SSLC ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಇಲಾಖೆ ಹೊಸ ಪ್ಲಾನ್; ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್! – Kannada News | Education Department’s new plan to improve SSLC students’ results; TV mobile off until the exam is over!
ಬೆಂಗಳೂರು, ಫೆಬ್ರುವರಿ 04: ಎಸ್ಎಸ್ಎಲ್ಸಿ (SSLC) ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು ಮಹತ್ವದ ಉಪಕ್ರಮ ಕೈಗೊಂಡಿದೆ. ಇದಕ್ಕಾಗಿ ಮನೆಗೆ ತೆರಳಿ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ ಅಭಿಯಾನದಡಿ, ಶಿಕ್ಷಕರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ…