Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 26ರ ದಿನಭವಿಷ್ಯ
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನವು ಸಾಮಾಜಿಕವಾಗಿ ಬಿಡುವಿಲ್ಲದಷ್ಟು ಕೆಲಸಗಳು ಇರುತ್ತವೆ. ಸಮಾಜದ ಮುಖಂಡರಿಗೆ, ರಾಜಕಾರಣಿಗಳಿಗೆ ಮತ್ತು ಸರ್ಕಾರದಲ್ಲಿ ಉನ್ನತ ಹುದ್ದೆಯಲ್ಲಿ ಇರುವ ಅಧಿಕಾರಿಗಳಿಗೆ ಶುಭವಾದ ದಿನ ಇದಾಗಿರಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವದ ಗುಣಗಳು ಮೆಚ್ಚುಗೆಗೆ ಪಾತ್ರವಾಗಲಿವೆ. ಉದ್ಯಮಿಗಳು ಹೊಸ ಮಾರುಕಟ್ಟೆ ತಂತ್ರಗಳನ್ನು ಜಾರಿಗೆ ತರಲು ಅತ್ಯುತ್ತಮ ಸಮಯ. ಕೃಷಿಕರಿಗೆ ಸುಧಾರಿತ ತಂತ್ರಜ್ಞಾನದ ಬಳಕೆಯಿಂದ ಲಾಭ ದೊರೆಯಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ…