Category Archives: Blog

Your blog category

ಹೊಸ ವರ್ಷ ಸಂಭ್ರಮದ ವೇಳೆ ಹುಡುಗಿಯರದ ಸುದ್ದಿಗೆ ಹೋದ್ರೆ ಜೋಕೆ: ಖಾಕಿ ಖಡಕ್​​ ಎಚ್ಚರಿಕೆ – Kannada News | New Years Eve in Belagavi: Police Commissioner Borase Outlines Security and Safety Directives.

ಬೆಳಗಾವಿ, ಡಿಸೆಂಬರ್​​ 31: ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಬೆಳಗಾವಿ ನಗರ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೊಸ ವರ್ಷಾಚರಣೆಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 26ರಂದೇ ಹೋಟೆಲ್, ಬಾರ್ ಹಾಗೂ ರೆಸಾರ್ಟ್ ಮಾಲೀಕರೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಅಪ್ರಾಪ್ತರಿಗೆ ಮದ್ಯ ಹಾಗೂ ಕೊಠಡಿಗಳನ್ನು ನೀಡದಂತೆ ಸೂಚಿಸಿದ್ದೇವೆ. ಅಗ್ನಿ ಅವಘಡಗಳನ್ನು ತಪ್ಪಿಸಲು ಅಗತ್ಯ ಕ್ರಮವನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಆದೇಶಿಸಲಾಗಿದೆ. ನಗರದಲ್ಲಿ 1000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, KSRP, CAR ತುಕಡಿಗಳು ಮತ್ತು ಹೋಮ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಮುಖ್ಯವಾಗಿ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಯಾವುದೇ ರೀತಿಯ ಕಿರುಕುಳ ನಡೆದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ? ಮುಸ್ಲಿಂ ದಂಪತಿ ಆಧಾರ್ ಕಾರ್ಡ್ ನೋಡಿ ಬಿಜೆಪಿ ನಾಯಕರಿಗೆ ಶಾಕ್! – Kannada News | Kogilu Layout Row: BJP Leaders stunned After Aadhaar Cards of Alleged Bangladeshi Illegal Immigrants Surface

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ಜಾಗಕ್ಕೆ ಬಿಜೆಪಿ ನಿಯೋಗ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಅಶ್ವಥ್ ನಾರಾಯಣ ಒಳಗೊಂಡ ಬಿಜೆಪಿ ನಿಯೋಗ ಕೋಗಿಲು ಪ್ರದೇಶದಲ್ಲಿ ವಾಸವಿದ್ದ ನಿರಾಶ್ರಿತರ ಬಳಿ ಮಾತುಕತೆ ನಡೆಸಿದಾಗ ಆಘಾತಕಾರಿ ಮಾಹಿತಿ ತಿಳಿದುಬಂದಿದೆ.

ಸ್ಥಳದಲ್ಲಿದ್ದ ಮುಸ್ಲಿಂ ಮಹಿಳೆಯರ ಜೊತೆ ಬಿಜೆಪಿ ನಿಯೋಗ ಮಾತುಕತೆ ನಡೆಸಿದಾಗ, ಅವರು ಅಸಲಿಗೆ ಸ್ಥಳೀಯ ನಿವಾಸಿಗಳೇ ಎಂಬ ಪ್ರಶ್ನೆ ಮೂಡುವಂತಾಯಿತು. ತಾವು ಸುಮಾರು 25 ವರ್ಷಗಳಿಂದ ಇಲ್ಲಿ ವಾಸವಿದ್ದೇವೆ ಎಂದು ಮುಸ್ಲಿಂ ಮಹಿಳೆ ಒಬ್ಬರು ಹೇಳಿದ್ದಾರೆ. ಆದರೆ ಅವರಿಗೆ ಕನ್ನಡ ಮಾತನಾಡಲು ಬಂದಿಲ್ಲ. ಇಷ್ಟು ವರ್ಷಗಳಿಂದ ಇಲ್ಲಿ ವಾಸವಾಗಿದ್ದರೂ ಕನ್ನಡ ಬರುವುದಿಲ್ಲವೇ ಎಂದು ಅಶೋಕ್ ಪ್ರಶ್ನಿಸಿದರು. ಎಲ್ಲಿಂದ ಬಂದವರು ಎಂಬ ಪ್ರಶ್ನೆಗೆ, ಆಂಧ್ರದಿಂದ ಬಂದವರು ಎಂದು ಮಹಿಳೆ ಉತ್ತರಿಸಿದ್ದಾರೆ. ಆದರೆ ಆಕೆಗೆ ತೆಲುಗು ಭಾಷೆ ಕೂಡ ಬಾರದೆ ಇರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇನ್ನು ಸ್ಥಳದಲ್ಲಿದ್ದ ಮುಸ್ಲಿಂ ದಂಪತಿಯ ಆಧಾರ್ ಕಾರ್ಡ್ ನೋಡಿದ ಬಿಜೆಪಿ ನಾಯಕರು ಶಾಕ್‌ಗೆ ಒಳಗಾಗಿದ್ದಾರೆ. ಆಧಾರ್ ಕಾರ್ಡ್ ಮಾಡಿಕೊಡುವಲ್ಲಿ ಅಕ್ರಮ ನಡೆದಿದೆಯಾ ಎಂಬ ಅನುಮಾನವೇ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯಲಕ್ಷ್ಮಿ ನೀಡಿದ ದೂರಿಗೆ ಪೊಲೀಸರ ನಿರ್ಲಕ್ಷ್ಯ? ದರ್ಶನ್ ಪತ್ನಿ ಅಸಮಾಧಾನ – Kannada News | Vijayalakshmi Darshan says Bengaluru Police neglected her complaint

ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಕಮೆಂಟ್ ಮಾಡಲಾಗಿತ್ತು. ಅದರ ವಿರುದ್ಧ ಅವರು ದೂರು ನೀಡಿದ್ದರು. ಆದರೆ ಆ ದೂರಿನ ಬಗ್ಗೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿಜಯಲಕ್ಷ್ಮಿ ದರ್ಶನ್ ಅವರು ಗರಂ ಆಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೆ. ಆದರೆ ಪ್ರಾಮಾಣಿಕವಾಗಿ, ಈ ಅನುಭವವು ನನ್ನ ಆ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ’ ಎಂದು ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ಬರೆದುಕೊಂಡಿದ್ದಾರೆ.

‘ನಾನು ದಾಖಲಿಸಿದ ದೂರು ಸಂಪೂರ್ಣವಾಗಿ ನಿರ್ಲಕ್ಷಿಸಲ್ಪಟ್ಟಿದೆ, ಆದರೆ ಬೇರೊಬ್ಬ ಮಹಿಳೆಯ ದೂರಿನ ಮೇಲೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂಬುದು ನನಗೆ ಆಶ್ಚರ್ಯ ತಂದಿದೆ. ಇದು ನಿಜವಾಗಿಯೂ ನನಗೆ ಆಶ್ಚರ್ಯವನ್ನುಂಟು ಮಾಡುತ್ತದೆ. ನನ್ನ ದೂರು ಕಡಿಮೆ ಮುಖ್ಯವೇ ಅಥವಾ ಮಾನ್ಯವೇ’ ಎಂದು ವಿಜಯಲಕ್ಷ್ಮಿ ದರ್ಶನ್ ಅವರು ಪ್ರಶ್ನಿಸಿದ್ದಾರೆ.

‘ನನ್ನ ವಕೀಲರಿಂದ ನಿರಂತರವಾಗಿ ವಿಚಾರಿಸಿದ ನಂತರವೂ ಯಾವುದೇ ಕ್ರಮ ಕೈಗೊಂಡಿಲ್ಲ. ಇಂದು, ನನ್ನ ದೂರಿನ ಬಗ್ಗೆ ಗಮನ ಹರಿಸಲು ನಾನು ಇನ್ನೂ ಕಾಯುತ್ತಿದ್ದೇನೆ ಎಂದು ವೈಯಕ್ತಿಕವಾಗಿ ಹೋಗಿ ಅವರಿಗೆ ನೆನಪಿಸಬೇಕಾಯಿತು. ಈ ವಿಳಂಬವು ಯಾವುದೇ ಬಾಹ್ಯ ಒತ್ತಡ ಅಥವಾ ಪ್ರಭಾವದಿಂದಾಗಿಲ್ಲ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ’ ಎಂದು ವಿಜಯಲಕ್ಷ್ಮಿ ಬರೆದುಕೊಂಡಿದ್ದಾರೆ.

‘ಯಾರು ಭಾಗಿಯಾಗಿದ್ದಾರೆ ಎಂಬುದರ ಮೇಲೆ ನ್ಯಾಯವು ಅವಲಂಬಿತವಾಗಿರಬಾರದು. ಅಂತಹ ನಡವಳಿಕೆಯನ್ನು ಬೆಂಬಲಿಸುವ ಅಥವಾ ಆಶ್ರಯ ನೀಡುವವರಿಗೆ ಬಹುಶಃ ಅಂತಹ ಕಾರ್ಯಗಳನ್ನು ಕುರುಡಾಗಿ ಬೆಂಬಲಿಸುವ ಬದಲು ಉತ್ತಮ ಜೀವನ ನಡೆಸಲು ಆ ಶಕ್ತಿಯನ್ನು ಬಳಸುವ ಸಮಯ ಬಂದಿದೆ. ನಾನು ಇನ್ನೂ ಕಾಯುತ್ತಿದ್ದೇನೆ. ನಾನು ಇದನ್ನು ಸುಮ್ಮನೆ ಬಿಡುವುದಿಲ್ಲ ಎಂದು’ ವಿಜಯಲಕ್ಷ್ಮಿ ದರ್ಶನ್ ಅವರು ಇನ್​ಸ್ಟಾಗ್ರಾಮ್ ಸ್ಟೋರಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಜೈಲಿಗೆ ತೆರಳಿ ಫ್ಯಾನ್ಸ್ ವಾರ್ ಬಗ್ಗೆ ದರ್ಶನ್​​ಗೆ ಮಾಹಿತಿ ನೀಡಿದ ವಿಜಯಲಕ್ಷ್ಮಿ: ದಾಸನ ರಿಯಾಕ್ಷನ್ ಏನು?

ಡಿಸೆಂಬರ್ 31ರಂದು ವಿಜಯಲಕ್ಷ್ಮಿ ದರ್ಶನ್ ಅವರು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಗರಂ ಆಗಿದ್ದಂತೆ ಕಂಡುಬಂದರು. ವಕೀಲರ ಜೊತೆ ಆಗಮಿಸಿ ತಮ್ಮ ದೂರಿನ ಬಗ್ಗೆ ಪೊಲೀಸರನ್ನು ಪ್ರಶ್ನಿಸಿದರು. ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ರೀತಿ ಪೋಸ್ಟ್ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಅಜ್ಜಿಯ ಮುಂದೆ ಪ್ರತ್ಯಕ್ಷವಾಗಿ ಸರ್ಪ್ರೈಸ್ ನೀಡಿದ ಮೊಮ್ಮಗ – Kannada News | Grandson surprises grandmother in front of her

ಅಜ್ಜ ಅಜ್ಜಿಯಂದಿರೆಂದರೆ (grandparents) ಮೊಮ್ಮಕ್ಕಳಿಗೆ ತುಂಬಾನೇ ಇಷ್ಟ. ಹೀಗಾಗಿ ಮೊಮ್ಮಕ್ಕಳು  ಶಾಲೆಗೆ ರಜೆ ಸಿಕ್ಕರೆ ಸಾಕು ಅಜ್ಜಿ ಮನೆಗೆ ಓಡಿ ಬರುತ್ತಾರೆ. ಆದರೆ ಇಲ್ಲೊಬ್ಬ ಮೊಮ್ಮಗನು ಅಜ್ಜಿಗೆ ಸರ್ಪ್ರೈಸ್ ನೀಡಿದ್ದಾನೆ. ಬಹಳ ದಿನಗಳ ಬಳಿಕ ಅಜ್ಜಿಯನ್ನು ಕಾಣಲು ಊರಿಗೆ ಬಂದಿದ್ದಾನೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಅಜ್ಜಿಯ ಮುಂದೆ ಬಂದು ನಿಲ್ಲುತ್ತಿದ್ದಂತೆ ಮೊಮ್ಮಗನನ್ನು ಕಂಡ ಖುಷಿ ಹಿರಿಜೀವದ ಮೊಗದಲ್ಲಿ ವ್ಯಕ್ತವಾಗಿದೆ. ಅಜ್ಜಿ ಹಾಗೂ ಮೊಮ್ಮಗನ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ.

ಸೂರಜ್ (@SURAJ_624) ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಅಜ್ಜಿ ತಮ್ಮ ಮೊಮ್ಮಗ ಬಹಳ ದಿನಗಳ ನಂತರ ಮನೆಗೆ ಬಂದಿರುವುದನ್ನು ನೋಡಿ ತುಂಬಾ ಸಂತೋಷಪಟ್ಟರು ಎಂದು ಶೀರ್ಷಿಕೆಯನ್ನು ನೀಡಲಾಗಿದೆ. ಈ ವಿಡಿಯೋದಲ್ಲಿ ವೃದ್ಧೆಯೊಬ್ಬರು ಹೊಲದಲ್ಲಿ ಕೆಲಸ ಮಾಡುತ್ತಿರುವುದನ್ನು ಕಾಣಬಹುದು. ಈ ವೇಳೆ ಮೊಮ್ಮಗನು ಹೇಳದೇನೆ ಅಜ್ಜಿಯ ಮುಂದೆ ಪ್ರತ್ಯಕ್ಷನಾಗಿ ಸರ್ಪ್ರೈಸ್ ನೀಡಿದ್ದಾನೆ. ಮೊಮ್ಮಗನನ್ನು ನೋಡಿದ ಖುಷಿಯೇ ಅಜ್ಜಿಗೆ ಮಾತೇ ಬರುತ್ತಿಲ್ಲ. ಮೊಮ್ಮಗನನ್ನು ತಬ್ಬಿಕೊಂಡು ತನ್ನ ಖುಷಿಯನ್ನು ಹೊರಹಾಕಿರುವುದನ್ನು ಕಾಣಬಹುದು. ಆ ಬಳಿಕ ಅಜ್ಜಿ ಮೊಮ್ಮಗ ಕೆಲಸದ ಬಗ್ಗೆ ಮಾತನಾಡುತ್ತಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಅಜ್ಜಿಯನ್ನು ಸೈಕಲ್ ಮೇಲೆ ಕೂರಿಸಿಕೊಂಡು ಮುಗ್ಗರಿಸಿ ಬಿದ್ದ ಪುಟಾಣಿ

ಡಿಸೆಂಬರ್ 30 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ತುಂಬಾ ಮುದ್ದಾದ ಸಂಬಂಧ ಎಂದಿದ್ದಾರೆ. ಇನ್ನೊಬ್ಬರು, ಇದು ನಿಜವಾದ ಸಂತೋಷ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಈ ವಿಡಿಯೋ ನೋಡಿ ನನ್ನ ಅಜ್ಜಿ ನೆನಪಾದರು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 1:16 pm, Wed, 31 December 25

Source link

ಕುಟುಂಬದ ಜೊತೆ ಗೋವಾದಲ್ಲಿ ಸಮಯ ಕಳೆದ ರಿಷಬ್; ಖಾಸಗಿ ಯಾಚ್​​ನಲ್ಲಿ ಸುತ್ತಾಟ

Source link

ಅಣ್ತಮ್ಮನ ಸಿಡಿಲಬ್ಬರ… ದಾಖಲೆಯ ಮೊತ್ತ ಪೇರಿಸಿದ ಮುಂಬೈ – Kannada News | VHT 2026: Sarfaraz Khan and Musheer Khan Shines against Goa

ವಿಜಯ ಹಝಾರೆ ಟೂರ್ನಿಯ ಗ್ರೂಪ್-ಸಿ ಪಂದ್ಯದಲ್ಲಿ ಮುಂಬೈ ತಂಡದ ಸರ್ಫರಾಝ್ ಖಾನ್ ಹಾಗೂ ಮುಶೀರ್ ಖಾನ್ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಜೈಪುರದ ಜೈಪುರಿಯ ವಿದ್ಯಾಲಯ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಗೋವಾ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಗೋವಾ ತಂಡದ ನಾಯಕ ದೀಪ್​ರಾಜ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡಕ್ಕೆ ಯಶಸ್ವಿ ಜೈಸ್ವಾಲ್ (46) ಉತ್ತಮ ಆರಂಭ ಒದಗಿಸಿದ್ದರು. ಜೈಸ್ವಾಲ್ ತಂಡಕ್ಕೆ ಆಸರೆಯಾಗಿ ನಿಂತ ಮುಶೀರ್ ಖಾನ್ 66 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 60 ರನ್ ಬಾರಿಸಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ ಖಾನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಗೋವಾ ಬೌಲರ್​ಗಳ ಬೆಂಡೆತ್ತಿದ ಸರ್ಫರಾಝ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್​ಗಳನ್ನು ಬಾರಿಸಿದರು. ಈ ಮೂಲಕ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು.

ಶತಕದ ಬಳಿಕ ಕೂಡ ಸಿಡಿಲಬ್ಬರದ ಮುಂದುವರೆಸಿದ ಸರ್ಫರಾಝ್ ಖಾನ್ 14 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಕೇವಲ 75 ಎಸೆತಗಳಲ್ಲಿ 157 ರನ್​ ಚಚ್ಚಿದರು.

ಇತ್ತ ಸರ್ಫರಾಝ್-ಮುಶೀರ್ ಖಾನ್ ಸಹೋದರರ ಜುಗಲ್​ಬಂಧಿಯೊಂದಿಗೆ 40 ಓವರ್​ಗಳಲ್ಲೇ ಮುಂಬೈ ತಂಡದ ಸ್ಕೋರ್​ 300ರ ಗಡಿದಾಟಿತು. ಆ ಬಳಿಕ ಬಂದ ನಾಯಕ ಶಾರ್ದೂಲ್ ಠಾಕೂರ್ 8 ಎಸೆತಗಳಲ್ಲಿ 27 ರನ್ ಚಚ್ಚಿದರು.

ಇನ್ನು ವಿಕೆಟ್ ಕೀಪರ್ ಬ್ಯಾಟರ್ ಹಾರ್ದಿಕ್ ತಮೋರೆ 28 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 53 ರನ್ ಬಾರಿಸಿದರು. ಈ ಮೂಲಕ ಮುಂಬೈ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಬರೋಬ್ಬರಿ 444 ರನ್ ಕಲೆಹಾಕಿದೆ. ಇದು ವಿಜಯ ಹಝಾರೆ ಟೂರ್ನಿಯಲ್ಲಿ ದಾಖಲಾದ ನಾಲ್ಕನೇ ಗರಿಷ್ಠ ಸ್ಕೋರ್ ಎಂಬುದು ವಿಶೇಷ.

ಮುಂಬೈ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಅಂಗ್​ಕ್ರಿಶ್ ರಘುವಂಶಿ, ಸಿದ್ಧೇಶ್ ಲಾಡ್, ಮುಶೀರ್ ಖಾನ್, ಸರ್ಫರಾಝ್ ಖಾನ್, ಹಾರ್ದಿಕ್ ತಮೋರೆ (ವಿಕೆಟ್ ಕೀಪರ್), ಶಮ್ಸ್ ಮುಲಾನಿ, ಶಾರ್ದೂಲ್ ಠಾಕೂರ್ (ನಾಯಕ), ತನುಷ್ ಕೋಟ್ಯಾನ್, ಸಿಲ್ವೆಸ್ಟರ್ ಡಿಸೋಝ, ತುಷಾರ್ ದೇಶಪಾಂಡೆ.

ಇದನ್ನೂ ಓದಿ: ಟಿ20 ವಿಶ್ವಕಪ್​ಗೆ 3 ತಂಡಗಳು ಪ್ರಕಟ

ಗೋವಾ (ಪ್ಲೇಯಿಂಗ್ XI): ಸ್ನೇಹಲ್ ಕೌತಾಂಕರ್, ಕಶ್ಯಪ್ ಬಖಾಲೆ, ಅಭಿನವ್ ತೇಜ್ರಾನಾ, ಸುಯಶ್ ಪ್ರಭುದೇಸಾಯಿ, ಲಲಿತ್ ಯಾದವ್, ದರ್ಶನ್ ಮಿಸಾಲ್, ದೀಪರಾಜ್ ಗಾಂವ್ಕರ್ (ನಾಯಕ), ರಾಜಶೇಖರ್ ಹರಿಕಾಂತ್ (ವಿಕೆಟ್ ಕೀಪರ್), ಅರ್ಜುನ್ ತೆಂಡೂಲ್ಕರ್, ಶುಭಂ ತಾರಿ, ವಾಸುಕಿ ಕೌಶಿಕ್.

Source link

ಪೊಲೀಸ್ ಹುದ್ದೆಗೆ 3 ಲಕ್ಷ ರೂ. ಲಂಚ! ಮಾಜಿ IPS ಅಧಿಕಾರಿ ಭಾಸ್ಕರ್ ರಾವ್​ ಗಂಭೀರ ಆರೋಪ – Kannada News | Karnataka Police Corruption: Former IPS Officer, BJP leader Bhaskar Rao Exposes Recruitment Scam

ಪೊಲೀಸ್ ಹುದ್ದೆಗೆ 3 ಲಕ್ಷ ರೂ. ಲಂಚ! ಮಾಜಿ IPS ಅಧಿಕಾರಿ ಭಾಸ್ಕರ್ ರಾವ್​ ಆರೋಪ

ಬೆಂಗಳೂರು, ಡಿಸೆಂಬರ್ 31: ಕರ್ನಾಟಕದಲ್ಲಿ ಇತ್ತೀಚೆಗೆ ಪೊಲೀಸರೇ ಅಪರಾಧಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಬೆಂಗಳೂರಿನಲ್ಲಿ ಬರೋಬ್ಬರಿ 7 ಕೋಟಿ ರೂ. ದರೋಡೆ ಪ್ರಕರಣ ಸೇರಿದಂತೆ ಇನ್ನೂ ಹಲವು ಪ್ರಕರಣಗಳಲ್ಲಿ ಖಾಕಿಯೂ ಶಾಮೀಲಾಗಿರುವುದು ಅಚ್ಚರಿ ಮೂಡಿಸಿತ್ತು. ಇದರ ಮಧ್ಯೆ ಪೊಲೀಸ್ ನೇಮಕಾತಿ ಹೆಸರಿನಲ್ಲಿಯೂ ಭ್ರಷ್ಟಾಚಾರದ ಆರೋಪ ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಇದೀಗ ಬಿಜೆಪಿ ನಾಯಕರಷ್ಟೇ ಅಲ್ಲದೇ ಮಾಜಿ IPS ಅಧಿಕಾರಿ​ಯೂ ಆದ ಭಾಸ್ಕರ್ ರಾವ್  ಪೊಲೀಸ್ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ  ಮಾಡಿದ್ದು, ಅವರ ಎಕ್ಸ್ ಪೋಸ್ಟ್ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಭಾಸ್ಕರ್ ರಾವ್​ ಪೋಸ್ಟ್​ನಲ್ಲೇನಿದೆ?

ತಮ್ಮ ಎಕ್ಸ್ ಖಾತೆ ಮೂಲಕ ಗೃಹ ಸಚಿವರಿಗೆ ಟಾಂಗ್ ಕೊಟ್ಟ ಭಾಸ್ಕರ್, ಕರ್ನಾಟಕ ರಾಜ್ಯದ ಡಿಜಿ & ಐಜಿಪಿ ಕಚೇರಿಯಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ನೇಮಕಾತಿಗಾಗಿ ಕಾಯುತ್ತಿದ್ದಾರೆ. ಅನೇಕ ಹುದ್ದೆಗಳು ಖಾಲಿಯಾಗಿಯೇ ಉಳಿದಿವೆ. ಒಂದು ಪೊಲೀಸ್ ಠಾಣೆಯಲ್ಲಿ ಖಾಲಿಯಿದ್ದ ಹುದ್ದೆಗೆ 55 ಲಕ್ಷ ರೂ. ಬೇಡಿಕೆ ಇಡಲಾಗಿತ್ತು. ನಮ್ಮ ಅಭ್ಯರ್ಥಿಗೆ ಆ ಮೊತ್ತವನ್ನು ಹೊಂದಿಸಲು ಸಾಧ್ಯವಾಗಲಿಲ್ಲ.

ನಂತರ ಅವರು ಮಧ್ಯವರ್ತಿಗೆ ಕಚೇರಿ ಹುದ್ದೆ ನೀಡುವಂತೆ ಮನವಿ ಮಾಡಿದರು. ಆರಂಭದಲ್ಲಿ 3 ಲಕ್ಷ ರೂ. ಕೇಳಲಾಗಿದ್ದು, ಅಂತಿಮವಾಗಿ 1 ಲಕ್ಷ ರೂ.ಗೆ ವ್ಯವಹಾರ ನಿಶ್ಚಯವಾಯಿತು. ಇದು ಇಂದಿನ ವ್ಯವಸ್ಥೆಯ ಸ್ಥಿತಿ. ತಕ್ಷಣ ಫಲಿತಾಂಶ ಪಡೆಯಲು ಪ್ರಭಾವಿ ವ್ಯಕ್ತಿಗಳ ಪುತ್ರರಿಗೆ ಕೆಲಸ ಸುಲಭವಾಗಿ ಆಗುತ್ತದೆ. ನಮ್ಮ ಗೃಹ ಸಚಿವರು ಪ್ರಾಮಾಣಿಕರು, ಅವರಿಗೆ ಆದೇಶ ಬಂದಾಗ ಸಹಿ ಮಾಡುವುದರ ಹೊರತು ಬೇರೆ ಗೊತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.

ಎಕ್ಸ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ ಬೆಂಗಳೂರು: ಹಾಸಿಗೆಯ ಕೆಳಗೆ 11 ಲಕ್ಷ ರೂ. ಬಚ್ಚಿಟ್ಟಿದ್ದ ಕಾನ್ಸ್ಟೇಬಲ್ ಅರೆಸ್ಟ್

ಬೇಲಿಯೇ ಎದ್ದು ಹೊಲ ಮೇಯ್ದ ಪ್ರಕರಣಗಳು

ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ವಾಹನ ತಡೆದು ನಗರದಲ್ಲಿ7.11 ಕೋಟಿ ಹಣ ರಾಬರಿ ಪ್ರಕರಣ ಸಂಬಂಧ, ಪೊಲೀಸ್ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಪ್ಲ್ಯಾನ್ ಪ್ರಕಾರವೇ ATM ವಾಹನ ದರೋಡೆ ಮಾಡಲಾಗಿತ್ತು. ಇದೇ ರೀತಿ ಸೈಬರ್​​ ವಂಚನೆ ಮಾಡಿದ್ದ ವ್ಯಕ್ತಿಯನ್ನು ವಿಚಾರಣೆಗೆಂದು ಬೆಂಗಳೂರು ಆಯುಕ್ತರ ಕಚೇರಿಗೆ​​ ಕರೆದುಕೊಂಡು ಬಂದಿದ್ದಾಗ, ಆರೋಪಿಯ ಕಾರಿನಲ್ಲಿದ್ದ 11 ಲಕ್ಷ ರೂ. ಹಣವನ್ನು ಬೆಂಗಳೂರಿನ ಸೈಬರ್ ಕ್ರೈಮ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದ ಘಟನೆಯೂ ಸಹ ಬೆಳಕಿಗೆ ಬಂದಿತ್ತು. ಈ ಎಲ್ಲಾ ಪ್ರಕರಣಗಳು ಬಹಿರಂಗಗೊಂಡ ನಂತರ ಡಿಜಿ ಹಾಗೂ ಐಜಿಪಿ ಸಲೀಂ, ಘಟಕದ ಎಲ್ಲಾ ಅಧಿಕಾರಿಗಳು ಅಧೀನದ ಪೊಲೀಸ್ ಸಿಬ್ಬಂದಿಯವರ ಮೇಲೆ ನಿಗಾ ವಹಿಸುವುದು ಸೇರಿದಂತೆ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ – Kannada News | Valmiki Development Corporation Scam: CBI Raids in Ballari Close Aide of Former Karnataka Minister B Nagendra

ಬಳ್ಳಾರಿ, ಡಿಸೆಂಬರ್ 31: ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ವಿಶ್ವನಾಥ ಮನೆ ಮೇಲೆ ಬಳ್ಳಾರಿಯಲ್ಲಿ ಸಿಬಿಐ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ವಿಶ್ವನಾಥ ನಿವಾಸಕ್ಕೆ ನಾಲ್ಕು ಜನ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ವಿಶ್ವನಾಥ ಮನೆಯಲ್ಲಿಲ್ಲದ ಕಾರಣ, ಅವರ ಸಹೋದರ ಮಹೇಶ್​ರನ್ನು ಸಿಬಿಐ ಅಧಿಕಾರಿಗಳು ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.ಠಾಣೆಯಲ್ಲಿಯೇ ಸಿಬಿಐ ಅಧಿಕಾರಿಗಳು ವಿಶ್ವನಾಥ ಸಂಬಂಧಿತ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದೆ ಎನ್ನಲಾಗಿದ್ದು, ಪ್ರಕರಣದಲ್ಲಿ ವಿಶ್ವನಾಥ ಪಾತ್ರವಿದೆ ಎಂಬ ಆರೋಪದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ

ಸಂತೋಷ್ ಥಿಯೇಟರ್​​ನಲ್ಲಿ ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಿಸಿದ್ದಾರೆ. ಬೆಳಿಗ್ಗೆ 10.30ರ ಶೋಗೆ ಸುದೀಪ್ ಆಗಮಿಸಿದರು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಅವರ ಮಧ್ಯೆ ಚಿತ್ರಮಂದಿರದ ಒಳಗೆ ಹೋಗಲು ಸುದೀಪ್ ಸಾಕಷ್ಟು ಕಷ್ಟಪಟ್ಟಿದ್ದಾರೆ. ಅವರ ಜೊತೆ ಸಿನಿಮಾ ನೋಡಿ ಫ್ಯಾನ್ಸ್ ಕೂಡ ಖುಷಿಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Optical Illusion: ಒಣಗಿದ ಎಲೆಗಳ ನಡುವೆ ಅಡಗಿ ಕುಳಿತಿರುವ ಹಾವನ್ನು ಗುರುತಿಸಬಲ್ಲಿರಾ – Kannada News | Optical Illusion: Find the hidden snake in this picture within 5 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Twitter

ಸಾಮಾಜಿಕ ಜಾಲತಾಣದಲ್ಲಿ ಕಣ್ಣು ಮತ್ತು ಮೆದುಳಿಗೆ ಸವಾಲೊಡ್ಡುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ವೈರಲ್ ಆಗುವುದನ್ನು ನೀವು ನೋಡಿರುತ್ತೀರಿ. ಆದರೆ ಈ ಒಗಟಿನ (puzzles) ಚಿತ್ರಗಳನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಉತ್ತರ ಕಂಡು ಹಿಡಿಯಲು ಆಗುವುದೇ ಇಲ್ಲ. ಈ ಒಗಟಿನ ಚಿತ್ರ ಬಿಡಿಸಲು ಸಾಧ್ಯವೇ ಎಂದು ನೋಡಿ. ಒಣಗಿದ ಎಲೆಗಳ ನಡುವೆ ಹಾವೊಂದು ಅವಿತು ಕುಳಿತಿದೆ. ಈ ಸರೀಸೃಪವನ್ನು 5 ಸೆಕೆಂಡುಗಳಲ್ಲಿ ಹುಡುಕಬೇಕು.

ಈ ಚಿತ್ರ ನೋಡಿದಾಗ ನಿಮ್ಮ ಕಣ್ಣಿಗೆ ಏನು ಕಾಣಿಸುತ್ತದೆ?

SssnakeySci ಎಂಬ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾದ ಟ್ರಿಕ್ಕಿ ಒಗಟಿನ ಚಿತ್ರ ಇದಾಗಿದೆ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಮೊದಲು ನೋಡಿದಾಗ ಒಣಗಿದ ಎಲೆಗಳು ಕಾಣಿಸುತ್ತದೆ.  ಇಲ್ಲೊಂದು ಹಾವು ಅಡಗಿ ಕುಳಿತಿದೆ. ಒಣಗಿದ ಎಲೆಗಳ ಬಣ್ಣದೊಂದಿಗೆ ಹಾವಿನ ಮೈ ಬಣ್ಣವು ಬೆರೆತು ಹೋಗಿದೆ. ಹೀಗಾಗಿ ನಿರ್ದಿಷ್ಟ ಸಮಯದೊಳಗೆ ಹಾವನ್ನು ಕಂಡು ಹಿಡಿಯುವುದು ಕಷ್ಟಕರ. ನಿಮ್ಮ ದೃಷ್ಟಿ ಸಾಮರ್ಥ್ಯ ಪರೀಕ್ಷಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ, ಟೈಮ್ ವೇಸ್ಟ್ ಮಾಡದೇ ಈ ಹಾವನ್ನು ಕಂಡುಹಿಡಿಯಬೇಕು.

ಇದನ್ನೂ ಓದಿ:ಈ ಚಿತ್ರದಲ್ಲಿದೆ ಐಸ್ ಕ್ರೀಮ್; ಜಸ್ಟ್ 9 ಸೆಕೆಂಡುಗಳಲ್ಲಿ ಪತ್ತೆಹಚ್ಚಬಲ್ಲಿರಾ

ಹಾವು ನಿಮ್ಮ ಕಣ್ಣಿಗೆ ಕಾಣಿಸಿತೇ?

ತೀಕ್ಷ್ಣ ಕಣ್ಣುಗಳನ್ನು ಹೊಂದಿರುವವರು ಮಾತ್ರ ಹಾವನ್ನು ಗುರುತಿಸಲು ಸಾಧ್ಯವಾಗುತ್ತದೆ. ಎಷ್ಟೇ ಪ್ರಯತ್ನಿಸಿದರೂ ಈ ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದಾದರೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಈ ಕೆಳಗಿನ ಚಿತ್ರದಲ್ಲಿ ಹಾವು ಎಲ್ಲಿದೆ ಎಂದು ಗುರುತಿಸಿದ್ದೇವೆ. ಈ ಚಿತ್ರ ನೋಡಿದ ಮೇಲೆ ಹಾವು ಎಲ್ಲಿದೆ ಎನ್ನುವುದು ನಿಮಗೆ ತಿಳಿಯುತ್ತದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link