Headlines

ಹೊಸ ವರ್ಷ: ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ – Kannada News | New Year 2026: Special Puja and Abhisheka Performed in PM Modi’s Name at Dodda Ganapathi Temple, Bengaluru

ಬೆಂಗಳೂರು, ಜನವರಿ 1: ಹೊಸ ವರ್ಷದ ಹಿನ್ನೆಲೆ ಬೆಂಗಳೂರು ನಗರಾದ್ಯಂತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪೂಜೆ ನೆರವೇರಿಸಲಾಗುತ್ತಿದೆ. ವರ್ಷದ ಮೊದಲ ದಿನವನ್ನು ಭಕ್ತಿಭಾವದಿಂದ ಆರಂಭಿಸಲು ಸಾವಿರಾರು ಭಕ್ತರು ಬೆಳಗ್ಗೆಯೇ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಹೊಸ ವರ್ಷದ ಪ್ರಯುಕ್ತ ವಿಶೇಷ ಅಭಿಷೇಕ, ಅಲಂಕಾರ ಮತ್ತು ಮಹಾ ಪೂಜೆಗಳನ್ನು ನೆರವೇರಿಸಲಾಗುತ್ತಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಭಕ್ತರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಅರ್ಚನೆ ಹಾಗೂ ಅಭಿಷೇಕವನ್ನು ನೆರವೇರಿಸಿದ್ದಾರೆ….

Read More

Daily Devotional: ಸಾಮಾನ್ಯ ಜನರು ದೇವಸ್ಥಾನದ ಗರ್ಭಗುಡಿ ಪ್ರವೇಶ ಮಾಡಬಾರದು ಯಾಕೆ? – Kannada News | Temple Sanctum Sanctorum Entry: Rules and Spiritual Significance

ದೇವಾಲಯವು ವಿದ್ಯುತ್ ಶಕ್ತಿಯ ಕೇಂದ್ರವಿದ್ದಂತೆ, ಭಗವಂತನ ಶಕ್ತಿಯ ಮೂಲವಾಗಿದೆ. ಪಂಚಭೂತಗಳಿಂದ ಉಂಟಾಗುವ ದೋಷಗಳು, ಶುಭಫಲಗಳು, ಕರ್ಮಫಲಗಳನ್ನು ನಿವೇದಿಸಿಕೊಳ್ಳುವ ಕೇಂದ್ರವೇ ದೇವಾಲಯ. ಗರ್ಭಗುಡಿ ಪ್ರವೇಶವನ್ನು ಎಲ್ಲರೂ ಮಾಡಬಹುದೇ? ಅದು ಶುಭವೇ ಅಥವಾ ಅಶುಭವೇ? ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರ ನೀಡಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಲ್ಲಿ ಸಾಮಾನ್ಯವಾಗಿ ಅರ್ಥ, ಅರ್ಥಾರ್ಥಿ, ಜ್ಞಾನಿ, ಜಿಜ್ಞಾಸು ಎಂಬ ನಾಲ್ಕು ವಿಧಗಳಿರುತ್ತವೆ. ಆದರೆ, ಗರ್ಭಗುಡಿಗೆ ಪ್ರವೇಶವು ಸಾಮಾನ್ಯವಾಗಿ ಕೆಲವೇ…

Read More

ತಂದೆಯ ಶವ, ಪ್ರಜ್ಞೆ ತಪ್ಪಿದ ತಾಯಿ ಜತೆ ಕತ್ತಲೆಯ ಕಾಡಿನಲ್ಲಿ ರಾತ್ರಿ ಕಳೆದ ಐದು ವರ್ಷದ ಬಾಲಕ – Kannada News | Tragic Night in the Forest: Child Found Beside Dead Father and Injured Mother in Odisha

ಕಾಡು-ಸಾಂದರ್ಭಿಕ ಚಿತ್ರImage Credit source: Stockcake ಒಡಿಶಾ, ಜನವರಿ 01: ಅಂದು ಆ ಕತ್ತಲೆಯ ಕಾಡಿನಲ್ಲಿದ್ದಿದ್ದು ಮೂವರಷ್ಟೇ. ತಂದೆ ಶವವಾಗಿ ಬಿದ್ದಿದ್ದರೆ, ತಾಯಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಯಾವುದೂ ಸಹಜವಾಗಿರಲಿಲ್ಲ. ಮಗನ ಎದುರೇ ಇಬ್ಬರೂ ವಿಷ ಸೇವಿಸಿದ್ದರು. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಸತ್ತ ತಂದೆ ಮತ್ತು ವಿಷ ಸೇವಿಸಿ ಪ್ರಜ್ಞಾಹೀನಳಾಗಿ ಬಿದ್ದಿದ್ದ ತಾಯಿಯ ಪಕ್ಕದಲ್ಲಿ  ಐದು ವರ್ಷದ ಬಾಲಕ ಕುಳಿತು ಇಡೀ ರಾತ್ರಿ ಕಳೆದಿದ್ದ. ಇರಲು ಮನೆ ಇರಲಿಲ್ಲ, ಏನು ನಡೆಯುತ್ತಿದೆ ಎನ್ನುವ ಅರಿವು ಇರಲಿಲ್ಲ….

Read More

ಜೀವನದಲ್ಲಿ ಸುದೀಪ್ ಅವರಂತಹ ವ್ಯಕ್ತಿ ಸಿಕ್ಕಿದ್ದು ನನ್ನ ಪುಣ್ಯ; ನವೀನ್ ಚಂದ್ರ – Kannada News | Naveen Chandra on Sudeep: ‘Mark’ Actor Reveals Angel Like Mind

ನವೀನ್ ಚಂದ್ರ ಬಗ್ಗೆ ಅನೇಕರಿಗೆ ತಿಳಿದಿದೆ. ಅವರು ತಮಿಳು ನಟ. ಅವರು ಕನ್ನಡ ಚಿತ್ರರಂಗಕ್ಕೂ ಪರಿಚಯ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಮಾರ್ಕ್’ ಸಿನಿಮಾ. ಈ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿ ಅವರು ಜನಪ್ರಿಯತೆ ಪಡೆದರು. ಅವರು ಸ್ಪಷ್ಟ ಕನ್ನಡ ಮಾತನಾಡುತ್ತಾರೆ. ಅವರು ಈಗ ಒಂದು ವಿಷಯ ರಿವೀಲ್ ಮಾಡಿದ್ದಾರೆ. ಸುದೀಪ್ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದಾರೆ. ‘ಮಾರ್ಕ್’ ಚಿತ್ರದ ಹುಬ್ಬಳ್ಳಿ ಈವೆಂಟ್​​ನಲ್ಲಿ ನವೀನ್ ಚಂದ್ರ ಮಾತನಾಡಿದ್ದರು. ಈ ವೇಳೆ ಅವರು ಒಂದು ವಿಷಯ ಹಂಚಿಕೊಂಡರು. ಅದು…

Read More

ಕೀ ಕೊಡೋದ್ರಲ್ಲಿ ಮಾಸ್ಟರ್​; ಗಿಲ್ಲಿ ಮಾತಿಗೆ ಉರಿದುರಿದು ಬಿದ್ದ ಧ್ರುವಂತ್-ಅಶ್ವಿನಿ – Kannada News | Big Boss Kannada 12: Gilli vs Ashwini Gowda Dhruvanth Fight, Controversy

ಗಿಲ್ಲಿ ನಟ (Gilli Nata) ಅವರು ಯಾರನ್ನಾದರೂ ಉರಿಸಬೇಕು, ಯಾರನ್ನಾದರೂ ಅಳಿಸಬೇಕು ಎಂದು ನಿರ್ಧರಿಸಿದರೆ ಅವರ ಮಾತೇ ಸಾಕು. ಅವರು ಕೀ ಕೊಡೋದ್ರಲ್ಲಿ ಮಾಸ್ಟರ್. ಈಗ ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ-ಧ್ರುವಂತ್ ಹಾಗೂ ಗಿಲ್ಲಿ ನಟ ಮಧ್ಯೆ ಕಿರಿಕ್ ಆಗಿದೆ. ಗಿಲ್ಲಿ ಅದೆಷ್ಟು ಟ್ರಿಗರ್ ಮಾಡಿದರು ಎಂದರೆ, ಅಶ್ವಿನಿ ಅವರಿಗೆ ಕಂಟ್ರೋಲ್ ಸಿಗಲೇ ಇಲ್ಲ. ಅವರ ಮಾತು ಮಿತಿಮೀರಿದೆ. ತಾವು ಏಕವಚನ ಬಳಸಿ ಬೇರೆಯವರಿಂದ ಗೌರವ ನಿರೀಕ್ಷೆ ಮಾಡಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ಬಿಗ್…

Read More

New Year 2026: ಹೊಸ ವರ್ಷದ ಶುಭಾಶಯ ತಿಳಿಸಿ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ ಪ್ರಧಾನಿ ಮೋದಿ – Kannada News | PM Modi Welcomes the New Year With Message of Peace and Collective Well Being

ನವದೆಹಲಿ, ಜನವರಿ 01: 2026ಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ(Narendra Modi) ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೆ ದೇಶದಲ್ಲಿ ಶಾಂತಿ ನೆಲೆಸಲು, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಎಕ್ಸ್​​ನಲ್ಲಿ ಸಂದೇಶವನ್ನು ಹಂಚಿಕೊಂಡಿದ್ದು, ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸು ಪಡೆಯಲಿ ಎಂದು ಹಾರೈಸಿದ್ದಾರೆ.ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು ನೀವು ಮಾಡುವ ಎಲ್ಲದರಲ್ಲೂ ಸಾಧನೆಯೊಂದಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು…

Read More

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್

ಕ್ಯಾಪ್ಟನ್ಸಿ ಟಾಸ್ಕ್ ಈ ವಾರ ತುಂಬಾನೇ ಮುಖ್ಯ. ಈ ಬಾರಿ ಗೆದ್ದವರು ನೇರವಾಗಿ ಫಿನಾಲೆ ವಾರಕ್ಕೆ ಆಯ್ಕೆ ಆಗುತ್ತಾರೆ. ಇದಕ್ಕಾಗಿ ಭಾರೀ ಫೈಟ್ ನಡೆಯುತ್ತಿದೆ. ಈ ಟಾಸ್ಕ್​​ಗೆ ಧ್ರುವಂತ್ ಹಾಗೂ ಕಾವ್ಯಾ ಅವರನ್ನು ಉಸ್ತುವಾರಿ ಆಗಿ ನೇಮಕ ಮಾಡಲಾಗಿತ್ತು. ಇಬ್ಬರ ಮಧ್ಯೆ ಕಿರಿಕ್ ಆಗಿದೆ. ‘ಬಾಯಿ ಮುಚ್ಕೊಂಡು ಕೂತ್ಗೊ’ ಎಂದು ಕಾವ್ಯಾಗೆ ಧ್ರುವಂತ್ ಅವಾಜ್ ಹಾಕಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕೊಪ್ಪಳ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಟ್ವಿಸ್ಟ್: ತಾಲೂಕು ವೈದ್ಯಾಧಿಕಾರಿ ವಿರುದ್ಧವೇ ದಾಖಲಾಯ್ತು ಎಫ್​ಐಆರ್! – Kannada News | Koppal women harassment Case Takes Twist: FIR Filed Against Taluk Medical Officer for Alleged Evidence Tampering

ಕೊಪ್ಪಳ, ಜನವರಿ 1: ಕೊಪ್ಪಳ (Koppal) ಜಿಲ್ಲೆ ಯಲಬುರ್ಗಾದ ಮದ್ಲೂರಿನಲ್ಲಿ ನವೆಂಬರ್​​ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರೂ, ತಾಲೂಕು ವೈದ್ಯಾಧಿಕಾರಿಯು ಅತ್ಯಾಚಾರಿಗಳನ್ನು ರಕ್ಷಿಸಲು ಯತ್ನಿಸಿರುವುದು ಗೊತ್ತಾಗಿದೆ. ಸದ್ಯ ತಾಲೂಕು ವೈದ್ಯಾಧಿಕಾರಿ ವಿರುದ್ಧವೂ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಯಲಬುರ್ಗಾ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಶಿವಕುಮಾರ್ ಸಾಕ್ಷಿ ನಾಶಪಡಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಶಿವಕುಮಾರ್ ವಿರುದ್ಧ ಯಲಬುರ್ಗಾ ಸಿಪಿಐ ಮೌನೇಶ್ವರ್‌ ಮಾಲಿಪಾಟೀಲ್…

Read More

Bengaluru Air Quality: ಹೊಸ ವರ್ಷಕ್ಕೆ ರಾಜ್ಯದ ಜನರಿಗೆ ಶಾಕ್​​​ ಕೊಟ್ಟ ಗಾಳಿ ಗುಣಮಟ್ಟ, ಈ ಜಿಲ್ಲೆಗಳಲ್ಲಿ ಎಚ್ಚರವಹಿಸಲು ಸೂಚನೆ – Kannada News | Poor Air Quality in Karnataka: Bengaluru AQI 168, Health Risks and Precautions

ಬೆಂಗಳೂರು, ಜ.1: ಹೊಸ ವರ್ಷದ ಮೊದಲು ದಿನವೇ ರಾಜ್ಯದಲ್ಲಿ ಗಾಳಿ ಗುಣಮಟ್ಟ (Karnataka air quality) ತುಂಬಾ ಹದಗೆಟ್ಟಿದೆ. ರಾಜ್ಯದಲ್ಲಿ ವಾಯು ಗುಣಮಟ್ಟ ಮಧ್ಯಮದಿಂದ ಕಳಪೆಯವರೆಗೆ ಇರಲಿದೆ ಎಂದು ಹೇಳಲಾಗಿದೆ. , ಹಲವಾರು ಪ್ರಮುಖ ನಗರಗಳು ಹೆಚ್ಚಿನ ಮಾಲಿನ್ಯ ಮಟ್ಟವನ್ನು ಅನುಭವಿಸುತ್ತಿವೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪ್ರಸ್ತುತ ಗಾಳಿಯ ಗುಣಮಟ್ಟ ಕಳಪೆಯಾಗಿದ್ದು, AQI ಸರಿಸುಮಾರು 150–168 ರಷ್ಟಿದೆ . ಹಿರಿಯರು ಹಾಗೂ ಮಕ್ಕಳ ಮೇಲೆ ಇದರ ಪರಿಣಾಮ ಹೆಚ್ಚಾಗಲಿದೆ. ಅವರು ಹೆಚ್ಚಿನ ಕಾಳಜಿಯನ್ನು ವಹಿಸಬೇಕು ಎಂದು ಸಲಹೆ…

Read More

29 ವರ್ಷಗಳ ಹಿಂದೆ ಮೃತಪಟ್ಟಿದ್ದ ವ್ಯಕ್ತಿ ಎಸ್​ಐಆರ್​ಗಾಗಿ ಬದುಕಿ ಬಂದ್ರು – Kannada News | Declared Dead Decades Ago, Man Reappears in UP Home After 29 Years

ಲಕ್ನೋ, ಜನವರಿ 01: ಸುಮಾರು ಮೂರು ದಶಕಗಳ ಹಿಂದೆಯೇ ಸತ್ತಿದ್ದಾರೆಂದು ಭಾವಿಸಲಾದ ಹಿರಿಯ ವ್ಯಕ್ತಿಯೊಬ್ಬರು ಮನೆಗೆ ಬಂದಾಗ ಸದಸ್ಯರ ಸಂತೋಷಕ್ಕೆ ಪಾರವೇ ಇರಲಿಲ್ಲ. ಅವರು ಮನೆ ಬಿಟ್ಟು ಹೋದಾಗಿನಿಂದ ಅವರನ್ನು ಹುಡುಕದೇ ಇರುವ ಸ್ಥಳವೇ ಇರಲಿಲ್ಲ, ಕೊನೆಗೆ ಮೃತಪಟ್ಟಿರಬಹುದು ಎಂದು ಭಾವಿಸಿ ಕೈ ಚೆಲ್ಲಿದ್ದರು. ಈಗ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR)ಗೆ ದಾಖಲೆಗಳನ್ನು ಪಡೆಯಲು ಊರಿಗೆ ಮರಳಿದಾಗ ಅವರನ್ನು ಕಂಡು ಕುಟುಂಬ ಸದಸ್ಯರು ಆಶ್ಚರ್ಯಚಕಿತರಾದರು. ಉತ್ತರ ಪ್ರದೇಶದ ಮುಜಫರ್‌ನಗರ ಜಿಲ್ಲೆಯಲ್ಲಿ ಭಾವನಾತ್ಮಕ ವಾತಾವರಣ…

Read More