ಶಿಕ್ಷಣ ಸಚಿವರ ರಾಜೀನಾಮೆ, ಮತ ವಂಚನೆ ಬಗ್ಗೆ ಸುಪ್ರೀಂ ಕೋರ್ಟ್ಗೆ ಪತ್ರ; ಇಂಡಿಯ ಸಭೆಯ 5 ನಿರ್ಧಾರಗಳಿವು – Kannada News
ನವದೆಹಲಿ, ಜೂನ್ 8: ಇಂದು ಕಾಂಗ್ರೆಸ್ ನೇತೃತ್ವದಲ್ಲಿ ದೆಹಲಿಯಲ್ಲಿ ಇಂಡಿಯ (INDIA) ಒಕ್ಕೂಟದ ಸಭೆ ನಡೆಯಿತು. ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ವ್ಯವಸ್ಥೆಯ ದುರಾಡಳಿತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಮಧ್ಯಪ್ರಾಚ್ಯ ಯುದ್ಧದಿಂದಾಗಿ ಗಗನಕ್ಕೇರಿರುವ ಇಂಧನ ಬೆಲೆಗಳ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಾಯಿತು. ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದಾಗಿ ದೇಶದ ಕೋಟ್ಯಂತರ ಜನರು ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ…