ಸೊಳ್ಳೆಯ ಕಾಟದಿಂದ ಪಾರಾಗಲು ಮನೆಯಲ್ಲಿ ಈ ಗಿಡಗಳನ್ನು ನೆಡುವುದು ಉತ್ತಮ – Kannada News
ಮುಂಗಾರು ಮಳೆ ಆರಂಭವಾಗಿದ್ದು, ಈ ಮಳೆಗಾಲದಲ್ಲಿ ಮಳೆಯೊಂದಿಗೆ ಸೊಳ್ಳೆಗಳ (mosquitoes) ಕಾಟವೂ ತೀರಾ ಹೆಚ್ಚಿರುತ್ತದೆ. ನಿಂತ ಮಳೆನೀರಿನಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡಲು ಪ್ರಾರಂಭಿಸುತ್ತವೆ. ಇದರಿಂದಾಗಿ ಮಳೆಗಾಲದಲ್ಲಿ ಸೊಳ್ಳೆಗಳು ಹೆಚ್ಚಾಗುವುದಲ್ಲದೆ ಇವು ಮಲೇರಿಯಾ, ಡೆಂಗ್ಯೂ ಮತ್ತು ಚಿಕೂನ್ಗುನ್ಯಾದಂತಹ ಕಾಯಿಲೆಯ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಹೀಗಾಗಿ ಈ ಸೊಳ್ಳೆಗಳ ಕಾಟದಿಂದ ಪಾರಾಗಲು ಜನ ನಾನಾ ಸರ್ಕಸ್ಗಳನ್ನು ಮಾಡುತ್ತಾರೆ. ಹೆಚ್ಚಾಗಿ ಕಾಯಿಲೆ, ಲಿಕ್ವಿಡ್ನಂತಹ ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಆರೋಗ್ಯದ ದೃಷ್ಟಿಯಿಂದ ಇವುಗಳ ಬಳಕೆ ಅಷ್ಟೇನು ಒಳ್ಳೆಯದಲ್ಲ. ಇಂತಹ ಪರಿಸ್ಥಿತಿಯಲ್ಲಿ ಮನೆಯ ಸುತ್ತಮುತ್ತಲಿನ…