ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನ ಉಪ್ಪಿನಿಂದ ಬದುಕಿಸಬಹುದಾ? ಮೂಢನಂಬಿಕೆಯ ಸತ್ಯಾಸತ್ಯತೆ ಅನಾವರಣ – Kannada News
ಬಾಗಲಕೋಟೆ, (ಜೂನ್ 08): ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಯನ್ನು ನಾಲ್ಕು ಗಂಟೆಗಳವರೆಗೆ ಉಪ್ಪಿನಲ್ಲಿ ಮುಚ್ಚಿದರೆ ಮತ್ತೆ ಬದುಕಿಸಬಹುದು ಎನ್ನುವ ಮೂಢನಂಬಿಕೆ ಸಂದೇಶ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಲೇ ಇರುತ್ತೆ. ಆದ್ರೆ, ಇದರ ಸತ್ಯಾಸತ್ಯೆ ಬಾಗಲಕೋಟೆಯ ಮಗುವಿನ ಮೇಲೆ ಪ್ರಯೋಗ ಮಾಡಿದಾಗ ಅನಾವರಣಗೊಂಡಿದೆ. ಹೌದು…ಬಾಗಲಕೋಟೆಯ (Bagalkot) ನವನಗರದಲ್ಲಿ 18 ತಿಂಗಳ ಹೆಣ್ಣು ಮಗುವೊಂದು ನೀರಿನ ಟ್ಯಾಂಕ್‌ಗೆ ಬಿದ್ದು ಮೃತಪಟ್ಟಿದೆ. ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ. ಆದರೆ, ಮಗುವನ್ನು ಬದುಕಿಸಬಹುದು ಎಂಬ ಮೂಢನಂಬಿಕೆಯಿಂದ,…