ಐಡಿ ಇಲ್ಲದಿದ್ರೆ ಪ್ರವೇಶವಿಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ಹೊಸ ರೂಲ್ಸ್ ಜಾರಿಗೆ ತಂದ ಗೃಹ ಸಚಿವ ಖರ್ಗೆ – Kannada News
ಬೆಂಗಳೂರು, (ಜೂನ್ 08): ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ಅತಿಯಾದ ಬಳಕೆಯು ಸರ್ಕಾರಕ್ಕೆ ದೊಡ್ಡ ಆತಂಕವನ್ನುಂಟುಮಾಡಿದೆ. ಅಲ್ಲದೇ ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡುಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತಡೆಗಟ್ಟಲು ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಬೆಂಗಳೂರು ನಗರದ ಪಬ್‌ಗಳು, ಬಾರ್‌ಗಳು ಮತ್ತು ಮದ್ಯ ಸರಬರಾಜು ಮಾಡುವ ಎಲ್ಲಾ ವಾಣಿಜ್ಯ ಸಂಸ್ಥೆಗಳ ಮೇಲೆ ಕಠಿಣ ನಿಗಾ ವಹಿಸಲು ಪೊಲೀಸ್ ಇಲಾಖೆಗೆ ಖಡಕ್ ಸೂಚನೆ…