Category Archives: Blog

Your blog category

ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು – Kannada News

ಬೆಂಗಳೂರು, ಜೂನ್​​ 06: ಸಿಎಂ ಡಿಕೆ ಶಿವಕುಮಾರ್​​ರ ಬೆಂಗಳೂರಿನಲ್ಲಿರುವ ನಿವಾಸಕ್ಕೆ ಲಿಂಗಾಯತ ಸ್ವಾಮೀಜಿಗಳು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿಗಳು ಡಿಕೆ ಶಿವಕುಮಾರ್​​​ಗೆ ಆಶೀರ್ವಾದ ಮಾಡಿ ಶುಭ ಹಾರೈಸಿದರು. ಧಾರವಾಡ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಿಂದಗಿಯ ಡಾಕ್ಟರ್ ಪ್ರಭು ಸಾರಂಗದೇವ ಸ್ವಾಮೀಜಿ, ಸೊಲ್ಲಾಪುರದ ಶ್ರೀಕಂಠ ಶಿವಾಚಾರ್ಯರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯರು, ಶಿವಗಂಗಿಯ ಡಾಕ್ಟರ್ ಮಲೆಯ ಶಾಂತಮುನಿ ಶಿವಾಚಾರ್ಯರು, ಬೆಂಗಳೂರಿನ ಡಾಕ್ಟರ್ ಮಹಾಂತಲಿಂಗ ಶಿವಾಚಾರ್ಯರು ಮತ್ತು ಶಹಾಪುರದ ಶ್ರೀ ಸುಗೂರೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಉಪಸ್ಥಿತರಿದ್ದರು. ಸ್ವಾಮೀಜಿಗಳು ಡಿಕೆ ಶಿವಕುಮಾರ್​ಗೆ ಸನ್ಮಾನ ಮಾಡಿದರು. ಈ ವೇಳೆ ಸಚಿವ ಈಶ್ವರ್ ಖಂಡ್ರೆ ಮತ್ತು ಶಾಸಕ ವಿಜಯಾನಂದ ಕಾಶಪ್ಪನವರ್​​ ಭಾಗಿಯಾಗಿದ್ದರು.

ವರದಿ: ಈರಣ್ಣ ಬಸವ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಒಟಿಟಿಗೆ ಈ ವಾರ ಭರ್ಜರಿ ಸಿನಿಮಾಗಳು, ನೋಡಿ ನೋಡಿ ಮರುಳಾಗಿ

Source link

ಜಸ್ಟ್‌ ಐಸ್‌ಕ್ಯೂಬ್‌ನಿಂದ ಟಾಯ್ಲೆಟ್‌ ಕಲೆ, ವಾಸನೆಯನ್ನು ಹೋಗಲಾಡಿಸಬಹುದು; ಅದು ಹೇಗೆ ಗೊತ್ತಾ? – Kannada News

ಮನೆಯ ವಾತಾವರಣ ಆರೋಗ್ಯಕರವಾಗಿರಬೇಕೆಂದರೆ ಬಾತ್‌ರೂಮ್‌ ಮತ್ತು ಟಾಯ್ಲೆಟ್‌ ತುಂಬಾನೇ ಕ್ಲೀನ್‌ ಆಗಿರಬೇಕು. ಅದರಲ್ಲೂ ಶೌಚಾಲಯದ (toilet) ನೈರ್ಮಲ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು ಇಲ್ಲದಿದ್ದರೆ ರೋಗಾಣುಗಳು ಹರಡುವ ಸಾಧ್ಯತೆ ಇರುತ್ತದೆ. ಇದಕ್ಕಾಗಿಯೇ ಪ್ರತಿಯೊಬ್ಬರೂ ಪ್ರತಿನಿತ್ಯ ಶೌಚಾಲಯವನ್ನು ಕ್ಲೀನ್‌ ಮಾಡುತ್ತಾರೆ. ಟಾಯ್ಲೆಟ್‌ ಅನ್ನು ನಿತ್ಯ ಕ್ಲೀನ್‌ ಮಾಡಿದರೂ, ದುಬಾರಿ ಕ್ಲೀನರ್‌ಗಳನ್ನು ಬಳಸಿ ತಿಕ್ಕಿ ತೊಳೆದರೂ ಹಳದಿ ಕಲೆ, ವಾಸನೆ ಹೋಗೋದೆ ಇಲ್ಲ. ಹೀಗಿರುವಾಗ ಶೌಚಾಲಯವನ್ನು ಐಸ್ ಕ್ಯೂಬ್‌ಗಳಿಂದ ಬಹಳ ಸುಲಭವಾಗಿ ಸ್ವಚ್ಛಗೊಳಿಸಬಹುದು. ಈ ಐಸ್‌ಕ್ಯೂಬ್‌ ಟ್ರಿಕ್ಸ್‌ ಟಾಯ್ಲೆಟ್‌ನ ಕಲೆ, ವಾಸನೆಯನ್ನು ತೆಗೆದುಹಾಕಲು ಹೇಗೆ ಸಹಕಾರಿ ಎಂಬುದನ್ನು ನೋಡೋಣ ಬನ್ನಿ.

ಟಾಯ್ಲೆಟ್‌ ಸ್ವಚ್ಛಗೊಳಿಸಲು ಐಸ್‌ಕ್ಯೂಬ್‌ ಹೇಗೆ ಸಹಕಾರಿ?

ಈ ಟ್ರಿಕ್ ಶೌಚಾಲಯ ಸ್ವಚ್ಛಗೊಳಿಸುವಿಕೆಯನ್ನು ಸುಲಭಗೊಳಿಸುವುದಲ್ಲದೆ ನಿಮ್ಮ ಸಮಯ ಮತ್ತು ಹಣ ಎರಡನ್ನೂ ಉಳಿಸುತ್ತದೆ. ಐಸ್ ಕ್ಯೂಬ್‌ ಶೌಚಾಲಯದ ಮೇಲ್ಮೈಯಿಂದ ಕೊಳಕು ಮತ್ತು ವಾಸನೆಯನ್ನು ಸಡಿಲಗೊಳಿಸಲು ಸಹಾಯ ಮಾಡುತ್ತವೆ. ಶೀತ ತಾಪಮಾನವು ಪೈಪ್‌ಗಳು ಮತ್ತು ಕಮೋಡ್‌ಗಳಲ್ಲಿ ಸಂಗ್ರಹವಾದ ಕೊಳೆಯನ್ನು ದುರ್ಬಲಗೊಳಿಸುತ್ತದೆ. ಇದರಿಂದ ಕಲೆಗಳು ಬೇಗನೆ ನಿವಾರಣೆಯಾಗುತ್ತವೆ.  ಐಸ್‌ಗೆ ಸ್ವಲ್ಪ ಅಡಿಗೆ ಸೋಡಾ ಅಥವಾ ನಿಂಬೆ ರಸವನ್ನು ಸೇರಿಸುವುದರಿಂದ ಶುಚಿಗೊಳಿಸುವಿಕೆ ಇನ್ನಷ್ಟು ಪರಿಣಾಮಕಾರಿಯಾಗುತ್ತದೆ.

ಟಾಯ್ಲೆಟ್‌ ಕ್ಲೀನ್‌ ಮಾಡಲು ಐಸ್‌ ಕ್ಯೂಬ್‌ ಅನ್ನು ಬಳಸುವುದೇಗೆ?

ಮೊದಲು, ಸಣ್ಣ ಗಾತ್ರದ ಸುಮಾರು 2 ಕಪ್ ಐಸ್ ಕ್ಯೂಬ್‌ಗಳನ್ನು ತೆಗೆದುಕೊಂಡು ಅವುಗಳನ್ನು ನೇರವಾಗಿ ಟಾಯ್ಲೆಟ್ ಬೌಲ್‌ಗೆ ಸುರಿಯಿರಿ. ನಂತರ, ಟಾಯ್ಲೆಟ್ ಕ್ಲೀನರ್, ಅಡುಗೆ ಸೋಡಾ, ನಿಂಬೆ ರಸ ಅಥವಾ ಬಿಳಿ ವಿನೆಗರ್ ಅನ್ನು ಮೇಲೆ ಸುರಿಯಿರಿ ಮತ್ತು ಅದನ್ನು 10 ರಿಂದ 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ಅಂತಿಮವಾಗಿ ಟಾಯ್ಲೆಟ್‌ ಅನ್ನು ನಿಧಾನವಾಗಿ ಬ್ರಷ್ ಮಾಡಿ ಮತ್ತು ಫ್ಲಶ್ ಮಾಡಿ. ಈ ರೀತಿ ಮಾಡುವುದರಿಂದ ಹೆಚ್ಚಿನ ಶ್ರಮವಿಲ್ಲದೆ ಸುಲಭವಾಗಿ ಟಾಯ್ಲೆಟ್‌ ಕಲೆ ಮತ್ತು ವಾಸನೆಯನ್ನು ಹೋಗಲಾಡಿಸಬಹುದು.

ಇದನ್ನೂ ಓದಿ: ವಸ್ತುಗಳನ್ನು ಗ್ಯಾಸ್‌ ಒಲೆ ಪಕ್ಕ ಇಡಲೇಬೇಡಿ; ಯಾಕೆ ಗೊತ್ತಾ?

ಈ ತಂತ್ರವು ಶೌಚಾಲಯದಲ್ಲಿ ಅಂಟಿರುವ ಕಲೆಗಳನ್ನು ಸುಲಭವಾಗಿ ತೆಗೆದು ಹಾಕುತ್ತದೆ ಮತ್ತು ವಾಸನೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಅಲ್ಲದೆ ಐಸ್‌ಕ್ಯೂಬ್ ನೈಸರ್ಗಿಕ ಸ್ಕ್ರಬ್ ಆಗಿ ಕಾರ್ಯನಿರ್ವಹಿಸುತ್ತದೆ. ನೀವು ಫ್ಲಶ್ ಮಾಡಿದಾಗ, ಐಸ್ ಕ್ಯೂಬ್‌ಗಳು ನೀರಿನೊಂದಿಗೆ ವೇಗವಾಗಿ ಚಲಿಸುತ್ತವೆ. ಇದು ಶೌಚಾಲಯದ ಮೇಲ್ಮೈಯಲ್ಲಿರುವ ಕೊಳಕು, ಪಾಚಿ ತೆಗೆದು ಹಾಕುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಕೆಶಿ-ಸಿದ್ದು ಕೈಲಾಗದ ಸಂಧಾನ ಸುರ್ಜೇವಾಲ ಸಮ್ಮುಖದಲ್ಲಿ ಸಕ್ಸಸ್ ಆಗಿದ್ದೇಗೆ?: ರಾಮಲಿಂಗಾರೆಡ್ಡಿ ಮನವೊಲಿಕೆಗೆ ನೀಡಿದ ಆಫರ್ ಏನು? – Kannada News

ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್

ಬೆಂಗಳೂರು, ಜೂ.6: ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆಯಾದರೂ, ಈ ಸಂಧಾನದ ಹಿಂದೆ ನಡೆದಿರುವ ಹೈಡ್ರಾಮಾ ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಡೆಸಿದ ಸರಣಿ ಮನವೊಲಿಕೆ ಪ್ರಯತ್ನಗಳಿಗೆ ಕರಗದ ರಾಮಲಿಂಗಾರೆಡ್ಡಿ ಅವರನ್ನು ಶಾಂತಗೊಳಿಸಲು ಕೊನೆಗೂ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಅಖಾಡಕ್ಕೆ ಇಳಿಯಬೇಕಾಯಿತು.

ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ ಅವರನ್ನು ಸಮಾಧಾನಪಡಿಸಲು ನಿನ್ನೆ ತಡರಾತ್ರಿಯವರೆಗೂ ಸಿಎಂ ಮತ್ತು ಡಿಸಿಎಂ ಕಸರತ್ತು ನಡೆಸಿದ್ದರೂ ಯಾವುದೇ ಫಲ ಸಿಕ್ಕಿರಲಿಲ್ಲ. ಆದರೆ, ಇಂದು ರಣದೀಪ್ ಸಿಂಗ್ ಸುರ್ಜೇವಾಲ ಅವರು ರಾಮಲಿಂಗಾರೆಡ್ಡಿ ಅವರೊಂದಿಗೆ ಸತತ ಒಂದೂವರೆ ಗಂಟೆಗೂ ಅಧಿಕ ಕಾಲ ನಡೆಸಿದ ಸುದೀರ್ಘ ಗುಪ್ತ ಮಾತುಕತೆಯ ಬಳಿಕ ಬಿಕ್ಕಟ್ಟು ಶಮನವಾಗಿದೆ. ಹೈಕಮಾಂಡ್ ಸದ್ಯದ ಖಾತೆಯ ಜೊತೆಗೆ ಜಲಸಂಪನ್ಮೂಲ ಅಥವಾ ಸಣ್ಣ ನೀರಾವರಿ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯ ಭರವಸೆ ನೀಡಿದೆ ಎನ್ನಲಾಗಿದೆ. ಆದರೆ ಸುದ್ದಿಗೋಷ್ಠಿಯಲ್ಲಿ ಸುರ್ಜೇವಾಲ ಅವರು ಕೇವಲ ರಾಜೀನಾಮೆ ವಾಪಸಾತಿ ಬಗ್ಗೆ ಮಾತ್ರ ತಿಳಿಸಿದ್ದಾರೆ, ಖಾತೆ ಬದಲಾವಣೆಯ ಗೊಂದಲಗಳಿಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಇದೇ ವೇಳೆ ಬಿಜೆಪಿ ನಾಯಕರಾದ ಬಿ.ವೈ. ವಿಜಯೇಂದ್ರ ಮತ್ತು ಆರ್. ಅಶೋಕ್ ಅವರ ಟೀಕೆಗಳಿಗೆ ತಿರುಗೇಟು ನೀಡಿದ ಅವರು, “ನಮ್ಮ ಪಕ್ಷದ ಆಂತರಿಕ ವಿಚಾರವನ್ನು ಇಟ್ಟುಕೊಂಡು ಬಿಜೆಪಿ ಸಾಕಷ್ಟು ಗೊಂದಲ ನಿರ್ಮಾಣ ಮಾಡಲು ಯತ್ನಿಸಿತು ಮತ್ತು ದೊಡ್ಡ ಬಂಡಾಯ ಆಯಿತು ಎಂದು ಸಂಭ್ರಮ ಪಟ್ಟಿತು. ಆದರೆ ಸದ್ಯಕ್ಕೆ ಅವರ ಸಂಭ್ರಮ ಮುಗಿದಿದೆ” ಎಂದು ಲೇವಡಿ ಮಾಡಿದರು.

ಸರ್ಕಾರದ ಸಾಧನೆಯನ್ನು ಮುಂದಿಟ್ಟ ಸುರ್ಜೇವಾಲ, “ನಾವು ಕನ್ನಡಿಗರಿಗಾಗಿ ಕೊಟ್ಟ ಮಾತಿನಂತೆ ಐದು ಗ್ಯಾರೆಂಟಿಗಳನ್ನು ಯಶಸ್ವಿಯಾಗಿ ನೀಡಿದ್ದೇವೆ. ಗೃಹಲಕ್ಷ್ಮಿ, ಗೃಹಜ್ಯೋತಿ, 10 ಕೆ.ಜಿಯ ಅನ್ನಭಾಗ್ಯ, ಯುವನಿಧಿ ಹಾಗೂ ವಿದ್ಯಾರ್ಥಿ-ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ನಿರಂತರವಾಗಿ ತಲುಪುತ್ತಿದೆ. ನಮ್ಮ ಗಮನ ಜನರ ಕಲ್ಯಾಣದ ಮೇಲಿದೆಯೇ ಹೊರತು ವಿಪಕ್ಷಗಳ ಟೀಕೆಗಳ ಮೇಲಲ್ಲ” ಎಂದು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಕೇವಲ ರಾಜೀನಾಮೆ ಗೊಂದಲಕ್ಕೆ ಸ್ಪಷ್ಟೀಕರಣ ನೀಡಿದ ಸುರ್ಜೇವಾಲ, ಮಾಧ್ಯಮಗಳ ಬೇರೆ ಯಾವುದೇ ರಾಜಕೀಯ ಪ್ರಶ್ನೆಗಳಿಗೆ ಉತ್ತರಿಸದೆ ಅಲ್ಲಿಂದ ನಿರ್ಗಮಿಸಿದರು.

ಇದನ್ನೂ ಓದಿ: ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾರೆಡ್ಡಿ: ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಇತ್ತ ಕೋಲಾರದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮುಳಬಾಗಿಲು ಶಾಸಕ ಕೊತ್ತೂರು ಮಂಜುನಾಥ್, ಸಚಿವ ರಾಮಲಿಂಗಾರೆಡ್ಡಿ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. “ಇಲ್ಲಿಯವರೆಗೆ ಇದ್ದ ಸಚಿವರ ಪೈಕಿ ರಾಮಲಿಂಗಾರೆಡ್ಡಿ ಅವರೇ ಬೆಸ್ಟ್ ಮಿನಿಸ್ಟರ್. ಅವರಿಗೆ ಯಾವುದೇ ಗನ್‌ಮ್ಯಾನ್ ಇಲ್ಲ, ಪಿಎ ಹಮ್ಮುಬಿಮ್ಮು ಇಲ್ಲ. ಯಾರು ಫೋನ್ ಮಾಡಿದರೂ 100% ತಾವೇ ರಿಸೀವ್ ಮಾಡುತ್ತಾರೆ, ಒಂದು ವೇಳೆ ಬ್ಯುಸಿ ಇದ್ದರೆ ಕಡ್ಡಾಯವಾಗಿ ಕಾಲ್‌ಬ್ಯಾಕ್ ಮಾಡುತ್ತಾರೆ. ಅವರು ಅತ್ಯಂತ ಬುದ್ಧಿವಂತರು. ಆದರೆ ಮಂತ್ರಿಯಾದವರಿಗೆ ಕೆಲಸ ಮಾಡಲು ಯಾವ ಖಾತೆ ಆದರೇನು? ಇಂತಹುದೇ ಖಾತೆ ಬೇಕು ಎಂದು ಪಟ್ಟು ಹಿಡಿಯುವುದು ತಪ್ಪು ಎಂದು ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ಮೊದಲ ದಿನವೇ 2 ಶತಕ, 2 ಅರ್ಧಶತಕ; ಬೃಹತ್ ಮೊತ್ತದತ್ತ ಟೀಂ ಇಂಡಿಯಾ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದೆ. ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಟೀಂ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ ಮೂರು ವಿಕೆಟ್​ಗಳನ್ನು ಕಳೆದುಕೊಂಡು 368 ರನ್ ಕಲೆಹಾಕಿದೆ. ಮೊದಲ ದಿನದಂದು ತಂಡದ ಪರ ಎರಡು ಶತಕಗಳು ಹಾಗೂ ಎರಡು ಅರ್ಧಶತಕಗಳು ದಾಖಲಾಗಿವೆ. ಆರಂಭಿಕ ಕೆಎಲ್ ರಾಹುಲ್ ಹಾಗೂ ನಾಯಕ ಶುಭ್​ಮನ್ ಗಿಲ್ ಶತಕ ಬಾರಿಸಿದರೆ, ಸಾಯಿ ಸುದರ್ಶನ್ ಹಾಗೂ ರಿಷಭ್ ಪಂತ್ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ದಿನದಾಟದಂತ್ಯಕ್ಕೆ ನಾಯಕ ಗಿಲ್ 103 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದರೆ, ರಿಷಭ್ ಪಂತ್ ಕೂಡ 50 ರನ್ ಬಾರಿಸಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

Published On – 5:08 pm, Sat, 6 June 26

Source link

ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾರೆಡ್ಡಿ: ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ – Kannada News

ಬೆಂಗಳೂರು, ಜೂನ್​​ 06: ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳ ಬಳಿಕ ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಅಲ್ಲಿಗೆ ಸಿಎಂ ಡಿಕೆ ಶಿವಕುಮಾರ್​ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಮತ್ತು ಕೃಷ್ಣ ಭೈರೇಗೌಡ ಜೊತೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಚರ್ಚೆ ಮಾಡಿದ್ದಾರೆ. ಸುಮಾರು 1 ಗಂಟೆ ಕಾಲ ಸಮಾಲೋಚನೆ ಮಾಡಲಾಗಿದೆ. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆ ವಾಪಸ್ ಪಡೆದುಕೊಂಡಿದ್ದಾರೆ. ಅವರು ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.

ರಾಮಲಿಂಗಾರೆಡ್ಡಿ ಪಕ್ಷದ ಹಿರಿಯ ನಾಯಕರು. ಹಲವು ಸಲ ಸಚಿವರಾಗಿ ಕೆಲಸ ಮಾಡಿದ್ದಾರೆ. ಸಿಎಂ ಡಿಕೆ ಶಿವಕುಮಾರ್​, ಕೆಪಿಸಿಸಿ ಅಧ್ಯಕ್ಷರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅವರು ಕಾಂಗ್ರೆಸ್​​ ಆಸ್ತಿ. ಅವರು ರಾಜೀನಾಮೆ ನೀಡಿದ ಬಳಿಕ ನಾವು ಮಾತಾಡಿದ್ದೇವೆ. ಸ್ವಲ್ಪ ತಪ್ಪು ತಿಳುವಳಿಕೆ ಆಗಿತ್ತು. ಇದೀಗ ರಾಜೀನಾಮೆ ವಾಪಸ್ ಪಡೆದಿದ್ದಾರೆ ಎಂದು ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Published On – 4:33 pm, Sat, 6 June 26

Source link

IND vs AFG: 11ನೇ ಟೆಸ್ಟ್ ಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್

ಅಫ್ಘಾನಿಸ್ತಾನದ ವಿರುದ್ಧ ಇಂದಿನಿಂದ ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ತಂಡದ ಪರ ಆರಂಭಿಕ ಕೆಎಲ್ ರಾಹುಲ್ ಶತಕ ಬಾರಿಸುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ ಕೂಡ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಗಿಲ್ ಅವರ ಟೆಸ್ಡ್ ವೃತ್ತಿಜೀವನದ 11ನೇ ಶತಕವಾಗಿದೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 138 ಎಸೆತಗಳನ್ನು ಎದುರಿಸಿದ ಗಿಲ್ 11 ಬೌಂಡರಿ ಹಾಗೂ 1 ಸಿಕ್ಸರ್ ಸಹ ಬಾರಿಸಿದರು. ಗಿಲ್ ಈ ಶತಕದ ಜೊತೆಗೆ ರಿಷಭ್ ಪಂತ್ ಜೊತೆಗೂಡಿ 4ನೇ ವಿಕೆಟ್​ಗೆ ಶತಕದ ಜೊತೆಯಾಟವನ್ನು ಕಟ್ಟಿದರು. ಇದಕ್ಕೂ ಮುನ್ನ ಗಿಲ್, ರಾಹುಲ್ ಜೊತೆಗೂ 67 ರನ್​ಗಳ ಜೊತೆಯಾಟವನ್ನಾಡಿದ್ದರು.

Source link

‘ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ’; ಹಾನಗಲ್‌ನಲ್ಲಿ ಮುಸ್ಲಿಂ ಸಮುದಾಯದಿಂದ ಸರ್ಕಾರಕ್ಕೆ ಮನವಿ – Kannada News

‘ಹಸುವನ್ನು ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ

ಹಾವೇರಿ, ಜೂ.6: ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿಗೆ ಬ್ರೇಕ್ ಹಾಕಲು ಹಾಗೂ ಗೋಸಂರಕ್ಷಣೆಗೆ ಕಾನೂನಾತ್ಮಕ ಬಲ ತುಂಬಲು ‘ಹಸುವನ್ನು ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಮುಸ್ಲಿಂ ಸಮುದಾಯದ ನೂರಾರು ಜನರು ಹಾವೇರಿ ಜಿಲ್ಲೆಯಲ್ಲಿ ಹಠಾತ್ ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲೆಯ ಹಾನಗಲ್‌ ಪಟ್ಟಣದ ಪ್ರಮುಖ ಕೇಂದ್ರವಾದ ಎಂ.ಜೆ ಸರ್ಕಲ್‌ನಲ್ಲಿ ಜಮಾಯಿಸಿದ ಅಂಜುಮನ್-ಎ-ಇಸ್ಲಾಂ ಕಮಿಟಿಯ ಪದಾಧಿಕಾರಿಗಳು, ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ನೂರಾರು ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗದೆ, ವಿಶಿಷ್ಟವಾಗಿ ತಮ್ಮ ಬೇಡಿಕೆಗಳನ್ನು ಮಂಡಿಸಿದರು. ಬಳಿಕ ಪಟ್ಟಣದ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಜಂಟಿ ಮನವಿ ಪತ್ರವನ್ನು ರವಾನಿಸಿದರು.

ಇದನ್ನೂ ಓದಿ: ‘ಲಕ್ಷಾಂತರ ರೂ. ಅನುದಾನ ಕೊಟ್ಟರೂ ಜಿಲ್ಲೆಯಲ್ಲಿ ಗಾಂಜಾ, ಬೆಟ್ಟಿಂಗ್ ನಿಂತಿಲ್ಲ ಯಾಕೆ’?: ಕೋಲಾರ ಎಸ್ಪಿಗೆ ಶಾಸಕ ಸಮೃದ್ಧಿ ಮಂಜುನಾಥ್ ತರಾಟೆ

ಇಲ್ಲಿದೆ ನೋಡಿ ವಿಡಿಯೋ

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಮುದಾಯದ ಮುಖಂಡರು, “ದೇಶದ ಕೆಲವು ಭಾಗಗಳಲ್ಲಿ ಗೋರಕ್ಷಣೆಯ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಂಡು ನೈತಿಕ ಪೊಲೀಸ್‌ಗಿರಿ ನಡೆಸಲಾಗುತ್ತಿದೆ. ಸಮಾಜದ ಶಾಂತಿ ಕದಡಲು ಯತ್ನಿಸುತ್ತಿರುವ ಕೆಲವು ಉಗ್ರ ಹಿಂದುತ್ವವಾದಿ ಸಂಘಟನೆಗಳ ನಡೆ ಖಂಡನೀಯ. ಒಂದು ವೇಳೆ ಕೇಂದ್ರ ಸರ್ಕಾರವೇ ಹಸುವನ್ನು ಅಧಿಕೃತವಾಗಿ ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಿದರೆ, ಗೋಸಂರಕ್ಷಣೆಗೆ ಸರ್ಕಾರದ ಮಟ್ಟದಲ್ಲೇ ಹೆಚ್ಚಿನ ಒತ್ತು ಸಿಗುತ್ತದೆ. ಜೊತೆಗೆ ಗೋವಿನ ಹೆಸರಿನಲ್ಲಿ ನಡೆಯುವ ಗಲಾಟೆಗಳು ಹಾಗೂ ರಾಜಕೀಯಕ್ಕೆ ಕಾಯಂ ತೆರೆ ಬೀಳಲಿದೆ” ಎಂದು ಹೇಳಿದ್ದಾರೆ . ಮುಸ್ಲಿಂ ಸಮುದಾಯವೇ ಮುಂಚೂಣಿಗೆ ನಿಂತು ಹಸುವಿನ ರಕ್ಷಣೆಗಾಗಿ ಧ್ವನಿ ಎತ್ತಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:45 pm, Sat, 6 June 26

Source link

ವಿಜಯ್ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಮತ್ತೊಬ್ಬ ಸ್ಟಾರ್ ನಟ – Kannada News

ತಮಿಳುನಾಡಿನ ಸಿಎಂ ಆಗಿ ವಿಜಯ್ (Vijay) ಪ್ರಮಾಣ ವಚನ ಸ್ವೀಕರಿಸಿ ತಿಂಗಳಾಗುತ್ತಾ ಬರುತ್ತಿದೆ. ತಮಿಳುನಾಡು ವಿಧಾನಸಭೆಗೆ ಎರಡು ಕ್ಷೇತ್ರಗಳಿಂದ ವಿಜಯ್ ಸ್ಪರ್ಧಿಸಿದ್ದರು. ಪೆರಂಬೂರು ಮತ್ತು ತಿರುಚ್ಚಿ ಈಸ್ಟ್. ಎರಡೂ ಕ್ಷೇತ್ರಗಳಲ್ಲಿಯೂ ವಿಜಯ್ ದೊಡ್ಡ ಗೆಲುವು ಸಾಧಿಸಿದ್ದರು. ಆದರೆ ನಿಯಮದ ಅನ್ವಯ ಒಂದು ಕ್ಷೇತ್ರವನ್ನಷ್ಟೆ ಅವರು ಉಳಿಸಿಕೊಳ್ಳಬೇಕಿತ್ತು. ವಿಜಯ್ ಅವರು ತಿರುಚ್ಚಿ ಈಸ್ಟ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಪೆರಂಬೂರು ಕ್ಷೇತ್ರದ ಎಂಎಲ್​​ಎ ಎನಿಸಿಕೊಂಡು ಬಳಿಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇದೀಗ ವಿಜಯ್ ರಾಜಿನಾಮೆ ಕೊಟ್ಟ ತಿರುಚ್ಚಿ ಈಸ್ಟ್ ಕ್ಷೇತ್ರದಿಂದ ತಮಿಳಿನ ಮತ್ತೊಬ್ಬ ಸ್ಟಾರ್ ನಟ, ನಿರ್ದೇಶಕ ವಿಜಯ್ ಅವರ ಪಕ್ಷದಿಂದಲೇ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ವಿಜಯ್ ರಾಜೀನಾಮೆಯಿಂದ ತೆರವಾಗಿರುವ ತಿರುಚ್ಚಿ ಈಸ್ಟ್ ಕ್ಷೇತ್ರದಿಂದ ತಮಿಳಿನ ಜನಪ್ರಿಯ ನಟ, ನಿರ್ದೇಶಕ ಮತ್ತು ಖ್ಯಾತ ಡ್ಯಾನ್ಸ್ ಕೊರಿಯಾಗ್ರಫರ್ ಸಹ ಆಗಿರುವ ರಾಘವ್ ಲಾರೆನ್ಸ್ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ವಿಜಯ್ ಹಾಗೂ ರಾಘವ್ ಲಾರೆನ್ಸ್ ಅವರ ಅಭಿಮಾನಿಗಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ವಿಜಯ್ ಜೊತೆ ದುನಿಯಾ ವಿಜಯ್: ತೆಲುಗು ಸಿನಿಮಾ ಅಪ್​​ಡೇಟ್

ರಾಘವ್ ಲಾರೆನ್ಸ್, ನಟ, ನಿರ್ದೇಶಕ ಮತ್ತು ಖ್ಯಾತ ಕೊರಿಯೋಗ್ರಾಫರ್ ಆಗಿರುವ ಜೊತೆಗೆ ದಶಕಕ್ಕೂ ಹೆಚ್ಚು ಸಮಯದಿಂದಲೂ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ವಿಶೇಷವಾಗಿ ವಿಕಲಚೇತನರು, ಅನಾಥರು, ವೃದ್ಧರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ರಾಘವ್ ಲಾರೆನ್ಸ್, ನೂರಾರು ಅನಾಥ ಮಕ್ಕಳಿಗೆ ಉತ್ತಮ ಶಿಕ್ಷಣ, ಜೀವನವನ್ನು ಅವರು ಕೊಡಿಸಿದ್ದಾರೆ. ರಾಘವ್ ಅವರ ಸಮಾಜ ಸೇವೆಯ ಬಗ್ಗೆ ಸಾರ್ವಜನಕವಾಗಿ ಬಹಳ ಒಳ್ಳೆಯ ಅಭಿಪ್ರಾಯವಿದೆ. ಈಗ ಅವರು ವಿಜಯ್ ಅವರ ಕ್ಷೇತ್ರದಿಂದ ಟಿವಿಕೆ ಪಕ್ಷದ ಪರವಾಗಿ ಚುನಾವಣೆ ಸ್ಪರ್ಧಿಸಿದಲ್ಲಿ ಗೆಲುವು ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿದೆ.

ಅಂದಹಾಗೆ ಅದೇ ಈಸ್ಟ್ ತಿರುಚ್ಚಿ ಕ್ಷೇತ್ರದಿಂದ, ವಿಜಯ್ ಅವರ ಆಪ್ತರೂ ಆಗಿರುವ ನಟಿ ತ್ರಿಷಾ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಅದು ಸುಳ್ಳು ಎನ್ನಲಾಗುತ್ತಿದೆ. ಈಗ ಹರಿದಾಡುತ್ತಿರುವ ರಾಘವ್ ಲಾರೆನ್ಸ್ ಸ್ಪರ್ಧೆ ಮಾಡುವ ಸುದ್ದಿ ಸಹ ಇನ್ನೂ ಖಾತ್ರಿ ಆಗಿಲ್ಲ. ಇನ್ನೂ ತಿರುಚ್ಚಿ ಈಸ್ಟ್ ಕ್​ಷೇತ್ರದ ಚುನಾವಣೆ ಘೋಷಣೆ ಆಗಿಲ್ಲವಾದ್ದರಿಂದ ಅಭ್ಯರ್ಥಿ ಘೋಷಣೆಗೆ ಇನ್ನೂ ಸಮಯವಿದೆ. ವಿಜಯ್ ಅವರು ತಮ್ಮ ಆಪ್ತರನ್ನೇ ಈ ಕ್ಷೇತ್ರದಿಂದ ಅಭ್ಯರ್ಥಿ ಮಾಡುತ್ತಾರೆ ಎಂಬ ಸುದ್ದಿ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿದೇಶಿ ಒತ್ತಡಕ್ಕೆ ಭಾರತ ಬಗ್ಗುವುದಿಲ್ಲ; ರಷ್ಯಾದಿಂದ ತೈಲ ಖರೀದಿ ವಿಚಾರದಲ್ಲಿ ಟ್ರಂಪ್‌ಗೆ ಪುಟಿನ್ ತಿರುಗೇಟು – Kannada News

ಮಾಸ್ಕೋ, ಜೂನ್ 6: ರಷ್ಯಾದ ಜೊತೆಗಿನ ಸಹಕಾರವನ್ನು ಕಡಿಮೆ ಮಾಡುವಂತೆ ಭಾರತದ ಮೇಲೆ ನಿರಂತರ ಒತ್ತಡ ಹೇರುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತೀಕ್ಷ್ಣ ಸಂದೇಶ ರವಾನಿಸಿದ್ದಾರೆ. “ಭಾರತ ಎಂದಿಗೂ ಯಾವುದೇ ವಿದೇಶಿ ಶಕ್ತಿಯ ಆದೇಶಗಳಿಗೆ ಬಗ್ಗುವುದಿಲ್ಲ. ಭಾರತ ಸಾರ್ವಭೌಮ ರಾಷ್ಟ್ರವಾಗಿಯೇ ತನ್ನ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ” ಎಂದು ಪುಟಿನ್ ಭಾರತದ ಪರ ಬ್ಯಾಟಿಂಗ್ ಮಾಡಿದ್ದಾರೆ.

ಪ್ರಮುಖ ಮುಖ್ಯಾಂಶಗಳು:

  • ವಿದೇಶಿ ಆದೇಶಗಳಿಗೆ ಭಾರತ ಬಗ್ಗುವುದಿಲ್ಲ ಎಂದ ಪುಟಿನ್
  • ಭಾರತವು ಸದಾ ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಗನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದ ರಷ್ಯಾ
  • ಭಾರತದ ಪರ ಪುಟಿನ್ ಬ್ಯಾಟಿಂಗ್

ಸೇಂಟ್ ಪೀಟರ್ಸ್‌ಬರ್ಗ್ ಅಂತಾರಾಷ್ಟ್ರೀಯ ಆರ್ಥಿಕ ವೇದಿಕೆಯಲ್ಲಿ (SPIEF) ಮಾತನಾಡಿದ ಪುಟಿನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ವೇಳೆ, ಭಾರತದ ಮೇಲೆ ಟ್ರಂಪ್ ಹೇರಿದ್ದ ನಿರ್ಬಂಧಗಳು ಅಮೆರಿಕಕ್ಕೇ ತಿರುಗುಬಾಣ ಆಗಲಿವೆ ಎಂದು ಎಚ್ಚರಿಸಿದರು. “ಭಾರತವು ಯಾವಾಗಲೂ ತನ್ನ ರಾಷ್ಟ್ರೀಯ ಹಿತಾಸಕ್ತಿ, ಸೂಕ್ತ ಬೆಲೆ ಮತ್ತು ತಂತ್ರಜ್ಞಾನದ ಲಾಭವನ್ನು ಆಧರಿಸಿಯೇ ತನ್ನ ಪಾಲುದಾರರನ್ನು ಆಯ್ಕೆ ಮಾಡಿಕೊಳ್ಳುತ್ತದೆ” ಎಂದು ಅವರು ಅಭಿಪ್ರಾಯವ್ಯಕ್ತಪಡಿಸಿದರು.

ಇದನ್ನೂ ಓದಿ: ಅಂದು ನಾನು ಇಲ್ಲದೇ ಹೋಗಿದ್ದರೆ ನೀವು ಜೈಲಿನಲ್ಲಿ ಇರುತ್ತಿದ್ದಿರಿ, ಈಗ ಎಲ್ಲರೂ ನಿಮ್ಮನ್ನು ದ್ವೇಷಿಸುತ್ತಿದ್ದಾರೆ, ನೆತನ್ಯಾಹು ಕೆಣಕಿದ ಟ್ರಂಪ್

ಭಾರತವು ಪ್ರಸ್ತುತ ಜಗತ್ತಿನಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತ ಸರ್ಕಾರದ ಕಠಿಣ ಪರಿಶ್ರಮದ ಫಲ ಎಂದು ಪುಟಿನ್ ಬಣ್ಣಿಸಿದ್ದಾರೆ. ಡಿಜಿಟಲ್ ಆರ್ಥಿಕತೆ ಮತ್ತು ಸಾಫ್ಟ್‌ವೇರ್ ಉದ್ಯಮದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಅವರು ಗೌರವಿಸಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಭಾರತ ಮತ್ತು ರಷ್ಯಾ ನಡುವಿನ ವ್ಯಾಪಾರ ವಹಿವಾಟು 100 ಬಿಲಿಯನ್ ಡಾಲರ್ ತಲುಪುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ.

“ರಷ್ಯಾ ಜೊತೆಗಿನ ಸಹಕಾರ ಸೇರಿದಂತೆ ಕೆಲವು ವಿಷಯಗಳಲ್ಲಿ ಅಮೆರಿಕವು ಭಾರತದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ಆದರೆ ,150 ಕೋಟಿ ಜನಸಂಖ್ಯೆ ಹೊಂದಿರುವ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಲು ಯತ್ನಿಸುವುದು ಸಂಪೂರ್ಣ ವ್ಯರ್ಥ ಶ್ರಮ ಎಂಬುದು ಈಗಲಾದರೂ ಎಲ್ಲರಿಗೂ ಅರ್ಥವಾಗಬೇಕು” ಎಂದು ಪುಟಿನ್ ಹೇಳಿದ್ದಾರೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧಕ್ಕೆ ಬೀಳುತ್ತಾ ತೆರೆ? ಶಾಂತಿ ಮಾತುಕತೆಯ ಸುಳಿವು ನೀಡಿದ ಪುಟಿನ್

ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸುತ್ತಿರುವುದಕ್ಕಾಗಿ ಭಾರತದ ಮೇಲೆ ಟ್ರಂಪ್ ಸರ್ಕಾರ ವಿಧಿಸಿದ್ದ ನಿರ್ಬಂಧಗಳಿಗೆ ಪ್ರತಿಕ್ರಿಯೆಯಾಗಿ ಪುಟಿನ್ ಈ ಕಠಿಣ ಹೇಳಿಕೆಗಳನ್ನು ನೀಡಿದ್ದಾರೆ. ಭಾರತವು ರಷ್ಯಾದ ತೈಲವನ್ನು ಖರೀದಿಸುವ ಮೂಲಕ ಉಕ್ರೇನ್ ಯುದ್ಧಕ್ಕೆ ಧನಸಹಾಯ ನೀಡುತ್ತಿದೆ ಎಂದು ಆರೋಪಿಸಿದ್ದ ಟ್ರಂಪ್, ಭಾರತದ ಉತ್ಪನ್ನಗಳ ಮೇಲೆ ಶೇ. 25ರಷ್ಟು ಸುಂಕವನ್ನು ಹೇರಿದ್ದರು. ಆದರೆ, ಭಾರತವು ಈ ಆರೋಪವನ್ನು ಮೊದಲಿನಿಂದಲೂ ನಿರಾಕರಿಸುತ್ತಾ ಬಂದಿದೆ ಹಾಗೂ ಪಾಶ್ಚಿಮಾತ್ಯ ದೇಶಗಳೇ ಸ್ವತಃ ರಷ್ಯಾದಿಂದ ಗ್ಯಾಸ್ ಮತ್ತು ತೈಲವನ್ನು ಖರೀದಿಸುತ್ತಿರುವುದನ್ನು ಭಾರತ ಹಲವು ಬಾರಿ ಜಾಗತಿಕ ವೇದಿಕೆಯಲ್ಲಿ ಎತ್ತಿ ತೋರಿಸಿದೆ.

ಜಾಗತಿಕ ಒತ್ತಡಗಳ ನಡುವೆಯೂ ಭಾರತದ ವಿದೇಶಾಂಗ ಸಚಿವಾಲಯವು ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ಭಾರತದ ಇಂಧನ ಭದ್ರತೆ ಮತ್ತು ದೇಶದ ಜನರಿಗೆ ಕೈಗೆಟುಕುವ ದರದಲ್ಲಿ ಇಂಧನ ನೀಡುವುದು ಭಾರತದ ಮೊದಲ ಆದ್ಯತೆಯಾಗಿದೆ ಎಂದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link