Category Archives: Blog

Your blog category

ಮಂತ್ರಾಲಯ ರಾಯರ ಸನ್ನಿಧಿಯಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು – Kannada News | New Year 2026 Celebrations at Mantralayam: Sea of Devotees Flock to Raghavendra Swamy Mutt

ರಾಯಚೂರು, ಜನವರಿ 1: ಹೊಸ ವರ್ಷ 2026ಕ್ಕೆ ಜಗತ್ತು ಕಾಲಿಟ್ಟಾಗಿದೆ. ‘ರಾಯರೇ, ಎಲ್ಲಾ ಒಳಿತು ಮಾಡಪ್ಪ’ ಎಂದು ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದು ಬಂದಿದೆ. 2025ರ ವರ್ಷಾಂತ್ಯ, 2026 ರ ಆರಂಭದ ಹಿನ್ನೆಲೆ ರಾಯಚೂರಿನ ಮಂತ್ರಾಲಯದ ರಾಯರ ಮಠಕ್ಕೆ ಸಾಗರೋಪಾದಿಯಲ್ಲಿ ಬಂದ ಜನರು ತುಂಗಾಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾದರು. ಕ್ರಿಸ್​ಮಸ್​, ಈಯರ್​ ಎಂಡ್​, ನ್ಯೂ ಇಯರ್​ ಅಂತ ವೆಕೇಷನ್​ ಮೂಡ್​​ನಲ್ಲಿರುವ ಜನರು ಮಂತ್ರಾಲಯದತ್ತ ಮುಖ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಟ್ಟೆ ಅಂಗಡಿಗೆ ನುಗ್ಗಿ ಅಪ್ರಾಪ್ತೆಯ ಕುತ್ತಿಗೆಗೆ ಚಾಕು ಹಿಡಿದು ಹಣಕ್ಕೆ ಬೇಡಿಕೆ ಇಟ್ಟ ಮುಸುಕುಧಾರಿ – Kannada News | New Year’s Eve Tension in Bijnor as Girl Taken Hostage in Dramatic Standoff

ಬಟ್ಟೆ ಅಂಗಡಿ -ಸಾಂದರ್ಭಿಕ ಚಿತ್ರImage Credit source: Shutterstock

ಬಿಜ್ನೋರ್, ಜನವರಿ 01: ಮುಸುಕುಧಾರಿಯೊಬ್ಬ ಬಟ್ಟೆ ಅಂಗಡಿಗೆ ನುಗ್ಗಿ ಅಪ್ರಾಪ್ತೆ ಕುತ್ತಿಗೆಗೆ ಚಾಕು ಹಿಡಿದು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ಬುಧವಾರ ನಡೆದಿದೆ. ಮಾರುಕಟ್ಟೆಯಲ್ಲಿರುವ ಬಟ್ಟೆ ಅಂಗಡಿಗೆ ವ್ಯಕ್ತಿ ನುಗ್ಗಿದ್ದ, ಅಪ್ರಾಪ್ತ ಬಾಲಕಿ(Girl)ಯನ್ನು ಎಳೆದುಕೊಂಡು ಆಕೆಯ ಕುತ್ತಿಗೆಗೆ ಚಾಕು ಹಿಡಿದಿದ್ದ.ಇದು ಸಾರ್ವಜನಿಕರು ಮತ್ತು ಅಂಗಡಿಯವರಲ್ಲಿ ಭೀತಿಯನ್ನು ಉಂಟುಮಾಡಿತ್ತು.

ಪೊಲೀಸರ ಪ್ರಕಾರ, ಇಬ್ಬರು ಅಪ್ರಾಪ್ತ ಬಾಲಕಿಯರು ಅಂಗಡಿಯಿಂದ ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದರು. ಸಂಜೆ 7 ಗಂಟೆ ಸುಮಾರಿಗೆ ಆರೋಪಿ ಇದ್ದಕ್ಕಿದ್ದಂತೆ ಅಂಗಡಿಗೆ ಪ್ರವೇಶಿಸಿದ್ದಾನೆ. ಬಾಲಕಿಯರಲ್ಲಿ ಒಬ್ಬಳ ಕುತ್ತಿಗೆಗೆ ಚಾಕು ಇಟ್ಟು, ಆಕೆಯನ್ನು ಹಲವಾರು ನಿಮಿಷಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡಿದ್ದ ಮತ್ತು ಹಣಕ್ಕಾಗಿ ಬೇಡಿಕೆ ಇಡುತ್ತಾ ಕೊಲೆ ಬೆದರಿಕೆ ಹಾಕಿದ್ದ ಎಂದು ತಿಳಿಸಿದ್ದಾರೆ.

ಈ ಘಟನೆಯಿಂದ ಅಂಗಡಿಯೊಳಗೆ ಗೊಂದಲ ಉಂಟಾಗಿದ್ದು, ಅಂಗಡಿ ಮಾಲೀಕರು ಎಚ್ಚರಿಕೆ ನೀಡಿದ್ದಾರೆ. ಗದ್ದಲ ಕೇಳಿ ಅಂಗಡಿಯ ಹೊರಗೆ ಜನಸಮೂಹ ಜಮಾಯಿಸಿ ಆತನಿಂದ ಬಾಲಕಿಯನ್ನು ಬಿಡಿಸಲು ಪ್ರಯತ್ನಿಸಿತು. ಆದರೆ, ಆರೋಪಿ ತನ್ನ ಹಿಡಿತವನ್ನು ಬಿಗಿಗೊಳಿಸಿ ಹುಡುಗಿಯ ಕತ್ತು ಸೀಳುವುದಾಗಿ ಬೆದರಿಕೆ ಹಾಕಿದ್ದ, ಇದರಿಂದಾಗಿ ಜನರು ಹಿಂದೆ ಸರಿಯಬೇಕಾಯಿತು.

ಮತ್ತಷ್ಟು ಓದಿ: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ

ಹೊಸ ವರ್ಷದ ಭದ್ರತಾ ವ್ಯವಸ್ಥೆಗಾಗಿ ಆ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಮಾಹಿತಿ ಪಡೆದ ನಂತರ ಸ್ಥಳಕ್ಕೆ ಧಾವಿಸಿದರು. ಆರಂಭದಲ್ಲಿ ಪೊಲೀಸರು ಆರೋಪಿಯನ್ನು ಬಾಲಕಿಯನ್ನು ಬಿಡುಗಡೆ ಮಾಡುವಂತೆ ಮನವೊಲಿಸಲು ಪ್ರಯತ್ನಿಸಿದರು. ಅವನು ನಿರಾಕರಿಸಿದಾಗ, ಪೊಲೀಸರು ಆತನನ್ನು ಸೋಲಿಸಿ, ಚಾಕು ಕಸಿದುಕೊಂಡು, ಅಪ್ರಾಪ್ತ ಬಾಲಕಿಯನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಲ್ಲಿ ಯಶಸ್ವಿಯಾದರು.

ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಘಟನೆಯಲ್ಲಿ ಬಳಸಿದ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ. ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ನಜಿಬಾಬಾದ್ ವೃತ್ತ ಅಧಿಕಾರಿ ನಿತೇಶ್ ಪ್ರತಾಪ್ ಸಿಂಗ್ ಮಾತನಾಡಿ, ಆರೋಪಿಯು ಬಾರಾಬಂಕಿ ಜಿಲ್ಲೆಯ ನಿವಾಸಿ ಅಜಿತ್ ಎಂದು ಹೇಳಿಕೊಂಡಿದ್ದಾನೆ. ಆತನ ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ ಜೈಲಿಗೆ ಹೋಗಲು ಬಯಸಿದ್ದರಿಂದ ಈ ಕೃತ್ಯ ಎಸಗಿದ್ದಾಗಿ ಹೇಳಿದ್ದಾನೆ, ಯಾರಿಂದಲೋ ತನಗೆ ತೊಂದರೆಯಾಗಿದೆ ಎಂದು ಆತ ಹೇಳಿಕೊಂಡಿರುವುದಾಗಿ ಅಧಿಕಾರಿ ಹೇಳಿದ್ದಾರೆ.

ಆರೋಪಿಯು ಬಾಲಕಿಯ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ, ಕೃತ್ಯದ ಉದ್ದೇಶ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಹಿನ್ನೆಲೆ, ಮಾನಸಿಕ ಸ್ಥಿತಿ ಮತ್ತು ನಜೀಬಾಬಾದ್‌ನಲ್ಲಿ ಅವನು ಇರುವುದಕ್ಕೆ ಕಾರಣವನ್ನು ಕಂಡುಹಿಡಿಯಲು ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮತ್ತೆ ಬರಲಿದೆ ‘ದಿ ಕೇರಳ ಸ್ಟೋರಿ’; ಹೊಸ ವರ್ಷಕ್ಕೆ ಸೀಕ್ವೆಲ್ ರೆಡಿ – Kannada News | The Kerala Story 2: Love Jihad Sequel Gears Up for Controversial 2026 Release

ಬಾಲಿವುಡ್‌ನಲ್ಲಿ ಹಲವು ಸಿನಿಮಾಗಳು ವಿವಾದ ಸೃಷ್ಟಿಸಿವೆ. ಹಲವು ಸ್ಥಳಗಳಲ್ಲಿ ಸಿನಿಮಾಗಳನ್ನು ನಿಷೇಧಿಸಲಾಗಿದೆ. ಅಂತಹ ಒಂದು ಸಿನಿಮಾ ‘ದಿ ಕೇರಳ ಸ್ಟೋರಿ’. ಈ ಸಿನಿಮಾದಿಂದ ಒಂದು ಭಯಾನಕ ವಾಸ್ತವ ಬೆಳಕಿಗೆ ಬಂದಿತ್ತು. 2023ರಲ್ಲಿ ಬಿಡುಗಡೆಯಾದ ಸಿನಿಮಾ ‘ಲವ್ ಜಿಹಾದ್’ ವಿಷಯವನ್ನು ಆಧರಿಸಿದೆ. ಇದು ಹಲವು ಕಡೆಗಳಲ್ಲಿ ಬ್ಯಾನ್ ಆಯಿತು. ಸಿನಿಮಾ ವಿವಾದದಲ್ಲಿ ಸಿಲುಕಿದ್ದರೂ, ಸಿನಿಮಾ ಸಾಕಷ್ಟು ಹಣ ಗಳಿಸಿತು. ಸುದೀಪ್ತೋ ಸೇನ್ ನಿರ್ದೇಶನದ ಈ ಸಿನಿಮಾದಲ್ಲಿ ಅದಾ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ಸೀಕ್ವೆಲ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

‘ದಿ ಕೇರಳ ಸ್ಟೋರಿ’ ಚಿತ್ರದ ಮುಂದುವರಿದ ಭಾಗದ ಚಿತ್ರೀಕರಣ ಕೂಡ ಪೂರ್ಣಗೊಂಡಿದೆ. ಈಗ ಅಭಿಮಾನಿಗಳು ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಈ ಚಿತ್ರ 2026ರಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ.

‘ದಿ ಕೇರಳ ಸ್ಟೋರಿ’ ಚಿತ್ರದ ಮುಂದುವರಿದ ಭಾಗವನ್ನು ಈಗಾಗಲೇ ಕೇರಳದಲ್ಲಿ ಚಿತ್ರೀಕರಿಸಲಾಗಿದ್ದು, ವರದಿಗಳ ಪ್ರಕಾರ, ಈ ಭಾಗವು ಹೆಚ್ಚು ಗಂಭೀರ ಮತ್ತು ಕರಾಳ ಕಥೆಯನ್ನು ಒಳಗೊಂಡಿರುತ್ತದೆ. ದಿ ಕೇರಳ ಸ್ಟೋರಿ 2’ ರ ಪಾತ್ರವರ್ಗ ಮತ್ತು ಇತರ ವಿವರಗಳನ್ನು ಗೌಪ್ಯವಾಗಿಡಲಾಗಿದೆ. ‘ದಿ ಕೇರಳ ಸ್ಟೋರಿ 2’ ಚಿತ್ರೀಕರಣವನ್ನು ಈಗಾಗಲೇ ಬಹಳ ಸುರಕ್ಷಿತ ರೀತಿಯಲ್ಲಿ ಮಾಡಲಾಗಿದೆ. ನಿರ್ಮಾಪಕ ವಿಪುಲ್ ಅಮೃತ್‌ಲಾಲ್ ಶಾ ಚಿತ್ರೀಕರಣದ ಸಮಯದಲ್ಲಿ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಂಡರು.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಇನ್ನಷ್ಟು ರಾಷ್ಟ್ರ ಪ್ರಶಸ್ತಿ ಸಿಗಬೇಕು: ವಿವಾದದ ನಡುವೆ ನಿರ್ದೇಶಕನ ಹೇಳಿಕೆ

ಚಿತ್ರದ ಶೂಟಿಂಗ್ ಸೆಟ್‌ನಲ್ಲಿ ಕಟ್ಟುನಿಟ್ಟಿನ ಭದ್ರತೆಯನ್ನು ಇರಿಸಲಾಗಿತ್ತು. ಸೆಟ್​ಗೆ ಫೋನ್ ತರುವಂತೆ ಇರಲಿಲ್ಲ. ಚಿತ್ರೀಕರಣದ ಸಮಯದಲ್ಲಿ, ನಟರು ಮತ್ತು ಇತರರಿಗೆ ಫೋನ್‌ನಲ್ಲಿ ಮಾತನಾಡಲು ಸಹ ಅವಕಾಶವಿರಲಿಲ್ಲ. ಸೆಟ್‌ನಿಂದ ಏನೂ ಸೋರಿಕೆಯಾಗದಂತೆ ವಿಶೇಷ ಕಾಳಜಿ ವಹಿಸಲಾಯಿತು. ಈ ಸಿನಿಮಾ ಫೆಬ್ರವರಿ 27ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್​ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ – Kannada News | Tarikere Murder Case: Youth Brutally Killed for Harassing Engaged Woman on Instagram message

ಯುವಕ ಮಂಜುನಾಥ್ ಹಾಗೂ ತರೀಕೆರೆ ಪೊಲೀಸ್ ಠಾಣೆ

ಚಿಕ್ಕಮಗಳೂರು, ಜನವರಿ 1: ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ.

ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು ಎಂಬ ಯುವಕನೊಂದಿಗೆ ಮದುವೆ ನಿಶ್ಚಿತಾರ್ಥವಾಗಿದ್ದು, ‘ಎಂಗೇಜ್ಮೆಂಟ್ ಆಗಿದೆ, ಮೆಸೇಜ್ ಮಾಡಬೇಡ’ ಎಂದು ಯುವತಿ ಮಂಜುನಾಥ್‌ಗೆ ತಿಳಿಸಿದ್ದಳು. ಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ. ಇದನ್ನು ಯುವತಿ ತನ್ನನ್ನು ಮದುವೆಯಾಗಲಿರುವ ಯುವಕ ವೇಣುಗೆ ತಿಳಿಸಿದ್ದಾಳೆ.

ಈ ಹಿನ್ನೆಲೆ ಮಾತನಾಡಬೇಕು ಎಂದು ಮಂಜುನಾಥ್‌ನನ್ನು ಕರೆಸಿಕೊಂಡ ವೇಣು ಆತನ ಮೇಲೆ ಸ್ನೇಹಿತರಾದ ಕಿರಣ್, ಅಪ್ಪು ಮತ್ತು ಮಂಜು ಜೊತೆ ಜಗಳವಾಡಿದ್ದಾನೆ. ಗಲಾಟೆ ವೇಳೆ ಮಂಜುನಾಥ್‌ಗೆ ಚಾಕುವಿನಿಂದ ಇರಿದು ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಮಂಜುನಾಥ್‌ನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ! ಚಿಕ್ಕಮಗಳೂರಿಗೆ ಹೊಷ ವರ್ಷಾಚರಣೆಗೆ ಬಂದು ರಂಪಾಟ

ಈ ಘಟನೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಕುರಿತ ಪ್ರಶ್ನೆಗೆ ಕಿಚ್ಚನ ರಿಯಾಕ್ಷನ್

‘ಮಾರ್ಕ್’ ಚಿತ್ರವನ್ನು ಸುದೀಪ್ ಅವರು ಅಭಿಮಾನಿಗಳ ಜೊತೆ ವೀಕ್ಷಿಸಿದರು. ಆ ಬಳಿಕ ಮಾಧ್ಯಮಗಳ ಜೊತೆ ಮಾತನಾಡುವಾಗ ಅವರಿಗೆ ವಿಜಯಲಕ್ಷ್ಮೀ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನಮ್ಮ ಬಗ್ಗೆ ಮಾತನಾಡೋಣ, ಪಕ್ಕದ ಮನೆಯವರ ಬಗ್ಗೆ ಮಾತನಾಡೋದು ಬೇಡ’ ಎಂದು ಸುದೀಪ್ ಅವರು ನೇರವಾಗಿ ಹೇಳಿದರು. ಸುದೀಪ್ ಅವರ ಗತ್ತು ಅನೇಕರಿಗೆ ಇಷ್ಟ ಆಗಿದೆ. ದಯವಿಟ್ಟು ಆ ವಿಷಯ ಮಾತನಾಡಲು ಹೋಗಬೇಡಿ ಎಂದು ಫ್ಯಾನ್ಸ್ ಕೂಡ ಸುದೀಪ್ ಬಳಿ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೊಸ ವರ್ಷಕ್ಕೆ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು – Kannada News | Coastal Karnataka Temples Witness Rush of Devotees on New Years Day

ಮಂಗಳೂರು, ಜ.1: ಹೊಸ ವರ್ಷದ ಮೊದಲ ದಿನದಂದು ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ದಂಡು ಹರಿದುಬಂದಿದೆ. ಅದರಲ್ಲೂ ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ಸಾವಿರಾರು ಭಕ್ತರು ದೇವರ ದರ್ಶನಕ್ಕೆ ಆಗಮಿಸಿದ್ದಾರೆ. ಹೊಸ ವರ್ಷವನ್ನು ದೇವರ ಆಶೀರ್ವಾದದೊಂದಿಗೆ ಆರಂಭಿಸಬೇಕೆಂಬ ಸಂಕಲ್ಪದೊಂದಿಗೆ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ದೇವಸ್ಥಾನವನ್ನು ಸುಂದರ ಹೂವುಗಳಿಂದ ಅಲಂಕರಿಸಲಾಗಿದ್ದು, ವಿಶೇಷ ಪೂಜೆಗಳನ್ನು ಆಯೋಜಿಸಲಾಗಿತ್ತು. ಕೇವಲ ಮಂಗಳೂರಿನ ಭಕ್ತರು ಮಾತ್ರವಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಭಕ್ತರು ಮತ್ತು ಪ್ರವಾಸಿಗರು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ, ಬೀಚ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ತಂಗಿ, ಹೊಸ ವರ್ಷದ ದಿನ ದೇವಾಲಯಗಳಿಗೆ ಭೇಟಿ ನೀಡಿದರು. ಕದ್ರಿ ದೇವಸ್ಥಾನದ ಮೇಲ್ಭಾಗದಲ್ಲಿರುವ ಏಳು ಕೆರೆಗಳಲ್ಲಿ ಪವಿತ್ರ ಸ್ನಾನ ಮಾಡಿ, ನಂತರ ಕಲಶ ಸ್ನಾನ ಕೈಗೊಂಡು ಭಕ್ತರು ದೇವರ ದರ್ಶನ ಪಡೆದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಸ್ಪಿರಿಟ್’ ಚಿತ್ರಕ್ಕಾಗಿ ಶರ್ಟ್​​ಲೆಸ್ ಆದ ಪ್ರಭಾಸ್; ಸಖತ್ ರಾ ಆಗಿದೆ ಪೋಸ್ಟರ್ – Kannada News | Prabhas’s ‘Spirit’ Poster Ignites Buzz: Sandeep Vanga’s Pan India Police Thriller

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಾಯಕನಾಗಿ ನಟಿಸಿರುವ ‘ರಾಜಾ ಸಾಬ್’ ಟ್ರೇಲರ್ ಮೂಲಕ ಗಮನ ಸೆಳೆದಿದೆ. ಮಾರುತಿ ನಿರ್ದೇಶನದ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರ ಹಾರರ್ ಕಾಮಿಡಿ ಹಿನ್ನೆಲೆಯಲ್ಲಿ ಸಿದ್ಧವಾಗಿದೆ. ಈ ಚಿತ್ರ ಸಂಕ್ರಾತಿ ಸಂದರ್ಭದಲ್ಲಿ ತೆರೆಗೆ ಬರುತ್ತಿದೆ. ಈ ವೇಳೆ ಪ್ರಭಾಸ್ ನಟನೆಯ ಮುಂದಿನ ಸಿನಿಮಾ ‘ಸ್ಪಿರಿಟ್’ (Spirit Movie) ಲುಕ್ ವೈರಲ್ ಆಗಿದೆ. ಈ ಪೋಸ್ಟರ್ ಸಂಚಲನ ಸೃಷ್ಟಿಸಿದೆ.

ರಾ ಸಿನಿಮಾಗಳನ್ನು ಮಾಡೋ ಕಲೆ ಸಂದೀಪ್ ರೆಡ್ಡಿ ವಂಗಗೆ ಒಲಿದಿದೆ. ‘ಅರ್ಜುನ್ ರೆಡ್ಡಿ’, ‘ಅನಿಮಲ್’ ಸಿನಿಮಾಗಳಲ್ಲಿ ಇದೇ ಹೈಲೈಟ್ ಆಗಿತ್ತು. ಅವರು ಪ್ರಭಾಸ್ ಜೊತೆ ಸಿನಿಮಾ ಮಾಡುತ್ತಿದ್ದಾರೆ ಎಂದಾಗ ಸಹಜವಾಗಿಯೇ ಕುತೂಹಲ ಹೆಚ್ಚಿತ್ತು. ಈ ಚಿತ್ರದಲ್ಲಿ ಪ್ರಭಾಸ್ ಅವರದ್ದು ಪೊಲೀಸ್ ಪಾತ್ರ. ಹೊಸ ವರ್ಷದ ಪ್ರಯುಕ್ತ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ.

ಈ ಪೋಸ್ಟರ್​​ನಲ್ಲಿ ಪ್ರಭಾಸ್ ಶರ್ಟ್​​ಲೆಸ್ ಆಗಿ ಕಾಣಿಸಿದ್ದಾರೆ. ಅವರ ಬೆನ್ನು, ಕೈ ಹಾಗೂ ಭುಜಕ್ಕೆ ಬ್ಯಾಂಡೇಜ್ ಹಾಕಲಾಗಿದೆ. ಪ್ರಭಾಸ್​​ ಬಾಯಲ್ಲಿರೋ ಸಿಗರೇಟ್​​ಗೆ ನಟಿ ತೃಪ್ತಿ ದಿಮ್ರಿ ಬೆಂಕಿ ಅಂಟಿಸುತ್ತಿದ್ದಾರೆ. ಪ್ರಭಾಸ್ ಉದ್ದನೆಯ ಕೂದಲು ಗಮನ ಸೆಳೆಯುತ್ತಿದೆ. ಈ ಸಿನಿಮಾ ತೆಲುಗು ಜೊತೆಗೆ ಕನ್ನಡ, ತಮಿಳು, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ನಿರ್ದೇಶಕ ಸಂದೀಪ್ ರೆಡ್ಡಿ ವಂಗ ನಿರ್ದೇಶನ ಮಾಡಿದ್ದು ಕೆಲವೇ ಸಿನಿಮಾ ಆದರೂ ಸ್ಟಾರ್ ನಿರ್ದೇಶಕ ಎನಿಸಿಕೊಂಡಿದ್ದಾರೆ. ಅವರು ಈ ಚಿತ್ರದ ಮೂಲಕ ಮತ್ತಷ್ಟು ಜನಪ್ರಿಯತೆ ಪಡೆಯುವ ಭರವಸೆಯಲ್ಲಿದ್ದಾರೆ.

ರಣಬೀರ್ ಕಪೂರ್ ಜೊತೆಗಿನ ‘ಅನಿಮಲ್’ ಚಿತ್ರಕ್ಕೆ ತೃಪ್ತಿ ಕೂಡ ನಾಯಕಿ ಆಗಿದ್ದರು. ಅವರು ಆ ಸಿನಿಮಾದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಈಗ ಅವರು ‘ಸ್ಪಿರಿಟ್’ ಚಿತ್ರಕ್ಕಾಗಿ ಸಂದೀಪ್ ಜೊತೆ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಈ ಪೋಸ್ಟರ್ ಈಗ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಅತಿಥಿ ಪಾತ್ರ?

ಸಂದೀಪ್ ಅವರು ಸಿನಿಮಾ ಮೇಕಿಂಗ್​​ನಲ್ಲಿ ತರಾತುರಿ ಮಾಡೋದಿಲ್ಲ. ಅವರು ನಿಧಾನಕ್ಕೆ ಸಿನಿಮಾ ಕೆಲಸ ಮಾಡುತ್ತಾರೆ. ಈಗ ‘ಸ್ಪಿರಿಟ್’ ಚಿತ್ರಕ್ಕೆ ಅವರು ಹೆಚ್ಚು ಸಮಯ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ! ಚಿಕ್ಕಮಗಳೂರಿಗೆ ಹೊಷ ವರ್ಷಾಚರಣೆಗೆ ಬಂದು ರಂಪಾಟ – Kannada News | Chikkamagaluru: Policeman Attacks Workers, Vandalises Tea Stall During New Year Celebrations, CCTV Video Surfaces

ಚಿಕ್ಕಮಗಳೂರು, ಜನವರಿ 1: ಬೆಂಗಳೂರಿನಿಂದ ಹೊಸ ವರ್ಷದ ಆಚರಣೆಗೆಂದು ಚಿಕ್ಕಮಗಳೂರಿಗೆ ಬಂದಿದ್ದ ಪೊಲೀಸ್ ಕಾನ್​ಸ್ಟೇಬಲ್ ಒಬ್ಬರು ರಂಪಾಟ ಮಾಡಿರುವುದು ವರದಿಯಾಗಿದೆ. ಚಹಾ ಕೊಡಲು ತಡವಾಯಿತು ಎಂಬ ಕಾರಣಕ್ಕೆ ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ KSRTC ಬಸ್ ನಿಲ್ದಾಣದ ಬಳಿ ಇರುವ ಟೀ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಮೀಸಲು ಪೊಲೀಸ್ ಪಡೆಯ ಕೋರಮಂಗಲದ ಸಿಬ್ಬಂದಿ ಪುನೀತ್ ಹಲ್ಲೆ ಮಾಡಿದ್ದಾರೆ.

ಮುಂಜಾನೆ ಸಮಯದಲ್ಲಿ ಪುನೀತ್ ಮತ್ತು ಅವರ ಸ್ನೇಹಿತರು ಬಸ್ ನಿಲ್ದಾಣದ ಬಳಿ ಇರುವ ಟೀ ಅಂಗಡಿಗೆ ತೆರಳಿದ್ದರು. ಈ ವೇಳೆ ಟೀ ಕೊಡಲು ತಡವಾದುದರಿಂದ ಕೋಪಗೊಂಡ ಪುನೀತ್, ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಪೊಲೀಸ್ ಟೀ ಅಂಗಡಿಯಲ್ಲಿ ದಾಂಧಲೆ ಎಬ್ಬಿಸಿ ಧ್ವಂಸ ಮಾಡಿರುವ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಪೊಲೀಸ್ ಕಾನ್​ಸ್ಟೇಬಲ್ ಪುನೀತ್​​ನನ್ನು ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ – Kannada News | Bomb Threat Message Found Near Sanjay Raut’s Residence, Probe Finds No Danger

ಮುಂಬೈ, ಜನವರಿ 01: ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಹೊರಗೆ ಬುಧವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ನಿಂತಿರುವುದು ಕಂಡುಬಂದಿದ್ದು,  ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ . ಭಾಂಡಪ್ ಪ್ರದೇಶದ ರಾವತ್ ಅವರ ‘ಮೈತ್ರಿ’ ಬಂಗಲೆಯ ಬಳಿ ವ್ಯಾಗನ್‌ಆರ್ ಕಾರು ಕಾಣಿಸಿಕೊಂಡಿದ್ದು, ಅದರ ಕಿಟಕಿಯ ಮೇಲೆ ಧೂಳಿನಿಂದ ಆವೃತವಾದ ಬೆದರಿಕೆ ಸಂದೇಶ ಬರೆಯಲಾಗಿದೆ ಎಂದು ತಿಳಿದುಬಂದಿದೆ.

12 ಗಂಟೆಗೆ ಬಾಂಬ್ ಸ್ಫೋಟವಾಗುತ್ತೆ ಎಂದು ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶವನ್ನು ಗಮನಿಸಿದ ರಾವತ್ ಅವರ ಬೆಂಬಲಿಗರು ಪೊಲೀಸರಿಗೆ ಮಾಹಿತಿ ನೀಡಿದರು. ಇದರ ನಂತರ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (ಬಿಡಿಡಿಎಸ್) ಮತ್ತು ಮುಂಬೈ ಪೊಲೀಸರ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆವರಣದಲ್ಲಿ ಸಂಪೂರ್ಣ ಶೋಧ ನಡೆಸಿದರು.

ರಾವತ್ ಅವರ ನಿವಾಸದ ತಪಾಸಣೆಯ ಸಮಯದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ, ನಿಲ್ಲಿಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದ್ದು, ಸಂದೇಶದ ಮೂಲವನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

“ನಿಮ್ಮ ಈ ಪರೀಕ್ಷೆಗಿಂತ ಸಾಯುವುದೇ ಉತ್ತಮ”: ಪೊಲೀಸರ ಮುಂದೆ ಬೈಕ್​​​ಗೆ ಬೆಂಕಿ ಹಚ್ಚಿ, ಪರಾರಿಯಾದ ಯುವಕ – Kannada News | Mysore Road: Drunk Driver Burns Bike, Threatens Police, Flees

ಬೆಂಗಳೂರು, ಜ.1: ಬೆಂಗಳೂರಿನ (Bengaluru drunk driving) ಮೈಸೂರು ರಸ್ತೆಯಲ್ಲಿ ತಡರಾತ್ರಿ ಕುಡಿದು ವಾಹನ ಚಲಾಯಿಸುವವರ ತಪಾಸಣೆ ನಡೆಸುತ್ತಿದ್ದ ವೇಳೆ ಒಂದು ಅಹಿತಕರ ಘಟನೆಯೊಂದು ನಡೆದಿದೆ. ಶನಿವಾರದಂದು (ಡಿ.27) ಕುಡಿದು ವಾಹನ ಚಲಾಯಿಸುತ್ತಿದ್ದ ಬೈಕ್ ಸವಾರನೊಬ್ಬ ಸಂಚಾರ ಪೊಲೀಸರಿಗೆ ಬೆದರಿಕೆ ಹಾಕಿ, ಬ್ರೀತ್ ಅನಲೈಜರ್ ಪರೀಕ್ಷೆಗೆ ನಿರಾಕರಿಸಿ, ತನ್ನ ಸ್ವಂತ ಬೈಕ್​​​ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ಕವಿಕಾ ಜಂಕ್ಷನ್ ಬಳಿ ರಾತ್ರಿ 10:35 ರ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸ್​​ ಅಧಿಕಾರಿಗಳು ಕುಡಿದು ವಾಹನ ಚಲಾಯಿಸುವವರನ್ನು ಹಿಡಿದು ದಂಡ ಹಾಕುವ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದರು. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು. ತಪಾಸಣೆಯ ಸಮಯದಲ್ಲಿ, ಪೊಲೀಸರು ಕುಡಿದು ವಾಹನ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಸವಾರನನ್ನು ತಡೆದು ಬ್ರೀತ್ ಅನಲೈಸರ್​​ ಊದುವಂತೆ ಹೇಳಿದ್ದಾರೆ. ಇದಕ್ಕೆ ನಿರಾಕರಿಸಿ, ಪೊಲೀಸರ ಜತೆಗೆ ಕಿರಿಕ್​​ ಮಾಡಿಕೊಂಡಿದ್ದಾನೆ.

ವ್ಯಕ್ತಿಯನ್ನು ಬಿಟಿಎಂ ಲೇಔಟ್ 1ನೇ ಹಂತದ ನಿವಾಸಿ ವೆಂಕಟೇಶ್ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಸವಾರ ಡ್ರಿಂಕ್​​ ಆಂಡ್​​​ ಡ್ರೈವ್​​​ ಮಾಡುತ್ತಿದ್ದ, ಈ ಕಾರಣಕ್ಕೆ ಬ್ರೀತ್ ಅನಲೈಸರ್ ಊದಲು ಹೇಳಿದ್ದೇವೆ. ಆದರೆ, ಅದಕ್ಕೆ ಒಪ್ಪುವ ಬದಲು, ನಮ್ಮ ಮೇಲೆಯೇ ದಾಳಿ ಮಾಡಲು ಮುಂದಾಗಿದ್ದಾನೆ. ಜತೆಗೆ ನಮಗೆ ಬೆದರಿಕೆ ಹಾಕಿದ್ದಾನೆ ಎಂದು ಹೇಳಿದ್ದಾರೆ. ಇನ್ನು ವರದಿಯಗಳ ಪ್ರಕಾರ, ಪೊಲೀಸರ ಜತೆಗೆ ಗಲಾಟೆ ಮಾಡುವಾಗ ನಿಮ್ಮ ಈ ಪರೀಕ್ಷೆಯಲ್ಲಿ ಉತ್ತೀರ್ಣನಾಗುವುದಕ್ಕಿಂತ ಸಾಯುವುದು ಅಥವಾ ತನ್ನ ಬೈಕನ್ನು ಸುಡುವುದು ಉತ್ತಮ ಎಂದು ಹೇಳಿದ್ದೇನೆ. ನಂತರ ಅವನನ್ನು ಮತ್ತು ಆತನ ಬೈಕ್​ನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

ಇದನ್ನೂ ಓದಿ: ಹೊಸ ವರ್ಷಕ್ಕೆ ರಾಜ್ಯದ ಜನರಿಗೆ ಶಾಕ್​​​ ಕೊಟ್ಟ ಗಾಳಿ ಗುಣಮಟ್ಟ, ಈ ಜಿಲ್ಲೆಗಳಲ್ಲಿ ಎಚ್ಚರವಹಿಸಲು ಸೂಚನೆ

ಪೊಲೀಸರು ನಡೆಸಿದ ಬ್ರೀತ್ ಅನಲೈಸರ್ ಪರೀಕ್ಷೆ ಮಾಡಿದಾಗ ವೆಂಕಟೇಶ್​ನ ಆಲ್ಕೋಹಾಲ್ ಮಟ್ಟವು 100 ಮಿಲಿಗೆ 367 ಮಿಗ್ರಾಂ ಇತ್ತು ಎಂದು ಹೇಳಲಾಗಿದೆ. ಇದು ಆತ ವಿಪರೀತವಾಗಿ ಮದ್ಯಸೇವನೆ ಮಾಡಿದ್ದಾನೆ ಎಂಬುದನ್ನು ತಿಳಿಸುತ್ತದೆ. ಇನ್ನು ಈ ಬಗ್ಗೆ ಅಧಿಕಾರಿಗಳು ಸವಾರನಿಗೆ ನೋಟಿಸ್​​ ನೀಡಿದ್ದಾರೆ. ಇದಕ್ಕೂ ನಿರಾಕರಿಸಿ, ಅಧಿಕಾರಿಗಳ ಮೇಲೆ ಕೂಗಾಡಿದ್ದಾನೆ. ನಂತರ ಪೊಲೀಸ್​​ ಠಾಣೆಯಿಂದ ಹೊರ ಬಂದು, ಬೈಕ್​​ಗೆ ಇಂಧನ ತುಂಬಿಸಿ, ಬೆಂಕಿ ಕೊಟ್ಟಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ಇದು ವೆಂಕಟೇಶ್​​ಗೆ ಎರಡನೇ ಬಾರಿ ದಂಡ ಹಾಕುತ್ತಿರುವುದು. ಈ ಹಿಂದೆಯೂ ಕೂಡ ಇವನ ಮೇಲೆ ಇದೇ ಕಾರಣಕ್ಕೆ ದಂಡ ಹಾಕಲಾಗಿತ್ತು. ಇದೀಗ ಮತ್ತೆ ದಂಡ ಹಾಕಿರುವುದು, ಆತನ ಮನಸ್ಸಿಗೆ ಬೇಜಾರಾಗಿದೆ. ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link