ಅಣ್ಣಾಮಲೈ ನಮ್ಮ ಪಕ್ಷದ ಕಾರ್ಯಕರ್ತರ ಬ್ರೈನ್ ವಾಶ್ ಮಾಡುತ್ತಿದ್ದಾರೆ; ತಮಿಳುನಾಡು ಬಿಜೆಪಿ ಮುಖ್ಯಸ್ಥ ಆರೋಪ – Kannada News
ಚೆನ್ನೈ, ಜೂನ್ 6: ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಮಾಜಿ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (Annamalai) ಅವರು ಬಿಜೆಪಿಗೆ ರಾಜೀನಾಮೆ ನೀಡಿದ ಮರುದಿನವೇ ತಮಿಳುನಾಡು ಬಿಜೆಪಿ ನೂತನ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ತೀವ್ರ ಆಪಾದನೆ ಮಾಡಿದ್ದಾರೆ. ಅಣ್ಣಾಮಲೈ ಬಿಜೆಪಿಯ ಕೆಲವು ಸದಸ್ಯರ ಬ್ರೈನ್‌ವಾಶ್ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಮಾಜಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ರಾಜೀನಾಮೆಯ ನಂತರ ಯಾರೊಬ್ಬರಿಗೂ ಪಕ್ಷ ತೊರೆಯಲು ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೈನಾರ್…