ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾರೆಡ್ಡಿ: ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ – Kannada News
ಬೆಂಗಳೂರು, ಜೂನ್ 06: ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳ ಬಳಿಕ ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಅಲ್ಲಿಗೆ ಸಿಎಂ ಡಿಕೆ ಶಿವಕುಮಾರ್ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಮತ್ತು ಕೃಷ್ಣ…