇದನ್ನೂ ಓದಿ: ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಟಿವಿ9 ವರದಿ ಇಂಪ್ಯಾಕ್ಟ್; ಶಾಲೆಗಳಿಗೆ ಬಂತು ಗುಣಮಟ್ಟದ ಬೇಳೆ

ತುಮಕೂರು ಜಿಲ್ಲೆಯಲ್ಲಿ ಒಟ್ಟು 1 ಲಕ್ಷ 76 ಸಾವಿರ ಹೆಕ್ಟರ್ ಪ್ರದೇಶದಲ್ಲಿ ತೆಂಗು ಬೆಳೆ ಬೆಳೆದಿದ್ದು, ಈ ಪೈಕಿ ಶೇಕಡ 70ರಷ್ಟು ತೆಂಗು ಬೆಳೆಗೆ ನುಸಿಪೀಡೆ ಹಾಗೂ ಬೀಳೆ ತಲೆ ಹುಳು ರೋಗ ತಗುಲಿದೆ. ಹಾಗಾಗಿ ಇಳುವರಿಯಲ್ಲಿ ಭಾರೀ ಪ್ರಮಾಣದ ಕುಸಿತ ಕಂಡಿದ್ದು, ಕಳೆದ ಒಂದು ವರ್ಷದಿಂದ ರೋಗ ಬಾಧೆಗೆ ರೋಸಿ ಹೋದ ರೈತರು ಕಂಗಾಲಾಗಿದ್ದಾರೆ.

ಇದು ಕೇವಲ ತುಮಕೂರು ಜಿಲ್ಲೆಯ ಸಮಸ್ಯೆಯಲ್ಲ. ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತೆಂಗು ಬೆಳೆಗೆ ರೋಗ ವ್ಯಾಪಕವಾಗಿ ಹರಡಿದೆ. ಆದರೆ ರೋಗ ನಿಯಂತ್ರಣಕ್ಕೆ ಕೃಷಿ ಇಲಾಖೆ ಹಾಗೂ ಸರ್ಕಾರ ಸೂಕ್ತ ಕ್ರಮಕೈಗೊಳ್ಳದೇ ಇದ್ದುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ತುಮಕೂರು ವಾಹನ ಸವಾರರಿಗೆ ಸಿಹಿಸುದ್ದಿ: ನೆನೆಗುದಿಗೆ ಬಿದ್ದಿದ್ದ ಚತುಷ್ಪಥ ಕಾಮಗಾರಿ ಆರಂಭ

ರೋಗ ಬಾಧೆಯಿಂದ ಇಳುವರಿ ಕುಸಿತವಾದ ಪರಿಣಾಮ ಕೊಬ್ಬರಿ ಬೆಲೆ ಗಗನಕ್ಕೇರಿದೆ. ಕ್ವಿಂಟಾಲ್‌ಗೆ 30 ಸಾವಿರ ರೂಪಾಯಿ ತಲುಪಿದ ಕೊಬ್ಬರಿ, ದಾಖಲೆ ಮೊತ್ತ ದತ್ತ ದಾಪುಗಾಲು ಇಡುತ್ತಿದೆ. ಇನ್ನು ಕಳೆದ ಜೂನ್‌ನಲ್ಲಿ ಸಹ ಇದೇ ರೀತಿ ಬೆಲೆ ಏರಿಕೆ ಕಂಡಿದ್ದು, ಆ ಸಂದರ್ಭದಲ್ಲಿ 31 ಸಾವಿರ ತಲುಪಿ ಬಳಿಕ 25 ಸಾವಿರಕ್ಕೆ ಇಳಿದಿತ್ತು. ಈಗ ಮತ್ತೆ ಬೆಲೆ ಏರಿಕೆಯಾದರೂ, ಬೆಳೆಗೆ ರೋಗ ತಗುಲಿರುವುದರಿಂದ ರೈತರಿಗೆ ನೋವಾಗಿ ಪರಿಣಮಿಸಿದೆ. ಈ ಸಂಕಷ್ಟದ ಲಾಭ ಪಡೆಯಲು ಕೇರಳ ಹಾಗೂ ತಮಿಳುನಾಡಿನ ರೈತರು ತುದಿಗಾಲಲ್ಲಿ ನಿಂತಿದ್ದು, ತೆಂಗು ಬೆಳಗಾರರಿಗೆ ದಿಕ್ಕು ತೋಚದ ಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

VSKUB Recruitment 2026: ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ 139 ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ – Kannada News | VSKUB Professor Recruitment 2026: 139 Vacancies in Ballari; Apply by Feb 13!

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSKUB), ಅಧಿಕೃತ ಅಧಿಸೂಚನೆ ಮೂಲಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತರು ಫೆಬ್ರವರಿ 13ರೊಳಗೆ ಅರ್ಜಿ ಸಲ್ಲಿಸಬೇಕು.

ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 139 ಪ್ರಾಧ್ಯಾಪಕರ ಹುದ್ದೆಗಳು ಲಭ್ಯವಿದ್ದು, ಉದ್ಯೋಗ ಸ್ಥಳ ಬಳ್ಳಾರಿ ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ಮಾನದಂಡಗಳ ಪ್ರಕಾರ ತಿಂಗಳಿಗೆ 57,700 ರಿಂದ 2,18,200 ರೂ.ರವರೆಗೆ ವೇತನ ನೀಡಲಾಗುತ್ತದೆ. ವಿಶ್ವವಿದ್ಯಾಲಯ ಮಟ್ಟದಲ್ಲಿ ಬೋಧನೆ, ಸಂಶೋಧನೆ ಮತ್ತು ಅಕಾಡೆಮಿಕ್ ಕಾರ್ಯಗಳಲ್ಲಿ ಭಾಗವಹಿಸಲು ಇದು ಉತ್ತಮ ವೇದಿಕೆಯಾಗಿದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ತಮ್ಮ ಶೈಕ್ಷಣಿಕ ಅರ್ಹತೆ ಹಾಗೂ ಇತರ ಮಾನದಂಡಗಳನ್ನು ಪರಿಶೀಲಿಸಬೇಕು. ಬಳಿಕ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಸರಿಯಾದ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು. ಅರ್ಜಿಯೊಂದಿಗೆ ಸ್ವಯಂ-ದೃಢೀಕರಿಸಿದ ದಾಖಲೆಗಳು, ಗುರುತಿನ ಚೀಟಿ, ವಯಸ್ಸಿನ ಪ್ರಮಾಣಪತ್ರ, ಶೈಕ್ಷಣಿಕ ಪ್ರಮಾಣಪತ್ರಗಳು, ಇತ್ತೀಚಿನ ಛಾಯಾಚಿತ್ರ ಹಾಗೂ ಅನುಭವ ದಾಖಲೆಗಳನ್ನು ಸೇರಿಸಬೇಕು. ಅನ್ವಯಿಸಿದಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಇದನ್ನೂ ಓದಿ: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್

ಪೂರ್ಣಗೊಂಡ ಅರ್ಜಿಯನ್ನು “ರಿಜಿಸ್ಟ್ರಾರ್, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ” ಈ ವಿಳಾಸಕ್ಕೆ ರಿಜಿಸ್ಟರ್ಡ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು. ಗಡುವಿನ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಒಟ್ಟಿನಲ್ಲಿ, VSKUB ಪ್ರಾಧ್ಯಾಪಕ ನೇಮಕಾತಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿ ನಿರ್ಮಿಸಿಕೊಳ್ಳಲು ಬಯಸುವವರಿಗೆ ಒಂದು ಸುವರ್ಣಾವಕಾಶವಾಗಿದೆ. ಆಸಕ್ತರು ಸಮಯ ವ್ಯರ್ಥ ಮಾಡದೇ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:29 pm, Wed, 4 February 26

Source link

ಪವನ್ ಕಲ್ಯಾಣ್ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ – Kannada News | Pawan Kalyan’s Ustaad Bhagat Singh movie to release on March 26

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಟಾಲಿವುಡ್​ನ ಸ್ಟಾರ್ ನಟರೂ ಸಹ ಹೌದು. ಪವನ್ ಕಲ್ಯಾಣ್ ಸಕ್ರಿಯ ರಾಜಕೀಯಕ್ಕೆ ಇಳಿದ ಬಳಿಕ ಅವರು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗಿತ್ತು. ಆದರೆ ಪವನ್ ಅವರು ಆಂಧ್ರ ಡಿಸಿಎಂ ಆದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಇದೀಗ ಮತ್ತೊಂದು ಸಿನಿಮಾ ಬಿಡುಗಡೆ ಆಗಲಿದ್ದು, ಇಂದಷ್ಟೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.

ಪವನ್ ಕಲ್ಯಾಣ್ ಡಿಸಿಎಂ ಆದ ಬಳಿಕ ಅವರ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಬಿಡುಗಡೆ ಆಯ್ತು. ಆ ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಗಳಿಸಿತು. ಅದರ ಬಳಿಕ ‘ಓಜಿ’ ಸಿನಿಮಾ ಬಿಡುಗಡೆ ಆಯ್ತು. ಆ ಸಿನಿಮಾ ಬ್ಲಾಕ್ ಬಸ್ಟರ್ ಎನಿಸಿಕೊಂಡಿತು. ಇದೀಗ ಪವನ್ ಅವರ ಮತ್ತೊಂದು ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ತೆರೆಗೆ ಬರುತ್ತಿದೆ. ಈ ಸಿನಿಮಾ ಪವನ್ ಅಭಿಮಾನಿಗಳಿಗಾಗಿಯೇ ಮಾಡಲಾದ ಸಿನಿಮಾ ಆಗಿದೆ ಎಂಬುದು ನಿರ್ದೇಶಕ ಹರೀಶ್ ಶಂಕರ್ ಮಾತು.

ಪವನ್ ಕಲ್ಯಾಣ್ ಜೊತೆಗೆ ನಾಯಕಿಯಾಗಿ ಕನ್ನಡತಿ ಶ್ರೀಲೀಲಾ ಸಹ ನಟಿಸಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 23 ರಂದು ಬಿಡುಗಡೆ ಆಗಲಿದೆ. ಕನ್ನಡದ ‘ಟಾಕ್ಸಿಕ್’, ಹಿಂದಿಯ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆದ ನಾಲ್ಕು ದಿನಗಳ ಬಳಿಕ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಪವನ್ ಕಲ್ಯಾಣ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:ಅಪರೂಪದ ಗೌರವಕ್ಕೆ ಭಾಜನರಾದ ಪವನ್ ಕಲ್ಯಾಣ್

ಪವನ್ ಕಲ್ಯಾಣ್ ನಟನೆಯ ‘ಗಬ್ಬರ್ ಸಿಂಗ್’ ಸಿನಿಮಾ ಬಹಳ ಜನಪ್ರಿಯವಾಗಿದ್ದು, ಅದೇ ಸಿನಿಮಾದ ಪಾತ್ರದಿಂದ ಸ್ಪೂರ್ತಿ ಪಡೆದು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾವನ್ನು ಹರೀಶ್ ಶಂಕರ್ ನಿರ್ದೇಶಿಸಿದ್ದಾರೆ. ಪವನ್ ಕಲ್ಯಾಣ್ ಡಿಸಿಎಂ ಆಗುವ ಮುಂಚೆಯೇ ಸಿನಿಮಾದ ಚಿತ್ರೀಕರಣ ಆರಂಭಿಸಲಾಗಿತ್ತು. ಆದರೆ ಪವನ್ ಕಲ್ಯಾಣ್ ರಾಜಕೀಯದಲ್ಲಿ ಸಕ್ರಿಯರಾದ ಕಾರಣ ಸಿನಿಮಾವನ್ನು ನಿಲ್ಲಿಸಲಾಗಿತ್ತು. ಇದೀಗ ಬ್ಯುಸಿ ರಾಜಕೀಯ, ಆಡಳಿತದ ನಡುವೆಯೇ ಬಿಡುವು ಮಾಡಿಕೊಂಡು ಸಿನಿಮಾದ ಚಿತ್ರೀಕರಣವನ್ನು ಪವನ್ ಕಲ್ಯಾಣ್ ಮುಗಿಸಿದ್ದು, ವಿದೇಶಕ್ಕೆಲ್ಲ ಹೋಗಿ ಹಾಡುಗಳ ಚಿತ್ರೀಕರಣ ಮಾಡಿಕೊಂಡು ಬಂದಿದ್ದಾರೆ.

‘ಹರಿ ಹರ ವೀರ ಮಲ್ಲು’ ಸಿನಿಮಾನಲ್ಲಿ ವೀರ ಯೋಧನಾಗಿ, ‘ಓಜಿ’ ಸಿನಿಮಾನಲ್ಲಿ ಗಂಭೀರ ಗ್ಯಾಂಗ್​​ಸ್ಟರ್ ಆಗಿ ನಟಿಸಿದ್ದ ಪವನ್ ಕಲ್ಯಾಣ್, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ಠಪೋರಿ ಪೊಲೀಸ್ ಪಾತ್ರದಲ್ಲಿ ಮಿಂಚಲಿದ್ದಾರೆ. ಆದರೆ ಪವನ್ ಪ್ರಸ್ತುತ ಜವಾಬ್ದಾರಿಯುತ ಡಿಸಿಎಂ ಸ್ಥಾನದಲ್ಲಿರುವ ಕಾರಣ ಮೊದಲಿದ್ದ ಚಿತ್ರೀಕರಣಕ್ಕೆ ಸಾಕಷ್ಟು ಬದಲಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಟಿ20 ವಿಶ್ವಕಪ್‌ನಲ್ಲಿ ಅಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್​ ಯಾರು ಗೊತ್ತಾ? – Kannada News | T20 World Cup History: Players With Most Ducks Unwanted Batting Records

ತಮ್ಮ ವೃತ್ತಿಜೀವನದಲ್ಲಿ ನೆದರ್ಲ್ಯಾಂಡ್ಸ್ ಹಾಗೂ ದಕ್ಷಿಣ ಆಫ್ರಿಕಾ ಸೇರಿದಂತೆ ಎರಡು ರಾಷ್ಟ್ರೀಯ ತಂಡಗಳ ಪರ ಕ್ರಿಕೆಟ್ ಆಡಿದ್ದ ಆರ್.ಇ. ವ್ಯಾನ್ ಡೆರ್ ಮೆರ್ವೆ ಕೂಡ 4 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಎರಡೂ ದೇಶಗಳನ್ನು ಪ್ರತಿನಿಧಿಸಿದ್ದ ವ್ಯಾನ್ ಡೆರ್ ಮೆರ್ವೆ, 2009 ರಿಂದ 2022 ರವರೆಗೆ ನಡೆದ ಟಿ20 ವಿಶ್ವಕಪ್‌ಗಳಲ್ಲಿ 21 ಪಂದ್ಯಗಳನ್ನು ಆಡಿದ್ದು, 4 ಬಾರಿ ಡಕ್ ಔಟ್ ಆಗುವ ಮೂಲಕ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Source link

ಎಸ್​ಐಆರ್ ಒತ್ತಡದಿಂದ ಬಂಗಾಳದಲ್ಲಿ 150 ಜನ ಸಾವು; ಸುಪ್ರೀಂ ಕೋರ್ಟ್​ನಲ್ಲಿ ಮಮತಾ ಬ್ಯಾನರ್ಜಿ ವಾದ – Kannada News | 150 people dead in West Bengal due to SIR pressure CM Mamata Banerjee Tells in Supreme Court

ನವದೆಹಲಿ, ಫೆಬ್ರವರಿ 4: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಇಂದು ಸುಪ್ರೀಂ ಕೋರ್ಟ್​ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಾದ ಮಂಡಿಸಿದ್ದಾರೆ. ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ತಮ್ಮ ರಾಜ್ಯವನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಎಸ್​ಐಆರ್ ನೆಪದಲ್ಲಿ ಒತ್ತಡ ಹೇರಲಾಗುತ್ತಿದೆ ದೀದಿ ಹೇಳಿದ್ದಾರೆ. ಹೀಗೆ ಹಾಲಿ ಮುಖ್ಯಮಂತ್ರಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಾದ ಮಂಡನೆ ಮಾಡಿದ ಅಪರೂಪದ ಘಟನೆ ಇಂದು ನಡೆಯಿತು. ಎಸ್​ಐಆರ್ ಪ್ರಕ್ರಿಯೆಯ ಒತ್ತಡದಿಂದಾಗಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

“ನ್ಯಾಯವು ಮುಚ್ಚಿದ ಬಾಗಿಲುಗಳ ಹಿಂದೆ ಅಳುತ್ತಿದೆ” ಎಂದು ಸುಪ್ರೀಂ ಕೋರ್ಟ್‌ನಲ್ಲಿ ಬೇಸರ ಹೊರಹಾಕಿದ ಮಮತಾ ಬ್ಯಾನರ್ಜಿ ಸಿಜೆಐ ಸೂರ್ಯ ಕಾಂತ್ ಅವರ ಮುಂದೆ ತಮ್ಮ ಪ್ರಕರಣವನ್ನು ಮಂಡಿಸಲು 5 ನಿಮಿಷಗಳ ಸಮಯವನ್ನು ಕೋರಿದರು. ಅದಕ್ಕೆ ಸಿಜೆಐ ಒಪ್ಪಿಕೊಂಡು, ಪೀಠದ ಮುಂದೆ ಮಾತನಾಡಲು ಅವರಿಗೆ 15 ನಿಮಿಷಗಳ ಅವಕಾಶ ನೀಡಿದರು.

ಇದನ್ನೂ ಓದಿ: I-PAC ದಾಳಿ ಪ್ರಕರಣದಲ್ಲಿ ಸಿಎಂ ಮಮತಾ ಬ್ಯಾನರ್ಜಿಗೆ ಮುಖಭಂಗ; ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಭಾರತದ ಚುನಾವಣಾ ಆಯೋಗದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ ಮಮತಾ ಬ್ಯಾನರ್ಜಿ, “ನಮಗೆ ಎಲ್ಲಿಯೂ ನ್ಯಾಯ ಸಿಗುತ್ತಿಲ್ಲ. ನಾನು ಚುನಾವಣಾ ಆಯೋಗಕ್ಕೆ 6 ಬಾರಿ ಪತ್ರ ಬರೆದಿದ್ದರೂ ಇನ್ನೂ ಯಾವುದೇ ಉತ್ತರ ಸಿಕ್ಕಿಲ್ಲ” ಎಂದು ವಾದಿಸಿದರು.

ಈಗಾಗಲೇ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ್ದು, ಎಸ್‌ಐಆರ್ ನೋಟಿಸ್‌ಗಳನ್ನು ಕಳುಹಿಸುವಾಗ ಜಾಗರೂಕರಾಗಿರಲು ಸೂಚಿಸಿದೆ. “ನಿಮ್ಮ ಅಧಿಕಾರಿಗಳಿಗೆ ಸ್ವಲ್ಪ ಬುದ್ಧಿವಂತರಾಗಿರಲು ಹೇಳಿ” ಎಂದು ಮಮತಾ ಬ್ಯಾನರ್ಜಿ ಬರೆದ ಲಿಖಿತ ಅರ್ಜಿಯ ಮೇರೆಗೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್, ಪ್ರಸಿದ್ಧ ಬಂಗಾಳಿ ಕವಿ ಜಾಯ್ ಗೋಸ್ವಾಮಿ ಮತ್ತು ಟಿಎಂಸಿ ಸಂಸದ ದೀಪಕ್ ಅಧಿಕಾರಿ ಸೇರಿದಂತೆ ಪ್ರಮುಖ ವ್ಯಕ್ತಿಗಳಿಗೆ ಎಸ್‌ಐಆರ್ ನೋಟಿಸ್‌ಗಳನ್ನು ಕಳುಹಿಸಲಾಗಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಇದನ್ನೂ ಓದಿ: Video:ಸುಪ್ರೀಂನಲ್ಲಿ ಎಸ್​ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ

ಭಾರತೀಯ ಚುನಾವಣಾ ಆಯೋಗದೊಂದಿಗಿನ ಪಶ್ಚಿಮ ಬಂಗಾಳದ ಸರ್ಕಾರದ ಬಿಕ್ಕಟ್ಟಿನ ನಡುವೆ 3 ದಿನಗಳ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಬಹು ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಪಂಚೋಲಿ ಅವರನ್ನೊಳಗೊಂಡ ಪೀಠದ ಮುಂದೆ ತಮ್ಮ ಪ್ರಕರಣವನ್ನು ವಾದಿಸಿದರು.

ಈ ವಿಷಯದ ವಿಚಾರಣೆಯನ್ನು ಮುಂದೂಡಿದ ಸುಪ್ರೀಂ ಕೋರ್ಟ್, ಸಿಎಂ ಮಮತಾ ಬ್ಯಾನರ್ಜಿ ಅವರ ಮನವಿಗೆ ಪ್ರತಿಕ್ರಿಯೆಯಾಗಿ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ಫೆಬ್ರವರಿ 10ರೊಳಗೆ ಉತ್ತರ ಸಲ್ಲಿಸುವಂತೆ ನಿರ್ದೇಶಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:11 pm, Wed, 4 February 26

Source link

ಮಧ್ಯ, ಉತ್ತರ ಕರ್ನಾಟಕ ಜಿಲ್ಲೆಯ ಜನತೆಗೆ ಮತ್ತೊಂದು ಗುಡ್​​​ನ್ಯೂಸ್ ಕೊಟ್ಟ ಕೇಂದ್ರ – Kannada News | Ashwini Vaishnaw positive response To pralhad joshi Request about Bengaluru pune high speed rail corridor

ನವದೆಹಲಿ, (ಫೆಬ್ರವರಿ 04): ಕರ್ನಾಟಕಕ್ಕೆ (Karnataka) ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ (high speed rail corridor) ಕೊಡುಗೆಯ ಶುಭ ಸೂಚನೆ ಸಿಕ್ಕಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಒತ್ತಾಸೆ ಮೇರೆಗೆ ಕರ್ನಾಟಕದಲ್ಲಿ “ಬೆಂಗಳೂರು ಮತ್ತು ಪುಣೆ” ನಡುವೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಗೆ ಚಿಂತನೆ ನಡೆದಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಒಂದು ವೇಳೆ ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ,  ಈ ರೈಲು ಕಾರಿಡಾರ್ ನಿರ್ಮಾಣದಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗಲಿದೆ.

ರೈಲ್ವೆ ಸಚಿವರನ್ನ ಭೇಟಿ ಮಾಡಿದ ಜೋಶಿ

ಬೆಂಗಳೂರು ಮತ್ತು ಪುಣೆ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಬುಧವಾರ ಬೆಳಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಇದಕ್ಕೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸ್ವತಃ ಪ್ರಲ್ಹಾದ ಜೋಶಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ರೈಲ್ವೆಗೆ ಭರಪೂರ ಕೊಡುಗೆ: ಬಜೆಟ್​ನಲ್ಲಿ ಏನೂ ಸಿಕ್ಕಿಲ್ಲ ಎಂದವರಿಗೆ ಅಂಕಿಅಂಶ ಸಮೇತ ಅಶ್ವಿನಿ ವೈಷ್ಣವ್ ತಿರುಗೇಟು

ಬೆಂಗಳೂರು-ಪುಣೆ ಮಧ್ಯೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣವಾದಲ್ಲಿ ಕರ್ನಾಟಕದ ಬಹುತೇಕ ಪ್ರದೇಶದ ಒಟ್ಟಾರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಕರ್ನಾಟಕದ ಯಾವೆಲ್ಲಾ ಭಾಗಕ್ಕೆ ಅನುಕೂಲ

ಈ ರೈಲು ಕಾರಿಡಾರ್ ನಿರ್ಮಾಣದಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗಲಿದೆ. ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಅಲ್ಲದೇ ಪುಣೆಯಿಂದ ಕರ್ನಾಟಕದ ಆರೇಳು ಜಿಲ್ಲೆಗಳಿಗೆ ತ್ವರಿತ ಪ್ರಯಾಣ, ಸಂಪರ್ಕ ಸಾಧ್ಯವಾಗಲಿದೆ.

ಹಾಗಾಗಿ ಇದೊಂದು ಹೊಸ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ. ಜೋಶಿ ಅವರ ಮನವಿಗೆ ರೈಲ್ವೆ ಸಚಿವರೂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಭರವಸೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 5:02 pm, Wed, 4 February 26

Source link

ಅಕ್ರಮ ವಲಸಿಗರನ್ನ ತೋರಿಸಿದ್ರೂ ಕೇಸ್ ಹಾಕ್ತೀರಿ: ಪೊಲೀಸರಿಗೆ ಕೋರ್ಟ್ ಕ್ಲಾಸ್, ಪುನೀತ್ ಕೆರೆಹಳ್ಳಿಗೆ ರಿಲೀಫ್ – Kannada News | High Court Questions government on Illegal Immigrants, Stays Case Against Puneeth Kerehalli

ಬೆಂಗಳೂರು, ಫೆಬ್ರವರಿ 04: ಅಕ್ರಮ ಬಾಂಗ್ಲಾ ವಲಸಿಗರ ವಿಚಾರವಾಗಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಎರಡೆರಡು ಕೇಸ್​ಗಳು ದಾಖಲಾಗಿದ್ದವು. ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಪುನೀತ್ ಕೆರೆಹಳ್ಳಿ ವಿರುದ್ಧದ ಒಂದು ಪ್ರಕರಣಕ್ಕೆ ತಡೆ ನೀಡಿದ್ದು, ಮತ್ತೊಂದು ಪ್ರಕರಣದಲ್ಲಿ ಬಲವಂತದ ಕ್ರಮಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಆ ಮೂಲಕ ಹಿಂದೂ ಕಾರ್ಯಕರ್ತನಿಗೆ ಕೊಂಚ್​​ ರಿಲೀಫ್ ಸಿಕ್ಕಂತಾಗಿದೆ.

ಹೈಕೋರ್ಟ್ ಏಕಸದಸ್ಯ ಪೀಠ ಇಂದು ಪ್ರಕರಣದ ವಿಚಾರಣೆ ಮಾಡಿದ್ದು, ಎಲ್ಲೆಡೆ ಅಕ್ರಮ ವಲಸಿಗರು ಬಂದು ಸೇರಿದ್ದಾರೆ. ಅಕ್ರಮ ವಲಸಿಗರಿದ್ದಾರೆಂದು ತೋರಿಸಿದರೂ ಕೇಸ್ ಹಾಕುತ್ತೀರಿ ಎಂದು ಪೊಲೀಸರನ್ನ ತರಾಟೆ ತೆಗೆದುಕೊಂಡ ಪೀಠ ವಲಸಿಗರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಾ ತಿಳಿಸಿ ಎಂದು ಸರ್ಕಾರವನ್ನ ಪ್ರಶ್ನಿಸಿದೆ. ಸರ್ಕಾರದ ಪ್ರತಿಕ್ರಿಯೆಗಾಗಿ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ವಲಸಿಗರ ಶೆಡ್​ಗೆ ನುಗ್ಗಿ ಬೆದರಿಕೆ: ಪುನೀತ್​ ಕೆರೆಹಳ್ಳಿಗೆ ಜಾಮೀನು; ಹೋರಾಟ ಆರಂಭವೆಂದ ಹಿಂದೂ ಕಾರ್ಯಕರ್ತ

ಕಳೆದ ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಬಿಂಗೀಪುರ ಗ್ರಾಮದಲ್ಲಿ ಶಂಕಿತ ಬಾಂಗ್ಲಾ ವಲಸಿಗರು ಇರುವ ಜಾಗಕ್ಕೆ ಪುನೀತ್ ಕೆರೆಹಳ್ಳಿ ತಂಡ ತೆರಳಿದ್ದರು. ಅಲ್ಲಿದ್ದ ವಲಸೆ ಕಾರ್ಮಿಕರ ದಾಖಲೆಗಳನ್ನ ಪರಿಶೀಲನೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದರು. ಇದಾದ ಬಳಿಕ ಜಾಗದ ಮಾಲೀಕ ಸಿದ್ದೇಶ್ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇತಿದಂತೆ ಇತರರ ವಿರುದ್ಧ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.

ಪ್ರಕರಣ ದಾಖಲು ಮಾಡಿಕೊಂಡಿದ್ದ ಬನ್ನೇರುಘಟ್ಟ ಪೊಲೀಸರು ತಡರಾತ್ರಿ ಪುನೀತ್ ಕೆರೆಹಳ್ಳಿಯನ್ನ ಬಂಧಿಸಿದ್ದರು. ಬಳಿಕ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಆ ಬೆನ್ನಲ್ಲೇ ಷರತ್ತುಬದ್ಧ ಜಾಮೀನು ಪಡೆದಿದ್ದರು. ಸದ್ಯ ಇದೇ ಪ್ರಕರಣಕ್ಕೆ ತಡೆ ನೀಡಲಾಗಿದೆ.

ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ

ಇನ್ನು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾಗಿದ್ದಾಗ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಏಕಸದಸ್ಯ ಪೀಠ ಸೂಚನೆ ನೀಡಿ ಆದೇಶ ಹೊರಡಿಸಿದೆ.

ಪುನರ್ವಸತಿ ಬಗ್ಗೆ ವರದಿ ನೀಡಲು ಸೂಚನೆ

ಇನ್ನು ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ವಸತಿ ಮತ್ತು ಪರಿಹಾರ ಕೋರಿ ಇತ್ತೀಚೆಗೆ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ವಿಚಾರಣೆ ನಡೆದಿದೆ.

ಇದನ್ನೂ ಓದಿ: ಕೋಗಿಲು ಅಕ್ರಮ ವಸತಿ ತೆರವು ಪ್ರಕರಣ: ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಕೆ; ಬೇಡಿಕೆಗಳೇನು?

ಈ ವೇಳೆ 7 ಜನರಿಗೆ ನಿವೇಶನ ಮಂಜೂರಾದ ಬಗ್ಗೆ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ. ಅವರಲ್ಲಿ ನಾಲ್ವರಿಗೆ ನಿವೇಶನ ಮಂಜೂರಾದ ದಾಖಲೆ ಇಲ್ಲ. ಮೂವರಿಗೆ ವಿವಾದಿತ ಜಾಗದಲ್ಲಿ ನಿವೇಶನ ಮಂಜೂರಾಗಿಲ್ಲ ಹಾಗೂ ಪುನರ್ವಸತಿ ಕೇಂದ್ರಗಳಿಗೆ ಜನರು ಬರುತ್ತಿಲ್ಲವೆಂದು ಹೈಕೋರ್ಟ್​ಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಸದ್ಯ ಪ್ರಕರಣದಲ್ಲಿ ಅಮೈಕಸ್ ಕ್ಯೂರಿಯಾಗಿ ಬಿ.ವಿ.ವಿದ್ಯುಲ್ಲತಾರನ್ನು ನೇಮಿಸಿದ ಹೈಕೋರ್ಟ್, ಪುನರ್ವಸತಿ ಬಗ್ಗೆ ವರದಿ ನೀಡಲು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 3:32 pm, Wed, 4 February 26

Source link

ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ – Kannada News | Mahakumbh viral girl Monalisa Bhosle completes first film The Diary of Manipur shooting

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದವರೆಲ್ಲ ಯಶಸ್ಸು ಕಾಣಲ್ಲ. ಆದರೆ ತಮಗೆ ಸಿಕ್ಕ ಜನಪ್ರಿಯತೆಯನ್ನು ಸರಿಯಾಗಿ ಬಳಸಿಕೊಂಡರೆ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ. ಮಹಾಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿನಾ ಭೋಸ್ಲೆ (Monalisa Bhosle) ನಿಮಗೆ ನೆನಪಿರಬಹುದು. ಈಗ ಅವರೇನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಕೂಡ ಹಲವರಿಗೆ ಇರಬಹುದು. ಅದಕ್ಕೆ ಉತ್ತರ ಸಿಕ್ಕಿದೆ. ಮೊನಾಲಿಸಾ ಭೋಸ್ಲೆ ಅವರು ತಮ್ಮ ಮೊದಲ ಹಿಂದಿ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ! ಆ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ.

ಕಳೆದ ವರ್ಷ ಮಹಾಕುಂಭಮೇಳದಲ್ಲಿ ಮೊನಾಲಿಸಾ ಭೋಸ್ಲೆ ಅವರು ಮಣಿ ಸರಗಳನ್ನು ಮಾರುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡರು. ಅದಾದ ಬಳಿಕ ಕೆಲವೇ ದಿನಗಳಲ್ಲಿ ಅವರಿಗೆ ಹಿಂದಿ ಚಿತ್ರರಂಗದಿಂದ ಆಫರ್ ಕೂಡ ಬಂದಿತ್ತು. ನೋಡನೋಡುತ್ತಿದ್ದಂತೆಯೇ ಅವರು ಹೀರೋಯಿನ್ ಆಗಿಬಿಟ್ಟರು. ಈಗ ಶೂಟಿಂಗ್ ಮುಗಿಸಿದ್ದಾರೆ.

ಮೊನಾಲಿಸಾ ನಟಿಸುತ್ತಿರುವ ಮೊದಲ ಸಿನಿಮಾದ ಹೆಸರು ‘ದಿ ಡೈರಿ ಆಫ್ ಮಣಿಪುರ್’. ಈ ಚಿತ್ರಕ್ಕೆ ಸನೋಜ್ ಮಿಶ್ರಾ ಅವರು ನಿರ್ದೇಶನ ಮಾಡಿದ್ದಾರೆ. ಬಾಲಿವುಡ್ ಚಿತ್ರಂಗದ ಖ್ಯಾತ ನಟ ರಾಜ್​​ಕುಮಾರ್ ರಾವ್ ಅವರ ಸಹೋದರ ಅಮಿತ್ ರಾವ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಶೂಟಿಂಗ್ ಮುಗಿಸಿಕೊಂಡಿರುವ ಚಿತ್ರತಂಡದವರು ಗಾಂಗಾ ಮಾತೆಯ ಆಶೀರ್ವಾದ ಪಡೆಯಲು ಬರುತ್ತಿದ್ದಾರೆ.

ನಾಲ್ಕು ಹಂತಗಳಲ್ಲಿ ‘ದಿ ಡೈರಿ ಆಫ್ ಮಣಿಪುರ್’ ಸಿನಿಮಾಗೆ ಶೂಟಿಂಗ್ ಮಾಡಲಾಗಿದೆ. ಉತ್ತರ ಪ್ರದೇಶ, ಮಣಿಪುರ, ನೇಪಾಳ ಮತ್ತು ಡೆಹರಾಡೂನ್​​ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಈ ಸಿನಿಮಾದ ಕೆಲಸಗಳು ಶುರುವಾದಾಗ ಅನೇಕರು ಅಡ್ಡಿಪಡಿಸಿದ್ದರು. ನಿರ್ದೇಶಕರ ಮೇಲೆ ಸಾಕಷ್ಟು ಆರೋಪ ಹೊರಿಸಲಾಗಿತ್ತು. ಎಲ್ಲವನ್ನೂ ಎದುರಿಸಿಕೊಂಡು ಸನೋಜ್ ಮಿಶ್ರಾ ಅವರು ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: ಮಹಾಕುಂಭದ ಸುಂದರಿ ಮೊನಾಲಿಸಾ ತಿಂಗಳ ಆದಾಯ ಇಷ್ಟೊಂದಾ?

ಮೊದಲಿಗೆ ಮೊನಾಲಿಸಾ ಅವರು ಸಿನಿಮಾ ಒಪ್ಪಿಕೊಂಡಾಗ ಅವರಿಗೆ ಹೆಚ್ಚೇನೂ ತಿಳಿದಿರಲಿಲ್ಲ. ಬಳಿಕ ಅವರು ನಟನೆಯ ತರಬೇತಿ ಪಡೆದರು. ಜೊತೆ ಜೊತೆಯಲ್ಲಿ ವಿದ್ಯಾಭ್ಯಾಸ ಕೂಡ ಮಾಡುತ್ತಿದ್ದಾರೆ. ದಕ್ಷಿಣ ಭಾರತದಿಂದಲೂ ಅವರಿಗೆ ಅವಕಾಶಗಳು ಸಿಗುತ್ತವೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 4:51 pm, Wed, 4 February 26

Source link

ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು – Kannada News | Permission to open bar within distance of government schools: Excise department fraud exposed

ಬೆಂಗಳೂರು, ಫೆಬ್ರವರಿ 04: ಯಲಹಂಕ ವಿಧಾನಸಭಾ ಕ್ಷೇತ್ರದ ದೊಂಬರಹಳ್ಳಿಯಲ್ಲಿರುವ ಸರ್ಕಾರಿ ಶಾಲೆಯ 50 ಮೀಟರ್ ದೂರದಲ್ಲೇ ಸಿಂಹಾದ್ರಿ ಬೋರ್ಡಿಂಗ್, ಲಾಡ್ಜಿಂಗ್, ಬಾರ್ ಆ್ಯಂಡ್​ ರೆಸ್ಟೋರೆಂಟ್​​ಗೆ ಅನುವತಿ ನೀಡಲಾಗಿದೆ. ಈ ಬಗ್ಗೆ ಟಿವಿ9 ಗ್ರೌಂಡ್ ರಿಪೋರ್ಟ್​ ಮೂಲಕ ಸಾಕ್ಷಿ ಸಮೇತ ಅಬಕಾರಿ ಇಲಾಖೆಯ ಕಳ್ಳಾಟ ಬಯಲು ಮಾಡಿದೆ. ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಮದ್ಯದಂಗಡಿಗಳಿಗೆ ಪರವಾನಗಿ ನೀಡುವಂತಿಲ್ಲ ಎಂಬ ನಿಯಮವಿದ್ದರೂ, ಅಬಕಾರಿ ಉಪ ಆಯುಕ್ತ ಮುರಳಿ ನಿಯಮವನ್ನು ಉಲ್ಲಂಘಿಸಿ ಲೈಸೆನ್ಸ್ ನೀಡಿರುವ ಆರೋಪ ಕೇಳಿಬಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link