Headlines

ಖರ್ಜೂರ ಅಥವಾ ಬಾದಾಮಿ; ಈ ಋತುಮಾನಕ್ಕೆ ಯಾವುದರ ಸೇವನೆ ಆರೋಗ್ಯಕರ? – Kannada News | Winter Dry Fruits: Almonds vs Dates Showdown

ಚಳಿಗಾಲದಲ್ಲಿ, ದೇಹದ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದು ಸಾಮಾನ್ಯ. ಪರಿಣಾಮವಾಗಿ, ಕಾಲೋಚಿತ ಕಾಯಿಲೆಗಳಿಗೆ ದೇಹ ಬೇಗ ಒಡ್ಡಿಕೊಳ್ಳುವ ಸಾಧ್ಯತೆ ಹೆಚ್ಚಾಗುತ್ತದೆ. ಹಾಗಾಗಿ, ಈ ಋತುಮಾನದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ದೇಹವನ್ನು ಒಳಗಿನಿಂದ ಬೆಚ್ಚಗಿಡುವ ಆಹಾರ ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ನಿಯಮಿತವಾಗಿ ಖರ್ಜೂರ (Dates) ಮತ್ತು ಬಾದಾಮಿಯಂತಹ ಒಣ ಹಣ್ಣುಗಳ ತಿನ್ನಿ ಎಂದು ಸಲಹೆ ನೀಡುತ್ತಾರೆ. ಇವೆರಡೂ ಆರೋಗ್ಯಕರ, ಆದರೆ ಅವುಗಳ ಪ್ರಯೋಜನಗಳು ವಿಭಿನ್ನವಾಗಿರುತ್ತದೆ. ಹಾಗಾದರೆ ಇವೆರಡರಲ್ಲಿ ಯಾವುದು ಒಳ್ಳೆಯದು, ಇವುಗಳ ಸೇವನೆಯಿಂದ…

Read More

ಏರ್ ಇಂಡಿಯಾ ಡ್ರೀಮ್‌ಲೈನರ್​ನಲ್ಲಿ ಮತ್ತೆ ಇಂಧನದ ಸ್ವಿಚ್ ಸಮಸ್ಯೆ; ಲಂಡನ್-ಬೆಂಗಳೂರು ಮಾರ್ಗದ ವಿಮಾನ ಹಾರಾಟ ಸ್ಥಗಿತ – Kannada News | Air India Dreamliner Grounded After Fuel Switch issue scare in London to Bengaluru flight

ಬೆಂಗಳೂರು, ಫೆಬ್ರವರಿ 2: ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಮಸ್ಯೆ ಪತ್ತೆಯಾದ ನಂತರ ಏರ್ ಇಂಡಿಯಾ (Air India) ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಹಾರಾಟವನ್ನು ಇಂದು ಸ್ಥಗಿತಗೊಳಿಸಲಾಗಿದೆ. ಈ ವಿಮಾನ ಲಂಡನ್​​ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿತ್ತು. AI 132 ವಿಮಾನವು ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಾರುತ್ತಿತ್ತು. ಈ ವೇಳೆ ಪೈಲಟ್ ವಿಮಾನದ ಕಾರ್ಯವಿಧಾನವನ್ನು ಪರಿಶೀಲಿಸುವಾಗ ಫ್ಯೂಯೆಲ್ ಕಂಟ್ರೋಲ್ ಸ್ವಿಚ್​​ನಲ್ಲಿ ಸಮಸ್ಯೆ ಕಂಡುಬಂದಿತ್ತು. ತಕ್ಷಣ ಅವರು ಏರ್ ಇಂಡಿಯಾ ಅಧಿಕಾರಿಗಳಿಗೆ ಈ ಬಗ್ಗೆ…

Read More

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್ – Kannada News | Priya Hassan condemns Chakravarthy Chandrachud statement on movie producers

ಕಿಚ್ಚ ಸುದೀಪ್ ಅವರ ಆಪ್ತರಾದ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಸಿನಿಮಾ ನಿರ್ಮಾಪಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ಅನೇಕ ನಿರ್ಮಾಪಕರು ಖಂಡಿಸುತ್ತಿದ್ದಾರೆ. ನಟಿ, ನಿರ್ಮಾಪಕಿ ಪ್ರಿಯಾ ಹಾಸನ್ ಸಹ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಟಿವಿ9 ಜತೆ ಅವರು ಮಾತನಾಡಿದ್ದಾರೆ. ‘ಚಂದ್ರಚೂಡ್ ಅವರ ವಿಡಿಯೋ ನೋಡಿದಾಗ ನನಗೆ ಅಸಹ್ಯ ಅನಿಸಿತು. ಅಷ್ಟು ಅಸಭ್ಯವಾದ ಪದವನ್ನು ಅವರು ಬಳಸಿದ್ದಾರೆ. ಹೆಣ್ಮಕ್ಕಳು ಕೇಳಲು ಹಿಂಜರಿಯುವಂತಹ ಪದ ಬಳಕೆ ಮಾಡಿದ್ದಾರೆ. ಡಾ. ರಾಜ್​ಕುಮಾರ್ ಅವರು ನಿರ್ಮಾಪಕರನ್ನು ಅನ್ನದಾತರು ಎಂದಿದ್ದರು….

Read More

ಆ್ಯಂಬುಲೆನ್ಸ್​ಗೆ ಕಾದು ಕಾದು ಸಾಕಾಗಿ ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ! – Kannada News | Madhya Pradesh Woman Delivers Baby On Roadside After Ambulance Fails To Arrive At Her Village

ನವದೆಹಲಿ, ಫೆಬ್ರವರಿ 2: ಆ ಮಹಿಳೆ ಹೊಟ್ಟೆ ನೋವಿನಿಂದ ಒದ್ದಾಡುತ್ತಿದ್ದರು. ಅವರು ಅಂದುಕೊಂಡದ್ದಕ್ಕಿಂತ ಮೊದಲೇ ಹೆರಿಗೆ ನೋವು (Delivery Pain) ಕಾಣಿಸಿಕೊಂಡಿದ್ದರಿಂದ ತಕ್ಷಣ ತಮ್ಮ ಹಳ್ಳಿಯಿಂದ ಆಸ್ಪತ್ರೆಗೆ ಹೋಗಲೇಬೇಕಾಗಿತ್ತು. ಆದರೆ, ಆ ಊರಿಗೆ ರಸ್ತೆ ಸರಿ ಇಲ್ಲದ ಕಾರಣದಿಂದ ಆ್ಯಂಬುಲೆನ್ಸ್​ (Ambulance) ಬರುವುದೇ ಕಷ್ಟವಾಗಿತ್ತು. ಆದರೂ ಅನಿವಾರ್ಯವಾದ್ದರಿಂದ ಹಾಗೂ ಬೇರೆ ವಾಹನಗಳಲ್ಲಿ ಅವರನ್ನು ಕರೆದುಕೊಂಡು ಹೋಗಲಾಗದ ಸ್ಥಿತಿ ಇದ್ದುದರಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆ್ಯಂಬುಲೆನ್ಸ್​ ಕಳುಹಿಸಲು ಮನವಿ ಮಾಡಲಾಗಿತ್ತು. ಆದರೆ, ಈಗ ಬರುತ್ತೇವೆಂದು ಆ್ಯಂಬುಲೆನ್ಸ್​ನವರು ಹೇಳಿದ್ದರಿಂದ ಆ…

Read More

ಮಗುವಿಗೆ ಜನ್ಮ ನೀಡಿದ 8ನೇ ಕ್ಲಾಸ್ ಬಾಲಕಿ; ಹಾಸ್ಟೆಲ್​ನಲ್ಲಿದ್ದ ಬಾಲಕಿ ಗರ್ಭಿಣಿಯಾಗಿದ್ದು ಹೇಗೆ? – Kannada News | Class 8 student gets pregnant in Government Hostel Gave Birth to Child

ನವದೆಹಲಿ, ಫೆಬ್ರವರಿ 2: ಆಕೆಗೆ ಕೇವಲ 13 ವರ್ಷ. ಓದುವ ಸಲುವಾಗಿ ಮನೆಯಲ್ಲಿ ಹಠ ಮಾಡಿ ಹಾಸ್ಟೆಲ್ ಸೇರಿದ್ದ ಆಕೆ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತಮ್ಮ ಮಗಳು ಸರ್ಕಾರಿ ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದರೆ, ಆಕೆ ಗರ್ಭಿಣಿಯಾಗಿದ್ದಾಳೆ ಎಂಬ ವಿಷಯ ತಿಳಿದು ಅವರ ಎದೆ ಒಡೆದುಹೋಗಿತ್ತು. ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೆರಲು ಸಾಧ್ಯವಿಲ್ಲವೆಂದು ಆ ಮಗುವನ್ನು ಅಬಾರ್ಷನ್ ಮಾಡಿಸೋಣ ಎಂದು ಅವರು ನಿರ್ಧಾರ ಮಾಡುವಷ್ಟರಲ್ಲಿ ಸಮಯ ಮೀರಿ ಹೋಗಿತ್ತು….

Read More

ಬೆಂಗಳೂರಿನಲ್ಲಿ ಈ ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ, ಯಾವಾಗ-ಎಲ್ಲೆಲ್ಲಿ? – Kannada News | Bengaluru to face 2 day Cauvery water disruption on Feb 5 And 6 due to BWSSB emergency pipeline works

ಬೆಂಗಳೂರು, (ಫೆಬ್ರವರಿ 02): ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ ಫೆಬ್ರವರಿ 5 ಮತ್ತು 6ರಂದು ಬೆಂಗಳೂರು ನಗರದ ವಿವಿಧೆಡೆ ಕಾವೇರಿ ನೀರು (Cauvery water )ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಮಾಹಿತಿ ನೀಡಿದ್ದು, ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900…

Read More

ಭಾರತ-ಅಮೆರಿಕ ಟ್ರೇಡ್ ಡೀಲ್ ಮಾತುಕತೆ ಬಹುತೇಕ ಪೂರ್ಣ: ವಾಣಿಜ್ಯ ಕಾರ್ಯದರ್ಶಿ – Kannada News | India US trade deal talks near completion, says commerce secretary Rajesh Agarwal

ನವದೆಹಲಿ, ಫೆಬ್ರುವರಿ 2: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ (India US trade deal) ಅಂತಿಮ ಹಂತದಲ್ಲಿದ್ದು, ಬಹುತೇಕ ಪೂರ್ಣಗೊಂಡಿದೆ ಎಂದು ವಾಣಿಜ್ಯ ಕಾರ್ಯದರ್ಶಿ ಹಾಗೂ ಈ ಡೀಲ್​ಗೆ ಭಾರತದ ಮುಖ್ಯ ಸಂಧಾನಕಾರರಾದ ರಾಜೇಶ್ ಅಗರ್ವಾಲ್ ಹೇಳಿದ್ದಾರೆ. ಡೀಲ್ ಮುಗಿದೇ ಹೋಯಿತು ಎಂದು ಆಗಾಗ್ಗೆ ಮಿಂಚಿ ಮಾಯವಾಗುತ್ತಿದ್ದ ಭರವಸೆಗೆ ರಾಜೇಶ್ ಅಗರ್ವಾಲ್ ಜೀವ ತುಂಬಿದ್ದಾರೆ. ಎರಡು ದೇಶಗಳ ನಡುವೆ ವ್ಯಾಪಾರ ಸಂಧಾನ ಸರಿಯಾದ ದಿಸೆಯಲ್ಲಿದೆ ಎನ್ನುವ ಸುಳಿವನ್ನು ಅವರು ನೀಡಿದ್ದಾರೆ. ದೊಡ್ಡ ಡೀಲ್​ಗೆ…

Read More

ಬೆಂಗಳೂರು ಚಿತ್ರೋತ್ಸವ: ಫೆ.3ರಂದು ವೀಕ್ಷಿಸಬಹುದಾದ 10 ಬೆಸ್ಟ್ ಸಿನಿಮಾಗಳಿವು.. – Kannada News | Watch these 10 movies on Feb 3 in Bengaluru International Film Festival

ಹಲವು ದೇಶಗಳ ಸಿನಿಮಾಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFes) ಪ್ರದರ್ಶನ ಮಾಡಲಾಗುತ್ತಿದೆ. ಸುಚಿತ್ರಾ ಫಿಲ್ಮ್ ಸೊಸೈಟಿ, ಲುಲು ಮಾಲ್ ಹಾಗೂ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗುತ್ತಿದೆ. ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಥೀಮ್​​ನಲ್ಲಿ ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಯಾವ ಸಿನಿಮಾ ನೋಡಬೇಕು ಎಂಬ ಗೊಂದಲ ಇದ್ದವರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ.. 1. ಡೆಡ್ ಡಾಗ್ – ಲೆಬನಾನ್/ ಫ್ರಾನ್ಸ್. (ಸಮಯ: ಮಧ್ಯಾಹ್ನ 3:10, ಸ್ಕ್ರೀನ್ 1). ವಿವರ: ಸಾರಾ ಫ್ರಾನ್ಸಿಸ್ ನಿರ್ದೇಶನದ ಈ 2025ರ…

Read More

ಸೋಲಾರ್ ಪ್ಲಾಂಟ್ ಹೆಸರಲ್ಲಿ ಗುಡ್ಡ ಅಗೆದು ಮರಗಳ ಮಾರಣಹೋಮ: ಇದರ ಹಿಂದೆ ‘ಲಕ್ಷ್ಮೀ’ ಕೃಪಾಕಟಾಕ್ಷ? – Kannada News | Belagavi Forest Destruction: Illegal Sandalwood Felling for Solar Plant Outrages Locals

ಬೆಳಗಾವಿ, ಫೆಬ್ರವರಿ 02: ಅದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರ ತವರು ಕ್ಷೇತ್ರ. ಸಂಗೊಳ್ಳಿ ರಾಯಣ್ಣ ಕೂಡ ಈ ಕೌರಿ ಗುಡ್ಡದಲ್ಲಿ ಉಳಿದಿದ್ದ ಅನ್ನೋದು ಇತಿಹಾಸ. ಈ ಗುಡ್ಡದಲ್ಲಿ ಶ್ರೀಗಂಧದ ಮರ ಸೇರಿದಂತೆ ಹಲವು ಬಗೆಯ ಗಿಡಗಳು, ಪ್ರಾಣಿ-ಪಕ್ಷಿಗಳು ವಾಸವಾಗಿವೆ. ಆದರೆ ಇದೀಗ ಸೋಲಾರ್ ಪ್ಲಾಂಟ್ ಹೆಸರಿನಲ್ಲಿ  ಗುಡ್ಡವನ್ನೇ ಅಗೆಯಲಾಗಿದ್ದು, ಸಾವಿರಾರು ಮರಗಳ (tree) ಮಾರಣಹೋಮವೇ ನಡೆದಿದೆ. ಸದ್ಯ ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ತಾಲೂಕಿನ ಬಡಲಾ ಅಂಕಲಗಿ ಗ್ರಾಮದಲ್ಲಿ ಕಳೆದ ಒಂದೂವರೆ…

Read More

ರಾತ್ರಿ ಮಲಗುವ ಮುನ್ನ ಮಾಡುವ ಈ ತಪ್ಪುಗಳು ನಿಮ್ಮ ನಿದ್ರಗೆ ಭಂಗ ತರಬಹುದು ಎಚ್ಚರ! – Kannada News | Never make these mistakes before going to bed at night

ದೇಹಾರೋಗ್ಯಕ್ಕೆ ಆಹಾರದಂತೆ ನಿದ್ರೆಯೂ (sleep) ಅತೀ ಅವಶ್ಯಕ. ಅದರಲ್ಲೂ ಪ್ರತಿಯೊಬ್ಬ ವ್ಯಕ್ತಿಯೂ ಕನಿಷ್ಟ ಏಳರಿಂದ ಎಂಟು ಗಂಟೆಗಳ ಕಾಲ ನಿದ್ರೆ ಮಾಡಲೇಬೇಕು. ನಾವು ಸಾಕಷ್ಟು ನಿದ್ರೆ ಮಾಡಿದಾಗ, ನಮ್ಮ ದೇಹವು ದಿನದ ಆಯಾಸದಿಂದ ಚೇತರಿಸಿಕೊಳ್ಳುತ್ತದೆ ಮತ್ತು ಮನಸ್ಸು ಉಲ್ಲಾಸಗೊಳ್ಳುತ್ತದೆ. ಅದೇ ಏಳೆಂಟು ಗಂಟೆ ನಿದ್ರೆ ಮಾಡಲು ಸಾಧ್ಯವಾಗದಿದ್ದರೆ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವುದಲ್ಲದೆ, ದೈನಂದಿನ ಚಟುವಟಿಕೆಯ ಮೇಲೂ ಇದು ಪರಿಣಾಮ ಬೀರುತ್ತದೆ. ಹೀಗೆ ಸರಿಯಾಗಿ ನಿದ್ರೆ ಬಾರದಿರಲು, ನಿದ್ರಾಹೀನತೆ ನಾವು ಮಾಡುವ ಕೆಲವು ತಪ್ಪುಗಳು ಸಹ…

Read More