Category Archives: Blog

Your blog category

ಹಿಂದೂ ಯುವಕನೊಂದಿಗೆ ಅನ್ಯಕೋಮಿನ ಯುವತಿ ಓಡಾಟ; ಜೋಡಿಗೆ ಕಿರುಕುಳ ನೀಡಿದ ಅಪ್ರಾಪ್ತರು ಪೊಲೀಸ್ ವಶಕ್ಕೆ – Kannada News | Chikkaballapur Moral Policing: Minors Harass Inter community Friends

ನೈತಿಕ ಪೊಲೀಸ್​ಗಿರಿ ಮಾಡಿದ್ದಕ್ಕೆ ಬಾಲಕರು ಅಂದರ್

ಚಿಕ್ಕಬಳ್ಳಾಪುರ, ಫೆಬ್ರುವರಿ 03: ನಗರದಲ್ಲಿ (Chikkaballapur) ಅನ್ಯಕೋಮಿನ ಅಪ್ರಾಪ್ತ ಬಾಲಕರಿಂದ ನಡೆದ ನೈತಿಕ ಪೊಲೀಸ್‌ಗಿರಿ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟುಹಾಕಿದೆ. ಸ್ಥಳೀಯರು ಹೇಳಿರುವಂತೆ, ಹಿಂದೂ ಹುಡುಗನೊಂದಿಗೆ ಅನ್ಯಕೋಮಿನ ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅವರ ವೀಡಿಯೋ ಮಾಡಿದ್ದ ಪುಂಡರು, ಅವರನ್ನು ಅಡ್ಡಗಟ್ಟಿ ಕಿರುಕುಳ ನೀಡಿದ್ದಾರೆ.

ನಾವಿಬ್ಬರೂ ಸ್ನೇಹಿತರೆಂದರೂ ಬಿಡದ ಪುಂಡರು

ಶಿಡ್ಲಘಟ್ಟ ಮೂಲದ ವಿದ್ಯಾರ್ಥಿಗಳಿಬ್ಬರು ಪರಸ್ಪರ ಸ್ನೇಹಿತರಾಗಿದ್ದು, ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಇಬ್ಬರನ್ನು ಅಡ್ಡಗಟ್ಟಿದ ಅಪ್ರಾಪ್ತರು ಸ್ನೇಹಿತರು ಒಟ್ಟಿಗಿದ್ದ ವೀಡಿಯೋ ತೋರಿಸಿ ಕಿರುಕುಳ ನೀಡಲು ಮುಂದಾಗಿದ್ದರು. ಈ ವೇಳೆ ತಾವಿಬ್ಬರೂ ಒಂದೇ ಊರಿನವರೆಂದೂ, ಸ್ನೇಹಿತರೆಂದೂ ಯುವಕ ಮತ್ತು ಯುವತಿ ಹೇಳಿಕೊಂಡಿದ್ದಾರೆ. ಆದರೂ ಸುಮ್ಮನಾಗದ ಪುಂಡರು ನೈತಿಕ ಪೊಲೀಸ್‌ಗಿರಿ ತೋರಿಸಿದ್ದಾರೆ.

ನೈತಿಕ ಪೊಲೀಸ್​ಗಿರಿ ಮಾಡಿದ್ದಕ್ಕೆ ಬಾಲಕರು ಅಂದರ್

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಚಿಕ್ಕಬಳ್ಳಾಪುರ ನಗರ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದು, ಕಿರುಕುಳ ನೀಡಿದ್ದ ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ. ನಗರ ನಿವಾಸಿಗಳು ಈ ರೀತಿಯ ನೈತಿಕ ಪೊಲೀಸ್‌ಗಿರಿಯಿಂದಾಗುವ ತೊಂದರೆಯನ್ನು ತಡೆಯಲು ಕಾನೂನು ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IAS Officer Pulkit Garg: ದುಬಾರಿ ಬೇಬಿ ಸಿಟ್ಟಿಂಗ್​ ಬದಲಾಗಿ ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿದ IAS ಅಧಿಕಾರಿ – Kannada News | IAS Officer Pulkit Garg Enrolls Daughter in Anganwadi: A Model for Govt Schools

ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರ ನಡುವೆ ಇಲೊಬ್ಬರು IAS ಅಧಿಕಾರಿ ತನ್ನ ಮೂರು ವರ್ಷ ಮಗಳನ್ನು ಅಂಗನವಾಡಿಗೆ ಸೇರಿಸುವ ಮೂಲಕ ಸಾಕಷ್ಟು ಜನರಿಗೆ ಮಾದರಿಯಾಗಿದ್ದಾರೆ. ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ (DM) ಪುಲ್ಕಿತ್ ಗರ್ಗ್ ಅವರು ತಮ್ಮ ಮಗಳು ಶಿಯಾನನ್ನು ಅಂಗನವಾಡಿಗೆ ಸೇರಿಸುವ ಮೂಲಕ ದುಬಾರಿ ಶಿಕ್ಷಣದತ್ತ ಮುಖ ಮಾಡದೆ ಸರಳತೆ ಮೆರೆದು ಜನರ ಮೆಚ್ಚುಗೆ ಪಡೆದಿದ್ದಾರೆ.

ಭಾರತದಲ್ಲಿ ಅತ್ಯಂತ ಗೌರವಾನ್ವಿತ ಹಾಗೂ ಶಕ್ತಿಶಾಲಿ ನಾಗರಿಕ ಸೇವೆಯಲ್ಲಿರುವ ಪುಲ್ಕಿತ್ ಗರ್ಗ್ ಅವರಿಗೆ ತನ್ನ ಮಗಳನ್ನು ದುಬಾರಿ ಖಾಸಗಿ ಶಾಲೆಗಳಲ್ಲಿ ಓದಿಸುವುದು ಕಷ್ಟವೇನಲ್ಲ, ಆದರೂ ಕೂಡ ತನ್ನ ಸ್ಥಳೀಯ ಅಂಗನವಾಡಿಗೆ ಕೇಂದ್ರಕ್ಕೆ ಸೇರಿಸಿದ್ದಾರೆ. ಈ ನಿರ್ಧಾರವು ಅವರು ಸರಕಾರಿ ವ್ಯವಸ್ಥೆಯ ಮೇಲೆ ಇಟ್ಟಿರುವ ನಂಬಿಕೆಯ ಸಂಕೇತ ಎಂದು ಅಂಗನವಾಡಿ ಕಾರ್ಯಕರ್ತೆ ಸಪ್ನಾ ಸೋನಿ ಮಾಧ್ಯಮದ ಮುಂದೆ ತಿಳಿಸಿದ್ದಾರೆ.

ಪುಲ್ಕಿತ್ ಗರ್ಗ್ ಯಾರು?

ಪುಲ್ಕಿತ್ ಗರ್ಗ್ ಮೂಲತಃ ಹರಿಯಾಣದವರು. ಅವರು ಉತ್ತರ ಪ್ರದೇಶ ಕೇಡರ್‌ನ 2016 ಬ್ಯಾಚ್‌ನ ಐಎಎಸ್ ಅಧಿಕಾರಿ. ಚಿತ್ರಕೂಟದ ಜಿಲ್ಲಾಧಿಕಾರಿಯಾಗುವ ಮೊದಲು, ಪುಲ್ಕಿತ್ ಗರ್ಗ್ ಅವರನ್ನು ಝಾನ್ಸಿ ನಗರ ಪಾಲಿಕೆ ಆಯುಕ್ತರಾಗಿ ಮತ್ತು ಬನಾರಸ್ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿ ನೇಮಿಸಲಾಯಿತು. ಪುಲ್ಕಿತ್ ಗರ್ಗ್ ಅವರ ತಂದೆ ಪ್ರದೀಪ್ ಗರ್ಗ್ ಹರಿಯಾಣ ಗ್ರಾಮೀಣ ಬ್ಯಾಂಕಿನಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಧಿಕಾರಿಯಾಗಿಯೂ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಜಿಲ್ಲಾ ಮ್ಯಾಜಿಸ್ಟ್ರೇಟ್ ಹುದ್ದೆಯನ್ನು ಹೊಂದಿದ್ದರೂ, ಸರ್ಕಾರಿ ಶಿಕ್ಷಣ ಕೇಂದ್ರಗಳಲ್ಲಿ ನಡೆಯುತ್ತಿರುವ ಗುಣಮಟ್ಟದ ಸುಧಾರಣೆಗಳ ಬಗ್ಗೆ ಪುಲ್ಕಿತ್ ಗರ್ಗ್ ವಿಶ್ವಾಸ ಹೊಂದಿದ್ದು,ಒಂದು ವಿಶಿಷ್ಟ ಉಪಕ್ರಮದಲ್ಲಿ, ಅವರು ತಮ್ಮ ಮಗಳು ಶಿಯಾಳನ್ನು ತನ್ನ ಪ್ರಧಾನ ಕಚೇರಿಯ ಧನುಷ್ ಚೌಕದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಸೇರಿಸಿದ್ದಾರೆ.ಈ ಮೂಲಕ ದುಬಾರಿ ಶಿಕ್ಷಣದತ್ತ ಮುಖ ಮಾಡದೆ ಸರಳತೆ ಮೆರೆದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:01 pm, Tue, 3 February 26

Source link

ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಸಿಸಿ ಕ್ಯಾಮರಾದಲ್ಲಿ ಎದೆ ಝಲ್​​ ಎನಿಸುವ ದೃಶ್ಯ ಸೆರೆ – Kannada News | Horrible Accident in Hiriyadka, Udupi: Incident Captured on CCTV Camera

ಉಡುಪಿ, ಫೆಬ್ರವರಿ 03: ತಾಲೂಕಿನ ಹಿರಿಯಡ್ಕ ಪೇಟೆಯಲ್ಲಿ ಭೀಕರ ಅಪಘಾತ (Accident) ಸಂಭವಿಸಿದೆ. ವೇಗವಾಗಿ ಬಂದ ಇನ್ನೋವಾ ಕಾರೊಂದು ಎದುರಿಗೆ ತೆರಳುತ್ತಿದ್ದ ಸ್ಕೂಟರ್​​ಗೆ ಮೊದಲು ಡಿಕ್ಕಿಯಾಗಿ ಬಳಿಕ ಆಟೋಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್​ ಮತ್ತೊಂದು ಬೈಕ್​​ಗೆ ಡಿಕ್ಕಿಯಾಗಿದೆ. ಈ ವೇಳೆ ಸ್ಕೂಟರ್​ ಸವಾರ ರಸ್ತೆಗೆ ಹಾರಿ ಬಿದ್ದಿದ್ದು, ಪವಾಡ ಸದೃಶರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 3rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 3: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿಯುತ್ತಿದೆ. ನಿನ್ನೆ ಸೋಮವಾರ ಸುಮಾರು 700-800 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ 100-150 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 15,175-15,200 ರೂ ಶ್ರೇಣಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,900 ರೂನಿಂದ 13,925 ರೂ ಶ್ರೇಣಿಯಲ್ಲಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಸಖತ್ ಕುಸಿತವಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಕುಸಿತವೂ ಮುಂದುವರಿದಿದೆ. ಮಂಗಳವಾರ ಗ್ರಾಮ್​ಗೆ 20 ರೂ ಕಡಿಮೆ ಆಗಿದೆ. ಕೆಲ ದಿನಗಳ ಹಿಂದಷ್ಟೇ 425 ರೂ ಇದ್ದ ಬೆಳ್ಳಿ ಬೆಲೆ ಈಗ 280 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 3ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,175 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,910 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,381 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,175 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,910 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,910 ರೂ
  • ಚೆನ್ನೈ: 14,030 ರೂ
  • ಮುಂಬೈ: 13,910 ರೂ
  • ದೆಹಲಿ: 13,925 ರೂ
  • ಕೋಲ್ಕತಾ: 13,910 ರೂ
  • ಕೇರಳ: 13,910 ರೂ
  • ಅಹ್ಮದಾಬಾದ್: 13,915 ರೂ
  • ಜೈಪುರ್: 13,925 ರೂ
  • ಲಕ್ನೋ: 13,925 ರೂ
  • ಭುವನೇಶ್ವರ್: 13,915 ರೂ

ಇದನ್ನೂ ಓದಿ: ಏಷ್ಯನ್ ದೇಶಗಳ ಪೈಕಿ ಭಾರತಕ್ಕೆ ಕಡಿಮೆ ಟ್ಯಾರಿಫ್; ಅತಿ ಕಡಿಮೆ ಸುಂಕ ಎದುರಿಸುತ್ತಿರುವ ರಾಷ್ಟ್ರಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 590 ರಿಂಗಿಟ್ (13,540 ರುಪಾಯಿ)
  • ದುಬೈ: 522.50 ಡಿರಾಮ್ (12,857 ರುಪಾಯಿ)
  • ಅಮೆರಿಕ: 145.50 ಡಾಲರ್ (13,151 ರುಪಾಯಿ)
  • ಸಿಂಗಾಪುರ: 192.30 ಸಿಂಗಾಪುರ್ ಡಾಲರ್ (13,686 ರುಪಾಯಿ)
  • ಕತಾರ್: 522 ಕತಾರಿ ರಿಯಾಲ್ (12,944 ರೂ)
  • ಸೌದಿ ಅರೇಬಿಯಾ: 533 ಸೌದಿ ರಿಯಾಲ್ (12,846 ರುಪಾಯಿ)
  • ಓಮನ್: 55.30 ಒಮಾನಿ ರಿಯಾಲ್ (12,991 ರುಪಾಯಿ)
  • ಕುವೇತ್: 42.47 ಕುವೇತಿ ದಿನಾರ್ (12,574 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 280 ರೂ
  • ಚೆನ್ನೈ: 280 ರೂ
  • ಮುಂಬೈ: 280 ರೂ
  • ದೆಹಲಿ: 280 ರೂ
  • ಕೋಲ್ಕತಾ: 280 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 280 ರೂ
  • ಜೈಪುರ್: 280 ರೂ
  • ಲಕ್ನೋ: 280 ರೂ
  • ಭುವನೇಶ್ವರ್: 280 ರೂ
  • ಪುಣೆ: 280

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಏಷ್ಯನ್ ದೇಶಗಳ ಪೈಕಿ ಭಾರತಕ್ಕೆ ಕಡಿಮೆ ಟ್ಯಾರಿಫ್; ಅತಿ ಕಡಿಮೆ ಸುಂಕ ಎದುರಿಸುತ್ತಿರುವ ರಾಷ್ಟ್ರಗಳಿವು… – Kannada News | India among the countries with lowest US tariffs, markets react positively

ನವದೆಹಲಿ, ಫೆಬ್ರುವರಿ 3: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಎರಡು ದೇಶಗಳ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಭಾರತದ ಮೇಲೆ ಅಮೆರಿಕ ವಿಧಿಸಿರುವ ಶೇ. 25 ಪ್ರತಿಸುಂಕವನ್ನು ಶೇ. 18ಕ್ಕೆ ಇಳಿಸಲಾಗಿದೆ. ರಷ್ಯನ್ ತೈಲ ಖರೀದಿಸುವುದಕ್ಕೆ ಪ್ರತಿಯಾಗಿ ಭಾರತಕ್ಕೆ ದಂಡವಾಗಿ ವಿಧಿಸಿದ್ದ ಶೇ. 25 ಸುಂಕವನ್ನೂ ಕೈಬಿಡುತ್ತಿರುವುದಾಗಿ ಟ್ರಂಪ್ ಹೇಳಿದ್ದಾರೆ. ಇದರೊಂದಿಗೆ ಭಾರತದ ಸರಕುಗಳ ಮೇಲೆ ಅಮೆರಿಕದ ಟ್ಯಾರಿಫ್ ಶೇ. 50ರಿಂದ ಶೇ. 18ಕ್ಕೆ ಇಳಿಯಲಿದೆ.

ಭಾರತ ಮತ್ತು ಅಮೆರಿಕ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಬಹುತೇಕ ಪೂರ್ಣಗೊಳ್ಳುವ ಸ್ಥಿತಿಯಲ್ಲಿದೆ. ಈ ಡೀಲ್​ಗೆ ಸಹಿ ಬಿದ್ದ ಬಳಿಕ ಹೊಸ ಟ್ಯಾರಿಫ್ ದರ ಜಾರಿಗೆ ಬರುತ್ತದೆ. ಆದರೆ, ರಷ್ಯನ್ ತೈಲ ಖರೀದಿಯನ್ನು ಭಾರತ ಕಡಿಮೆ ಮಾಡಿದೆ ಎಂದು ಅಮೆರಿಕ ಹೇಳಿಕೊಂಡಿದೆ. ಈ ಬಗ್ಗೆ ಭಾರತದಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ. ರಷ್ಯಾ ಮತ್ತು ಇರಾನ್ ಬದಲು ಅಮೆರಿಕ ಹಾಗೂ ವೆನೆಜುವೆಲಾದಿಂದ ಭಾರತ ತೈಲ ಖರೀದಿಸುತ್ತದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಈ ಬಗ್ಗೆಯೂ ಭಾರತದಿಂದ ಸ್ಪಷ್ಟನೆ ಇನ್ನೂ ಬಂದಿಲ್ಲ. ಅದೇನೇ ಇದ್ದರೂ ಅಮೆರಿಕವು ಭಾರತದ ಸರಕುಗಳ ಮೇಲಿನ ಟ್ಯಾರಿಫ್ ಅನ್ನು ಶೇ. 18ಕ್ಕೆ ಇಳಿಸುತ್ತೇನೆಂದಿರುವುದು ಹೌದು. ವಿಶ್ವದ ಹೆಚ್ಚಿನ ದೇಶಗಳಿಗೆ ಹೋಲಿಸಿದರೆ ಭಾರತಕ್ಕೆ ಕಡಿಮೆ ಟ್ಯಾರಿಫ್ ವಿಧಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ರೈಲ್ವೆಗೆ ಭರಪೂರ ಕೊಡುಗೆ: ಬಜೆಟ್​ನಲ್ಲಿ ಏನೂ ಸಿಕ್ಕಿಲ್ಲ ಎಂದವರಿಗೆ ಅಂಕಿಅಂಶ ಸಮೇತ ಅಶ್ವಿನಿ ವೈಷ್ಣವ್ ತಿರುಗೇಟು

ಅಮೆರಿಕದಿಂದ ಹೆಚ್ಚಿನ ಟ್ಯಾರಿಫ್ ಎದುರಿಸುತ್ತಿರುವ ದೇಶಗಳು

  • ಭಾರತ: ಶೇ. 18
  • ಥಾಯ್ಲೆಂಡ್: ಶೇ. 19
  • ಕಾಂಬೋಡಿಯಾ: ಶೇ. 19
  • ಮಲೇಷ್ಯಾ: ಶೇ. 19
  • ಪಾಕಿಸ್ತಾನ: ಶೇ. 19
  • ಬಾಂಗ್ಲಾದೇಶ: ಶೇ. 20
  • ವಿಯೆಟ್ನಾಂ: ಶೇ. 20
  • ಸೌತ್ ಆಫ್ರಿಕಾ: ಶೇ. 30
  • ಚೀನಾ: ಶೇ. 37
  • ಲಾವೊಸ್: ಶೇ. 40
  • ಮಯನ್ಮಾರ್: ಶೇ. 40
  • ಬ್ರೆಜಿಲ್: ಶೇ 50

ಅಮೆರಿಕದಿಂದ ಅತಿಕಡಿಮೆ ಟ್ಯಾರಿಫ್ ಎದುರಿಸುತ್ತಿರುವ ದೇಶಗಳು

  • ಬ್ರಿಟನ್: ಶೇ. 10
  • ಯೂರೋಪಿಯನ್ ಒಕ್ಕೂಟ: ಶೇ. 15
  • ಸ್ವಿಟ್ಜರ್​ಲ್ಯಾಂಡ್: ಶೇ. 15
  • ಜಪಾನ್: ಶೇ. 15
  • ಸೌತ್ ಕೊರಿಯಾ: ಶೇ. 15

ಡೊನಾಲ್ಡ್ ಟ್ರಂಪ್ ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ನೀಡಿರುವ ಹೇಳಿಕೆ ಪ್ರಕಾರ, ಅಮೆರಿಕದ ಸರಕುಗಳ ಮೇಲೆ ಟ್ಯಾರಿಫ್ ಅನ್ನು ಭಾರತ ಸೊನ್ನೆಗೆ ಇಳಿಸಲಿದೆ. ಅಮೆರಿಕದ ಕೃಷಿ ಉತ್ಪನ್ನಗಳಿಗೆ ಭಾರತ ಮಾರುಕಟ್ಟೆ ಪ್ರವೇಶ ನೀಡಲಿದೆ. ಆದರೆ, ಈ ಬಗ್ಗೆಯೂ ಭಾರತದ ವತಿಯಿಂದ ಹೇಳಿಕೆ ಬಂದಿಲ್ಲ.

ಇದನ್ನೂ ಓದಿ: ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅತ್ಯಗತ್ಯ; ಸುಂಕ ಕಡಿತದ ಬಳಿಕ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ

ಭಾರತ ಹಾಗೂ ಅಮೆರಿಕ ನಡುವೆ ಟ್ರೇಡ್ ಡೀಲ್ ಕುದುರಿದೆ ಎನ್ನುವ ಸುದ್ದಿಯು ಭಾರತೀಯ ಷೇರು ಮಾರುಕಟ್ಟೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ. ನಿಫ್ಟಿ, ಸೆನ್ಸೆಕ್ಸ್​ನ ಎಲ್ಲಾ ಸೂಚ್ಯಂಕಗಳೂ ಹಸಿರು ಬಣ್ಣಕ್ಕೆ ತಿರುಗಿವೆ. ಭಾರತದ ಅನೇಕ ಉದ್ದಿಮೆಗಳು ಉತ್ಸಾಹದಿಂದ ಗರಿಗೆದರುವಂತಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಿಲಿಕಾನ್ ಸಿಟಿಗೇ ಬಂತು ಚಿರತೆ! ಬೆಂಗಳೂರಿನ ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್ – Kannada News | Leopard Spotted in Bengaluru’s Anjanapura, CCTV Video Sparks Panic Near Turahalli Forest

ಬೆಂಗಳೂರು, ಫೆಬ್ರವರಿ 3: ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭಾರಿ ಆತಂಕ ಮೂಡಿಸಿದೆ. ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಚಿರತೆ ಓಡಾಡುತ್ತಿರುವ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ತುರಹಳ್ಳಿ ಅರಣ್ಯ ಪ್ರದೇಶದ ಸಮೀಪದಲ್ಲೇ ಅಂಜನಾಪುರ ಇರುವುದರಿಂದ ಅರಣ್ಯದಿಂದಲೇ ಚಿರತೆ ನುಗ್ಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್​ ಕ್ಲಾಸ್ ಭಾಗ್ಯ! – Kannada News | Karnataka Govt Schools Get Rs.91.5 Cr for Smart Classes: Boosting Digital Education

ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್​ ಕ್ಲಾಸ್ ಭಾಗ್ಯ!

ಬೆಂಗಳೂರು, ಫೆಬ್ರುವರಿ 03: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ವಿಸ್ತಾರಗೊಳಿಸಲು ಸಮಗ್ರ ಶಿಕ್ಷಣ ಕರ್ನಾಟಕದಡಿ ಸ್ಮಾರ್ಟ್ ಕ್ಲಾಸ್  (Smart Class) ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ. ಯೋಜನಾ ಅನುಮೋದನ ಮಂಡಳಿಯ ತೀರ್ಮಾನದಂತೆ, 3862 ಶಾಲೆಗಳಲ್ಲಿ 9154.80 ಲಕ್ಷ ರೂ. ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ಯೋಜನೆ ಅನುಷ್ಠಾನಗೊಳ್ಳಲಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು ಹಾಗೂ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಿಂದೆಯೂ ಹೇಳಿಕೆ ನೀಡಿದ್ದರು. ಇದೀಗ ಹಿರಿಯ ಪ್ರಾಥಮಿಕ ಶಾಲೆಗಳಿಗೆ 3 ಸಾವಿರ ಲಕ್ಷ ರೂ. ಗೂ ಹೆಚ್ಚು ಹಣ ಮೀಸಲಿಡಲಾಗಿದ್ದು, ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 4 ಸಾವಿರ ಲಕ್ಷ ರೂ. ಮೀಸಲಿಡಲಾಗಿದೆ ಎಂದು ಹೇಳಲಾಗಿದೆ. ಇದರ ಮೂಲಕ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಡಿಜಿಟಲ್ ಶಿಕ್ಷಣ ಸೌಲಭ್ಯ ವಿಸ್ತಾರಗೊಳ್ಳಲಿದೆ ಮತ್ತು ಶಾಲಾ ಶಿಕ್ಷಣ ಗುಣಮಟ್ಟದಲ್ಲಿ ಸುಧಾರಣೆ ಕಾಣಬಹುದಾಗಿದೆ.

ಯಾವೆಲ್ಲಾ ವಿಭಾಗಗಳಿಗೆ ಎಷ್ಟೆಷ್ಟು ಅನುದಾನ ಮೀಸಲು

  •  1631 ಹಿರಿಯ ಪ್ರಾಥಮಿಕ ಶಾಲೆಗಳಿಗೆ 3914.40 ಲಕ್ಷ ರೂಗಳು ಮೀಸಲು
  •  95 ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯಗಳಿಗೆ 114 .00 ಲಕ್ಷ ರೂ ಮೀಸಲು
  • 1326 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 651 ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 4744.80 ಲಕ್ಷ ಮೀಸಲು
  • 4. 159 ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 381.6 ಲಕ್ಷ ಮೀಸಲು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ – Kannada News | Have you ever seen a wild gaur roar, video goes viral

ಮಾನವನ ಸ್ವಾರ್ಥಕ್ಕೆ ಕಾಡು ಪ್ರಾಣಿಗಳ (wild animals) ಆವಾಸ ಸ್ಥಾನಗಳು ನಾಶವಾಗುತ್ತಿದೆ. ಹೀಗಾಗಿ ಕ್ರೂರ ಪ್ರಾಣಿಗಳು ಜನವಸತಿ ಪ್ರದೇಶದತ್ತ ಬರುತ್ತಿವೆ. ಅದಲ್ಲದೇ, ಈ ಕಾಡುಕೋಣಗಳು ಜನರ ಮೇಲೆ ದಾಳಿ ಮಾಡುವ ಸುದ್ದಿಗಳನ್ನು ನೀವು ಕೇಳಿರುತ್ತೀರಿ.  ವೈರಲ್‌ ಆಗಿರುವ ಈ ವಿಡಿಯೋದಲ್ಲಿ ದೈತ್ಯಾಕಾರದ ಕಾಡು ಕೋಣ (wild gaur) ಘೀಳಿಡುವುದನ್ನು ನೋಡಿದ್ರೆ ಮೈ ಜುಮ್ ಎನ್ನುತ್ತೆ. ಇದಕ್ಕೆ ಸಂಬಂಧಿಸಿದ ಕ್ಲಿಪಿಂಗ್‌ ವೈರಲ್‌ ಆಗುತ್ತಿದ್ದಂತೆ ಈ ದೃಶ್ಯ ನೋಡಿದ ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ.

ಸಿ ಆರ್ ನಾಗೇಶ್ (C. R Nagesh) ಹೆಸರಿನ ಫೇಸ್ ಬುಕ್ ಹೆಸರಿನ ಖಾತೆಯಲ್ಲಿ ಹಂಚಿ ಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಕಾಡುಕೋಣವೊಂದು ಮುಖವನ್ನೆತ್ತಿ ಘೀಳಿಡುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ದೀರ್ಘವಾದ ಓಂಕಾರ ಎಂದಿದ್ದಾರೆ. ಮತ್ತೊಬ್ಬರು ಇದು ಯಾವ ಊರಲ್ಲಿ ಮಾರಾರ್ರೆ, ಸೈತಾನ್ ಇದ್ದ ಹಾಗೆ ಇದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನೀನೇ ರಾಜ ಕಣೋ ಎಂದು ತಮಾಷೆಯಾಗಿ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರೋಹಿತ್ ಶೆಟ್ಟಿ ಮನೆಮೇಲಿನ ದಾಳಿಗೆ ನಾಲ್ಕು ತಿಂಗಳ ಹಿಂದೆಯೇ ನಡೆದಿತ್ತು ಪ್ಲ್ಯಾನ್ – Kannada News | Rohit Shetty Attack: Bishnoi Gang Targets Bollywood, Police Probe Intensifies

ಬಾಲಿವುಡ್‌ನಲ್ಲಿ ಈಗ ಭಯದ ವಾತಾವರಣ ಸೃಷ್ಟಿ ಆಗಿದೆ. ಏಕೆಂದರೆ ಕಳೆದ ಕೆಲವು ತಿಂಗಳುಗಳಲ್ಲಿ, ಅನೇಕ ಪ್ರಸಿದ್ಧ ಮತ್ತು ಜನಪ್ರಿಯ ಸೆಲೆಬ್ರಿಟಿಗಳ ಮನೆಗಳ ಮೇಲೆ ಗುಂಡಿನ ದಾಳಿ ನಡೆದಿದೆ. ಕೆಲವು ದಿನಗಳ ಹಿಂದೆ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ (Rohit Shetty) ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆದಿತ್ತು. ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಗುಂಡಿನ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಪೋಸ್ಟ್ ಮಾಡುವ ಮೂಲಕ ಬಿಷ್ಣೋಯ್ ಗ್ಯಾಂಗ್ ಘಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ರೋಹಿತ್ ಶೆಟ್ಟಿ ಮನೆಯ ಹೊರಗೆ ಗುಂಡಿನ ದಾಳಿ ನಡೆಸಲು 4 ತಿಂಗಳ ಹಿಂದೆಯೇ ಸಂಚು ರೂಪಿಸಲಾಗಿತ್ತು.

ಆರೋಪಿಯು ಶೂಟಿಂಗ್‌ಗೆ ಬಳಸಿದ್ದ ಸ್ಕೂಟರ್ ಅನ್ನು ಕೇವಲ 4 ತಿಂಗಳ ಹಿಂದೆ ಖರೀದಿಸಿದ್ದ. ಆರೋಪಿ ಅಮನ್ ಮರೋಟೆ ಈ ಬೈಕನ್ನು ಇತರ ಇಬ್ಬರು ಆರೋಪಿಗಳಿಗೆ ನೀಡಿದ್ದ. ಅವರು ಮುಂಬೈಗೆ ಬಂದು ಈ ಬೈಕನ್ನು ಪ್ರಮುಖ ಶೂಟರ್‌ಗೆ ತಲುಪಿಸಿದ್ದರು. ಈ ಬೈಕನ್ನು ತೆಗೆದುಕೊಂಡು ಆರೋಪಿಯು ರೋಹಿತ್ ಶೆಟ್ಟಿ ಮನೆಗೆ ಹೋಗಿ ಶೆಟ್ಟಿ ಮನೆಯ ಮೇಲೆ ಗುಂಡು ಹಾರಿಸಿದ್ದಾನೆ.

ಪೊಲೀಸರು ಇದುವರೆಗೆ 4 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದಾರೆ. ಇದಷ್ಟೇ ಅಲ್ಲ, ತಲೆಮರೆಸಿಕೊಂಡಿರುವ ಆರೋಪಿಯು ಶುಭಂ ಲೋಂಕರ್ ಜೊತೆ ನಿರಂತರ ಸಂಪರ್ಕದಲ್ಲಿದ್ದಾನೆ ಎಂಬುದು ಬೆಳಕಿಗೆ ಬಂದಿದೆ. ಆರೋಪಿ ಶುಭಂ ಲೋಂಕರ್ ಆರೋಪಿಗಳನ್ನು ಸಂಪರ್ಕಿಸಲು ಸಿಗ್ನಲ್ ಆ್ಯಪ್ ಬಳಸಿದ್ದಾನೆ.

ಈ ಪ್ರಕರಣದಲ್ಲಿ ಮುಂಬೈ ಅಪರಾಧ ವಿಭಾಗವು ಲಾರೆನ್ಸ್ ಬಿಷ್ಣೋಯ್ ಅವರ ಹೇಳಿಕೆಯನ್ನು ದಾಖಲಿಸುವ ಸಾಧ್ಯತೆಯಿದೆ. ರೋಹಿತ್ ಶೆಟ್ಟಿ ಗುಂಡಿನ ದಾಳಿ ಪ್ರಕರಣದಲ್ಲಿ ಲಾರೆನ್ಸ್ ಹೇಳಿಕೆಯನ್ನು ದಾಖಲಿಸಲು ಅಪರಾಧ ವಿಭಾಗದ ಅಧಿಕಾರಿಗಳು ಗುಜರಾತ್‌ನ ಶಬರಮತಿ ಜೈಲಿಗೆ ಹೋಗಲಿದ್ದಾರೆ ಎನ್ನಲಾಗಿದೆ. ಕೆಲವು ಕಾನೂನು ಸಮಸ್ಯೆಗಳಿಂದಾಗಿ, ಲಾರೆನ್ಸ್ ಬಿಷ್ಣೋಯ್​ನ ಪೊಲೀಸ್ ಕಸ್ಟಡಿಗೆ ಪಡೆಯಲು ಸಾಧ್ಯವಾಗಿಲ್ಲ.

ಇದನ್ನೂ ಓದಿ:‘ಗೋಲ್​​ಮಾಲ್’ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ 

ಮೊದಲು ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ, ನಂತರ ಬಾಬಾ ಸಿದ್ದಿಕಿ ಅವರ ಮನೆ ಮೇಲೆ ಮತ್ತು ಈಗ ರೋಹಿತ್ ಶೆಟ್ಟಿ ಅವರ ಮನೆಯ ಮೇಲೆ ಗುಂಡು ಹಾರಿಸಲಾಯಿತು. ಈ ಎಲ್ಲಾ ಅಪರಾಧಗಳನ್ನು ಬಿಷ್ಣೋಯ್ ಗ್ಯಾಂಗ್ ಮಾಡಿದ್ದಾರೆ ಎಂಬುದು ಬಹಿರಂಗವಾಗಿದೆ. ರೋಹಿತ್ ಶೆಟ್ಟಿ ಪ್ರಕರಣದಲ್ಲೂ, ಅಪರಾಧ ವಿಭಾಗದ ಅಧಿಕಾರಿಗಳು ನ್ಯಾಯಾಲಯದ ಅನುಮತಿಯೊಂದಿಗೆ ಲಾರೆನ್ಸ್ ಅವರನ್ನು ಪ್ರಶ್ನಿಸುವ ಸಾಧ್ಯತೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಾಕಿಸ್ತಾನ್ ತಂಡ ಭಾರತ ವಿರುದ್ಧ ಆಡಲು ಹೆದರುತ್ತಿದ್ದೆ ಅಂದುಕೊಳ್ಳುತ್ತಿದ್ದಾರೆ! – Kannada News | Danish Kaneria Slams Pakistan’s T20 World Cup 2026 boycott

ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ನಡೆಯನ್ನು ಪಾಕ್​ನ ಮಾಜಿ ಆಟಗಾರ ದಾನಿಶ್ ಕನೇರಿಯಾ ಖಂಡಿಸಿದ್ದಾರೆ. ಈ ಬಗ್ಗೆ ಖಾಸಗಿ ಚಾನೆಲ್​ ಜೊತೆ ಮಾತನಾಡಿರುವ ಅವರು, ಪಾಕ್​ನ ಈ ನಿರ್ಧಾರದಿಂದ ಎಲ್ಲರೂ ನಮ್ಮ ತಂಡ ಭಾರತದ ವಿರುದ್ಧ ಆಡಲು ಹೆದರುತ್ತಿದ್ದಾರೆ ಎಂಬ ಸಂದೇಶ ರವಾನೆಯಾಗುತ್ತಿದೆ ಎಂದಿದ್ದಾರೆ.

ಇದಕ್ಕೂ ಮುನ್ನ ಪಾಕಿಸ್ತಾನ್ ತಂಡವು ಭಾರತದಲ್ಲಿ ಆಡಲು ನಿರಾಕರಿಸಿತ್ತು. ಅಲ್ಲದೆ ತಟಸ್ಥ ಸ್ಥಳದಲ್ಲಿ ಪಂದ್ಯ ಆಯೋಜಿಸಬೇಕೆಂದು ಬೇಡಿಕೆಯಿಟ್ಟಿದ್ದರು. ಅದರಂತೆ ಇದೀಗ ಶ್ರೀಲಂಕಾದಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವನ್ನು ಆಯೋಜಿಸಲಾಗುತ್ತಿದೆ. ಇದೀಗ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಹೇಳುತ್ತಿದೆ. ಇದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಕನೇರಿಯಾ ಹೇಳಿದ್ದಾರೆ.

ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತೆಗೆದುಕೊಂಡಿರುವ ಈ ನಿರ್ಧಾರದಿಂದ, ಪಾಕಿಸ್ತಾನವು ಭಾರತವನ್ನು ಎದುರಿಸಲು ಹೆದರುತ್ತಿದೆ ಎಂದು ಜನರು ಭಾವಿಸುತ್ತಿದ್ದಾರೆ. ಅಂತಹದೊಂದು ಸಂದೇಶ ರವಾನೆ ಆಗುತ್ತಿದೆ. ಭಯದ ಕಾರಣದಿಂದಲೇ ಅವರು ಆಡಲು ನಿರಾಕರಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಪಿಸಿಬಿ ತನ್ನ ನಿರ್ಧಾರವನ್ನು ಬದಲಿಸಬೇಕೆಂದು ದಾನಿಶ್ ಕನೇರಿಯಾ ಆಗ್ರಹಿಸಿದ್ದಾರೆ.

ಪಾಕ್ ಕ್ರಿಕೆಟ್ ಮಂಡಳಿಯು, ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿರುವ ಬಾಂಗ್ಲಾದೇಶ್​ಗೆ ಬೆಂಬಲವಾಗಿ ಪಂದ್ಯ ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡಿದೆ. ಇದರ ಬದಲು ಪಿಸಿಬಿ ತನ್ನದೇ ಆದ ಕ್ರಿಕೆಟ್ ಅಭಿವೃದ್ಧಿಗೆ ಆದ್ಯತೆ ನೀಡಬೇಕು.

ಹೀಗಾಗಿ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ಕಣಕ್ಕಿಳಿಯಬೇಕು. ಬಹಿಷ್ಕಾರದಂತಹ ನಿರ್ಧಾರದಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹಿಂದೆ ಸರಿಯಬೇಕು ಎಂದು ದಾನಿಶ್ ಕನೇರಿಯಾ ಆಗ್ರಹಿಸಿದ್ದಾರೆ.

ಬಹಿಷ್ಕಾರದಿಂದ ಯಾರಿಗೆ ಲಾಭ?

ಪಾಕಿಸ್ತಾನ್ ತಂಡವು ಪಂದ್ಯ ಬಹಿಷ್ಕರಿಸಿದರೆ ಭಾರತ ತಂಡಕ್ಕೆ ಸಂಪೂರ್ಣ 2 ಅಂಕಗಳು ದೊರೆಯಲಿದೆ. ಇದರಿಂದ ಪಾಕಿಸ್ತಾನ್ ತಂಡದ ನೆಟ್ ರನ್ ರೇಟ್ ಮೇಲೆ ಪರಿಣಾಮ ಬೀರಲಿದೆ. ಇದಾಗ್ಯೂ ಐಸಿಸಿ ಹಾಗೂ ಬಿಸಿಸಿಐ ಆದಾಯಕ್ಕೆ ಹೊಡೆತ ನೀಡುವ ಸಲುವಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಪಂದ್ಯ ಬಹಿಷ್ಕರಿಸುವ ಬೆದರಿಕೆಯೊಡ್ಡಿದೆ.

ಇದನ್ನೂ ಓದಿ: 19 ಟೀಮ್​ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..!

ಈ ಬೆದರಿಕೆ ಬೆನ್ನಲ್ಲೇ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಐಸಿಸಿ ಸೂಚಿಸಿದೆ. ಇದಾಗ್ಯೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದರೆ ಐಸಿಸಿ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

Source link