ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ – Kannada News | Vantamuri Woman Assault Case: 12 Accused Get 5 Year Rigorous Imprisonment in Belagavi
ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್Image Credit source: Google ಬೆಳಗಾವಿ, ಫೆಬ್ರುವರಿ 04: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಜನ ಆರೋಪಿಗಳಿಗೆ ಐದು ವರ್ಷಗಳ ಕಠಿಣ ಶಿಕ್ಷೆಯನ್ನು ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ. ಈ ಕುರಿತು ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 12 ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಪ್ರತಿಯೊಂದು ಸೆಕ್ಷನ್‌ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ….