Category Archives: Blog

Your blog category

ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ – Kannada News | Dhanush 55th movie D55 titled OM Rajkumar Periasamy Film release date first look

ಶಿವರಾಜ್​ಕುಮಾರ್ ಅವರ ವೃತ್ತಿಜೀವನದಲ್ಲಿ ‘ಓಂ’ ಸಿನಿಮಾಗೆ ವಿಶೇಷ ಸ್ಥಾನ ಇದೆ. ಉಪೇಂದ್ರ ನಿರ್ದೇಶನ ಮಾಡಿದ್ದ ಆ ಸಿನಿಮಾದ ಶೀರ್ಷಿಕೆ ಕೇಳಿದರೆ ಅಭಿಮಾನಿಗಳು ಈಗಲೂ ಥ್ರಿಲ್ ಆಗುತ್ತಾರೆ. ‘ಓಂ’ ಸಿನಿಮಾ (Om Movie) 1995ರಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿತ್ತು. ಅಷ್ಟಕ್ಕೂ ಈಗ ಮತ್ತೆ ಆ ಸಿನಿಮಾ ಬಗ್ಗೆ ಮಾತನಾಡಲು ಕಾರಣ ಇದೆ. ತಮಿಳಿನಲ್ಲಿ ಧನುಷ್ (Dhanush) ನಟನೆಯ ಹೊಸ ಸಿನಿಮಾಗೆ ‘ಓಂ’ ಎಂದು ಶೀರ್ಷಿಕೆ ಇಡಲಾಗಿದೆ. ಇಂಥ ಪವರ್​ಫುಲ್ ಟೈಟಲ್ ಇಟ್ಟಿದ್ದಕ್ಕೆ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ ಆಗಿದೆ.

ಇದು ಧನುಷ್ ನಟಿಸಲಿರುವ 55ನೇ ಸಿನಿಮಾ. ಈ ಚಿತ್ರವನ್ನು ಇಷ್ಟು ದಿನಗಳ ಕಾಲ ತಾತ್ಕಾಲಿಕವಾಗಿ ‘D55’ ಎಂದು ಕರೆಯಲಾಗುತ್ತಿತ್ತು. ಶೀರ್ಷಿಕೆ ಏನು ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾದಿದ್ದರು. ಇದೀಗ ಈ ಬಹುನಿರೀಕ್ಷಿತ ಚಿತ್ರಕ್ಕೆ ಅಧಿಕೃತವಾಗಿ ಶೀರ್ಷಿಕೆ ಅನೌನ್ಸ್ ಆಗಿದೆ. ಭರ್ಜರಿ ಟೀಸರ್ ಮೂಲಕ ‘ಓಂ’ ಶೀರ್ಷಿಕೆಯನ್ನು ಅನಾವರಣ ಮಾಡಲಾಗಿದೆ.

‘ಅಮರನ್’ ಖ್ಯಾತಿಯ ರಾಜ್‌ಕುಮಾರ್ ಪೆರಿಯಸಾಮಿ ಅವರ ನಿರ್ದೇಶನದ ಈ ಚಿತ್ರವು ಇದೇ ವರ್ಷ ಅಕ್ಟೋಬರ್ 16ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದೆ. ಧನುಷ್ ಜೊತೆಗೆ ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ, ನಟಿ ಸಾಯಿ ಪಲ್ಲವಿ ಮತ್ತು ಶ್ರೀಲೀಲಾ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದರಿಂದ ಈ ಚಿತ್ರದ ಹೈಪ್ ಹೆಚ್ಚಾಗಿದೆ.

‘ಓಂ’ ಸಿನಿಮಾದ ಟೀಸರ್:

ಚಿತ್ರದ ಶೀರ್ಷಿಕೆಯೊಂದಿಗೆ ಬಿಡುಗಡೆಯಾಗಿರುವ ಸಣ್ಣ ಟೀಸರ್ ಸಖತ್ ಸದ್ದು ಮಾಡುತ್ತಿದೆ. ಕತ್ತಲ ಲೋಕದ ದೃಶ್ಯಗಳು, ಹಿನ್ನೆಲೆ ಸಂಗೀತ ಮತ್ತು ರಗಡ್ ಮೇಕಿಂಗ್ ಶೈಲಿ ನೋಡಿದರೆ ಇದೊಂದು ಪಕ್ಕಾ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಎಂಬುದು ಗೊತ್ತಾಗುತ್ತಿದೆ. ಟೀಸರ್‌ನಲ್ಲಿ ಹೆಚ್ಚೇನೂ ಕಥೆ ಬಿಟ್ಟುಕೊಟ್ಟಿಲ್ಲ. ಆದರೆ ಅಸಮಾನತೆ ಮತ್ತು ಹೋರಾಟದ ಕಥೆ ಈ ಸಿನಿಮಾದಲ್ಲಿ ಇರಬಹುದು ಎಂಬ ಅನುಮಾನ ಮೂಡಿದೆ.

ಇದನ್ನೂ ಓದಿ: ಧನುಷ್ ಜತೆ ಡೇಟಿಂಗ್ ಗಾಸಿಪ್: ಪ್ರೀತಿ ಬಗ್ಗೆ ಮನಸಾರೆ ಮಾತನಾಡಿದ ಮೃಣಾಲ್ ಠಾಕೂರ್

‘ಓಂ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ಧನುಷ್ ರಗಡ್ ಅವತಾರ ತಾಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಧನುಷ್ ಲುಕ್ ವೈರಲ್ ಆಗಿದೆ. ಪೋಸ್ಟರ್‌ನಲ್ಲಿ ಬಳಸಿರುವ ಡಾರ್ಕ್ ಕಲರ್ ಗ್ರೇಡಿಂಗ್ ಮತ್ತು ವಿನ್ಯಾಸವು ಗಮನ ಸೆಳೆದಿದೆ. ಧನುಷ್ ಮತ್ತು ಮಮ್ಮುಟ್ಟಿ ಅವರ ನಡುವಿನ ಕಾಂಬಿನೇಷನ್ ಸೀನ್‌ಗಳನ್ನು ನೋಡಲು ಸಿನಿಪ್ರಿಯರು ಕಾಯುತ್ತಿದ್ದಾರೆ. ಸಾಯಿ ಅಭ್ಯಂಕರ್ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಧನುಷ್ ಅವರ ಸ್ವಂತ ಬ್ಯಾನರ್ ‘ವಂಡರ್‌ಬಾರ್ ಫಿಲ್ಮ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಹವಾಮಾನ ತಜ್ಞರು – Kannada News | Rumours of Severe Drought in Karnataka Are False, Say Meteorologists; Farmers Need Not Worry

ಪ್ರಾತಿನಿಧಿಕ ಚಿತ್ರImage Credit source: Getty images

ಬೆಂಗಳೂರು, ಜೂನ್​​ 18: ಇತ್ತೀಚೆಗೆ ರಾಜ್ಯದಲ್ಲಿ ಮಳೆ (rain) ಮತ್ತು ಬರಗಾಲದ (drought) ಕುರಿತಾದ ಸುದ್ದಿಯೊಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮಳೆಯಾಗುವುದಿಲ್ಲ, ಭೀಕರ ಬರಗಾಲ ಆವರಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದರಿಂದ ಅನ್ನದಾತರು ಕಂಗಾಲಾಗಿದ್ದಾರೆ. ಆದರೆ, ಈ ಆತಂಕಕ್ಕೆ ಹವಾಮಾನ ತಜ್ಞರು ಹಾಗೂ ವಿಜ್ಞಾನಿಗಳು ಮಹತ್ವದ ಮಾಹಿತಿ ನೀಡುವ ಮೂಲಕ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಯಾವುದೇ ಭೀಕರ ಬರಗಾಲ ಬರುವುದಿಲ್ಲ ಹಾಗೂ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಬರಗಾಲದ ವದಂತಿಗೆ ಸ್ಪಷ್ಟನೆ ನೀಡಿದ ತಜ್ಞರು
  • ಎಲ್ ನಿನೋ ಪರಿಣಾಮ ಮತ್ತು ರಾಜ್ಯದ ಮಳೆ ಕೊರತೆ
  • ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಲ್ಲ ಎಂದ ತಜ್ಞರು

ರೈತರು ಆತಂಕ ಪಡುವ ಅಗತ್ಯವಿಲ್ಲ: ಡಾ. ಎಂ.ಬಿ. ರಾಜೇಗೌಡ

ಈ ಕುರಿತು ಟಿವಿ9 ಜೊತೆಗೆ ಮಾತನಾಡಿದ ಕೃಷಿ ಹವಾಮಾನ ತಜ್ಞ ಡಾ. ಎಂ.ಬಿ. ರಾಜೇಗೌಡ, ‘ರಾಜ್ಯದಲ್ಲಿ ಭೀಕರ ಬರಗಾಲ ಬರುತ್ತದೆ ಎಂಬುದು ಸುಳ್ಳು, ರೈತರು ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಎಲ್ ನಿನೋ ಎಫೆಕ್ಟ್ ಇರುವುದು ನಿಜ. ಆದರೆ, -64% ಮಳೆ ಕೊರತೆಯಾಗುತ್ತದೆ ಎಂಬ ವದಂತಿ ಸಂಪೂರ್ಣ ಸುಳ್ಳು. ಇತಿಹಾಸದಲ್ಲಿ ಇಷ್ಟು ದೊಡ್ಡ ಮಟ್ಟದ ಮಳೆ ಕೊರತೆಯಾಗಲು ಸಾಧ್ಯವೇ ಇಲ್ಲ. ಎಲ್ ನಿನೋ ಪ್ರಭಾವದಿಂದ ರಾಜ್ಯದಲ್ಲಿ ಸದ್ಯ ಕೇವಲ -8% ಮಳೆ ಕೊರತೆ ಸಂಭವಿಸುವ ಸಾಧ್ಯತೆಯಿದೆ. ಹಿಂದೆ 1964-65ರಲ್ಲಿ ಶೇಕಡಾ -28% ಮಳೆ ಕೊರತೆಯಾದಾಗ ಇಡೀ ದೇಶವೇ ನಲುಗಿಹೋಗಿತ್ತು, ಆದರೆ ಸದ್ಯದ ಪರಿಸ್ಥಿತಿ ಹಾಗಾಗುವುದಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ, ಮಳೆಯಬ್ಬರ!

‘ಎಲ್ ನಿನೋ ನೆಗೆಟಿವ್ ಇಂಪ್ಯಾಕ್ಟ್ ಪ್ರತಿ 4 ವರ್ಷಗಳಿಗೊಮ್ಮೆ ನಡೆಯುವ ಸಾಮಾನ್ಯ ನೈಸರ್ಗಿಕ ವಿದ್ಯಮಾನವಾಗಿದೆ. ಇದರಿಂದ -4 ರಿಂದ -8% ಮಳೆ ಕೊರತೆಯಾಗಬಹುದಾದರೂ, ಮಳೆ ಹಂಚಿಕೆ ಸಮರ್ಪಕವಾಗಿದ್ದರೆ ಕೃಷಿ ಚಟುವಟಿಕೆಗಳ ಮೇಲೆ ಯಾವುದೇ ದುಷ್ಪರಿಣಾಮ ಬೀರದು. ನೆಗೆಟಿವ್ ನಾರ್ಮಲ್‌ನಿಂದಾಗಿ ಡ್ಯಾಮ್‌ಗಳು ತುಂಬಬಹುದು, ಆದಾಗ್ಯೂ, ಕೃಷಿಗೆ ಇದರಿಂದ ಯಾವುದೇ ಧಕ್ಕೆ ಇಲ್ಲ. ಇದರ ಮಧ್ಯೆ ವೆಸ್ಟರ್ನ್‌ ಡಿಸ್ಟ್ರಬೆನ್ಸ್ ಆರಂಭವಾಗಿರುವುದರಿಂದ ಉತ್ತರ ಮತ್ತು ಮಧ್ಯ ಭಾರತದಲ್ಲಿ ಉತ್ತಮ ಮಳೆಯಾಗುತ್ತಿರುವುದು ಶುಭ ಸೂಚಕವಾಗಿದೆ. ಅಲ್ಲದೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಬಿತ್ತನೆ ಕಾರ್ಯ ಹೆಚ್ಚಾಗಿದೆ. ಕಳೆದ ಸಲ 14 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿದ್ದ ಬಿತ್ತನೆ ಕ್ಷೇತ್ರ, ಈ ಬಾರಿ 17 ಲಕ್ಷ ಹೆಕ್ಟೇರ್‌ಗೆ ವಿಸ್ತರಿಸಿದೆ. ಹೀಗಾಗಿ ರೈತಾಪಿ ವರ್ಗ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ’ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಶೇ 10ರಷ್ಟು ಮಳೆ ಕಡಿಮೆಯಾಗುವ ಸಾಧ್ಯತೆಯಿದೆ: ವಿಜ್ಞಾನಿ ಸಿ.ಎಸ್. ಪಾಟೀಲ್

ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್​​ ಟಿವಿ9ಗೆ ಪ್ರತಿಕ್ರಿಯಿಸಿದ್ದು, ‘ಕಳೆದ ವರ್ಷ ರಾಜ್ಯಾದ್ಯಂತ ಶೇಕಡಾ 14ರಷ್ಟು ಮಳೆಯ ಪ್ರಮಾಣ ಹೆಚ್ಚಾಗಿತ್ತು. ಉತ್ತರ ಒಳನಾಡಿನಲ್ಲಿ 50% ರಷ್ಟು ಮಳೆ ಹೆಚ್ಚಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ 4% ರಷ್ಟು ಮಳೆ ಕಡಿಮೆಯಾಗಿತ್ತು. ಆದರೆ ಈ ವರ್ಷ ಎಲ್ ನಿನೋ ಎಫೆಕ್ಟ್‌ನಿಂದಾಗಿ ರಾಜ್ಯದಲ್ಲಿ ಸರಾಸರಿ ಶೇಕಡಾ 10ರಷ್ಟು ಮಳೆ ಕಡಿಮೆಯಾಗುವ ಸಾಧ್ಯತೆಯಿದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಪೂರ್ಣ ಬತ್ತಿದ ಕಾವೇರಿ ನದಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರದ ಭೀತಿ

ಒಟ್ಟಾರೆಯಾಗಿ, ರಾಜ್ಯದಲ್ಲಿ ಭೀಕರ ಬರಗಾಲ ಬರಲಿದೆ ಎಂಬ ವದಂತಿಗೆ ತಜ್ಞರು ಮತ್ತು ವಿಜ್ಞಾನಿಗಳು ಸ್ಪಷ್ಟನೆ ನೀಡಿದ್ದಾರೆ. ಈ ಬಾರಿ ಒಂದಷ್ಟು ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇದೆಯೇ ಹೊರತು, ಅಷ್ಟೊಂದು ದೊಡ್ಡ ಮಟ್ಟದಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ರೈತರಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಎಸಿಯಲ್ಲಿ ಹೆಚ್ಚು ಸಮಯ ಕಳೆಯುವುದರಿಂದ ಎಲುಬುಗಳು ಬೇಗ ದುರ್ಬಲವಾಗುತ್ತವೆಯೇ? ತಜ್ಞರು ಹೇಳುವುದೇನು? – Kannada News | Does AC Cause Joint Pain? What Orthopedic Doctors Want You to Know

ಇತ್ತೀಚಿನ ದಿನಗಳಲ್ಲಿ ಜನ ಬಿಸಿಲಾಗಲಿ, ಮಳೆಯಾಗಲಿ ಮನೆ, ಆಫೀಸ್ ಹಾಗೆಯೇ ಸಂಚರಿಸುವ ವಾಹನಗಳಲ್ಲಿಯೂ ಏರ್ ಕಂಡೀಷನರ್ (AC) ಬಳಕೆ ಮಾಡಲು ಆರಂಭ ಮಾಡಿದ್ದಾರೆ. ಹಾಗಾಗಿ ಇದೊಂದು ಸಾಮಾನ್ಯ ಅಭ್ಯಾಸವಾಗಿಬಿಟ್ಟಿದೆ. ಆದರೆ, ಎಸಿಯಲ್ಲಿ ಹೆಚ್ಚು ಸಮಯ ಇರುವವರಲ್ಲಿ ಎಲುಬುಗಳು ಬೇಗ ದುರ್ಬಲವಾಗುತ್ತವೆಯೇ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಎಸಿಯ ತಂಪು ಗಾಳಿ ನೇರವಾಗಿ ಎಲುಬುಗಳಿಗೆ ಹಾನಿ ಮಾಡುವುದಿಲ್ಲ. ಆದರೆ ಕೆಲವು ಪರೋಕ್ಷ ಪರಿಣಾಮಗಳು ಎಲುಬಿನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾದರೆ ಎಸಿ ಯಾವ ರೀತಿ ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ, ಯಾವ ರೀತಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಎಲುಬುಗಳ ಮೇಲೆ ಎಸಿಯ ಪರಿಣಾಮ

ಸಾಮಾನ್ಯವಾಗಿ ಎಲುಬುಗಳ ಬಲವು ಮುಖ್ಯವಾಗಿ ಕ್ಯಾಲ್ಸಿಯಂ, ವಿಟಮಿನ್ ಡಿ, ಸಮತೋಲಿತ ಆಹಾರ ಹಾಗೂ ನಿಯಮಿತ ವ್ಯಾಯಾಮದ ಮೇಲೆ ಅವಲಂಬಿತವಾಗಿರುತ್ತದೆ. ದಿನದ ಬಹುಪಾಲು ಸಮಯವನ್ನು ಎಸಿ ಕೊಠಡಿಗಳಲ್ಲೇ ಕಳೆಯುವುದರಿಂದ ಸೂರ್ಯನ ಬೆಳಕಿನ ಸಂಪರ್ಕ ಕಡಿಮೆಯಾಗುತ್ತದೆ. ಇದರಿಂದ ದೇಹದಲ್ಲಿ ವಿಟಮಿನ್ ಡಿ ಕೊರತೆ ಉಂಟಾಗಬಹುದು. ದೀರ್ಘಕಾಲದ ವಿಟಮಿನ್ ಡಿ ಕೊರತೆ ಎಲುಬುಗಳನ್ನು ದುರ್ಬಲಗೊಳಿಸಿ ಆಸ್ಟಿಯೋಪೊರೋಸಿಸ್‌ನಂತಹ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ.

ಕೀಲು ನೋವು ಹೆಚ್ಚಾಗುತ್ತದೆಯೇ?

ಎಸಿ ಬಳಕೆಯಿಂದ ಆರ್ಥ್ರೈಟಿಸ್ ಉಂಟಾಗುವುದಿಲ್ಲ. ಆದರೆ ಈಗಾಗಲೇ ಕೀಲು ನೋವು ಅಥವಾ ಆಸ್ಟಿಯೋಆರ್ಥ್ರೈಟಿಸ್ ಇರುವವರಿಗೆ ತಂಪಾದ ವಾತಾವರಣದಿಂದ ನೋವು, ಬಿಗಿತದ ಅನುಭವವಾಗಬಹುದು.

ಯಾವ ರೀತಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು?

  • ಪ್ರತಿದಿನ ಕನಿಷ್ಠ 10– 15 ನಿಮಿಷ ಸೂರ್ಯನ ಬೆಳಕಿನಲ್ಲಿ ಸಮಯ ಕಳೆಯಬೇಕು.
  • ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಸಮೃದ್ಧ ಆಹಾರ ಸೇವಿಸಿ.
  • ಹಾಲು, ಮೊಸರು, ಚೀಸ್ ಮುಂತಾದ ಹಾಲು ಉತ್ಪನ್ನಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಿ.
  • ಪ್ರತಿದಿನ ನಡೆಯುವುದು ಅಥವಾ ಲಘು ವ್ಯಾಯಾಮ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ.
  • ಎಸಿ ತಾಪಮಾನವನ್ನು 24°C ಇಡುವುದು ಉತ್ತಮ.
  • ದೀರ್ಘಕಾಲ ಒಂದೇ ಭಂಗಿಯಲ್ಲಿ ಕುಳಿತುಕೊಳ್ಳುವುದನ್ನು ತಪ್ಪಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಂದಲ್ಲ, ಎರಡಲ್ಲ, ಮೂರು ದಾಖಲೆಗಳನ್ನು ನಿರ್ಮಿಸಿದ ಸ್ಮೃತಿ ಮಂಧಾನ – Kannada News | Smriti Mandhana T20 WC Brilliance: Breaks 3 Records, Leads India to Victory

2026 ರ ಮಹಿಳಾ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ, ಟಿ20 ವಿಶ್ವಕಪ್​ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು (PC-PTI).

Source link

ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ – Kannada News | Illegal liquor worth over Rs 4 crore was destroyed in Gujarat Vadodara

ವಡೋದರಾ, ಜೂನ್ 18: ಗುಜರಾತ್‌ನ ಕಠಿಣ ಮದ್ಯ ನಿಷೇಧ ಕಾಯ್ದೆಯಡಿ ವಡೋದರಾ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ವಡೋದರಾದ ಕೊಯಲಿ ಚೆಕ್‌ಪೋಸ್ಟ್ ಬಳಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾಗಿದ್ದ ಬರೋಬ್ಬರಿ 4 ಕೋಟಿ ರೂ.ಗೂ ಅಧಿಕ ಮೌಲ್ಯದ ಅಕ್ರಮ ಮದ್ಯ ಮತ್ತು ಬಿಯರ್ ಬಾಟಲಿಗಳನ್ನು ರೋಡ್ ರೋಲರ್ ಹಾಗೂ ಬುಲ್ಡೋಜರ್ ಹರಿಸುವ ಮೂಲಕ ಕಾನೂನುಬದ್ಧವಾಗಿ ಸಂಪೂರ್ಣವಾಗಿ ನಾಶಪಡಿಸಲಾಗಿದೆ. ಗುಜರಾತ್ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಜಾರಿಯಲ್ಲಿದ್ದು, ಅಕ್ರಮ ಮದ್ಯದ ದಂಧೆಯನ್ನು ಮಟ್ಟಹಾಕಲು ಕಾನೂನು ಜಾರಿ ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ವಡೋದರಾ ನಗರದಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿತ್ತು. ಜಪ್ತಿಯಾದ ಸಾವಿರಾರು ಮದ್ಯದ ಬಾಟಲಿಗಳನ್ನು ಮೈದಾನದಲ್ಲಿ ಸಾಲಾಗಿ ಜೋಡಿಸಿ, ಅವುಗಳ ಮೇಲೆ ರೋಡ್ ರೋಲರ್‌ ಹಾಗೂ ಬುಲ್ಡೋಜರ್‌ಗಳನ್ನು ಹರಿಸುವ ಮೂಲಕ ಕ್ಷಣಮಾತ್ರದಲ್ಲಿ ಪುಡಿಪುಡಿ ಮಾಡಲಾಯಿತು.

(Video Source: PTI)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ – Kannada News | BJP MLAs Are Against Him: Surjewala saprks R. Ashok and B.Y. Vijayendra

ಬೆಂಗಳೂರು, ಜೂನ್​ 18: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಪಕ್ಷದ ಐದೂ ಅಭ್ಯರ್ಥಿಗಳು ಮೊದಲ ಸುತ್ತಿನಲ್ಲೇ ಭಾರಿ ಬಹುಮತದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಮಾತನಾಡಿ, 135 ಮತಗಳನ್ನು ನಿರೀಕ್ಷಿಸಲಾಗಿದ್ದರೂ, ಪಕ್ಷಕ್ಕೆ 151 ಮತಗಳು ದೊರೆತಿವೆ ಎಂದು ತಿಳಿಸಿದರು. ಈ ಗೆಲುವಿಗೆ ಕರ್ನಾಟಕದ ಶಾಸಕರ ಪಕ್ಷ ನಿಷ್ಠೆ ಹಾಗೂ ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳ ಸಕಾರಾತ್ಮಕ ಪರಿಣಾಮವೇ ಕಾರಣ ಎಂದಿದ್ದಾರೆ. ಬಿಜೆಪಿ 64 ಮತಗಳಲ್ಲಿ 7 ಮತಗಳ ಕೊರತೆ ಕಂಡಿದ್ದರೆ, ಜೆಡಿಎಸ್‌ಗೆ 18ರಲ್ಲಿ 14 ಮತಗಳು ಮಾತ್ರ ಸಿಕ್ಕಿವೆ. ಐದು ಗ್ಯಾರಂಟಿಗಳು ಕರ್ನಾಟಕದ ಜನರ ಜೀವನವನ್ನು ಬದಲಾಯಿಸಿವೆ. ಬಿಜೆಪಿ ಮತ್ತು ಜೆಡಿಎಸ್‌ನ ನಕಾರಾತ್ಮಕ ರಾಜನೀತಿಯನ್ನು ಶಾಸಕರೇ ತಿರಸ್ಕರಿಸಿದ್ದಾರೆ ಎಂದರು. ಇದು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದ ಅಭಿವೃದ್ಧಿಯ ಹಾದಿಗೆ ಸಿಕ್ಕ ಸಕಾರಾತ್ಮಕ ಮತ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಐಎಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಹಲವು ಇಲಾಖೆಗಳಿಗೆ ಹೊಸ ಅಧಿಕಾರಿಗಳ ನೇಮಕ – Kannada News | Major Bureaucratic Reshuffle in Karnataka: Several Top IAS Officers Transferred to Key Departments

ಬೆಂಗಳೂರು, ಜೂನ್​​ 18: ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿದ್ದು, ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯುಕ್ತ ಮನಿವಣ್ಣನ್ ಪಿ. ಅವರಿಗೆ, ಬೆಂಗಳೂರು ನಗರ ಭೂ ಸಾರಿಗೆ ನಿರ್ದೇಶನಾಲಯದ (DULT) ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ನವದೆಹಲಿಯ ಕರ್ನಾಟಕ ಭವನದಲ್ಲಿ ರೆಸಿಡೆಂಟ್ ಕಮಿಷನರ್ ಹುದ್ದೆಯಿಂದ ಇಂಕೊಂಗ್ಲಾ ಜಮೀರ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕರ್ನಾಟಕ ಭವನದ ಸಮನ್ವಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಡಾ. ಪ್ರಸಾದ್ ಎನ್.ವಿ. ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಸಮೀರ್ ಶುಕ್ಲಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ನವದೆಹಲಿಯ ಕರ್ನಾಟಕ ಭವನದಲ್ಲಿ ರೆಸಿಡೆಂಟ್ ಕಮಿಷನರ್ ಆಗಿ ನೇಮಿಸಲಾಗಿದೆ. ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಸರ್ಕಾರಿ ನೌಕರರ 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ

ಮಾಡಲಾಗಿದ್ದು, ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿದೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಿಂದ ಶಿವಕುಮಾರ್ ಕೆ.ಬಿ. ವರ್ಗಾವಣೆಯಾಗಿದ್ದು, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಅವರು ನೇಮಕಗೊಂಡಿದ್ದಾರೆ. ಡಾ. ರಾಮ ಪ್ರಸಾತ್ ಮನೋಹರ್ ವಿ. ಅವರಿಗೆ ಪ್ರವಾಸೋದ್ಯಮ ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಡಾ. ಸತೀಶ ಬಿ.ಸಿ. ವರನ್ನು ಕೃಷಿ ಇಲಾಖೆಯ ಆಯುಕ್ತರಾಗಿ ನೇಮಕ ಮಾಡಲಾಗಿದ್ದು, ಅಕ್ರಮ್ ಪಾಶಾ ಅವರನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಹಾಗೂ ಆರೋಗ್ಯ ನಿರ್ದೇಶನಾಲಯದ ಮಿಷನ್ ನಿರ್ದೇಶಕರಾಗಿ ನೇಮಿಸಲಾಗಿದೆ. ರಘುನಂದನ್ ಮೂರ್ತಿ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದ್ದು, ಖಜಾನೆ ಇಲಾಖೆಯ ಆಯುಕ್ತ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ಇವರು ಮುಂದುವರಿಸಲಿದ್ದಾರೆ.

ನಿತೀಶ್ ಕೆ. ಅವರನ್ನು ನಗರಪಾಲಿಕೆ ಆಡಳಿತ ನಿರ್ದೇಶಕರಾಗಿ, ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (MSME) ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಗಜಾನನ ಬಾಳೆ ಅವರನ್ನು ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ನೇಮಿಸಲಾಗಿದ್ದು, ಜೊತೆಗೆ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಮತ್ತು ಭೂಸ್ವಾಧೀನ ವಿಭಾಗದ ಮಹಾಪ್ರಬಂಧಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ಇವರಿಗೆ ವಹಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪ್ರತಿದಿನ ಕೇವಲ 2 ಲವಂಗ ತಿಂದು ನೋಡಿ! ನಿಮಗೆ ಈ ಆರೋಗ್ಯ ಸಮಸ್ಯೆಯೇ ಬರಲ್ಲ – Kannada News | Why You Should Add Cloves To Your Daily Routine

ಅಡುಗೆ ಮನೆಯಲ್ಲಿ ಸುಲಭವಾಗಿ ಸಿಗುವ ಮಸಾಲೆ ಪದಾರ್ಥಗಳಲ್ಲಿ ಲವಂಗವೂ (Cloves) ಒಂದು. ಆಹಾರಕ್ಕೆ ರುಚಿ ಮತ್ತು ಸುವಾಸನೆ ನೀಡುವುದಷ್ಟೇ ಅಲ್ಲ, ಆರೋಗ್ಯಕ್ಕೂ ಅನೇಕ ರೀತಿಯಲ್ಲಿ ಸಹಕಾರಿಯಾಗಿದೆ. ಲವಂಗದಲ್ಲಿರುವ ಯೂಜಿನಾಲ್ (Eugenol), ಆಂಟಿಆಕ್ಸಿಡೆಂಟ್‌ಗಳು ಮತ್ತು ಪೋಷಕಾಂಶಗಳು ದೇಹವನ್ನು ಹಲವು ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತವೆ. ಪ್ರತಿದಿನ 1 ಅಥವಾ 2 ಲವಂಗಗಳನ್ನು ಸೇವಿಸುವುದರಿಂದ ನಾವು ಊಹಿಸಲು ಸಾಧ್ಯವಾಗದಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹೌದು, ಕೇವಲ ಲವಂಗ ತಿನ್ನುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ

ಲವಂಗದಲ್ಲಿ ವಿಟಮಿನ್ ಸಿ ಮತ್ತು ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಇವು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿ, ಸೋಂಕುಗಳು ಮತ್ತು ಋತುಮಾನದ ಕಾಯಿಲೆಗಳ ವಿರುದ್ಧ ಹೋರಾಡಲು ನೆರವಾಗುತ್ತವೆ.

ಬಾಯಿ ಮತ್ತು ಹಲ್ಲಿನ ಆರೋಗ್ಯಕ್ಕೆ ಉತ್ತಮ

ಲವಂಗದಲ್ಲಿ ನೈಸರ್ಗಿಕ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಫಂಗಲ್ ಗುಣಗಳಿವೆ. ಲವಂಗವನ್ನು ಜಗಿಯುವುದರಿಂದ ಬಾಯಿಯ ದುರ್ವಾಸನೆ ಕಡಿಮೆಯಾಗುತ್ತದೆ. ಜೊತೆಗೆ ಹಲ್ಲಿನ ನೋವು, ಒಸಡುಗಳ ಉರಿಯೂತ ಮತ್ತು ಬಾಯಿಯಲ್ಲಿನ ಬ್ಯಾಕ್ಟೀರಿಯಾಗಳನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ.

ಜೀರ್ಣಕ್ರಿಯೆ ಸುಧಾರಿಸುತ್ತದೆ

ಗ್ಯಾಸ್ಟ್ರಿಕ್, ಅಜೀರ್ಣ, ಹೊಟ್ಟೆ ಉಬ್ಬರ ಮತ್ತು ಮಲಬದ್ಧತೆ ಸಮಸ್ಯೆಗಳಿಂದ ಬಳಲುವವರಿಗೆ ಲವಂಗ ಉತ್ತಮ ನೆರವು ನೀಡುತ್ತದೆ. ಇದು ಜೀರ್ಣರಸಗಳ ಉತ್ಪಾದನೆಯನ್ನು ಉತ್ತೇಜಿಸಿ ಆಹಾರ ಸುಲಭವಾಗಿ ಜೀರ್ಣವಾಗಲು ಸಹಾಯ ಮಾಡುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ನೆರವಾಗುತ್ತದೆ

ಕೆಲವು ಅಧ್ಯಯನಗಳ ಪ್ರಕಾರ, ಲವಂಗದಲ್ಲಿರುವ ಯೂಜಿನಾಲ್ ಮತ್ತು ಫ್ಲೇವನಾಯ್ಡ್‌ಗಳು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಸುಧಾರಿಸಲು ಸಹಾಯ ಮಾಡಬಹುದು. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿಡಲು ನೆರವಾಗುತ್ತದೆ.

ಇದನ್ನೂ ಓದಿ: ರಾತ್ರಿ ಮಲಗುವ ಮುನ್ನ ಒಂದು ಲವಂಗ ಸೇವನೆ ಮಾಡಿದ್ರೆ ಏನಾಗುತ್ತೆ ನೋಡಿ!

ಹೃದಯ ಮತ್ತು ಯಕೃತ್ತಿನ ಆರೋಗ್ಯಕ್ಕೆ ಸಹಕಾರಿ

ಲವಂಗದಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಜೊತೆಗೆ ಯಕೃತ್ತಿನಲ್ಲಿ ಸಂಗ್ರಹವಾಗುವ ಹಾನಿಕಾರಕ ವಿಷಪದಾರ್ಥಗಳನ್ನು ಹೊರಹಾಕುವಲ್ಲಿ ಸಹಕಾರಿಯಾಗಿದೆ.

ಹೇಗೆ ಸೇವಿಸಬಹುದು?

ಪ್ರತಿದಿನ ಬೆಳಿಗ್ಗೆ ಅಥವಾ ಸಂಜೆ 1– 2 ಲವಂಗಗಳನ್ನು ಜಗಿಯಬಹುದು. ಅಥವಾ ಲವಂಗವನ್ನು ನೀರಿನಲ್ಲಿ ಕುದಿಸಿ ಲವಂಗದ ನೀರನ್ನು ಕುಡಿಯಬಹುದು. ಲವಂಗ ಆರೋಗ್ಯಕ್ಕೆ ಪ್ರಯೋಜನಕಾರಿಯಾದರೂ, ಅತಿಯಾಗಿ ಸೇವಿಸುವುದು ಸೂಕ್ತವಲ್ಲ. ಯಾವುದೇ ಆರೋಗ್ಯ ಸಮಸ್ಯೆ ಇದ್ದರೆ ವೈದ್ಯರ ಸಲಹೆಯೊಂದಿಗೆ ಸೇವಿಸುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೈಲಿನಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ನಾಗರಾಜ್ ಆರೋಪ – Kannada News | Sandhya Nagaraj alleges Pavitra Gowda getting special treatment in Parappana Agrahara Jail

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾದ ನಟ ದರ್ಶನ್ ಅವರಿಗೆ ಜೈಲಿನಲ್ಲಿ ರಾಜಾಥಿತ್ಯ ನೀಡಿದ್ದು ಈ ಮೊದಲು ಭಾರಿ ವಿವಾದಕ್ಕೆ ಕಾರಣ ಆಗಿತ್ತು. ಈಗ ಮತ್ತೋರ್ವ ಆರೋಪಿ ಪವಿತ್ರಾ ಗೌಡ (Pavitra Gowda) ಅವರಿಗೂ ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸವಲತ್ತುಗಳನ್ನು ನೀಡಲಾಗುತ್ತಿದೆ ಎಂದು ಈ ಹಿಂದೆ ವಿಚಾರಣಾಧೀನ ಕೈದಿ ಆಗಿದ್ದ ಸಂಧ್ಯಾ ನಾಗರಾಜ್ ಅವರು ಆರೋಪ ಮಾಡಿದ್ದಾರೆ. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಧ್ಯಾ ನಾಗರಾಜ್ ವಿರುದ್ಧವೇ ಪವಿತ್ರಾ ಗೌಡ ಅವರು ದೂರು ನೀಡಿದ್ದಾರೆ. ಈ ಬಗ್ಗೆ ಸಂಧ್ಯಾ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಪವಿತ್ರಾ ಗೌಡ ಅವರನ್ನು ಇನ್ನುಳಿದ ಆರೋಪಿಗಳ ರೀತಿ ನಡೆಸಿಕೊಳ್ಳುತ್ತಿಲ್ಲ. ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು 3 ಜನ ಆಳುಗಳು ಇದ್ದಾರೆ. ಜೈಲಿನ ಒಳಗೆ ಕರೆದುಕೊಂಡು ಹೋದರೆ ಅವರು ಯಾರು ಅಂತ ನಾನು ತೋರಿಸುತ್ತೇನೆ. ಅವರಿಗೆ ಸಂಬಳ ಕೊಟ್ಟಿದ್ದರ ಬಗ್ಗೆ ಮಾತನಾಡಿದ್ದು ನನ್ನ ಕಿವಿಗೆ ಬಿದ್ದಿದೆ. ಸುಮ್ಮನೆ ಆರೋಪ ಮಾಡೋಕೆ ನಾನು ಪವಿತ್ರಾ ಗೌಡಗೆ ಶತ್ರು ಅಲ್ಲ. ಜೈಲು ಸಿಬ್ಬಂದಿಗೆ ಬರುವ ಊಟವನ್ನು ಪವಿತ್ರಾಗೆ ಕೊಡುತ್ತಾರೆ’ ಎಂದು ಸಂಧ್ಯಾ ನಾಗರಾಜ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಳಗ್ಗೆ ಬೇಗ ಏಳುವುದರಿಂದ ನೀವು ಈ ಎಲ್ಲಾ ಪ್ರಯೋಜನಗಳನ್ನು ಪಡೆಯಬಹುದು – Kannada News | What are the benefits of waking up early in the morning?

ಸೂರ್ಯ ನೆತ್ತಿಗೆ ಬರುವವರೆಗೂ ಮಲಗಿರಬಾರದು, ಬೆಳಗ್ಗೆ ಬೇಗನೆ (early morning) ಎದ್ದು ನಿತ್ಯ ಕರ್ಮಗಳನ್ನೆಲ್ಲಾ ಮುಗಿಸಬೇಕು ಎಂದು ಹಿರಿಯರು ಹೇಳುವ ಮಾತನ್ನು ನೀವು ಸಹ ಕೇಳಿರಬಹುದಲ್ವಾ. ಆದರೆ ಇಂದಿನ ದಿನಗಳಲ್ಲಿ ಅನೇಕರು ತಡವಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುತ್ತಾರೆ. ಈ ಅಭ್ಯಾಸವು ಜಡತ್ವ ಮಾತ್ರವಲ್ಲದೆ ಅನೇಕ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಹೀಗಿರುವಾಗ ಜೀವನಶೈಲಿಯಲ್ಲಿ ಕೊಂಚ ಬದಲಾವಣೆಯನ್ನು ಮಾಡಿ, ರಾತ್ರಿ ಬೇಗನೇ ಮಲಗಿ ಮುಂಜಾನೇ ಬೇಗನೆ ಏಳುವ ಮೂಲಕ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಈ ಅಭ್ಯಾಸ ನಿಮ್ಮ ನಿತ್ಯ ಕೆಲಸಗಳನ್ನು ಬೇಗ ಮಾಡಿ ಮುಗಿಸಲು ಸಹಾಯ ಮಾಡುವುದಲ್ಲದೆ ನಿಮ್ಮ ದೇಹ ಮತ್ತು ಮನಸ್ಸಿಗೂ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತವೆ. ಈ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಬೆಳಗ್ಗೆ ಬೇಗ ಏಳುವುದರಿಂದ ಲಭಿಸುವ ಪ್ರಯೋಜನಗಳೇನು?

 ಒತ್ತಡ ದೂರವಾಗುತ್ತದೆ: ಬೆಳಿಗ್ಗೆ ತಡವಾಗಿ ಏಳುವುದರಿಂದ ಪ್ರತಿಯೊಂದು ಕೆಲಸವೂ ವಿಳಂಬವಾಗುತ್ತದೆ. ಬೆಳಿಗ್ಗೆಯಿಂದಲೇ ಆತುರ ಪ್ರಾರಂಭವಾಗುತ್ತದೆ. ಇದು ಮನಸ್ಸಿನ ಮೇಲೆ ಒತ್ತಡವನ್ನುಂಟುಮಾಡುತ್ತವೆ, ಇದು ಒತ್ತಡವನ್ನು ಹೆಚ್ಚಿಸುತ್ತದೆ. ನೀವು ಬೇಗನೆ ಎದ್ದರೆ, ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಮತ್ತು ಆರಾಮವಾಗಿ ಪೂರ್ಣಗೊಳಿಸಬಹುದು. ಬೇಗನೆ ಏಳುವುದು ನಿಮ್ಮ ಮನಸ್ಸು ತಾಜಾವಾಗಿರುತ್ತದೆ ಮತ್ತು ಹಾರ್ಮೋನುಗಳು ನಿಯಂತ್ರಣದಲ್ಲಿರುತ್ತವೆ.

ಬೊಜ್ಜಿನ ಸಮಸ್ಯೆಯನ್ನು ದೂರ ಮಾಡಬಹುದು: ಬೆಳಿಗ್ಗೆ ಬೇಗನೆ ಏಳುವುದರ ಒಂದು ಪ್ರಯೋಜನವೆಂದರೆ ನಿಮಗೆ ವ್ಯಾಯಾಮಕ್ಕೆ ಸಾಕಷ್ಟು ಸಮಯ ಸಿಗುತ್ತದೆ. ಬೆಳಿಗ್ಗೆ ವ್ಯಾಯಾಮ ಮಾಡುವುದರಿಂದ ದಿನವಿಡೀ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಬೆಳಗಿನ ವ್ಯಾಯಾಮವು ತ್ವರಿತ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಅಲ್ಲದೆ ವ್ಯಾಯಾಮದ ಮೂಲಕ ಹೃದಯದ ಆರೋಗ್ಯವನ್ನೂ ಸುಧಾರಿಸಬಹುದು.

ಶ್ವಾಸಕೋಶವನ್ನು ಬಲಪಡಿಸುತ್ತದೆ: ಬೆಳಗಿನ ತಾಜಾ ಗಾಳಿಯನ್ನು ಉಸಿರಾಡುವುದರಿಂದ ಶ್ವಾಸಕೋಶಗಳು ಆರೋಗ್ಯವಾಗಿರುತ್ತವೆ. ನಿಮ್ಮ ಶ್ವಾಸಕೋಶವನ್ನು ಸದೃಢವಾಗಿಡಲು, ಬೆಳಿಗ್ಗಿನ ಹೊತ್ತು ಸ್ವಚ್ಛ ಪರಿಸರದಲ್ಲಿ ವ್ಯಾಯಾಮ ಮಾಡಿ. ಬೆಳಗ್ಗೆ ಬೇಗ ಎದ್ದು ನಂತರ, ಉದ್ಯಾನವನ ಅಥವಾ ಶಾಂತಿಯುತ ಸ್ಥಳಕ್ಕೆ ಹೋಗಿ ಆಳವಾದ, ದೀರ್ಘ ಉಸಿರನ್ನು ತೆಗೆದುಕೊಳ್ಳಿ. ಇದು ನಿಮ್ಮ ಶ್ವಾಸಕೋಶಕ್ಕೆ ತಾಜಾ ಗಾಳಿಯನ್ನು ಒದಗಿಸುತ್ತವೆ.

ಇದನ್ನೂ ಓದಿ: ಸಂತೋಷದಿಂದ ಜೀವನ ನಡೆಸಲು ನೀವು ಮಾಡಬೇಕಾದದ್ದು ಇಷ್ಟೆ

ನಿದ್ರೆಯನ್ನು ಸುಧಾರಿಸುತ್ತದೆ: ಬೆಳಿಗ್ಗೆ ಬೇಗನೆ ಎದ್ದೇಳುವ ಜನರು ಇತರರಿಗಿಂತ ಚೆನ್ನಾಗಿ ನಿದ್ರಿಸುತ್ತಾರೆ. ಅವರು ರಾತ್ರಿ ಬೇಗನೆ ನಿದ್ರಿಸುತ್ತಾರೆ. ಇದರಿಂದ ಅವರ ನಿದ್ರೆಯೂ ಉತ್ತಮವಾಗಿರುತ್ತದೆ ಮತ್ತು ಒಟ್ಟಾರೆ ಆರೋಗ್ಯವೂ ತುಂಬಾನೇ ಚೆನ್ನಾಗಿರುತ್ತದೆ.

ಸಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ: ಜೀವನದ ಗಡಿಬಿಡಿ ಆರಂಭವಾಗುವ ಮೊದಲೇ ನೀವು ಬೆಳಿಗ್ಗೆ ಬೇಗನೆ ಎದ್ದರೆ, ಶಾಂತಿಯುತವಾಗಿ ಸಮಯ ಕಳೆಯಲು ಸ್ವಲ್ಪ ಸಮಯ ಸಿಗುತ್ತದೆ. ಶಾಂತಿಯುತವಾಗಿ ಸಮಯ ಕಳೆಯುವುದರಿಂದ ಮೆದುಳಿನಲ್ಲಿ ಆಮ್ಲಜನಕದ ಮಟ್ಟ ಹೆಚ್ಚಾಗುತ್ತದೆ, ರಕ್ತದೊತ್ತಡ ಕಡಿಮೆಯಾಗುತ್ತದೆ ಮತ್ತು ಇದು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link