ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ – Kannada News | Karnataka squad for Ranji Trophy quarterfinal
ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಕ್ಕಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ದೇವದತ್ ಪಡಿಕ್ಕಲ್ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಪ್ರಸಿದ್ಧ್ ಕೃಷ್ಣ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಕಳೆದ ಪಂದ್ಯದ ವೇಳೆ ಗಾಯಗೊಂಡು ಹೊರಗುಳಿದಿದ್ದ ಅನುಭವಿ ದಾಂಡಿಗ ಕರುಣ್ ನಾಯರ್ ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದರೊಂದಿಗೆ ಮಯಾಂಕ್ ಅಗರ್ವಾಲ್ ಕೂಡ ತಂಡದಲ್ಲಿದ್ದಾರೆ. ಆದರೆ ಮಂಡಿರಜ್ಜು ಗಾಯದಿಂದ ಬಳಲುತ್ತಿರುವ ವೇಗಿ ವೈಶಾಕ್…