Headlines

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ – Kannada News

ಬೆಂಗಳೂರು, ಜೂ.8: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಈ ಸೌಜನ್ಯದ ಭೇಟಿಯು ರಾಜ್ಯ ರಾಜಕಾರಣದಲ್ಲಿ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ. ಭೇಟಿಯ ಸಂದರ್ಭದಲ್ಲಿ, ಡಿಕೆ ಶಿವಕುಮಾರ್ ಮತ್ತು ಜಗದೀಶ್ ಶೆಟ್ಟರ್ ನಡುವೆ ಮಾತುಕತೆ ನಡೆದಿತ್ತು. ಈ ಸಂದರ್ಭದಲ್ಲಿ ಅಲ್ಲಿದ್ದ ಹಲವರು ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹಿಂದೆ ಪ್ರಮುಖ ನಾಯಕರಾಗಿ ಹಲವು ಬಾರಿ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದನ್ನು ನೆನಪಿಸಿಕೊಳ್ಳಲಾಯಿತು. ಮುಂದಿನ ರಾಜ್ಯಸಭೆ ಚುನಾವಣೆಗಳು,…

Read More

Women’s T20 World Cup: ಅತಿ ಹೆಚ್ಚು ಬಾರಿ ಫೈನಲ್ ಆಡಿದ ತಂಡ ಯಾವುದು ಗೊತ್ತಾ? – Kannada News

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಇದೇ ಜೂನ್ 12 ರಿಂದ ಅದ್ಧೂರಿಯಾಗಿ ಆರಂಭವಾಗಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಇನ್ನು ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ಈ ಪ್ರತಿಷ್ಠಿತ ಮೆಗಾ ಈವೆಂಟ್‌ನಲ್ಲಿ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಎದುರು…

Read More

ಲಂಚ ಪಡೆಯುತ್ತಿರುವಾಗಲೇ ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು: ಬೆಂಗಳೂರಿನಲ್ಲಿ ಲೋಕಾಯುಕ್ತ ಭರ್ಜರಿ ಟ್ರ್ಯಾಪ್ – Kannada News

ಬೆಂಗಳೂರು, ಜೂ.8: ಸಿಲಿಕಾನ್ ಸಿಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಪಾರ್ಟ್‌ಮೆಂಟ್ ಪರಿಶೀಲನೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಬೆಂಗಳೂರು ದಕ್ಷಿಣ ವಿಭಾಗದ ಉಪ ಮುಖ್ಯ ವಿದ್ಯುತ್ ನಿರೀಕ್ಷಕರನ್ನು (Deputy Chief Electrical Inspector) ಹಣ ಸಹಿತ ವಶಕ್ಕೆ ಪಡೆದಿದ್ದಾರೆ. ಲೋಕಾ ಬಲೆಗೆ ಬಿದ್ದ ಈ ಭ್ರಷ್ಟ ಅಧಿಕಾರಿಯನ್ನು ಸಿದ್ದಪ್ಪ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಾಣಗೊಂಡಿದ್ದ ಅಪಾರ್ಟ್‌ಮೆಂಟ್ ಕಟ್ಟಡದ ಆವರ್ತಕ ಪರಿಶೀಲನೆ ನಡೆಸಲು ಮತ್ತು ಅದಕ್ಕೆ ಸಂಬಂಧಿಸಿದ…

Read More

ಸಿಎಂ ಡಿಕೆ ಶಿವಕುಮಾರ್ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಯಾರಿವರು? – Kannada News

ಬೆಂಗಳೂರು, (ಜೂನ್ 08): 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಚುನಾವಣಾ ತಂತ್ರಗಾರ ಸುನೀಲ್‌ ಕನುಗೋಳು (Poll strategist Sunil Kanugolu) ಅವರನ್ನು ಸಿಎಂ ಡಿಕೆ ಶಿವಕುಮಾರ್ (DK Shivakumar) ತಮ್ಮ ಮುಖ್ಯ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಬಳ್ಳಾರಿ ಮೂಲದ ಈ ಸುನೀಲ್ ಕನುಗೋಳು ಹಿಂದೆ ಸಿದ್ದರಾಮಯ್ಯನವರ ಸಲಹೆಗಾರರಾಗಿದ್ದರು. ಇದೀಗ ಅವರನ್ನು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಡಿಕೆ ಶಿವಕುಮಾರ್ ಅವರ ಸಲಹೆಗಾರರನ್ನಾಗಿ ನೇಮಕ ಮಾಡಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ…

Read More

‘ಸ್ಲಮ್ ಡಾಗ್’ ಟೀಸರ್: ವಿಜಯ್ ಸೇತುಪತಿ ಜೊತೆ ದುನಿಯಾ ವಿಜಯ್ ಪಾತ್ರವೂ ಹೈಲೈಟ್ – Kannada News

ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದುನಿಯಾ ವಿಜಯ್ (Duniya Vijay) ಈಗ ಮತ್ತೊಂದು ಭರ್ಜರಿ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಖಳನಾಯಕನಾಗಿ ಅಬ್ಬರಿಸಲು ಸಜ್ಜಾಗಿದ್ದಾರೆ. ಸ್ಟಾರ್ ಡೈರೆಕ್ಟರ್ ಪುರಿ ಜಗನ್ನಾಥ್ (Puri Jagannadh) ಮತ್ತು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ (Slum Dog) ಚಿತ್ರದಲ್ಲಿ ದುನಿಯಾ ವಿಜಯ್ ಭೀಕರ ವಿಲನ್ ಪಾತ್ರದಲ್ಲಿ ನಟಿಸಿದ್ದು, ಚಿತ್ರದ ಬಹುನಿರೀಕ್ಷಿತ ಟೀಸರ್ ಬಿಡುಗಡೆಯಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್‌ನ ಅಂತಿಮ ಹಂತದಲ್ಲಿರುವ ಈ ಆ್ಯಕ್ಷನ್…

Read More

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ – Kannada News

ಅಹಮದಾಬಾದ್‌ನ ಇಕೆಎ ಅರೆನಾದಲ್ಲಿ ನಡೆದ ಉದ್ಘಾಟನಾ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಆತಿಥೇಯ ಭಾರತ ಸಂಪೂರ್ಣ ಪ್ರಾಬಲ್ಯ ಮೆರೆದಿದೆ. ಸೋಮವಾರ ಮುಕ್ತಾಯಗೊಂಡ ಈ ಕೂಟದಲ್ಲಿ ಭಾರತವು 102 ಚಿನ್ನದ ಪದಕಗಳೊಂದಿಗೆ ಒಟ್ಟು 114 ಪದಕಗಳನ್ನು ಬಾಚಿಕೊಳ್ಳುವ ಮೂಲಕ ಭರ್ಜರಿ ಪ್ರದರ್ಶನ ನೀಡಿದೆ. ಉಳಿದಂತೆ ಜಪಾನ್ ಮೂರು ಚಿನ್ನ, ಮೂರು ಬೆಳ್ಳಿ ಮತ್ತು ಐದು ಕಂಚಿನ ಪದಕಗಳೊಂದಿಗೆ ಎರಡನೇ ಸ್ಥಾನ ಪಡೆದರೆ, ಅರ್ಜೆಂಟೀನಾದ ಕ್ರೀಡಾಪಟು ನಬೀಲಾ ಬರ್ರಾಜಾ ಅವರು ಎರಡು ಚಿನ್ನ ಮತ್ತು ಮೂರು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ…

Read More

IND vs ENG: ಬದಲಾದ ಸಮಯದಲ್ಲಿ ಆರಂಭವಾಗಲಿದೆ ಭಾರತ- ಇಂಗ್ಲೆಂಡ್ ನಡುವಿನ ಟಿ20 ಸರಣಿ – Kannada News

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಸರಣಿಯ ಬಳಿಕ ಭಾರತ ಟಿ20 ತಂಡ, ಟಿ20 ಸರಣಿಗಾಗಿ ಐರ್ಲೆಂಡ್ ಹಾಗೂ ಇಂಗ್ಲೆಂಡ್ (India vs England) ಪ್ರವಾಸ ಕೈಗೊಳ್ಳಲಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಹೊಸ ನಾಯಕನೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲಿದೆ. ಶ್ರೇಯಸ್ ಅಯ್ಯರ್ (Shreyas Iyer) ಭಾರತ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿದ್ದು, ಅವರ ನೇತೃತ್ವದಲ್ಲಿ ಭಾರತದ ಯುವ ಪಡೆ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ….

Read More

‘ರಸ್ತೆ ಗುಂಡಿಗೆ ಬಿದ್ದು ಪ್ರಾಣ ಹೋದರೆ ಇಂಜಿನಿಯರ್‌ಗಳೇ ನೇರ ಹೊಣೆ’: ಸಚಿವ ಯು.ಟಿ.ಖಾದರ್ ಖಡಕ್ ವಾರ್ನಿಂಗ್ – Kannada News

ಯು.ಟಿ. ಖಾದರ್Image Credit source: Tv9 kannada ಮಂಗಳೂರು, ಜೂ.8: ಮಳೆಗಾಲದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಅತ್ಯಂತ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವ ಯು.ಟಿ. ಖಾದರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕ ಹಿತಾಸಕ್ತಿ ಹಾಗೂ ತುರ್ತು ಸಂದರ್ಭ ಎದುರಾದಾಗ ಅಧಿಕಾರಿಗಳು ತಮ್ಮ ವ್ಯಾಪ್ತಿಯನ್ನು ಮೀರಿಯೂ ತಕ್ಷಣದ…

Read More

ಇರಾನ್​ನಲ್ಲಿನ ಭಾರತೀಯರು ತಕ್ಷಣ ದೇಶ ಬಿಟ್ಟು ಹೊರಡಿ; ಭಾರತ ಆದೇಶ – Kannada News

ನವದೆಹಲಿ, ಜೂನ್ 8: ಇರಾನ್ (Iran War) ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಮಿಲಿಟರಿ ಸಂಘರ್ಷ ಹಾಗೂ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ತನ್ನ ನಾಗರಿಕರಿಗಾಗಿ ಹೊಸ ಎಚ್ಚರಿಕೆಗಳನ್ನು ನೀಡಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಭಾರತೀಯ ನಾಗರಿಕರಿಗೆ ಇರಾನ್‌ಗೆ ಪ್ರಯಾಣಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಎರಡೂ ದೇಶಗಳ ನಡುವೆ ಮಿಲಿಟರಿ ದಾಳಿ ನಿಲ್ಲುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮದ ಮಾತುಕತೆಗಳು ನಡೆಯುತ್ತಿದ್ದರೂ ಪರಸ್ಪರ ಇಂಧನ ಹಾಗೂ…

Read More

ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನ ಉಪ್ಪಿನಿಂದ ಬದುಕಿಸಬಹುದಾ? ಮೂಢನಂಬಿಕೆಯ ಸತ್ಯಾಸತ್ಯತೆ ಅನಾವರಣ – Kannada News

ಬಾಗಲಕೋಟೆ, (ಜೂನ್ 08): ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಯನ್ನು ನಾಲ್ಕು ಗಂಟೆಗಳವರೆಗೆ ಉಪ್ಪಿನಲ್ಲಿ ಮುಚ್ಚಿದರೆ ಮತ್ತೆ ಬದುಕಿಸಬಹುದು ಎನ್ನುವ ಮೂಢನಂಬಿಕೆ ಸಂದೇಶ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಲೇ ಇರುತ್ತೆ. ಆದ್ರೆ, ಇದರ ಸತ್ಯಾಸತ್ಯೆ ಬಾಗಲಕೋಟೆಯ ಮಗುವಿನ ಮೇಲೆ ಪ್ರಯೋಗ ಮಾಡಿದಾಗ ಅನಾವರಣಗೊಂಡಿದೆ. ಹೌದು…ಬಾಗಲಕೋಟೆಯ (Bagalkot) ನವನಗರದಲ್ಲಿ 18 ತಿಂಗಳ ಹೆಣ್ಣು ಮಗುವೊಂದು ನೀರಿನ ಟ್ಯಾಂಕ್‌ಗೆ ಬಿದ್ದು ಮೃತಪಟ್ಟಿದೆ.  ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ.  ಆದರೆ, ಮಗುವನ್ನು ಬದುಕಿಸಬಹುದು ಎಂಬ ಮೂಢನಂಬಿಕೆಯಿಂದ,…

Read More